ಸಿನಿ ಸುದ್ದಿ
ಬಾಲಿವುಡ್ನಲ್ಲಿ ಬದಲಾವಣೆ ಗಾಳಿ ಬೀಸಲಿದೆಯೇ ‘ಕರ್ವಾನ್’..?

ಸುದ್ದಿದಿನ ಡೆಸ್ಕ್ |ಸಿನಿಮ್ಯಾಟಿಕ್, ಸೈನ್ಸ್ ಫಿಕ್ಷನ್, ಫ್ಯಾಂಟಸಿ ವಿಷಯಾಧಾರಿತ ಸಾಲು ಸಾಲು ಹಿಟ್ ಸಿನಿಮಾಗಳನ್ನು ಮೆಚ್ಚಿದ ಬಾಲಿವುಡ್ ಸಿನಿ ಪ್ರಿಯರು ಕಲಾತ್ಮಕ ಎಲಿಮೆಂಟ್ಗಳುಳ್ಳ ಸಿನಿಮಾವನ್ನು ಮೆಚ್ಚುತ್ತಾರೆಯೇ ಎಂಬ ಪ್ರಶ್ನೆಯನ್ನು ಕರ್ವಾನ್ ಸಿನಿಮಾ ಹುಟ್ಟುಹಾಕಿದೆ.
ಮಲೆಯಾಳಂನ ಸೂಪರ್ ಸ್ಟಾರ್ ದುಲ್ಕರ್ ಸಲ್ಮಾನ್ ಅವರು ಈ ಸಿನಿಮಾ ಮೂಲಕ ಎಂಟ್ರಿ ಪಡೆದಿದ್ದಾರೆ. ಈಗಾಗಲೇ ತಮಿಳು ಹಾಗೂ ತೆಲಗು ಸಿನಿಮಾಗಳಲ್ಲಿ ನಟಿಸಿದ್ದ ದುಲ್ಕರ್ ಅವರು ಈ ಮೂಲಕ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದಾರೆ. ಮಾಲಿವುಡ್ ಸೂಪರ್ ಸ್ಟಾರ್ ಮಮ್ಮೂಟಿ ಅವರ ಪುತ್ರ ದುಲ್ಕರ್ ನಟನಾ ಚಾತುರ್ಯವು ಬಾಲಿವುಡ್ನಲ್ಲಿ ಫಲಿಸಲಿದೆಯೇ ಎಂಬುದಕ್ಕೂ ಈ ಸಿನಿಮಾ ಉತ್ತರ ಕೊಡಲಿದೆ. ಈಗಾಗಲೇ ಲಕ್ಷಾಂತರ ಜನ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಬುಕ್ ಮೈ ಶೋ, ಜಸ್ಟ್ ಟಿಕೆಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ, ಭವಿಷ್ಯದಲ್ಲಿ ಕರ್ವಾನ್ ತರದ ಸಿಂಪಲ್ ಕತೆಗಳುಳ್ಳ ಸಿನಿಮಾವನ್ನು ಉತ್ತರ ಭಾರತೀಯರು ಒಪ್ಪುತ್ತಾರೋ ಇಲ್ಲವೋ ಎಂಬುದು ಈಗ ಉದ್ಭವಿಸಿರುವ ಪ್ರಶ್ನೆ.
ಕರ್ವಾನ್ ಸಿನಿಮಾ ಬಗ್ಗೆ ಹೇಳುವುದಾದರೆ ಇದೊಂದು ದಕ್ಷಿಣ ಭಾರತದ ಅಭಿರುಚಿ ಹೊಂದಿರುವ ಬಾಲಿವುಡ್ ಸಿನಿಮಾ, ಅವಿನಾಶ್ ಚಿತ್ರದ ನಾಯಕ ಸಾಫ್ಟ್ವೇರ್ ಉದ್ಯೋಗಿ. ಖ್ಯಾತ ಫೋಟೊಗ್ರಾಫರ್ ಆಗಬೇಕೆಂದು ಕನಸು ಹೊತ್ತಿರುವ ಹುಡುಗ ಅಪ್ಪನ ಬಲವಂತಕ್ಕಾಗಿ ಸಾಫ್ಟ್ವೇರ್ ಕೆಲಸಕ್ಕೆ ಸೆರುತ್ತಾನೆ. ಕೆಲಸದಲ್ಲಿ ನಿರಾಸಕ್ತಿ, ರೋಟೀನ್ ಲೈಫ್ನಿಂದ ಬೇಸತ್ತಿರುವ ನಾಯಕ ಹೇಗಾದರೂ ಮಾಡಿ ತನ್ನ ಕನಸಿನಂತೆ ಫೋಟೊಗ್ರಾಫರ್ ಆಗುವಂತೆ ಹಂಬಲಿಸುತ್ತಾನೆ.
ಈ ನಡುವೆ ಗಂಗೋತ್ರಿಗೆ ಪ್ರವಾಸ ಹೋಗುವ ಅವಿನಾಶ್ನ ತಂದೆ ಸಾವಿಗೀಡಾಗುತ್ತಾರೆ. ಅಪ್ಪನ ಸಾವನ್ನು ಹಗುರವಾಗಿ ಸ್ವೀಕರಿಸುವ ಅವಿನಾಶ್ಗೆ ಈಗಲಾದರೂ ತಾನು ಫೋಟೊಗ್ರಾಫರ್ ಆಗಬಹುದೆಲ್ಲ ಎಂದು ಸಮಾಧಾನ ಪಟ್ಟಿಕೊಳ್ಳುತ್ತಾನೆ.
ಏರ್ಪೋರ್ಟ್ಗೆ ತನ್ನ ತಂದೆಯ ದೇಹದ ಬದಲು ಮಹಿಳೆಯೊಬ್ಬರ ಮೃತ ದೇಹ ಬರುತ್ತದೆ. ಅಕಸ್ಮಾತಾಗಿ ಅದು ಕೊಚ್ಚಿನ್ನವರದ್ದಾಗಿರುತ್ತದೆ. ತನ್ನ ತಂದೆ ದೇಹ ಅಲ್ಲಿಗೆ ಸೇರಿರುತ್ತದೆ. ಶವಪೆಟ್ಟಿಗೆಗಳನ್ನು ಬದಲಾಯಿಸುವ ಸಲುವಾಗಿ ಸ್ನೇಹಿತ ಶೌಕತ್ (ಇರ್ಫಾನ್ ಖಾನ್) ಜತೆ ಬೆಂಗಳೂರಿನಿಂದ ಕೊಚ್ಚಿನ್ಗೆ ಪ್ರಯಾಣ ಬೆಳೆಸುವ ಅವಿನಾಶ್ಗೆ, ದಾರಿ ಮಧ್ಯೆ ನಾಯಕಿ ಪರಿಚಯವಾಗುತ್ತದೆ. ಆಕೆಯ ಚೆಲ್ಲಾಟ, ಅವಳಿಷ್ಟದಂತೆ ಬದುಕುವ ರೀತಿ ನೋಡಿ ತಾನು ಬದಲಾಗಬೇಕೆನಿಸುತ್ತದೆ. ಮಾರ್ಗ ಮಧ್ಯೆ ಎದುರಾಗುವ ಸವಾಲುಗಳು ಹಾಗೂ ಸಿನಿಮೀಯ ಸನ್ನವೇಶಗಳೇ ಸಿನಿಮಾದ ಜೀವಾಳ.
ಸಿನಿಮಾ ಒಂದು ಸರಳ ಕತಾವಸ್ತು, ನಿರೂಪಣೆ ಹೊಂದಿದೆ ಈ ವಿಷಯದಲ್ಲಿ ನಿರ್ದೇಶಕರು ಗೆಲ್ಲುತ್ತಾರೆ. ಇರ್ಫಾನ್ ಖಾನ್ ಅವರ ಮಾತಿನ ಶೈಲಿಯೇ ನಗೆಯ ಬುಗ್ಗೆ ಹೊಮ್ಮಿಸುತ್ತದೆ. ಬೆಂಗಳೂರು, ಮೈಸೂರು, ನಂಜನಗೂಡಿನಲ್ಲೂ ಚಿತ್ರ ಶೂಟ್ ಆಗಿರುವುದು ವಿಷೇಶದ ಜತೆ ಕನ್ನಡಿಗರಿಗೂ ಹತ್ತರಿವಾಗುತ್ತದೆ. ಒಟ್ಟಾರೆ ಹೇಳುವುದಾದರೆ ಆಫ್ ಬೀಟ್ ಸಿನಿಮಾ ಪ್ರಿಯರು ತಪ್ಪದೇ ನೋಡಬೇಕಿರುವ ಸಿನಿಮಾ ಇದು. ಬಾಲಿವುಡ್ನಲ್ಲಿ ಒಂದು ಬದಲಾವಣೆ ಗಾಳಿ ಬೀಸಿ ಕರ್ವಾನ್ ರೀತಿಯ ಸಿನಿಮಾಗಳು ಮೂಡಿಬಂದರೆ ಸಿನಿಮಾ ಪ್ರಿಯರಿಗೆ ಹಬ್ಬದೂಟವೇ ಸರಿ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಶ್ರೀಲಂಕಾದಲ್ಲಿ ಕನ್ನಡ ಚಲನಚಿತ್ರೋತ್ಸವ

ಸುದ್ದಿದಿನ, ಕೊಲೊಂಬೋ : ಶ್ರೀಲಂಕಾದ ರಾಜಧಾನಿ ಕೊಲೊಂಬೋದಲ್ಲಿನ ತರಂಗಿಣಿ ಸಿನಿಮಾ ಹಾಲ್ನಲ್ಲಿ ಏರ್ಪಡಿಸಿದ್ದ ಕನ್ನಡ ಚಲನಚಿತ್ರೋತ್ಸವಕ್ಕೆ ಮಂಗಳವಾರ ಚಾಲನೆ ದೊರೆಯಿತು.
ಶ್ರೀಲಂಕಾದಲ್ಲಿನ ಭಾರತೀಯ ರಾಯಭಾರಿ ಗೋಪಾಲ್ ಬಾಗ್ಳೆ, ಶ್ರೀಲಂಕಾದ ಬಹು ಮಾಧ್ಯಮ ಖಾತೆ ಸಚಿವ ಡಾ. ಬಂದೂಲ ಗುಣವರ್ಧನೆ ಹಾಗೂ ಸಂಸ್ಕೃತಿ ಖಾತೆ ಸಚೆವ ವಿಧುರವಿಕ್ರಮ ನಾಯಕ್ ಮುಂತಾದವರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.
ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ, ಕನ್ನಡ ಚಲನಚಿತ್ರರಂಗದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತರ ಮಾತನಾಡಿದ ಸಚಿವ ಡಾ.ಗುಣವರ್ಧನೆ, ಉಭಯ ದೇಶಗಳ ನಡುವೆ ಸಾಂಸ್ಕೃತಿಕ ವಿನಿಮಯ, ಚಲನಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.
ಮನರಂಜನಾ ಮಾಧ್ಯಮವು ಅತ್ಯಂತ ಜನಪ್ರಿಯ ಮಾಧ್ಯಮವಾಗಿದ್ದು, ಪ್ರಾದೇಶಿಕ ಚಲಚಿನಚಿತ್ರಗಳು, ಅದರಲ್ಲಿಯೂ ಭಾರತದ ಚಲನಚಿತ್ರ ಸಂಸ್ಕೃತಿಯ ಜೊತೆಗೆ ದೇಶದ ಪರಂಪರೆ ಹಾಗೂ ಇತಿಹಾಸವನ್ನು ಪ್ರತಿಬಿಂಬಿಸುತ್ತಿದೆ. ಸಾಮಾಜಿಕ ವಲಯದಲ್ಲಿ ಪ್ರಾದೇಶಿಕ ಬಾಷೆಯಲ್ಲಿ ಬರುವ ಚಿತ್ರಗಳು, ಚಿತ್ರ ಪ್ರೇಮಿಗಳಿಗೆ ಅದರಲ್ಲಿಯೂ ವಿದ್ಯಾರ್ಥಿಗಳಿಗೆ, ಪಠ್ಯಕ್ರಮದ ಭಾಗವಾಗಿ ಹಲವು ಪ್ರದೇಶಗಳಲ್ಲಿ ಅಧ್ಯಯನಕ್ಕೂ ಅನುಕೂಲವಾಗಿದೆ. ಇತ್ತೀಚೆಗೆ ಶ್ರಿಲಂಕಾದ ವಿದ್ಯಾರ್ಥಿಗಳು ಇದರ ಅನುಭವವನ್ನು ಪಡೆದುಕೊಳ್ಳಲು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಮಾರ್ಗದರ್ಶನ ಅನುಕೂಲವಾಗಿದೆ ಎಂದು ಅವರು ಹೇಳಿದರು.
ಶ್ರೀಲಂಕಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 250 ರಿಂದ 300 ಚಲನಚಿತ್ರಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಿದೆ. ಕಳೆದ ವರ್ಷ ನಾಲ್ಕನೇ ಬಹುದೊಡ್ಡ ಕಾರ್ಯಗಾರ ಆಯೋಜಿಸಲಾಗಿತ್ತು ಎಂದು ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶ್ರೀಲಂಕಾ ವಿದ್ಯಾರ್ಥಿಗಳಿಗೆ, ಚಲನಚಿತ್ರರಂಗದ, ತರಬೇತಿ, ವೀಕ್ಷಣೆ ಹಾಗೂ ನಿರ್ಮಾಣದ ಬಗ್ಗೆ ಹಲವು ರೀತಿ ಪ್ರಾತ್ಯಕ್ಷಿಕೆ ಮೂಲಕ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಈ ವರ್ಷ ಅಮೆರಿಕ-ಅಮೆರಿಕ, ಇಷ್ಠಕಾಮ್ಯ, ಮಾತಾಡ್ ಮಾತಾಡ್ ಮಲ್ಲಿಗೆ ಹಾಗೂ ಕೊಟ್ರೇಶಿ ಕನಸು ಚಿತ್ರಗಳನ್ನು ಪ್ರದರ್ಶಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಏನಿದು ವಿಚಿತ್ರ | ನಟಿಯ ಡೈವೋರ್ಸ್ ಫೋಟೋಶೂಟ್..!

ಸುದ್ದಿದಿನ ಡೆಸ್ಕ್ : ನಟಿ ಶಾಲಿನಿ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಜನಮನಗೆದ್ದಿದ್ದಾರೆ. ಮೊದಲ ಮದುವೆಯ ವಿಚ್ಛೇದನದ ನಂತರ ಆಕೆ ಮೊಹಮ್ಮದ್ ಎಂಬುವವರನ್ನು ಮದುವೆಯಾಗಿದ್ದರು. ಆ ದಾಂಪತ್ಯದಲ್ಲಿ ಹಲವು ಸಮಸ್ಯೆಗಳಿಂದ ವಿಚ್ಛೇದನ ಪಡೆದರು. ಅದನ್ನು ಸಂಭ್ರಮಿಸಲು ಫೋಟೋಶೂಟ್ ಮಾಡಿ ಇನ್ಸ್ಟಾಗ್ರಾಂನಲ್ಲಿ ಹಾಕಿದ್ದಾರೆ.
ಮದುವೆಗೂ ಮುನ್ನ ತೆಗೆದಿರುವ ಫೋಟೋಶೂಟ್ಗಳು ಬಹಳಷ್ಟು ಬಂದಿವೆ. ಆದರೆ ವಿಚಿತ್ರ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಕ್ಕಾಗಿಯೇ ನಟಿ ಶಾಲಿನಿಫೋಟೋಗಳು ವೈರಲ್ ಆಗಿವೆ. ಡೈವೋರ್ಸ್ ಆಗಿದ್ದನ್ನೂ ಸಂಭ್ರಮಿಸುವ ಕಾರಣಕ್ಕಾಗಿ ಮಾಡಿದ ಈ ಫೋಟೋಶೂಟ್ ಈಗ ಹಲವರ ಗಮನ ಸೆಳೆದಿದೆ.
ಜೀ ತಮಿಳು ಶೋ ಸೂಪರ್ ಮಾಮ್ ರಿಯಾಲಿಟಿ ಶೋನಲ್ಲಿ ಮಗಳೊಂದಿಗೆ ಶಾಲಿನಿ ಭಾಗವಹಿಸಿದ್ದರು. ಖುಷ್ಬು ಅಭಿನಯದ ಮೀರಾ ತಮಿಳು ಧಾರಾವಾಹಿಯಲ್ಲಿ ಕೂಡ ಆಕೆ ನಟಿಸಿದ್ದಾರೆ. ಈ ಧಾರಾವಾಹಿಯ ಮೂಲಕ ನಟಿ ಖುಷ್ಪು ಹಲವು ವರ್ಷಗಳ ನಂತರ ಕಿರುತೆರೆಯಲ್ಲಿ ನಟಿಸಿದ್ದಾರೆ.
ಮಹಿಳೆಯೊಬ್ಬರು ‘ಡೈವೋರ್ಸ್ಡ್’ ಎಂಬ ಫಲಕ ಹಿಡಿದ, ಪತಿಯೊಂದಿಗೆ ಇದ್ದ ಫೋಟೋದಲ್ಲಿನ ಪತಿಯ ಮುಖದ ಭಾಗವನ್ನು ಹರಿದು ಪ್ರತ್ಯೇಕಿಸಿದ, ಪತಿ-ಪತ್ನಿ ಇಬ್ಬರೂ ಜೊತೆಗಿದ್ದ ಫೋಟೋವನ್ನು ಚಪ್ಪಲಿ ಕಾಲಿನಲ್ಲಿ ತುಳಿದು ಹೊಸಕಿ ಹಾಕಿದಂಥ ಫೋಟೋಗಳು ಈ ಫೋಟೋಶೂಟ್ನ ಪ್ರಮುಖ ಆಕರ್ಷಣೆ ಎನಿಸಿಕೊಂಡಿವೆ. ಅಲ್ಲದೆ, ‘ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!’ ಎಂಬ ಫಲಕವನ್ನು ಹಿಡಿದು ಸಂತಸದಿಂದ ಬೀಗುವಂಥ ಫೋಟೋ ಮೂಲಕ ‘ಪತಿ ಎಂಬ ಒಂದು ಸಮಸ್ಯೆಯನ್ನು ನಿವಾರಿಸಿಕೊಂಡಿದ್ದೇನೆ’ ಎಂಬ ಸಂದೇಶವನ್ನೂ ಈಕೆ ಸಾರಿದ್ದಾರೆ.
ಶಾಲಿನಿ ಇನ್ಸ್ಟಾ ಅಕೌಂಟ್ ಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://instagram.com/shalu2626?igshid=YmMyMTA2M2Y=
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ದಿ ಕೇರಳ ಸ್ಟೋರಿ’ ವಿವಾದ| ಲವ್ ಜಿಹಾದ್ ಅನ್ನೋದು ಸುಳ್ಳು : ಕೇರಳ ಸಿಎಂ ಪಿಣರಾಯಿ

ಸುದ್ದಿದಿನ, ಕೇರಳ : ‘ದಿ ಕೇರಳ ಸ್ಟೋರಿ’ ಸಿನೆಮಾ ಟ್ರೇಲರ್ ನೋಡಿ ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ಸಿನೆಮಾದಿಂದ ಕೇರಳಕ್ಕೆ ಕೆಟ್ಟ ಹೆಸರು ಬರಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಧ್ಯ ‘ದಿ ಕೇರಳ ಸ್ಟೋರಿ’ ಸಿನಿಮಾ ಟ್ರೇಲರ್ ಸೋಶಿಯಲ್ ಮೀಡಿಯಾದಲ್ಲಿ ಪರ- ವಿರೋಧ ಚರ್ಚೆಯನ್ನು ಹುಟ್ಟುಹಾಕಿದೆ. ಲವ್ ಜಿಹಾದ್ ವಿಚಾರವಿಟ್ಟುಕೊಂಡು ತಯಾರಾಗಿರುವ ಈ ಸಿನಿಮಾದಲ್ಲಿ ಐಸಿಸ್ ವಿಚಾರವನ್ನೂ ಹೇಳಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಚಿತ್ರದ ಟ್ರೇಲರ್ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಕೇರಳದಲ್ಲಿ ಸಿನಿಮಾ ರಿಲೀಸ್ಗೆ ತಡೆ ಬಿದ್ದರೂ ಅಚ್ಚರಿ ಏನಿಲ್ಲ.
ಲವ್ ಜಿಹಾದ್ ಅನ್ನೋದು ಸುಳ್ಳು. ತನಿಖಾ ಸಂಸ್ಥೆ, ನ್ಯಾಯಾಲಯ ಮತ್ತು ಕೇಂದ್ರ ಗೃಹ ಸಚಿವಾಲಯದಿಂದ ಲವ್ ಜಿಹಾದ್ ಎಂಬ ವಿಚಾರ ತಿರಸ್ಕರಿಸಲ್ಪಟ್ಟಿದೆ. ಈಗ ಲವ್ ಜಿಹಾದ್ ವಿಚಾರನ್ನೇ ಚಿತ್ರದ ಥೀಮ್ ಮಾಡಿಕೊಂಡಿದ್ದಾರೆ. ರಾಜ್ಯದ ಬಗ್ಗೆ ಅಪಪ್ರಚಾರ ಮಾಡಲು ಸಂಘಪರಿವಾರ ಪ್ರಯತ್ನಿಸುತ್ತಿದೆ’ ಎಂದಿದ್ದಾರೆ ಪಿಣರಾಯಿ ವಿಜಯನ್.
ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ತೆಗೆದ ಸಿನಿಮಾ ಇದು ಎಂದು ನಿರ್ದೇಶಕ ಸುದಿಪ್ಲೋ ಸೇನ್ ಹೇಳಿದ್ದಾರೆ. ಇರಾಕ್ ಮತ್ತು ಸಿರಿಯಾದಲ್ಲಿ ಉಗ್ರಗಾಮಿ ಸಂಘಟನೆಗಳಿಗೆ ಸೇರಿಕೊಂಡ ಕೇರಳದ 32,000 ಮಹಿಳೆಯರು ಕಣ್ಮರೆಯಾಗುವುದರ ಸುತ್ತ ಚಿತ್ರದ ಕಥೆ ಸಾಗುತ್ತದೆ. ಅದಾ ಶರ್ಮಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು,ನಟಿ ಶ್ವೇತಾ ಮೆನನ್ ಕೂಡ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.
‘ದಿ ಕೇರಳ ಸ್ಟೋರಿ’ ಸಿನಿಮಾ ಮೇ 5ರಂದು ರಿಲೀಸ್ ಆಗಲಿದೆ ಎಂದು ಚಿತ್ರತಂಡ ಹೇಳಿದೆ. ಸದ್ಯ ಸಿನಿಮಾ ರಿಲೀಸ್ಗೆ ಕೇರಳ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಹೀಗಾಗಿ, ಸಿನಿಮಾ ಮೇ5ಕ್ಕೆ ರಿಲೀಸ್ ಆಗಲಿದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.
ಟ್ರೇಲರ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಜೂನ್ 1 ರಿಂದಲೇ ಗ್ಯಾರಂಟಿ ಯೋಜನೆ ಘೋಷಣೆ
-
ದಿನದ ಸುದ್ದಿ3 days ago
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್
-
ದಿನದ ಸುದ್ದಿ4 days ago
ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ
-
ದಿನದ ಸುದ್ದಿ3 days ago
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ
-
ದಿನದ ಸುದ್ದಿ5 days ago
ಹೋಟೆಲ್ಗಳಲ್ಲಿ ವಿವಿಧ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ದಾವಣಗೆರೆ | ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
-
ದಿನದ ಸುದ್ದಿ2 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ