ದಿನದ ಸುದ್ದಿ

ದಾವಣಗೆರೆ | ಏ.11 ರಂದು ಕೆ-ಸ್ಲೆಟ್ ಪರೀಕ್ಷೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು ಏಪ್ರಿಲ್ 11ರಂದು ನಡೆಸಲಾಗುತ್ತಿದೆ. ಪರೀಕ್ಷೆಗೆ ಸಂಬಂಧಿಸಿದ ಸೂಚನೆ, ಪ್ರವೇಶ ಪತ್ರ ಹಾಗೂ ಇನ್ನಿತರ ಮಾಹಿತಿಯನ್ನು ಕೆ-ಸ್ಲೆಟ್ ಅಂತರ್ಜಾಲ ( http:/kset.uni.mysore.ac.in) ಇಲ್ಲಿಗೆ ಕಳುಹಿಸಲಾಗಿದ್ದು, ಅಭ್ಯರ್ಥಿಗಳು ಪ್ರವೇಶಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು, ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಪರೀಕ್ಷೆಗೆ ಬರುವಾಗ ತರಬೇಕು.

ಪ್ರವೇಶಪತ್ರವಿಲ್ಲದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ. ಅಭ್ಯರ್ಥಿಗಳು ಪರೀಕ್ಷೆಗೆ ಅರ್ಧಗಂಟೆ ಮುಂಚೆ ಹಾಜರಿರಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್‍ನ್ನು ಕಡ್ಡಾಯವಾಗಿ ಧರಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರಬಾರದು ಎಂದು ಸೂಚಿಸಿದ್ದಾರೆ.

ದಾವಣಗೆರೆಯ ಪರೀಕ್ಷಾ ಕೇಂದ್ರಗಳಾಗಿ ಎಸ್‍ಬಿಸಿ ಮಹಿಳಾ ಪ್ರಥಮದರ್ಜೆ ಕಾಲೇಜು, ಬಿ.ಎಸ್. ಚನ್ನಬಸಪ್ಪ ಪ್ರಥಮದರ್ಜೆ ಕಾಲೇಜು, ಬಾಪೂಜಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಸರ್ಕಾರಿ ಪ್ರಥಮದರ್ಜೆ ಕಾಲೇಜು, ಎ.ಆರ್.ಜಿ. ಕಲಾ ಮತ್ತು ವಾಣಿಜ್ಯ ಕಾಲೇಜು, ಎ.ವಿ. ಕಮಲಮ್ಮ ಮಹಿಳಾ ಕಾಲೇಜು.

ಜಿ.ಎಂ. ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಜಿ.ಎಂ.ಎಸ್ ಅಕಾಡೆಮಿ ಪ್ರಥಮದರ್ಜೆ ಕಾಲೇಜು, ಹಾಗೂ ದವನ್ ನೂತನ್‍ಅಲಯನ್ಸ್ ನೂತನ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಸೇರಿ ನಗರದಲ್ಲಿ ಒಟ್ಟು 9 ಕೇಂದ್ರಗಳಲ್ಲಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ನೋಡಲ್‍ಅಧಿಕಾರಿ ಪ್ರೊ.ಜೆ.ಕೆ.ರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version