ದಿನದ ಸುದ್ದಿ

ಕೊಡಗು ಪ್ರವಾಹ : ಸಂತ್ರಸ್ತರಿಗೆ’ಮಾಜಿ ಸೈನಿಕರ ಸಂಘ’ದಿಂದ ಅ28ಕ್ಕೆ ಸಹಾಯಧನ ನೀಡುವ ಕಾರ್ಯಕ್ರಮ

Published

on

ಸುದ್ದಿದಿನ,ಮಡಿಕೇರಿ : ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘ 2017-18ನೇ ಸಾಲಿನ ಮಹಾಸಭೆ ಮತ್ತು ಪ್ರಕೃತಿ ವಿಕೋಪಕ್ಕೆ ಸಿಲುಕಿರುವ ಮಾಜಿ ಸೈನಿಕರ ಕುಟುಂಬಕ್ಕೆ ಸಹಾಯಧನ ನೀಡುವ ಕಾರ್ಯಕ್ರಮವು ಅಕ್ಟೋಬರ್ 28 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ಸಂಘದ ಅಧ್ಯಕ್ಷರಾದ ಮೇಜರ್ ಜನರಲ್ ಬಿ.ಎ.ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಇರುವ ಹೋಟೆಲ್ ಸಮುದ್ರದಲ್ಲಿ ನಡೆಯಲಿದೆ. ಸಭೆಗೆ ಕೊಡಗು ಜಿಲ್ಲೆಯ ಎಲ್ಲಾ ಮಾಜಿ ಸೈನಿಕರು, ವಿಧವೆಯರು ಹಾಜರಾಗಬೇಕಾಗಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಸಂಘದ ಕಾರ್ಯದರ್ಶಿ ಮೇಜರ್ ಓ.ಎಸ್.ಚಿಂಗಪ್ಪ ದೂರವಾಣಿ ಸಂಖ್ಯೆ 9845331431 ನ್ನು ಸಂಪರ್ಕಿಸಬಹುದಾಗಿದೆ.

Trending

Exit mobile version