Connect with us

ಸಿನಿ ಸುದ್ದಿ

ಕೆಜಿಎಫ್ ಸಿನಿಮಾ ವಿಮರ್ಶೆ, ಸ್ವೀಕೃತಿ, ನಿರಾಕರಣೆಗಳ ಸುತ್ತ..!

Published

on

ಸಂಜ್ಯೋತಿ ವಿ.ಕೆ
  • ಸಂಜ್ಯೋತಿ ವಿ.ಕೆ, ಸಿನೆಮಾ ನಿರ್ದೇಶಕಿ,ಬೆಂಗಳೂರು

Otherwise ಜೀವಪರ’ವಾಗಿರುವಂತವರಿಗೂ ಒಂದು ಸಿನಿಮಾದ ಮನುಷ್ಯವಿರೋಧಿ ಧೋರಣೆಗಳು ಏನೂ ಅಳುಕಿಲ್ಲದೆ ಮನಸನ್ನು ರಂಜಿಸುತ್ತೆ (entertainment!!) ಅನ್ನೋದಾದ್ರೆ This is high time to ask ourselves ‘ಏನಾಗಿದೆ ನಮಗೆ?’ ಅಂತ..

ಸಿನಿಮಾ ನಮ್ಮನ್ನು ನಗಿಸಲಿ, ಅಳಿಸಲಿ, ವಿಷಲ್ ಹೊಡಸಲಿ.. but not for wrong reasons..! ಹುಡುಗೀನ ಎತ್ತಾಕೊಂಡು ಬಂದು ಸರಕಿನ ಹಾಗೆ treat ಮಾಡೋದು ಒಬ್ಬ ಹುಡುಗನಿಗೆ ಥ್ರಿಲ್ ಕೊಡುತ್ತೆ ಅಂದ್ರೆ ಅದು ಆತನ ಒಳಗಿನ misogynyಯನ್ನ ಉದ್ದೀಪಿಸ್ತಾ ಇದೆ ಅಂತಲೇ. N the authentication of such misogyny in the cinema by his favorite ‘star’ will surely make him more misogynist.

ಒಬ್ಬ ಬಡ ಹುಡುಗ ಕಷ್ಟ ಪಟ್ಟು ಉನ್ನತಿಗೆ ಏರುವ ಬದಲು, ಸಮಾಜಕಂಟಕ ಮಾಫಿಯಾ ದೊರೆಯಾಗಿ ಬೆಳೆಯುವುದನ್ನು authenticate ಮಾಡುವ ಸಿನಿಮಾ ಪ್ರೇಕ್ಷಕನೊಬ್ಬನನ್ನು entertain ಮಾಡ್ತಿದೆ ಎಂದರೆ ಅದು ಆತನ ಬಡತನ ಅಸಹಾಯಕತೆಯ ಮೂಲದಿಂದ ಹೊರಟಿರಬಹುದು, ಆದರೆ ಆತನನ್ನು ಯಾವ ದಿಕ್ಕಿನಲ್ಲಿ ಯೋಚಿಸಲು ಉದ್ದೀಪಿಸಬಹುದೆಂಬುದನ್ನು ಅರಿಯಲು psychology professor ಆಗಬೇಕಾದ ಅಗತ್ಯ ಖಂಡಿತ ಇಲ್ಲ.

ಹೆಚ್ಚು ಹೆಚ್ಚು ಜನರು ಇಂತದನ್ನು ಮೆಚ್ಚುತ್ತಿದ್ದಾರೆಂಬುದು (ಗಳಿಕೆ?) ನಮಗೆ ಆತಂಕ ತರಬೇಕೇ ಹೊರತು ಖುಷಿಯನ್ನಲ್ಲ. This alone can never be the criterion for success and specially when economic success comes with such wrong means, we have all the more reasons to doubt it and reject to call it as success.

And, This is not a debate about commercial film Vs Art film (Keeping aside my own reservations about such classification for time being)

The major questions are;

1. Huge fan following ಇರುವ ಒಬ್ಬ ‘ಹೀರೋ’ ತೆರೆ ಮೇಲೆ ಏನನ್ನು authenticate ಮಾಡಬಹುದು/ಬಾರದು ಎಂಬುದು ಯಾವುದೇ ಮಾಧ್ಯಮದಲ್ಲಿ ಇರಬೇಕಾದ ಕನಿಷ್ಟ ಸಾಮಾಜಿಕ ಜವಾಬ್ದಾರಿ. ಅದನ್ನು ತಪ್ಪಿ ನಡೆದಾಗ ಅದರ ಬಗ್ಗೆ ಚರ್ಚಿಸುವುದು, ವಿಮರ್ಶಿಸುವುದು, ಖಂಡಿಸುವುದು ಇವೆಲ್ಲವೂ ಆ ಕಲೆಯ ಬಗೆಗೆ ಆಸಕ್ತಿ ಹೊಂದಿರುವವರ ಹಕ್ಕು ಮತ್ತು ಕರ್ತವ್ಯ. ಅಷ್ಟೇ ಏಕೆ ಸಿನಿಮಾದ ಬಗೆಗೆ ಆಸಕ್ತಿ ಇಲ್ಲವಾದರೂ ಸಮಾಜದ ಆಗುಹೋಗಿನ ಬಗೆಗೆ ಕಾಳಜಿಯುಳ್ಳ ಯಾರಾದರೂ ಮಾಡಬಹುದಾದ (infact ಮಾಡಬೇಕಾದ) ಕೆಲಸವಿದು.

‘ಕಬೀರ್ ಸಿಂಗ್’ನ ನಾಯಕ ಪಾತ್ರದ ಬಗೆಗೆ, ‘ಪದ್ಮಾವತ್’ನ ನಿರ್ದೇಶಕನ ಧೋರಣೆಯ ಬಗೆಗೆ ಮತ್ತು ಆ ಸಿನಿಮಾದ ಬಗೆಗೆ, ತನ್ನ ಸಿನಿಮಾ ಒಂದರಲ್ಲಿ ಮಹಿಳಾ ಇನ್ಸ್ಪೆಕ್ಟರ್ ಗೆ ‘ಝಾಡಿಸಿ ಒದ್ದರೆ ಮುಟ್ಟಿನ ರಕ್ತ ಚೆಲ್ಲಬೇಕು’ ಅನ್ನೋ ಸಂಭಾಷಣೆಯನ್ನ ಯಾವುದೇ ಅಳುಕಿಲ್ಲದೆ ಹೇಳಿದ ‘ಮೇರು ನಟ’ ಮುಮ್ಮುಟ್ಟಿಯ ಬಗೆಗೆ, SRK ‘ಮೈ ಹೂ ನಾ’ ದಲ್ಲಿ ಸಂಜನಾ ಎಂಬ ಪಾತ್ರ ಮತ್ತು ‘ಕುಚ್ ಕುಚ್ ಹೋತಾ ಹೈ’ನ ಕಜೋಲ್ ಪಾತ್ರ ಚಿತ್ರಗಳಲ್ಲಿನ ಹೆಣ್ಣು ಪಾತ್ರಧಾರಿಗಳ patriarchal ಸಿದ್ಧಮಾದರಿಗೆ ಒಪ್ಪಿತವಾಗುವ ಮೇಕ್ ಓವರ್’ ಬಗೆಗೆ, ‘ಕಲ್ ಹೋ ನ ಹೋ’ ನಲ್ಲಿ ಪ್ರೀತಿ ಝಿಂತಾಳ ಪಾತ್ರವನ್ನು ‘ಚಶ್ಮಿಶ್’ ಎಂದು ಕರೆಯುವುದರ ಬಗೆಗೆ … ಇಂತವುಗಳ ಬಗೆಗೆಗೆಲ್ಲ ನಡೆದ ವಿಮರ್ಶೆಗಳು ನಡೆಯಲೇ ಬಾರದಿತ್ತೇ? (in btw I love Sharukh!)
ಅದರಿಂದ ಆ ನಟ/ನಿರ್ದೇಶಕರು ನಾಶವಾಗಿ ಹೋದರೇ? ಇಲ್ಲ. ಬದಲಿಗೆ ಇಂತ ಚರ್ಚೆ ವಿಮರ್ಶೆಗಳು ಒಟ್ಟಾರೆ ಬಾಲಿವುಡ್’ನ ಮತ್ತು ಇತರ ಸಿನಿಮಾರಂಗಗಳ ಧೋರಣೆಯ ಮೇಲೆ ಸಕಾರಾತ್ಮಕ ಪರಿಣಾಮವನ್ನೇ ಬೀರಿದೆ. ಸುಮಾರು ಜನರಿಗೂ ಈ ನಿಟ್ಟಿನಲ್ಲಿ ಯೋಚಿಸಬೇಕಾದ ಅಗತ್ಯದ ಅರಿವುಂಟಾಗಿದೆ. (ಎಲ್ಲವೂ ಸಂಪೂರ್ಣ ಬದಲಾಗಿಹೋಗಿದೆಯೆಂದಲ್ಲ, ಬದಲಾವಣೆಯ ಸಾಧ್ಯತೆಗಳು ತೆರೆದುಕೊಳ್ಳುತ್ತಿವೆ ಎಂಬುದು ಮುಖ್ಯ)
ಆದರೆ ಇಲ್ಲಿ ನಮ್ಮಲ್ಲಿ, ‘ಖರಾಬು…’ ಹಾಡಿನ ಬಗೆಗೆ, ಅದರಲ್ಲಿನ misogyny ಬಗೆಗೆ ನಡೆದ ವಿಮರ್ಶೆಯನ್ನು ಯಾವ ರೀತಿ ಸ್ವೀಕರಿಸಲಾಯಿತು? ನೆನಪಿದೆಯೇ??

2. ಮೇಕಿಂಗು (?!), ಮಣ್ಣು ಮಸಿ ಅನ್ನೋ ಹೆಸರಲ್ಲಿ ಒಂದು ಸಿನಿಮಾ ಜಾತೀಯತೆ, misogyny, ಫ್ಯಾಸಿಸಂ, ರೌಡಿಸಂ ಇತ್ಯಾದಿಗಳನ್ನ authenticate ಮಾಡೋದನ್ನ ಒಪ್ಪುತೀವಿ ಅಂದ್ರೆ there is something seriously wrong with our senses. (By the way I like Yash. )

3. ಹಾಗಾದರೆ ನಟ/ನಟಿಯರು ‘negative shade’ ಇರುವ ಪಾತ್ರಗಳನ್ನು ಮಾಡಲೇ ಬಾರದೇ? ಎಂದರೆ ಅದು ಹಾಗಲ್ಲ. ಆ negative ಅನ್ನು ನಿರ್ದೇಶಕ ಮತ್ತು ನಟ/ಟಿ negative ಎಂದು ತೋರಿಸುತ್ತಾ ಅದರ ಬಗೆಗೆ ಒಂದು ನಿರಾಕರಣೆಯನ್ನು ನೋಡುಗರ ಮನಸಿನಲ್ಲಿ ಹುಟ್ಟಿಸುತ್ತಿದ್ದಾರೆಯೇ ಅಥವಾ ಆ negative ನ ಬಗೆಗೆ ಒಂದು ಮೃದು ಧೋರಣೆಯನ್ನೋ, ರಮ್ಯತೆಯನ್ನೋ ಹುಟ್ಟುಹಾಕುತ್ತಾ ಅದನ್ನು ವೈಭವೀಕರಿಸುತ್ತಾ ನೋಡುಗರಲ್ಲಿ ಅದಕ್ಕೊಂದು ಮಾನ್ಯತೆ ತಂದು ಕೊಡುತ್ತಿದ್ದಾರೆಯೇ ಎಂಬುದು ಮುಖ್ಯವಾಗುತ್ತದೆ. (ಕಬೀರ್ ಸಿಂಗ್, ಪದ್ಮಾವತ್…)

3. ಸಿನಿಮಾ ಮಾಧ್ಯಮದ ಅಗಾಧ influenceನ ಅರಿವಿಲ್ಲದ (?) ಹುಂಬರು ಮಾತ್ರವೇ ‘ಸಿನಿಮಾ ಸಿನಿಮಾ ಅಷ್ಟೆ’ ಅಂತ ಉಡಾಫೆ ಮಾತಾಡಬಹುದು.

4. ಕನ್ನಡ ಸಿನಿಮಾ ರಂಗದ ಮೇರು ನಟ ಡಾ.ರಾಜ್’ಕುಮಾರ್ ಅವರು ಪಾತ್ರಗಳ ಆಯ್ಕೆಯ ಬಗೆಗೆ ಹೊಂದಿದ್ದ ಧೋರಣೆ ಒಂದು ಮಾದರಿಯಾಗಬೇಕು. (ಅವರ ಅರಿವಿಗೆ ದಕ್ಕಿದಷ್ಟನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದರು. ಅದರಾಚೆಗೂ ಅವರ ಕೆಲವು ಸಿನಿಮಾಗಳಲ್ಲಿ misogyny, patriarchy ಗಳು ಢಾಳಾಗಿ ಇರುವುದು ನಿಜವೇ. ಆದರೆ ಅವುಗಳ ಸಂಪೂರ್ಣ ಜವಾಬ್ದಾರಿಯನ್ನು ಅವರ ಹೆಗಲಿಗೆ ಹಾಕಲು ಬರುವುದಿಲ್ಲ. ಒಂದು ಒಟ್ಟಾರೆ ಸಮಾಜ ಬದಲಾವಣೆಯ ಯಾವ ಹಂತದಲ್ಲಿದೆ ಎಂಬುದರ influence ಸಹಾ ಅಲ್ಲಿ ಕೆಲಸ ಮಾಡುತ್ತಿರುತ್ತದೆ.)

5. ಬಹಳಷ್ಟು ಜನ ಮೆಚ್ಚಿರುವ/ ಇಷ್ಟಪಟ್ಟಿರುವ ಸಿನಿಮಾದ ಬಗೆಗೆ ಮಾತಾಡಬೇಡಿ ಎನ್ನುವುದು (ಕೆಲವು ಉಗ್ರ ಅಭಿಮಾನಿಗಳಂತೂ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ‘ಎಲ್ಲರೂ ಇಷ್ಟ ಪಟ್ಟಿರುವ’ ಎಂದೇ announce ಮಾಡಿದ್ದಾರೆ! ಇಲ್ಲಿ ಈ ಸಿನಿಮಾದ ಬಗೆಗೆ ವಿಮರ್ಶಾತ್ಮಕವಾಗಿ ಮಾತಾಡುತ್ತಿರುವವರೂ ಸೇರಿದಂತೆ ಇನ್ನೂ ಅನೇಕರು ಅವರ ಆ ‘ಎಲ್ಲರೂ’ ಒಳಗೆ ಬರುತ್ತಿಲ್ಲವೆಂಬುದನ್ನೂ ಕಣೆಗಣಿಸಿ.. ಇರಲಿ, ಒದೊಂದು ಜೋಶ್.) ಈಗ ಭಾರತವನ್ನು ಮುಸುಕಿರುವ ‘ಬಹುಸಂಖ್ಯಾತವಾದದ reflection ಆಗಿ ಕಾಣುವುದಿಲ್ಲವೇ?

6. ಹೀಗೆ ವಿಮರ್ಶಿಸುತ್ತಿರುವವರು ಇಂತಹ ಜೀವವಿರೋಧಿ ಧೋರಣೆಗಳನ್ನು ಪ್ರತಿಪಾದಿಸುತ್ತಿರುವ ಸಿನಿಮಾವನ್ನು ಬಹುದೊಡ್ಡ ಮಟ್ಟದಲ್ಲಿ ಜನರು ಮೆಚ್ಚುವುದನ್ನು ಆತಂಕದಿಂದ ನೋಡುವುದು ಸಹಜ.‌ ‘ಸಿನಿಮಾವನ್ನು ಮೆಚ್ಚುವವರ ಬಗೆಗೇಕೆ ಬರೆಯುತ್ತೀರಿ?’ ಎಂದು ಕೇಳುವುದರಲ್ಲಿಯೇ ಸಮಸ್ಯೆಯಿದೆ. (Until it is too personal!)

7. ಕೊನೆಯದಾಗಿ ನನ್ನ ಒಂದು ವೈಯಕ್ತಿಕ ಅಭಿಪ್ರಾಯ.
ಹೀಗೆ ಈ ಸಿನಿಮಾದ ಬಗೆಗೆ ವಿಮರ್ಶಾತ್ಮಕವಾಗಿ ಪ್ರಮುಖವಾಗಿ ಬರೆಯುತ್ತಿರುವ ಕೆಲವರು ಕೆಲ ಬೇರೆ ಸಂದರ್ಭಗಳಲ್ಲಿ ಅವರ ಕೆಲವು ನಿಲುವುಗಳನ್ನು ಬಹಳ forcefull ಆಗಿ ಪ್ರತಿಪಾದಿಸಲು ಪ್ರಯತ್ನಿಸಿದ್ದು (it’s not the correctness or otherwise of the subject itself but the way they tried to do it) ಮತ್ತು ಆಗ ಅಂತಹ ನಿಲುವುಗಳನ್ನು ಒಪ್ಪದವರಿರಲಿ, ಅನುಮಾನವುಳ್ಳವರನ್ನೂ ಕಿಚಾಯಿಸುವ ವ್ಯಂಗ್ಯ ಅಥವಾ ಒಂದು ತೆರನಾದ judgemental classificationಗೆ ದೂಡುವಂತೆ ನಡೆದುಕೊಂಡದ್ದರ ಬಗೆಗೆ ನನಗೂ objectionಗಳಿವೆ. ಅಂತಹ ಸಂದರ್ಭಗಳಲ್ಲಿ ಆದ ಅನುಭವದ ಕಹಿಯಿಂದ ಕೆಲವರು ಇವರ ಈ ಸಿನಿಮಾ ಕುರಿತ ವಿಮರ್ಶೆಯನ್ನು ನಿರಾಕರಿಸುವಂತೆಯೂ ನನಗೆ ಕಂಡಿತು. (That’s my opinion..) ಅದು ನನ್ನೊಬ್ಬ ಬಹಳ sensible ಆದ ಗೆಳತಿಯ ಪ್ರತಿಕ್ರಿಯೆ ನೋಡಿ ಅನಿಸಿದ್ದು.. ಇರಲಿ.

8. ಈ ವಿಮರ್ಶೆಗಳು ನಿಮಗೆ ಒಪ್ಪಿತವಾಗಲೇ ಬೇಕಂತಿಲ್ಲ. ಆದರೆ ಹಾಗೆ ವಿಮರ್ಶಿಸುತ್ತಿರುವವರ credibility ಬಹುತೇಕ ಗೊತ್ತಿರುವುದರಿಂದ (ನಮ್ಮ ನಮ್ಮಲ್ಲೇ) ಅದನ್ನು ಕೇಳಿಸಿಕೊಳ್ಳುವ, ಒಮ್ಮೆ ಅದರ ಬಗೆಗೆ ಯೋಚಿಸಿ ನೋಡುವ, ಸಾಧ್ಯವಾದರೆ ಆರೋಗ್ಯಕರವಾಗಿ ಚರ್ಚಿಸುವಷ್ಟು ಸಹನೆ ಇರಲಿ. ಅದರಾಚೆಗೂ ಅವರ ವಿಚಾರ ಒಪ್ಪಿತವಾಗದಿದ್ದಲ್ಲಿ ನಿರಾಕರಿಸುವ ಆಯ್ಕೆ , ಹಕ್ಕೂ ಎರಡೂ ಇದ್ದೇ ಇರುತ್ತದೆ. ಆದರೆ ಇಂತಹ ಸಾಮಾನ್ಯ ವಿಷಯಗಳೂ ನಮ್ಮನ್ನು ಗುಂಪುಗಳಾಗಿ ಒಡೆಯದಿರಲಿ. Sorry if the last paragraph is sounding too preachy. If so you can please ignore it.

(ಸಂಜ್ಯೋತಿ ವಿ.ಕೆ. ಅವರ ಫೇಸ್‌ಬುಕ್‌ ಬರಹ)


ಬೆಂಗಳೂರಿನ ಸಂಜ್ಯೋತಿ ವಿ.ಕೆ., ಎಂಬಿಎ ಮತ್ತು ಅರ್ಥಶಾಸ್ತ್ರ ವಿಷಯಗಳಲ್ಲಿ ಸ್ನಾತಕೋತ್ತರ ಪದವೀಧರೆ. ಸದ್ಯ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಪಿಎಚ್‌ಡಿ ಅಧ್ಯಯನ ಮಾಡುತ್ತಿದ್ದಾರೆ. ಇವರು ಸಹಲೇಖಕಿಯಾಗಿ ರಚಿಸಿದ ‘ನಕ್ಷತ್ರದ ಧೂಳು’ ಏಕವ್ಯಕ್ತಿ ನಾಟಕ ರಾಜ್ಯದ ಹಲವೆಡೆ ಪ್ರದರ್ಶನ ಕಂಡಿದೆ. ಕೆಲಕಾಲ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬೋಧಕರಾಗಿಯೂ ಕೆಲಸ ನಿರ್ವಹಿಸಿದ್ದಾರೆ. ಸದ್ಯ ಸಿನೆಮಾ ಮಾಧ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ನಿರ್ದೇಶನದ ‘ಅನಲ‘ ಕಿರುಚಿತ್ರವು ರಾಜ್ಯ ಸರಕಾರ ನೀಡುವ 2016ನೇ ಸಾಲಿನ ‘ಅತ್ಯುತ್ತಮ ಕಿರುಚಿತ್ರ ರಾಜ್ಯಪ್ರಶಸ್ತಿ‘ ಪಡೆದಿದೆ.


ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending