Connect with us

ದಿನದ ಸುದ್ದಿ

ಕೆಎಫ್ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

Published

on

ವಿದೇಶಿ ಕಂಪನಿಯಾದರು ದೇಶದಾದ್ಯಂತ ತನ್ನದೆ ಛಾಪು ಮೂಡಿಸಿರುವ ಕೆಎಫ್ಸಿ ಫಾಸ್ಟ್ ಫುಡ್ ಅಂಗಡಿ ಮಳಿಗೆಗಳು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ? ಅಮೆರಿಕಾ ಮೂಲದ ಕರ್ನಲ್ ಹರ್ಲ್ಯಾಂಡ್ ಸಾಂಡರ್ಸ್ ಎಂಬ ವೃದ್ಧ ವ್ಯಕ್ತಿಯಿಂದ ಆರಂಭವಾದ ಕೆಂಚುಕಿ ಫ್ರೈಡ್ ಚಿಕನ್ (KFC) ಎಂಬ ಈ ಕಂಪನಿ ನಮ್ಮ ದೇಶದ್ದೆ ಎನ್ನುವ ಮಟ್ಟಿಗೆ ಜನಪ್ರಿಯವಾಗಿದೆ.

ಇಂತಹ ಒಂದು ವಿದೇಶಿ ಕಂಪನಿಗೆ, ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಸಮರ ಸಾರಿರುವ ರೈತರು ಇಟ್ಟಿರುವ ಹೆಸರು ಮತ್ತಷ್ಟು ಕುತೂಹಲಕಾರಿಯಾಗಿದೆ. ಹೌದು. ಕೆಎಫ್ಸಿ ಎಂದರೆ ಕೆಂಚುಕಿ ಫ್ರೈಡ್ ಚಿಕನ್ ಅಲ್ಲವಂತೆ, ಪ್ರತಿಭಟನಾ ನಿತರ ರೈತರ ಪ್ರಕಾರ ಕಿಸಾನ್ ಫುಡ್ ಕಾರ್ನರ್ (Kisaan Food Corner) ಎಂದು.

ಸಿಂಘು ಗಡಿಯಲ್ಲಿ ಕಳೆದ 50 ದಿನಗಳಿಂದ ಹೋರಾಟ ನಿರತ ರೈತರು ಇಲ್ಲಿಯೇ ಇರುವ ಕೆಎಫ್ಸಿ ಮಾಲ್ ಅನ್ನು ರೈತ ಹೋರಾಟಕ್ಕಾಗಿ ಪಡೆದಿದ್ದಾರೆ. ಇಲ್ಲಿ ರೈತರಿಗೆ, ಪ್ರತಿಭಟನೆಯಲ್ಲಿ ಭಾಗವಹಿಸುವವರಿಗೆ ನೀಡಲಾಗುವ ಲಂಗರ್ಗಾಗಿ (ಆಹಾರಕ್ಕಾಗಿ) ಬೇಕಾಗುವ ಎಲ್ಲಾ ಬಗೆಯ ಆಹಾರ ಸಾಮಾಗ್ರಿಗಳನ್ನು ಇಲ್ಲಿ ಶೇಖರಿಸಲಾಗಿದೆ.

ಕೆಎಫ್ಸಿ ಮಳಿಗೆ ಮೇಲೆ ಈ ರೀತಿಯ ಬರಹ ಹಾಕಿರುವ ಭಿತ್ತಿಪತ್ರವನ್ನು ಪ್ರತಿಭಟನಾಕಾರರು ಅಂಟಿಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಲ್ಯಾಂಡ್ ಮಾರ್ಕ್ ಆಗಿ ಕಾಣಿಸಿಕೊಂಡಿರುವ ಈ ಮಾಲ್, ಹೊಸ ಹೆಸರಿನೊಂದಿಗೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಅದಕ್ಕೆ ಈ ಕಿಸಾನ್ ಫುಡ್ ಕಾರ್ನರ್ ಕೂಡ ಕಾರಣ. ದೆಹಲಿ ಚಲೋ ಆರಂಭವಾದ ನವೆಂಬರ್ 26, 27 ರಿಂದಲೂ ಲಂಗರ್ಗಳನ್ನು ಹಾಕಿರುವ ತಂಡಗಳು ಇಲ್ಲಿ ದಿನಸಿ ಸಾಮಗ್ರಿಗಳನ್ನು ದಾಸ್ತಾನು ಮಾಡಿದ್ದಾರೆ.

ʼಪ್ರತಿಭಟನೆ ಆರಂಭವಾದಾಗಿನಿಂದ ಈ ಮಾಲ್ನಲ್ಲಿ ನಾವು ಇಲ್ಲಿಯ ಹತ್ತಿರದ ಲಂಗರ್ಗಳಿಗೆ ಬೇಕಾಗುವ ಆಹಾರ ಸಾಮಗ್ರಿಗಳನ್ನು ಇಡುತ್ತಿದ್ದೆವೆ. ಈ ಕಾರಣದಿಂದಲೇ ನಾವು ಕೆಎಫ್ಸಿ ಎಂಬ ಹೆಸರನ್ನು ಕಿಸಾನ್ ಫುಡ್ ಕಾರ್ನರ್ ಎಂದು ನಾಮಕರಣ ಮಾಡಿದ್ದೆವೆ. ಈಗ ಇಲ್ಲಿ ಎಲ್ಲರೂ ಇದನ್ನು ಕಿಸಾನ್ ಫುಡ್ ಕಾರ್ನರ್ ಎಂದು ಕರೆಯುತ್ತಿದ್ದಾರೆ. ಮಾಲ್ ಮೇಲೆ ಇರುವ ಕೆಎಫ್ಸಿ ಎಂಬ ದೊಡ್ಡ ಬೋರ್ಡ್ ಪಕ್ಕದಲ್ಲಿಯೂ ನಾವು K- Kisaan, F-Food C-Corner ಎಂದು ಅದರ ಅರ್ಥವನ್ನು ಬಿಡಿಸಿ ಬರೆದಿದ್ದೇವೆʼ ಎಂದು ಮಾರುತಿ ಮಾನವ್ ಎಂಬ ಪ್ರತಿಭಟನಾ ನಿರತ ವಿದ್ಯಾರ್ಥಿ ತಿಳಿಸಿದ್ದಾರೆ.

ಕೆಎಫ್ಸಿ ಮೇಲೆ ತಮ್ಮ ಹಕು ಸ್ಥಾಪಿಸಿರುವ ರೈತರು. ಇದೂ ನಮ್ಮ ಹೋರಾಟದಲ್ಲಿ ನಮಗೆ ಬೆಂಬಲ ನೀಡುತ್ತಿದೆ ಎಂದು ಹೆಮ್ಮೆ ಪಡುತ್ತಾರೆ. ಇಷ್ಟೇ ಅಲ್ಲದೆ ಪ್ರವಾಸಿ ತಾಣವಾಗಿ, ಹೊಸ ನಗರವಾಗಿ ಮಾರ್ಪಾಡಾಗಿರುವ ಪ್ರತಿಭಟನಾ ಸ್ಥಳಗಳಾಗಿರುವ ದೆಹಲಿಯ ಗಡಿಗಳಿಗೆ ಹಲವಾರು ಮಂದಿ ನಗರ ಪ್ರದೇಶದವರು ಭೇಟಿ ನೀಡುತ್ತಿದ್ದಾರೆ. ಕೆಲವರು ಪ್ರತಿಭಟನೆ ನೋಡಲು ಬರುತ್ತಾರೆ. ಮತ್ತೆ ಕೆಲವರು ಸೇವೆ ಮಾಡಲು, ಇನ್ಯಾರೋ ರೈತರಿಗೆ ಬೆಂಬಲ ನೀಡಲು ಮತ್ತಷ್ಟು ಜನ ರೈತರಿಗಾಗಿ ದೇಣಿಗೆ ನೀಡಲು ಇಲ್ಲಿಗೆ ಪ್ರತಿ ದಿನ ಬರುತ್ತಿದ್ದಾರೆ.

ಕೃಪೆ | ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Advertisement

ದಿನದ ಸುದ್ದಿ

ಎಸ್.ಎಸ್.ಎಲ್.ಸಿ, ಐಟಿಐ, ಡಿಪ್ಲೋಮ, ಬಿ.ಇ ಪಾಸಾದವರಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಹರಿಹರ ತಾಲ್ಲೂಕಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2020-21ನೇ ಸಾಲಿನ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್.ಸಿ.ಪಿ-ಟಿ.ಎಸ್.ಪಿ) ಮೂಲಕ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ, ಐಟಿಐ, ಡಿಪ್ಲೋಮ, ಬಿ.ಇ ಯಲ್ಲಿ ಪಾಸಾಗಿರುವ ಅಭ್ಯರ್ಥಿಗಳಿಗೆ 2 ತಿಂಗಳು ಅವಧಿಯ ತರಬೇತಿಗಳನ್ನು ಉಚಿತವಾಗಿ ನೀಡಿ ಉದ್ಯೋಗಾವಕಾಶವನ್ನು ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು.

ಶಿಬಿರದಲ್ಲಿ ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿಗಳಿಗೆ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್, ಸಿ.ಎನ್.ಸಿ. ಆಪರೇಟರ್ ಟರ್ನಿಂಗ್, ಸಿ.ಎನ್.ಸಿ. ಪ್ರೋಗ್ರಾಮರ್ ಹಾಗೂ ಕನ್‍ವೆನ್‍ಷನಲ್ ಟರ್ನಿಂಗ್ ಮಷಿನ್ ಆಪರೇಟರ್, ಮಿಲ್ಲಿಂಗ್ ಮಷಿನ್ ಆಪರೇಟರ್, ಸರ್ಫೇಸ್‍ಗ್ರೈಂಡಿಂಗ್ ಮಷಿನ್ ಆಪರೇಟರ್ ಕೋರ್ಸ್‍ಗಳನ್ನು ಮತ್ತು ಡಿಪ್ಲೋಮಾ ಅಥವಾ ಬಿ.ಇ ಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಡಿಸೈನರ್-ಮೆಕ್ಯಾನಿಕಲ್, ಪ್ರೊಡಕ್ಷನ್ ಇಂಜಿನಿಯರ್ ತರಬೇತಿಗಳನ್ನುನೀಡಲಾಗುವುದು.

ತರಬೇತಿ ಮುಗಿದ ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು. ಅರ್ಜಿ ಸಲ್ಲಿಸಲು ಮಾ.20 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಜಿ.ಟಿ.ಟಿ.ಸಿ., 22 ಸಿ&ಡಿ, ಕೆಐಎಡಿಬಿ, ಇಂಡಸ್ಟ್ರೀಯಲ್ ಏರಿಯಾ ಹರ್ಲಾಪುರ, ಕೆ.ಎಸ್.ಆರ್.ಟಿ.ಸಿ. ಡಿಪೋ ಹತ್ತಿರ, ಹರಿಹರ ಹಾಗೂ ದೂರವಾಣಿ ಸಂಖ್ಯೆ 08192-24937, 9916908111, 8884488202, 8711913947ಕ್ಕೆ ಸಂಪರ್ಕಿಸಿ ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿ ವೇತನ | ಆನ್‍ಲೈನ್ ಅರ್ಜಿ ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : ಮೆಟ್ರಿಕ್ ನಂತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರ ವಿದ್ಯಾರ್ಥಿವೇತನ ಶುಲ್ಕವಿನಾಯಿತಿ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯ ನೀಡಲು ಆಹ್ವಾನಿಸಲಾಗಿದ್ದ ಆನ್‍ಲೈನ್ ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾ 05 ನಿಗದಿಪಡಿಸಲಾಗಿತ್ತು. ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು/ವಿದ್ಯಾರ್ಥಿಗಳು/ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಸುವ ಕೊನೆಯ ಮಾ.20 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ : www.ssp.postmatric.karnataka.gov.in
ದೂ.ಸಂ: 8050770005/8050770004 ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ: 080-35254757 ಇಮೇಲ್- [email protected] ನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅಡಿಕೆಯಲ್ಲಿ ಅರಳು ಉದುರುವ, ಹಿಂಗಾರು ಒಣಗುವ ಮತ್ತು ಹಿಂಗಾರ ತಿನ್ನುವ ಸಮಸ್ಯೆ : ರೈತರು ತೆಗೆದುಕೊಳ್ಳಬೇಕಾದ ಕ್ರಮಗಳು

Published

on

ಸುದ್ದಿದಿನ,ದಾವಣಗೆರೆ : ಅಡಿಕೆಯಲ್ಲಿ ಹಿಂಗಾರ (ಹೊಂಬಾಳೆ) ತಿನ್ನುವ ಹುಳುಗಳು, ಹರಳು ಉದುರುವುದು, ಹಿಂಗಾರು ಕೊಳೆ ರೋಗ ಕಾಣಿಸಿಕೊಂಡಿದ್ದು ಅದನ್ನು ತಡೆಗಟ್ಟಲು ರೈತರು ಅಗತ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕೆಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಗಿರಿನಾಯ್ಕ್ ಪ್ರಕಟಣೆಯ ಮೂಲಕ ಸಲಹೆ ನೀಡಿದ್ದಾರೆ.

ಅಡಿಕೆ ಬೆಳೆಗೆ ಬೇಸಿಗೆಯಲ್ಲಿ ಪ್ರಮುಖವಾಗಿ ಕಾಣಿಸಿಕೊಳ್ಳುವ ಸಮಸ್ಯೆ ಹರಳು ಉದುರುವುದು ಮತ್ತು ಹಿಂಗಾರ ಕೊಳೆ ರೋಗ. ಅಡಿಕೆಯಲ್ಲಿ ಹಿಂಗಾರ ಬಿಚ್ಚಿ ಕಾಳು ಕಟ್ಟುವ ಮೊದಲೇ ಕೀಟಗಳು ಆಕ್ರಮಿಸಿಕೊಳ್ಳುವುದರಿಂದ ಹಿಂಗಾರ ಸಂಪೂರ್ಣವಾಗಿ ನಾಶವಾಗುತ್ತಿದೆ.

ಹಿಂಗಾರಿಗೆ ಕೊಲೆ ಟ್ರೊಟ್ರೈಕಮ್ಗ್ಲೀಯೋಸ್ಪೊರಿಯ್ಡಿಸ್ ಎಂಬ ಶಿಲೀಂದ್ರದ ಸೋಂಕಿಗೆ ಒಳಗಾದಾಗ ಹಿಂಗಾರ ಒಣಗುವ ಮತ್ತು ಅನುಚಿತ ನೀರಿನ ನಿರ್ವಹಣೆ ಹಾಗೂ ಲಘು ಪೋಷಕಾಂಶಗಳ ಕೊರತೆಯಿಂದ ಅರಳು ಉದುರುವ ಸಮಸ್ಯೆ ಕಂಡು ಬರುತ್ತಿದೆ.

ಉತ್ತಮ ಗಿಡಗಳ ಸಂರಕ್ಷಣೆಗಾಗಿ ರೋಗ ಪೀಡಿತ ಒಣಗಿದ ಹಿಂಗಾರನ್ನು ತೋಟದಿಂದ ತೆಗೆದು ನಾಶಪಡಿಸಬೇಕು ಅಥವಾ ಕಿತ್ತು ಸುಡಬೇಕು ಮತ್ತು ಹೊಸದಾಗಿ ಬಂದ ಹಿಂಗಾರಿನಲ್ಲಿ ಈ ಸಮಸ್ಯೆ ಕಂಡು ಬಂದಲ್ಲಿ ಕಾರ್ಬನ್ಡೈಜಿಮ್ + ಮ್ಯಾಂಕೊಜೆಬ್ 2 ಗ್ರಾಂ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.

ಇದನ್ನೂ ಓದಿ | ಗಾಳಿಪಟ ವೇಗದ ರಾಜಕುಮಾರ ‘ಬೀರ್ ಚಿಲಾರಾಯ್’..!

ಇದರ ಜೊತೆಗೆ ರಸ ಹೀರುವ ಕೀಟಗಳ (ಶಲ್ಕಗಳು ಮತ್ತು ಅಫಿಡ್) ನಿಯಂತ್ರಣಕ್ಕೆ ಅಂತವ್ರ್ಯಾಪಿ ಕೀಟನಾಶಕ ಪ್ಯೂಪ್ರನಿಲ್ 1 ರಿಂದ 1.5 ಮಿ.ಲೀ ಪ್ರತಿ ಲೀಟರ್ ನೀರಿಗೆ ಅಥವಾ ಇಮಿಡಾಕ್ಲೋಪ್ರಿಡ್+ ಅಸಿಫೇಟ್ ಮಿಶ್ರಣದ ಕೀಟನಾಶಕವನ್ನು 2 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.

ಅಡಿಕೆಯಲ್ಲಿ ಪ್ರಮುಖವಾಗಿ ಹರಳು ಉದುರುವ ಸಮಸ್ಯೆ ಕಂಡು ಬರುತ್ತಿದ್ದು ಇದರ ನಿರ್ವಹಣೆಗೆ ಕೀಟ ನಾಶಕಗಳ ಸಿಂಪಡಿಸುವ ಸಂದರ್ಭದಲ್ಲಿ ಲಘು ಪೋಷಕಾಂಶಗಳ ಮಿಶ್ರಣವನ್ನು 5 ಮಿ.ಲೀ. ನೀರಿಗೆ ಬೆರೆಸಿ ಸಿಂಪಡಿಸುವುದರಿಂದ ಮತ್ತು ಉತ್ತಮ ನೀರಿನ ನಿರ್ವಹಣೆಯಿಂದ ಹರಳು ಉದುರುವ ಸಮಸ್ಯೆಯನ್ನು ಕಡಿಮೆ ಮಾಡಬಹುದು. ಮತ್ತು ಮಣ್ಣು ನೀರು ಪರೀಕ್ಷೆ ಮಾಡಿಸುವುದರಿಂದ ರೋಗ ಬಾಧೆಗಳನ್ನು ತಡೆಗಟ್ಟಬಹುದು.

ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿಯ ತೋಟಗಾರಿಕೆ ಅಧಿಕಾರಿಗಳು ಅಥವಾ ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ ಇವರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending