Connect with us

ಭಾವ ಭೈರಾಗಿ

ಭರವಸೆಯಿಲ್ಲದ ಜೀವನ..!?

Published

on

ಒಂದು ಅಂದಾಜಿನಂತೆ ಹಿಂದಿನ ಕಾಲದಲ್ಲಿ ಮನುಷ್ಯನ ಆಯಸ್ಸು ಸರಾಸರಿ ನೂರು ವರ್ಷ ಇತ್ತು. ಅದು ಕ್ರಮೇಣ ಎಂಬತ್ತು ವರ್ಷವಾಗಿ, ಈಗ ಸುಮಾರು ಅರವತ್ತೈದು ವರ್ಷ ಎಂದು ಅಂದಾಜಿಸಿರುತ್ತಾರೆ. ಇದಕ್ಕೆ ಕಾರಣ ಏನು ಎಂದು ನೋಡಿದರೆ, ಈಗಿನ ಕಾಲದಲ್ಲಿನ ಆಹಾರ ಪದ್ದತಿ, ಒತ್ತಡದ ಯಾಂತ್ರಿಕ ಜೀವನ, ಕಂಡು ಕೇಳರಿಯದ ಖಾಯಿಲೆಗಳು, ಅನಿರೀಕ್ಷಿತ ಸಾವುಗಳು ಹೀಗೆ ಹಲವಾರು ಕಾರಣಗಳಿಂದ ಮನುಷ್ಯನ ಆಯಸ್ಸು ಇಷ್ಟೇ ಎಂದು ಹೇಳಲು ಬರುವುದಿಲ್ಲ, ಮನುಷ್ಯ ಬರುಬರುತ್ತಾ ಅಲ್ಪಾಯುಷ್ಯ ಜೀವಿಯಾಗುತ್ತಾ ಬಂದಿದ್ದಾನೆ ಎಂದರೆ ಅತಿಶಯೋಕ್ತಿಯಲ್ಲ.

ಮೊದಲಿಗೆ ಆಹಾರ ಪದ್ದತಿಗೆ ಬರುವುದಾದರೆ, ಹಿಂದಿನ ಕಾಲದಲ್ಲಿ ಹಿರಿಯರು ಮಾಡುತ್ತಿದ್ದ ವಿಧ ವಿಧವಾದ ಅಡುಗೆಗಳಲ್ಲಿ ಬೇಳೆ ಕಾಳುಗಳು, ಸೊಪ್ಪು, ವಿಟಮಿನ್ ಭರಿತ ಆಹಾರಗಳಿರುತ್ತಿದ್ದವು. ರಾಗಿ ರೊಟ್ಟಿ, ಮುದ್ದೆ, ಇದಕ್ಕೆ ತಕ್ಕಂತೆ ಹಸುವಿನ ತುಪ್ಪ, ವಿಧ ವಿಧವಾದ ತರಕಾರಿಗಳ ಪಲ್ಯಗಳು ಹೀಗೆ ಅನೇಕ ರೀತಿಯ ಆಹಾರವನ್ನು ತಯಾರಿಸಿ ತಿನ್ನುತ್ತಿದ್ದರು, ಅದರಂತೆ ಕೆಲಸವನ್ನು ಸಹ ಮಾಡುತ್ತಿದ್ದರು. ಇದಕ್ಕೆ ಒಂದು ಗಾದೆ ಇದೆ” ಹಿಟ್ಟಂ ತಿಂದಂ ಬೆಟ್ಟಂ ಕಿತ್ತಿಟ್ಟಂ” ಎಂದು ಅಂದರೆ ಮುದ್ದೆ ತಿಂದರೆ ಬೆಟ್ಟವನ್ನೂ ಸಹ ಕಿತ್ತಿಡಬಹುದಾದ ಶಕ್ತಿ ಬರುತ್ತದೆ ಎಂದು ನಮ್ಮ ಹಿರಿಯರು ಹೇಳುತ್ತಿದ್ದರು. ಅವರಿಗೆ ಅಷ್ಟಾಗಿ ಯಾವ ಖಾಯಿಲೆಯೂ ಬರುತ್ತಿರಲಿಲ್ಲ. ಬಂದರೂ ಇವರ ದೇಹದಲ್ಲಿದ್ದ ರೋಗ ನಿರೋಧಕ ಶಕ್ತಿ ಇವರನ್ನು ರಕ್ಷಿಸುತ್ತಿತ್ತು. ಇದರಿಂದ ಹಿಂದಿನವರು ಹೆಚ್ಚಿನ ಕಾಲ ಬದುಕಲು ನೆರವಾಗುತ್ತಿತ್ತು. ಆದರೆ ಈಗಿನ ಕಾಲದಲ್ಲಿ ಆಹಾರ ಪದ್ದತಿಯೇ ಬೇರೆಯಾಗಿದೆ ಅದರಲ್ಲೂ ಆಹಾರ ತಿನ್ನುವುದೂ ಸಹ ಸಾಕಷ್ಟು ಬದಲಾಗಿದೆ. ಈಗಿನ ಕಾಲದಲ್ಲಿ ಕೆಲವು ಸತ್ವವಿಲ್ಲದ ಆಹಾರದಲ್ಲಿ ಹೊಟ್ಟೆ ಮಾತ್ರ ತುಂಬುತ್ತದೆ. ನಮ್ಮ ಶರೀರಕ್ಕೆ ಬೇಕಾದ ವಿಟಮಿನ್‍ಗಳು ಸಿಗುವುದೇ ಇಲ್ಲ. ಎಲ್ಲವೂ ಆಧುನಿಕ ವೈಜ್ಞಾನಿಕ ಪದ್ದತಿಯಿಂದ ತಯಾರಾದ ಪದಾರ್ಥಗಳು, ತರಕಾರಿ, ಹಣ್ಣುಗಳು, ಬೆಳೆ ಜಾಸ್ತಿ ಬರಲಿ ಎಂದು ಆಧುನಿಕ ವೈಜ್ಞಾನಿಕ ಪದ್ದತಿಯಂತೆ ವ್ಯವಸಾಯ ಮಾಡುವುದು ಅನಿವಾರ್ಯವಾಗಿದೆ. ಏಕೆಂದರೆ ಬೆಳೆಯುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಬೆಳೆಯನ್ನು ಬೆಳೆಯಬೇಕಾಗಿರುವುದರಿಂದ, ಆಧುನಿಕ ವ್ಯವಸಾಯ ಒಂದು ವರವೆಂದೇ ಹೇಳಬಹುದು. ಆದರೆ ಒಂದು ಕೊಟ್ಟು ಇನ್ನೊಂದನ್ನು ಕಿತ್ತುಕೊಳ್ಳುವಂತೆ, ಆಹಾರವೇನೋ ಹೆಚ್ಚಿಗೆ ಬೆಳೆಯಬಹುದು ಆದರೆ ಅದರಲ್ಲಿ ಸತ್ವಾಂಶದ ಕೊರತೆ ಇರುವುದು ಎದ್ದು ಕಾಣುತ್ತದೆ.

ಆಹಾರದಲ್ಲೇ ಸತ್ವವಿಲ್ಲವೆಂಬುದು ಒಂದಾದರೆ ಅದನ್ನು ತಿನ್ನುವುದೇ ಬೇರೆ ರೀತಿಯದು. ಬೇಗ ಎದ್ದು ಕೆಲಸಕ್ಕೆ ಹೋಗುವವರು, ಮನೆಯಲ್ಲಿ ಬೆಳಗ್ಗೆ ಎಷ್ಟು ತಾನೇ ತಿನ್ನಲು ಸಾಧ್ಯ? ಆಫೀಸಿಗೆ ವೇಳೆ ಆಯಿತೆಂದು ಕೆಲವರು, ಬಸ್ಸು ಸಿಗುತ್ತದೋ ಇಲ್ಲವೋ ಎಂದು ಕೆಲವರು, ಸ್ವಂತ ವಾಹನ ಇದ್ದಲ್ಲಿ, ಹೋಗಬಹುದಾದರೂ ಟ್ರಾಫಿಕ್ ಕಿರಿ ಕಿರಿಯಿಂದ ತಪ್ಪಿಸಿಕೊಳ್ಳಲು ಬೇಗನೇ ಹೊರಡಲೇ ಬೇಕು, ಮಾಡಿರುವ ಅಡುಗೆಯಲ್ಲಿ ಅಲ್ಪ ಸ್ವಲ್ಪ ತಿಂದು ಅದನ್ನೇ ಮದ್ಯಾಹ್ನದ ಊಟಕ್ಕೆಂದು ಡಬ್ಬಿಗೆ ಸ್ವಲ್ಪ ಹಾಕಿಕೊಂಡು ಹೋಗಬೇಕಾದ ಪರಿಸ್ಥಿತಿ, ಅಷ್ಟು ಬೇಗನೆ ಎಲ್ಲಾ ಅಡುಗೆಯನ್ನು ಮಾಡಲು ಸಾಧ್ಯವೇ? ಏನು ಆಗಿರುವುದೋ ಅದನ್ನೇ ತಿಂದು ಅದನ್ನೇ ತೆಗೆದುಕೊಂಡು ಹೋಗುವುದು ರೂಢಿಯಾಗಿದೆ. ಇನ್ನು ರಜೆ ಬಂದರೆ, ಇನ್ನೊಂದು ರೀತಿಯಂತೆ ನಡೆವಳಿಕೆ ಇದೆ. ದಿನವೂ ಮನೆಯಲ್ಲಿ ಅಡುಗೆ ಮಾಡಿ, ಸಾಕಾಗಿ ಹೋಗಿದೆ, ವಾರಕ್ಕೊಮ್ಮೆಯಾದರೂ ಮನೆಯಲ್ಲಿ ಅಡುಗೆ ಮಾಡದೆ ಹೋಟೆಲ್ಲಿಗೆ ಹೋಗೋಣ ಎಂದು ತೀರ್ಮಾನಿಸುವವರೂ ಎಷ್ಟೋ ಮಂದಿ ಇದ್ದಾರೆ. ಇದರಿಂದ ದೇಹಕ್ಕೆ ಬೇಕಾಗುವಷ್ಟು ವಿಟಮಿನ್‍ಗಳು, ಸಿಗುವುದೇ ಇಲ್ಲ. ಇದರಿಂದ ರೋಗ ನಿರೋಧಕ ಶಕ್ತಿ ಬರುವುದಾದರೂ ಹೇಗೆ? ಇದರಿಂದ ಅನೇಕ ರೀತಿಯ ಖಾಯಿಲೆಗಳು ಬಂದು ಆಯಸ್ಸು ಮುಗಿಯುವ ಮುನ್ನ ಜೀವನ ಯಾತ್ರೆ ಮುಗಿಸುವವರು ಎಷ್ಟೋ ಮಂದಿ ಇದ್ದಾರೆ. ಇದರ ಜೊತೆಗೆ ಈಗಿನ ಕಾಲದಲ್ಲಿ ಮಕ್ಕಳು ಜಂಕ್ ಆಹಾರ ತಿಂದು ಸರಿಯಾಗಿ ಊಟ ಮಾಡುವುದೇ ಇಲ್ಲ. ಇದರಿಂದ ರೋಗ ನಿರೋಧಕ ಶಕ್ತಿ ಎಲ್ಲಿಂದ ಬರಬೇಕು? ಇದರ ಜೊತೆಗೆ ಕೆಲವರು ಮದ್ಯಪಾನ ತಂಬಾಕು ಸೇವನೆ ಇತ್ಯಾದಿಗಳ ದುಷ್ಚಟದಿಂದ ನೋಡುವುದಕ್ಕೆ ಮನುಷ್ಯನಾಗಿರುತ್ತಾನಷ್ಟೇ ಆದರೆ ಆರೋಗ್ಯವಂತನಾದ ಮನುಷ್ಯನು ಆಗಿರುವುದಿಲ್ಲ. ಮರದ ಒಳಗೆಲ್ಲಾ ಗೆದ್ದಲು ಹಿಡಿದು, ಮೇಲ್ನೋಟಕ್ಕೆ ಮರವು ಮಾತ್ರ ಬಹಳ ಚೆನ್ನಾಗಿ ಕಾಣುತ್ತಿರುತ್ತದೆ. ಆದರೆ ಗೆದ್ದಲು ಹಿಡಿದು ಯಾರಿಗೂ ತಿಳಿಯವುದಿಲ್ಲ. ಆ ಮರವು ಯಾವಾಗ ಬೇಕಾದರೂ ಬೀಳಬಹುದು. ನೋಡಿದವರು ಮರ ಎಷ್ಟು ಚೆನ್ನಾಗಿತ್ತು ಸ್ವಲ್ಪ ಜೋರಾಗಿ ಗಾಳಿ ಬೀಸಿದ್ದಕ್ಕೆ ಬಿದ್ದು ಹೋಯಿತು ಎನ್ನುತ್ತಾರೆ. ಮನುಷ್ಯನ ದೇಹದ ಸ್ಥಿತಿಯೂ ಇದೇ ರೀತಿ ಆಗಿದೆ. ಮನುಷ್ಯ ಹೊರಗೆ ನೋಡಲು ಬಹಳ ಚೆನ್ನಾಗಿರುತ್ತಾನೆ ಆದರೆ ಇವನ ದೇಹದೊಳಗೆ ಇರುವ ಖಾಯಿಲೆಗಳು ಗೊತ್ತಾಗುವುದೇ ಇಲ್ಲ. ಇದರಿಂದ ಒಂದು ಸಣ್ಣ ಖಾಯಿಲೆ ಬಂದರೂ ಮನುಷ್ಯ ಯಾವಾಗ ಬೇಕಾದರೂ ಸಾಯಬಹುದು. ನೋಡಿದವರಿಗೆ ಎಷ್ಟು ಚೆನ್ನಾಗಿದ್ದ ಒಂದು ಸಣ್ಣ ಜ್ವರ ಬಂದಿದ್ದಕ್ಕೆ ಸತ್ತು ಹೋದನಲ್ಲಾ ಎಂದು ಹೇಳುವ ಪ್ರಸಂಗಗಳು ಉಂಟು. ಒಳಗಿನ ಖಾಯಿಲೆ ಯಾರಿಗೂ ತಿಳಿಯವುದಿಲ್ಲ. ಗೆದ್ದಿಲು ಮರದ ಒಳಗೆ ತಿನ್ನುವ ರೀತಿ ಮನುಷ್ಯನ ದೇಹದ ಒಳಗೆ ಖಾಯಿಲೆ ಬಂದು ಯಾವಾಗ ಬೇಕಾದರೂ ಸಾಯಬಹುದು. ಕಟ್ಟು ನಿಟ್ಟಿನ ಆಹಾರ ಪದ್ದತಿ ಅನುಸರಿಸಿದರೆ ಹಾಗೂ ದುಷ್ಚಟಗಳಿಂದ ದೂರ ಇದ್ದರೆ ಮಾತ್ರ ಇದಕ್ಕೆಲ್ಲಾ ಪರಿಹಾರ ಸಿಗಬಹುದು.

ಒತ್ತಡದ ಯಾಂತ್ರಿಕ ಜೀವನದಿಂದ ಮನುಷ್ಯನು ಅರ್ಧ ಆಯಸ್ಸಿಗೆ ಹೊರಟು ಹೋಗುತ್ತಾನೆ. ಯಾವಾಗಲೂ ಟೆನ್ಷನ್ ಆದರೆ, ದೇಹಕ್ಕೆ ಆರಾಮ ಸಿಗುವುದಾದರೂ ಎಲ್ಲಿ? ಬೆಳಿಗ್ಗೆ ಬೇಗ ಹೋಗಬೇಕೆಂಬ ಆತುರ, ಕಛೇರಿಯಲ್ಲಿ ಕೆಲಸ ಆಗಲಿಲ್ಲವೆಂಬ ದುಗುಡ, ಕೆಲವು ಕಡೆ ನೀಡಿರುವ ನಿರ್ದಿಷ್ಟ ಕೆಲಸವನ್ನು ಪೂರ್ಣಗೊಳಿಸಬೇಕೆಂಬ ಷರತ್ತು, ಇದರಿಂದ ಒತ್ತಡಗಳು ಉಂಟಾಗಿ ಅನೇಕ ಖಾಯಿಲೆಗಳು ಬಂದು ಅರ್ಧ ಆಯಸ್ಸಿಗೆ ಹೋಗಲು ಕಾರಣವಾಗುತ್ತದೆ. ಕಂಡು ಕೇಳರಿಯದ ಖಾಯಿಲೆಗಳು, ಕೆಲವು ಖಾಯಿಲೆಗಳು ನಮ್ಮ ಆಹಾರ ಪದ್ದತಿಯಿಂದ ಬಂದರೆ, ಇನ್ನೂ ಕೆಲವು ಖಾಯಿಲೆಗಳು ಹೊರಗಿನ ಕೀಟಗಳು ಸೊಳ್ಳೆಗಳಿಂದ ಬರುತ್ತವೆ. ಇಲ್ಲಿವರೆವಿಗೂ ಕಂಡು ಕೇಳರಿಯದ ಭಯಂಕರ ಖಾಯಿಲೆಗಳು, ಡೆಂಗ್ಯೂ, ಹಕ್ಕಿಜ್ವರ, ಹೆಚ್.1 ಎನ್ 1 ಹಂದಿ ಜ್ವರ ಹೀಗೆ ಅನೇಕ ರೀತಿಯ ಖಾಯಿಲೆಗಳಿಗೆ ಮನುಷ್ಯನು ತುತ್ತಾಗುತ್ತಿದಾನೆ. ವೈಜ್ಞಾನಿಕವಾಗಿ ಔಷದಿಗಳನ್ನು ಎಷ್ಟೇ ಕಂಡು ಹಿಡಿದರೂ ಅದಕ್ಕೆ ತಕ್ಕಂತೆ ಮಾನವನಿಗೆ ಸವಾಲಾದಂತೆ ಅನೇಕ ಖಾಯಿಲೆಗಳು ಹೊಸದಾಗಿ ಹುಟ್ಟಿಕೊಂಡಿವೆ. ಇದರಿಂದ ಮನುಷ್ಯ ಕೃಷನಾಗಿ, ಆಯಸ್ಸು ಮುಗಿಯುವ ಮೊದಲೇ ಹೊರಟು ಹೋಗುವ ಅಪಾಯ ಎದುರಾಗುತ್ತಿದೆ.

ನಗರಗಳ ಜೀವನಕ್ಕೆ ಬಂದರೆ, ಅತಿಯಾದ ವಾಹನಗಳು, ವಾಹನಗಳು ಉಗಳುವ ಹೊಗೆಯಿಂದ ಬರುವ ಖಾಯಿಲೆಗಳು, ಇದರಿಂದಲೂ ಮನುಷ್ಯನ ಆಯಸ್ಸು ಕಡಿಮೆಯಾದಂತೆ ಆಗಿದೆ. ಇನ್ನು ವಾಹನಗಳಲ್ಲಿ ಪ್ರಯಾಣ ಮಾಡುವುದು ಒಬ್ಬರು ತನ್ನ ಪಾಡಿಗೆ ಸರಿಯಾಗಿ ಹೋಗುತ್ತಿದ್ದರೂ ಸಹ ಬೇರೆಯವರು ಬಂದು ಅಪಘಾತ ಮಾಡುವುದು. ಇದರಿಂದ ಆರೋಗ್ಯವಾಗಿದ್ದರೂ ಬೇಗನೇ ಮೃತರಾಗುತ್ತಾರೆ. ವಾಹನ ಅಪಘಾತಗಳಿಂದಲೂ ಎಷ್ಟೋ ಜನರ ಜೀವವೇ ಹೋಗಿದೆ. ಹೋಗುತ್ತಲೂ ಇದೆ. ಇದರ ಜೊತೆಗೆ ತಮ್ಮದೇ ಆದ ನಿರ್ಲಕ್ಷತನ ಅತಿವೇಗವಾಗಿ ಹೋಗಬೇಕೆನ್ನುವ ಕೆಟ್ಟ ಗುಣ. ಸ್ವಲ್ಪ ತಾಳ್ಮೆಯಿಂದ ನಿಧಾನವಾಗಿ ಹೋದರೆ ಸುರಕ್ಷಿತವಾಗಿ ಮನೆಯನ್ನು ತಲುಪಬಹುದು. ವಾಹನಗಳಿಂದ ಸ್ವಲ್ಪ ಅಜಾಕರೂಕರಾದರೂ ಅಪಾಯ ಕಟ್ಟಿಟ್ಟ ಬುತ್ತಿ.

ಇದರ ಜೊತೆಗೆ ಜೀವನದಲ್ಲಿ ನಿರಾಸೆಯಾದರೆ, ಪ್ರೇಮ ವೈಫಲ್ಯವಾದರೆ, ಪರೀಕ್ಷೆಗಳಲ್ಲಿ ಅನುತ್ತೀರ್ಣರಾದರೆ, ಅಥವಾ ಜೀವನದಲ್ಲಿ ತಮ್ಮದೇ ಆದ ಸಮಸ್ಯೆ, ಹಣಕಾಸಿನ ಸಮಸ್ಯೆ ಇದರಿಂದ ತಮ್ಮ ಜೀವವನ್ನು ತಾವೇ ತೆಗೆದುಕೊಳ್ಳಲು ಆತ್ಮಹತ್ಯೆಯಂತ ಮಾರ್ಗಕ್ಕೆ ಮೊರೆಹೋಗುವುದು. ಮನುಷ್ಯನ ಜೀವ ಅತ್ಯಮೂಲ್ಯವಾದದ್ದು, ಇದನ್ನು ಹಾಳುಮಾಡಿಕೊಳ್ಳಬಾರದೆಂಬುದನ್ನು ಮರೆತು ಎದುರಿಸಲು ಧೈರ್ಯವಿಲ್ಲದೆ ಅಥವಾ ಬೆಂಬಲಿಗರು ಇಲ್ಲದೆ, ತಮ್ಮ ಪ್ರಾಣವನ್ನು ತಾವೇ ತೆಗೆದುಕೊಳ್ಳುವವರು ಉಂಟು. ಇದರ ಜೊತೆಗೆ ದ್ವೇಷಕ್ಕಾಗಿ, ಆಸ್ತಿಗಾಗಿ, ಬೇರೆ ರೀತಿಯ ಸಣ್ಣ ಸಣ್ಣ ಕಾರಣಗಳಿಗೆ ಬೇರೆಯವರ ಜೀವದ ಬೆಲೆಯನ್ನೇ ಅರ್ಥ ಮಾಡಿಕೊಳ್ಳದೆ ಜೀವವನ್ನು ತೆಗೆಯುವುದು. ಪ್ರಕೃತಿ ವಿಕೋಪಗಳಿಂದಲೂ ಎಷ್ಟೋ ಜನರ ಆಯುಷ್ಯ ಅರ್ಧದಲ್ಲೇ ಮುಗಿಯುತ್ತದೆ. ಚಂಡಮಾರುತ, ಭೂಕಂಪ, ಮಳೆ ಸಿಡಿಲು ಇನ್ನೂ ಹೀಗೆ ಅನೇಕ ಪೃಕೃತಿ ವಿಕೋಪದಿಂದ ಮನುಷ್ಯನ ಜೀವವು ಹೋಗುವ ಸಂಭವ ಉಂಟು. ಪ್ರಕೃತಿ ವಿಕೋಪ ಯಾವಾಗ ಬೇಕಾದರೂ ಸಂಭವಿಸಬಹುದು. ಇದಕ್ಕೆ ಕಾಲ ವೇಳೆ ಯಾವುದೂ ಇಲ್ಲ. ಇದಕ್ಕೆಲ್ಲಾ ಹವಾಮಾನ ವೈಪರೀತ್ಯ. ಮನುಷ್ಯನ ದುಡುಕು ನಿರ್ಧಾರ, ಜೀವನ ನಡವಳಿಕೆ ಆಹಾರ ಸೇವನೆ, ದುಷ್ಚಟಗಳು ಇತ್ಯಾದಿಗಳೇ ಕಾರಣವಾಗಿದೆ. ತನ್ನ ಸ್ವಾರ್ಥಕ್ಕಾಗಿ ಕಾಡುಗಳಲ್ಲಿರುವ ಮರಗಳನ್ನು ಕಡಿದು, ಹಸಿರು ಕಾಡನ್ನು ಕಾಂಕ್ರೀಟ್ ಕಾಡು ಮಾಡಿದರೆ ಹವಾಮಾನ ಅಸಮತೋಲನ ಉಂಟಾಗಿ ಪ್ರಕೃತಿ ವಿಕೋಪಕ್ಕೆ ತಿರುಗಿ ಮನುಷ್ಯನ ಜೀವವನ್ನೇ ಬಲಿ ಪಡೆಯುತ್ತಿರುವ ಸನ್ನಿವೇಶಗಳು ಉಂಟಾಗುತ್ತಿದ್ದು ಪ್ರಳಯದ ಭೀತಿ ಅವರಿಸಿದೆ.

–ಎನ್.ಮುರಳೀಧರ್
ಕಾವ್ಯನಾಮ : ಮುರಳಿಮಂಗಲಧರೆ
ನೆಲಮಂಗಲ
9902772278

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

Published

on

~ಯೋಗೇಶ್ ಮಾಸ್ಟರ್, ಚಿಂತಕರು

ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.

ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!

ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!

ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.

ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.

ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.

ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!

ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಅಂತರಂಗ6 days ago

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು...

ದಿನದ ಸುದ್ದಿ1 week ago

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌...

ದಿನದ ಸುದ್ದಿ3 weeks ago

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ...

ದಿನದ ಸುದ್ದಿ3 weeks ago

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್,...

ದಿನದ ಸುದ್ದಿ3 weeks ago

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ...

ದಿನದ ಸುದ್ದಿ1 month ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ1 month ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ1 month ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ1 month ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ1 month ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

Trending