ದಿನದ ಸುದ್ದಿ

ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ..!

Published

on

ಸುದ್ದಿದಿನ,ಬೆಂಗಳೂರು:ಸಾರಿಗೆ ಇಲಾಖೆಯು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದೆ. ಹೌದು, ಸೆಪ್ಟೆಂಬರ್ ನಲ್ಲಿ ಪದವಿ, ಸ್ನಾತಕೋತ್ತರ ಪದವಿ ಸೇರಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯಲಿವೆ.

ವಿದ್ಯಾರ್ಥಿಗಳು ಹಣ ತೆತ್ತು ಪರೀಕ್ಷೆ ಬರೆಯುವಂತಾಗಬಾರದು ಎಂದು ಕೋರಿ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರಿಗೆ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ವಿದ್ಯಾರ್ಥಿಗಳು ಹಳೆಯ ವರ್ಷದ ಬಸ್ ಪಾಸ್ ತೋರಿಸಿಯೇ ಪ್ರಯಾಣಿಸಬಹುದು ಎಂದು ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version