ದಿನದ ಸುದ್ದಿ
ನ 14 ರಂದು ಕೊಂಡಜ್ಜಿ ಬಸಪ್ಪನವರ 38ನೇ ಪುಣ್ಯ ಸ್ಮರಣೆ
ಸುದ್ದಿದಿನ,ದಾವಣಗೆರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ರಾಜ್ಯ ಸಂಸ್ಥೆ ವತಿಯಿಂದ ಕೊಂಡಜ್ಜಿ ಬಸಪ್ಪನವರ 38ನೇ ಪುಣ್ಯ ಸ್ಮರಣೆ ಹಾಗೂ ಸರ್ವಧರ್ಮ ಪ್ರಾರ್ಥನೆಯನ್ನು ನ.14 ರಂದು ಬೆಳಿಗ್ಗೆ 9 ಗಂಟೆಗೆ ಕೊಂಡಜ್ಜಿ ಬಸಪ್ಪ ರಾಜ್ಯ ಸ್ಕೌಟ್ ಗೈಡ್ ತರಬೇತಿ ಕೇಂದ್ರ, ಕೊಂಡಜ್ಜಿ, ಹರಿಹರ ತಾಲ್ಲೂಕು ಇಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್ ಸಿಂಧ್ಯಾ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಉಪಾಧ್ಯಕ್ಷರಾದ ಕೊಂಡಜ್ಜಿ ಬಿ ಷಣ್ಮುಖಪ್ಪ, ಜಿಲ್ಲಾ ಸಂಸ್ಥೆ ಪದಾಧಿಕಾರಿಗಳು ಹಾಗೂ ನಿಯಮಿತ ಸ್ಕೌಟ್ಸ್ ಮಾಸ್ಟರ್ಸ್, ಗೈಡ್ ಕ್ಯಾಪ್ಟನ್ಸ್, ರೋವರ್ಸ್, ರೇಂಜರ್ಸ್, ಸ್ಕೌಟ್ಸ್, ಗೈಡ್ಸ್ ಮಕ್ಕಳು ಭಾಗವಹಿಸಲಿದ್ದಾರೆಂದು ದಿ ಭಾರತ್ ಸ್ಕೌಟ್ ಮತ್ತು ಗೈಡ್ಸ್‍ನ ಜಿಲ್ಲಾ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243