ದಿನದ ಸುದ್ದಿ
ಕಿಡ್ನಿ ಕಾಯಿಲೆಗೆ ಪರಿಣಾಮಕಾರಿ ಚಿಕಿತ್ಸೆ
ಹೈಬಿಪಿ ನಿಯಂತ್ರಿಸದಿದ್ದರೆ ಶುಗರ್ ಕಾಯಿಲೆ ಸಹಜವಾಗಿ ಕಿಡ್ನಿ ಕಾಯಿಲೆ ಬರುತ್ತದೆ. ಬಿಪಿ ಮತ್ತು ಶುಗರ್ ಕಾಯಿಲೆ ನಿಯಂತ್ರಿಸದಿದ್ದರೆ ಇತರೆ ಅನೇಕ ಕಾಯಿಲೆಗಳು ಬರುತ್ತವೆ. ಈ ಹೈಬಿಪಿ ಮತ್ತು ಶುಗರ್ ಕಾಯಿಲೆ ಕಾರಣದಿಂದ ಮೊದಲು ಬರುವುದೇ ಕಿಡ್ನಿ ಕಾಯಿಲೆ.
ಕಿಡ್ನಿ ವೈಫಲ್ಯ ಆದಾಗ ವ್ಯಕ್ತಿ ನರಕ ಯಾತನೆಯನ್ನೇ ಅನುಭವಿಸುತ್ತಾನೆ. ಅದರಲ್ಲೂ ಕಿಡ್ನಿ ಕಲ್ಲುಗಳಿಂದ ಬರುವ ನೋವು ಹೆರಿಗೆ ನೋವಿಗಿಂತಲೂ ಅಧಿಕವಾಗಿರುತ್ತದೆ. ಡಯಾಲಿಸಿಸ್ ಸ್ಟೇಜಲ್ಲಿ ವಾರಕ್ಕೆ ಎರಡು ಅಥವಾ ಮೂರು ಬಾರಿ ಆಸ್ಪತ್ರೆಗೆ ದಾಖಲಾಗಿ ಡಯಾಲಿಸಿಸ್ ಮಾಡಿಸಿಕೊಳ್ಳಬೇಕಾಗುತ್ತದೆ. ದಿನಗಳಂತೆ ಖರ್ಚು ಹೆಚ್ಚಾಗುತ್ತದೆ. ವ್ಯಕ್ತಿ ಸರ್ಕಾರಿ ಅಥವಾ ಕಂಪನಿಗಳಲ್ಲಿ ಉದ್ಯೋಗಿಯಾಗಿದ್ದಲ್ಲಿ ಕೆಲಸ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತದೆ. ಅಲ್ಲದೆ ಡಯಾಲಿಸಿಸ್ಗೆ ಅತಿ ಹೆಚ್ಚು ಹಣ ಬೇಕಾಗುತ್ತದೆ. ಡಯಾಲಿಸಿಸ್ ನಿಲ್ಲಿಸಿದಲ್ಲಿ ಅಪಾಯ ಮತ್ತಷ್ಟು ಹೆಚ್ಚು. ಆದ್ದರಿಂದ, ಕಿಡ್ನಿ ಕಾಯಿಲೆ ಬರದಂತೆ ಎಚ್ಚರಿಕೆ ವಹಿಸಬೇಕು. ಬಂದಿದ್ದಲ್ಲಿ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಇಂದು ನಮ್ಮ ದೇಶದಲ್ಲಿ ಬಿಪಿ ಶುಗರ್ ಕಾಯಿಲೆಗಳ ಹೆಚ್ಚಳದಿಂದ ಕಿಡ್ನಿ ಕಾಯಿಲೆಯು ಅನೇಕರಲ್ಲಿ ಕಂಡುಬರುತ್ತಿದೆ.
ಕಿಡ್ನಿಯ ಕೆಲಸ ಕಾರ್ಯಗಳು : ಕಿಡ್ನಿಗಳು ನಮ್ಮ ದೇಹದ ಸೂಕ್ಷ್ಮ ಫಿಲ್ಟರ್ ಯಂತ್ರವಿದ್ದಂತೆ. ಬೇಡವಾದ ವಸ್ತುಗಳನ್ನು ಫಿಲ್ಟರ್ ಮಾಡಿ ದೇಹದಿಂದ ಹೊರಹಾಕುವ ಕೆಲಸವನ್ನು ಕಿಡ್ನಿಗಳು ನಿರಂತರವಾಗಿ ಮಾಡುತ್ತಿರುತ್ತದೆ. 150 ರಿಂದ 170 ಗ್ರಾಂ ತೂಕ ಹೊಂದಿರುವ ಈ ಚಿಕ್ಕ ಕಿಡ್ನಿಯಲ್ಲಿ ನೆಪ್ರೊನ್ ಎಂಬ ಕಣ್ಣಿಗೆ ಕಾಣದಷ್ಟು ಸೂಕ್ಷ್ಮ ಮಿಲಿಯಾಂತರ ಫಿಲ್ಟರ್ ಕೋಶಗಳು ಇರುತ್ತವೆ. ಈ ಫಿಲ್ಟರ್ ಕೋಶಗಳ ಮೂಲಕ ರಕ್ತದಲ್ಲಿನ ಕಲ್ಮಷ ಮತ್ತು ವಿಷಯುಕ್ತ ಅಂಶವನ್ನು ಫಿಲ್ಟರ್ ಮಾಡಿ ಮೂತ್ರದ ಮೂಲಕ ಹೊರ ಹಾಕುವ ಕಠಿಣ ಕೆಲಸವನ್ನು ಕಿಡ್ನಿಗಳು ಮಾಡುತ್ತವೆ. ಈ ರೀತಿ ರಕ್ತವನ್ನು ಶುದ್ಧಗೊಳಿಸುವ ಪ್ರಮುಖ ಕೆಲಸದ ಜೊತೆಗೆ ಇನ್ನೂ ಅನೇಕ ಕೆಲಸಗಳನ್ನು ಕಿಡ್ನಿಗಳು ನಿರ್ವಹಿಸುತ್ತವೆ. ಇಂತಹ ಸೂಕ್ಷ್ಮ ಅದ್ಬುತ ಅಂಗವನ್ನು ಅತಿ ಎಚ್ಚರಿಕೆಯಿಂದ ಕಾಪಾಡಿಕೊಳ್ಳಬೇಕಾಗಿದೆ. ಇಂಥ ಸೂಕ್ಷ್ಮ ಕಿಡ್ನಿಗೆ ತೊಂದರೆಯಾದಲ್ಲಿ ದೇಹದಲ್ಲಿ ರಕ್ತದಲ್ಲಿ ವಿಷಕಾರಿ ಅಂಶಗಳು ಹೆಚ್ಚಳವಾಗಿ ವ್ಯಕ್ತಿ ಗಂಭೀರ ಕಾಯಿಲೆಗೆ ತುತ್ತಾಗುತ್ತಾನೆ. ನರಕ ಯಾತನೆಯನ್ನೇ ಅನುಭವಿಸುತ್ತಾನೆ.
ಕಿಡ್ನಿ ಕಾಯಿಲೆಗೆ ಕಾರಣಗಳು : ದೇಹದಲ್ಲಿನ ಕಲ್ಮಷಗಳನ್ನು ಹೊರಹಾಕಿ ರಕ್ತ ಶುದ್ಧಗೊಳಿಸುವುದರೊಂದಿಗೆ ಇತರೆ ಅನೇಕ ಕೆಲಸಗಳನ್ನು ನಿರ್ವಹಿಸುವ ಅದ್ಬುತ ಅಂಗ ನಮ್ಮ ಕಿಡ್ನಿಗಳು ಅನೇಕ ಕಾರಣಗಳಿಂದ ರಕ್ತ ಶುದ್ಧೀಕರಿಸುವಲ್ಲಿ ವಿಫಲವಾಗಿ ಮೂತ್ರಪಿಂಡ ವೈಫಲ್ಯ (Kidney failure) ಆಗುತ್ತದೆ. ಕಿಡ್ನಿ ಕಾಯಿಲೆ ಪ್ರಮುಖವಾಗಿ ಬಿಪಿ ಶುಗರ್ ಕಾಯಿಲೆ, ಕಿಡ್ನಿಯಲ್ಲಿ ಕಲ್ಲುಗಳು, ಮೂತ್ರ ಸೋಂಕು, ಮದ್ಯಪಾನ, ಅನಗತ್ಯ ಔಷಧಿಗಳ ದೀರ್ಘಕಾಲ ಸೇವನೆ, ನೀರನ್ನು ಅತೀ ಕಡಿಮೆ ಅಥವಾ ಅತೀ ಹೆಚ್ಚು ಕುಡಿಯುವುದು. ಅಧಿಕ ಪ್ರೋಟೀನ್ ಸೇವನೆ, ಮಾಂಸಹಾರ ಸೇವನೆ, ಅತಿಯಾಗಿ ಉಪ್ಪು ಸಕ್ಕರೆ ಸೇವನೆ ಹೀಗೆ ಅನೇಕ ಕಾರಣಗಳಿಂದ ಕಿಡ್ನಿ ತೊಂದರೆಗೊಳಗಾಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಕಿಡ್ನಿಗಳು ಶೇ.90 ರಷ್ಟು ಕೆಲಸ ಮಾಡುವುದನ್ನು ನಿಲ್ಲಿಸಿದಲ್ಲಿ ಡಯಾಲಿಸಿಸ್ ಅಥವಾ ಕಿಡ್ನಿ ಕಸಿ ಮಾಡುವುದು ಅನಿವಾರ್ಯವಾಗುತ್ತದೆ.
ಕಿಡ್ನಿ ಕಾಯಿಲೆಯ ಲಕ್ಷಣಗಳು : ಬಹಳಷ್ಟು ಜನರಲ್ಲಿ ಕಿಡ್ನಿ ತನ್ನ ಕೆಲಸವನ್ನು ಸಂಪೂರ್ಣ ನಿಲ್ಲಿಸುವವರೆಗೂ ಯಾವುದೇ ಲಕ್ಷಣಗಳು ಕಂಡುಬರುವುದಿಲ್ಲ. ಕಂಡು ಬಂದಾಗ ಗಂಭೀರ ಸಮಸ್ಯೆ ಇರುತ್ತದೆ. ಡಯಾಲಿಸಿಸ್ ಅಥವಾ ಕಿಡ್ನಿ ಕಸಿ ಮಾಡಬೇಕಾದ ಪರಿಸ್ಥಿತಿ ಬರುತ್ತದೆ. ಆದ್ದರಿಂದ, ಇದನ್ನು ಸೈಲೆಂಟ್ ಕಿಲ್ಲರ್ ಎಂದೂ ಕರೆಯುತ್ತಾರೆ. ಪ್ರಮುಖವಾಗಿ ಪದೇಪದೇ ಮೂತ್ರ ವಿಸರ್ಜನೆ, ರಾತ್ರಿ ವೇಳೆ ಅಧಿಕ ಮೂತ್ರ ವಿಸರ್ಜನೆ, ಬಾಯಲ್ಲಿ ಕೆಟ್ಟ ವಾಸನೆ, ಚರ್ಮದಲ್ಲಿ ತುರಿಕೆ, ಕೈ ಕಾಲುಗಳಲ್ಲಿ ಊತ, ಮೂತ್ರದ ಬಣ್ಣದಲ್ಲಿ ಬದಲಾವಣೆ, ಮೂತ್ರದಲ್ಲಿ ರಕ್ತ, ಕಿಬ್ಬೊಟ್ಟೆ ಅಥವಾ ಹಿಂಭಾಗದಲ್ಲಿ ನೋವು, ಜ್ವರ, ವಾಂತಿ, ನಿಶಕ್ತಿ, ನಿದ್ರಾಹೀನತೆ, ಅನಿಯಂತ್ರಿತ ಬಿಪಿ, ಪಾದಗಳಲ್ಲಿ ಉರಿ, ಉಸಿರಾಟದಲ್ಲಿ ತೊಂದರೆ ಹೀಗೆ ಅನೇಕ ಲಕ್ಷಣಗಳು ಕಂಡು ಬರಬಹುದು. ನಿಮ್ಮ ಕಿಡ್ನಿ ಕಾಯಿಲೆ ಯಾವುದೇ ಹಂತದಲ್ಲಿದ್ದರೂ ಸೂಕ್ತ ಆಹಾರ ಪದ್ಧತಿ, ಜೀವನ ಶೈಲಿ ಬದಲಾವಣೆ ಮತ್ತು ಸೂಕ್ತ ಚಿಕಿತ್ಸೆ ಮೂಲಕ ಕಿಡ್ನಿ ಕಾಯಿಲೆಯ ತೊಂದರೆಯಿಂದ ಸಂಪೂರ್ಣ ಹೊರಬರಲು ಸಾಧ್ಯವಿದೆ.
ಕಿಡ್ನಿ ಕಾಯಿಲೆಗೆ ಅತ್ಯಂತ ಶ್ರೇಷ್ಠ ಪರಿಣಾಮಕಾರಿ ಔಷಧ Stomach Kare ಮತ್ತು Kidney QR X Plus!
ನಿಮ್ಮ ಕಿಡ್ನಿ ಕಾಯಿಲೆ ಯಾವುದೇ ಹಂತದಲ್ಲಿರಲಿ. ಮೇಲಿನ ಆಹಾರ ಪದ್ಧತಿಯೊಂದಿಗೆ ಅಲ್ಪ ಪ್ರಮಾಣದಲ್ಲಿ ಪರಿಣಾಮಕಾರಿ ಔಷದ ಸೇವಿಸಿದಲ್ಲಿ ಕೆಲವೇ ದಿನಗಳಲ್ಲಿ ನಿಮ್ಮ ಕಿಡ್ನಿ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ. ನಿಮ್ಮ ಕಿಡ್ನಿ ಕಾಯಿಲೆಗೆ Stomach Kare ಮತ್ತು Kidney QR X Plus ಎಂಬ ಔಷಧವು ರಾಮಬಾಣದಂತೆ ಕೆಲಸ ಮಾಡುತ್ತದೆ. ಇದರ ಕ್ರಮಬದ್ಧ ಸೇವನೆಯಿಂದ ಕೆಲವೇ ದಿನಗಳಲ್ಲಿ ನಿಮ್ಮ ಕಿಡ್ನಿ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ. ಮಾತ್ರವಲ್ಲ. ಇತರೆ ಕಾಯಿಲೆಗಳಾದ ಗ್ಯಾಸ್, ಅಸಿಡಿಟಿ, ಮಲಬದ್ಧತೆ, ಅಲ್ಸರ್, ಹೈಬಿಪಿ, ಕೀಲುನೋವು, ಹೃದಯ ರೋಗ, ಚರ್ಮರೋಗ, ಲಿವರ್ ಕಾಯಿಲೆಗಳಲ್ಲೂ ಈ ಔಷಧ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಈ ಔಷಧವನ್ನು ಭೂಲೋಕದ ಸಂಜೀವಿನಿ ಎಂದೇ ಹೇಳಬಹುದು.(ಬರಹ : ಸೂರ್ಯಕಾಂತ ಸಜ್ಜನ್)
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಕಲಿ ವೈದ್ಯರಿಗೆ ದಂಡ ; ಮೆಡಿಕಲ್ ಸ್ಟೋರ್ ಮುಚ್ಚಲು ಆದೇಶ
ಸುದ್ದಿದಿನ,ದಾವಣಗೆರೆ:ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ತಲಾ ಲಕ್ಷ ರೂ.ಗಳ ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ ಪ್ರಾಧಿಕಾರ ಹಾಗೂ ಸಾರ್ವಜನಿಕ ಕುಂದುಕೊರತೆ ನಿವಾರಣಾ ಸಮಿತಿ ಅಧ್ಯಕ್ಷರಾದ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ಭದ್ರಾವತಿ ತಾಲ್ಲೂಕಿನ ಸನ್ಯಾಸಿಕೊಡಮಗ್ಗಿ ಗ್ರಾಮದ 57 ವರ್ಷದ ಶ್ರೀನಿವಾಸ್ ತಂದೆ ತಿಮ್ಮಪ್ಪ ಇವರು ಹೊನ್ನಾಳಿ ತಾಲ್ಲೂಕಿನ ಲಿಂಗಾಪುರದಲ್ಲಿ ಶೀನಪ್ಪಗೌಡ ಎಂಬುವರ ಮನೆ ಬಾಡಿಗೆ ಪಡೆದು ಹಲವು ವರ್ಷಗಳಿಂದ ಶ್ರೀ ರಾಮಾಂಜನೇಯ ಮೆಡಿಕಲ್ಸ್ ಮತ್ತು ಜನರಲ್ ಸ್ಟೋರ್ ಎಂದು ಪರವಾನಗಿ ಪಡೆದು ಜೊತೆಗೆ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಾ ಜನರಿಗೆ ಚಿಕಿತ್ಸೆ ನೀಡುತ್ತಿದ್ದನು. ಇವರು ಪಡೆದ ಮೆಡಿಕಲ್ ಸ್ಟೋರ್ ಲೈಸೆನ್ಸ್ ರದ್ದುಪಡಿಸಿ ಒಂದು ಲಕ್ಷ ದಂಡ ವಿಧಿಸಲಾಗಿದೆ.
ಮತ್ತೊಬ್ಬ ನಕಲಿ ವೈದ್ಯ ಹಿರೇಕೇರೂರು ತಾಲ್ಲೂಕಿನ ಹಿರೇ ಮರಬ ಗ್ರಾಮದ 45 ವರ್ಷದ ಲಕ್ಷ್ಮಣ ಬಿನ್ ಫಕ್ಕೀರಪ್ಪ ಇವರು ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ಗ್ರಾಮದಲ್ಲಿ ದೇವಸ್ಥಾನದ ಹತ್ತಿರ ಬಸವನಗೌಡ ಎಂಬುವರಿಂದ ಮನೆ ಬಾಡಿಗೆ ಪಡೆದು ಹಲವು ವರ್ಷಗಳಿಂದ ಅನಧಿಕೃತ ಕ್ಲಿನಿಕ್ ನಡೆಸುತ್ತಾ ಬಂದಿದ್ದರು. ತಪಾಸಣೆ ವೇಳೆ ಬಿಇಎಂಎಸ್ ಪ್ರಮಾಣ ಪತ್ರ ಹೊಂದಲಾಗಿದೆ ಎಂಬ ಮಾಹಿತಿ ನೀಡಿದ್ದು ಇದು ಅಮಾನ್ಯ ಪ್ರಮಾಣ ಪತ್ರವಾಗಿರುವುದರಿಂದ ನಕಲಿ ಎಂದು ಪರಿಗಣಿಸಿ ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ.
ಈ ನಕಲಿ ಕ್ಲಿನಿಕ್ ಗಳ ಬಗ್ಗೆ ಹೊನ್ನಾಳಿ ಉಪ ವಿಭಾಗಾಧಿಕಾರಿ ಅಭಿಷೇಕ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಿರೀಶ್ ಸ್ಥಳ ಮಹಾಜರು ಮಾಡಿ ಸಮಗ್ರ ವರದಿ ನೀಡಿದ್ದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ ಸದಸ್ಯ ಕಾರ್ಯದರ್ಶಿ ಡಾ.ಷಣ್ಮುಖಪ್ಪ ಜಿಲ್ಲಾಧಿಕಾರಿಗಳಿಗೆ ಸಮಗ್ರ ವರದಿಯೊಂದಿಗೆ ಕ್ರಮಕ್ಕಾಗಿ ಪ್ರಸ್ತಾವನೆ ಸಲ್ಲಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
AI ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ ಪ್ರಕಟ
ಸುದ್ದಿದಿನಡೆಸ್ಕ್:ಕೃತಕ ಬುದ್ಧಿಮತ್ತೆ ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯನ್ನು ಟೈಮ್ ಪತ್ರಿಕೆ ಪ್ರಕಟಿಸಿದ್ದು, ಅದರಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಸ್ಥಾನ ಪಡೆದಿದ್ದಾರೆ.
ಅಶ್ವಿನಿ ವೈಷ್ಣವ್ ಅವರನ್ನು ಶಾರ್ಪರ್ ವರ್ಗದಲ್ಲಿ ಹೆಸರಿಸಲಾಗಿದ್ದು, ಅವರ ನಾಯಕತ್ವದಲ್ಲಿ ಮುಂದಿನ 5 ವರ್ಷಗಳಲ್ಲಿ ಸೆಮಿಕಂಡಕ್ಟರ್ ತಯಾರಿಕಾ ಕ್ಷೇತ್ರದ ಮೊದಲ 5 ದೇಶಗಳಲ್ಲಿ ಭಾರತ ಸ್ಥಾನ ಪಡೆಯುವ ಆಶಯದಲ್ಲಿದೆ ಎಂದು ಟೈಮ್ ಮ್ಯಾಗ್‌ಜೀನ್ ಬರೆದಿದೆ.
ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತವನ್ನು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿಸುವ ಪ್ರಯತ್ನದಲ್ಲಿ ಸಚಿವರು ನಿರ್ವಹಿಸಿದ ಮಹತ್ವದ ಪಾತ್ರದ ಹಿನ್ನೆಲೆಯಲ್ಲಿ ಪಟ್ಟಿಯಲ್ಲಿ ಅವರ ಹೆಸರು ನಮೂದಿತವಾಗಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.
ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಮುಖ ಕೊಡುಗೆ ನೀಡಿದ ಇನ್ಫೋಸೀಸ್‌ನ ಸಹ ಸಂಸ್ಥಾಪಕ ನಂದನ್ ನಿಲೇಕಣಿ, ಸಿಇಓಗಳಾದ ಗೂಗಲ್‌ನ ಸುಂದರ್ ಪಿಚಾಯಿ, ಮೈಕ್ರೋಸಾಫ್ಟ್‌ನ ಸತ್ಯ ನಾದೆಲ್ಲಾ, ಓಪನ್‌ಎಐ ನ ಸ್ಯಾಮ್ ಅಲ್ಟ್‌ಮನ್, ಮೆಟಾದ ಮಾರ್ಕ್ ಝುಕೇರ್‌ಬರ್ಗ್ ಟೈಮ್ ಪ್ರಕಟಿಸಿದ ಪಟ್ಟಿಯಲ್ಲಿ ಸೇರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಾಜಧಾನಿಯಲ್ಲಿ ಅಪಾಯಕಾರಿ ಮರಗಳನ್ನು ಕತ್ತರಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
ಸುದ್ದಿದಿನಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ 15 ದಿನದೊಳಗೆ ಗುಂಡಿ ಮುಚ್ಚುವಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.
ವಿದೇಶ ಪ್ರವಾಸಕ್ಕೂ ಮುನ್ನ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಇಂದು ಸಭೆ ನಡೆಸಿದ ಅವರು ಸರಿಯಾಗಿ ಕಾರ್ಯನಿವಹಿಸದ ಅಧಿಕಾರಿಗಳನ್ನು ಅಮಾನತುಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
ಸೆಪ್ಟಂಬರ್‌ನಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ತಿಳಿಸಿದ ಅವರು, ಅಪಾಯಕಾರಿ ಮರಗಳಿದ್ದರೆ, ಕತ್ತರಿಸುವಂತೆ ಸೂಚಿಸಿದ್ದಾರೆ.
ಯಾವುದೇ ದೂರು ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ಮೌನೀಶ್ ಮೌದ್ಗೀಲ್, ಬಿಎಂಆರ್ಡಿಎ ಆಯುಕ್ತ, ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ರಾಯಚೂರು | ಶಾಲಾ ಬಸ್ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸಾವು
-
ದಿನದ ಸುದ್ದಿ5 days ago
ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ
-
ದಿನದ ಸುದ್ದಿ4 days ago
ಆತ್ಮಕತೆ | ಸರಳ ಹಾಗೂ ಒಲವಿನ ಮದುವೆಗಳ ಸಾಲುಸಾಲು
-
ದಿನದ ಸುದ್ದಿ5 days ago
ಸರ್ಕಾರಿ ಐಟಿಐ ಪ್ರವೇಶಕ್ಕೆ ಆಹ್ವಾನ
-
ದಿನದ ಸುದ್ದಿ4 days ago
ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ
-
ದಿನದ ಸುದ್ದಿ5 days ago
ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ
-
ದಿನದ ಸುದ್ದಿ4 days ago
ರಿವರ್ ಕ್ರಾಸಿಂಗ್ ತರಬೇತಿ ; ಬೋಟ್ ಮುಳುಗಿ ಇಬ್ಬರು ಕಮಾಂಡೋಗಳು ಸಾವು