ದಿನದ ಸುದ್ದಿ
ಕರ್ತವ್ಯ ಲೋಪ ; ಪಿ.ಮಣಿವಣ್ಣನ್, ಕ್ರೈಸ್ ಇ.ಡಿ ಕಾಂತರಾಜು ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆ(ಕ್ರೈಸ್)ಗಳಿಗೆ ನೇರವಾಗಿ ಆಹಾರ ಸರಬರಾಜು ಮಾಡದೆ ವಂಚಿಸಿರುವ ಅಧಿಕೃತ ಟೆಂಡರುದಾರರಾದ ಮೇ|| ಎಲ್.ವಿ.ಟ್ರೇರ‍್ಸ್, ಸಾಗರ, ಶಿವಮೊಗ್ಗ ಜಿಲ್ಲೆ ಇವರನ್ನು ಕಪ್ಪುಪಟ್ಟಿಗೆ ಒಳಪಡಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್, ಕ್ರೈಸ್ ಕಾರ್ಯನಿರ್ವಾಹಕ ನಿರ್ದೇಶಕ ಪಿ.ಎಸ್ ಕಾಂತರಾಜು ಅವರಿಗೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿರುತ್ತಾರೆ.
ದೂರು ನೀಡಿ 4 ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಕಾರಣ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರಾದ ಪಿ.ಎಸ್.ಕಾಂತರಾಜು ಇವರುಗಳ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಶಿಸ್ತುಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯಾದ್ಯಂತ ಒಟ್ಟು 23 ವಸತಿ ಶಾಲೆ(ಕ್ರೈಸ್)ಗಳು ಕಾರ್ಯನಿರ್ವಹಿಸುತ್ತಿವೆ. ಈ ಎಲ್ಲಾ ವಸತಿ ಶಾಲೆಗಳಿಗೆ 2022ನೇ ಸಾಲಿನಿಂದ 2025ರ ಪ್ರಸ್ತುತದವರೆಗೂ ಮೇ||ಎಲ್.ವಿ ಟ್ರೇರ‍್ಸ್, ಸಾಗರ, ಶಿವಮೊಗ್ಗ ಜಿಲ್ಲೆ ಇವರು ಅಧಿಕೃತ ಆಹಾರ ಸರಬರಾಜುದಾರರಾಗಿರುತ್ತಾರೆ. ಅಧಿಕೃತ ಟೆಂಡರುದಾರರು ಯಾವುದೇ ವಸತಿ ಶಾಲೆಗಳಿಗೆ ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಿಸದೆ ತಮಗೆ ಬರಬೇಕಾದ 40% ಕಮೀಷನ್ ಹಣವನ್ನು ಪಡೆದುಕೊಂಡು ಉಳಿದ ಹಣವನ್ನು ಪ್ರಾಂಶುಪಾಲರುಗಳಿಗೆ ನೀಡುತ್ತ ಬಂದಿರುವುದು ನಿರಂತರವಾಗಿ ನಡೆದುಕೊಂಡು ಬಂದಿರುತ್ತದೆ.
ಈ ಹಣದಲ್ಲಿ ಪ್ರಾಂಶುಪಾಲರು ಹಾಗೂ ನಿಲಯ ಪಾಲಕರು ತಮ್ಮ ಶಾಲಾ ಮಕ್ಕಳಿಗೆ ಅಗತ್ಯವಿರುವ ಕನಿಷ್ಠ ಮಟ್ಟದ ಆಹಾರ ಸಾಮಾಗ್ರಿಗಳನ್ನು ಆಯಾ ಶಾಲಾ ವ್ಯಾಪ್ತಿಯ ಸಮೀಪದ ಅಂಗಡಿಗಳಿಂದ ಆಹಾರ ಸಾಮಾಗ್ರಿಗಳನ್ನು ಖರೀದಿಸುತ್ತ ಬಂದಿರುತ್ತಾರೆ. ಹೀಗಾಗಿ ಬೇಡಿಕೆಯ ಪಟ್ಟಿಗೆ ಅನುಗುಣವಾಗಿ ಆಹಾರ ಸಾಮಾಗ್ರಿಗಳು ವಸತಿ ಶಾಲೆಗಳಿಗೆ ಸರಬರಾಜು ಆಗುತ್ತಿಲ್ಲ ಎಂಬ ಮಾಹಿತಿ ಆಧರಿಸಿ, ಡಾ.ಕೆ.ಎ.ಓಬಳೇಶ್ ಅವರು ಮಾಹಿತಿಹಕ್ಕು ಅಡಿಯಲ್ಲಿ ಅಧಿಕೃತ ದಾಖಲೆಗಳನ್ನು ಪಡೆದಿರುತ್ತಾರೆ.
ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದಾಖಲೆ ಅಧಿಕೃತ ಟೆಂಡರುದಾರರು ಆಹಾರ ಸಾಮಾಗ್ರಿಗಳನ್ನು ನಿಯಮಾನುಸಾರ ಸರಬರಾಜು ಮಾಡದೆ ಇರುವ ಅಂಶಗಳು ಕಂಡುಬಂದಿರುತ್ತವೆ. ಹೀಗಾಗಿ ತನಿಖೆಗೆ ಒಳಪಡಿಸಿ, ಆಹಾರ ಸರಬರಾಜು ಮಾಡದೆ ವಂಚಿಸಿರುವ ಟೆಂಡರುದಾರರನ್ನು ಕಪ್ಪುಪಟ್ಟಿಗೆ ಒಳಪಡಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕೋರಿ ದಾಖಲೆ ಸಹಿತ ಇಲಾಖೆಯ ಮೇಲಾಧಿಕಾರಿಗಳಾದ ಪಿ.ಮಣಿವಣ್ಣನ್ ಹಾಗೂ ಪಿ.ಎಸ್.ಕಾಂತರಾಜು ಇವರಿಗೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ದೂರು ನೀಡಿರುತ್ತಾರೆ.
ಆದರೆ ದೂರು ನೀಡಿ 4 ತಿಂಗಳು ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಲೋಪ ಎಸಗಿರುವುದು ಮಾತ್ರವಲ್ಲದೆ, ಆಹಾರ ಸರಬರಾಜು ಮಾಡದೆ ವಂಚನೆಯ ಆರೋಪ ಹೊತ್ತಿರುವ ಟೆಂಡರುದಾರರಿಗೆ ಪುನಃ ಆಹಾರ ಸರಬರಾಜು ಆದೇಶವನ್ನು ನೀಡುವ ಮೂಲಕ ಭ್ರಷ್ಟರ ಪರವಾಗಿ ಮೇಲಾಧಿಕಾರಿಗಳು ಕಾರ್ಯನಿರ್ವಹಿಸಿರುತ್ತಾರೆ. ಹೀಗಾಗಿ ವಕೀಲ ಡಾ.ಕೆ.ಎ.ಓಬಳೇಶ್ ಅವರು ಲೋಕಾಯುಕ್ಕೆ ದೂರು ನೀಡಿರುತ್ತಾರೆ.
“ಪ್ರತಿಷ್ಠಿತ ವಸತಿ ಶಾಲೆಗಳಿಗೆ ಸರ್ಕಾರ ಕೋಟ್ಯಾಂತರ ರೂಪಾಯಿ ಹಣವನ್ನು ಖರ್ಚು ಮಾಡಿ ಸುಸಜ್ಜಿತ ಕಟ್ಟಡ ಹಾಗೂ ಪೌಷ್ಠಿಕ ಆಹಾರದ ವ್ಯವಸ್ಥೆ ಕಲ್ಪಿಸಿದೆ. ಅದರೆ ಅಧಿಕಾರಿಗಳ ಧನದಾಹಿತ್ವದಿಂದ ಪ್ರತಿಷ್ಠಿತ ಶಾಲೆಗಳಲ್ಲಿ ಮಕ್ಕಳಿಗೆ ಕಳಪೆ ಆಹಾರ ನೀಡುತ್ತ ಬಂದಿರುತ್ತಾರೆ. ನಮಗೆ ಬಂದಿರುವ ಅಧಿಕೃತ ಮಾಹಿತಿ ಪ್ರಕಾರ ಟೆಂಡರುದಾರರಿಗೆ 40% ಕಮೀಷನ್ ಹೋಗುತ್ತದೆ. ಉಳಿದ 60% ಹಣದಲ್ಲಿ ಮೇಲಾಧಿಕಾರಿಗಳಿಂದ ನಿಲಯ ಪಾಲಕರವರೆಗೆ 40% ಕಮೀಷನ್ ರೂಪದಲ್ಲಿ ಹಂಚಿಕೆಯಾಗುತ್ತದೆ. ಉಳಿದ 20% ಹಣದಲ್ಲಿ ಮಕ್ಕಳಿಗೆ ಅನ್ನ ಹಾಕುತ್ತಾರೆ. ಇದಕ್ಕೆ ನಮ್ಮ ಬಳಿ ಅಧಿಕೃತ ದಾಖಲೆಗಳಿವೆ.”
| ವಕೀಲ ಡಾ.ಕೆ.ಎ.ಓಬಳೇಶ್
ಸುದ್ದಿದಿನ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ24 hours agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ24 hours agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ1 day agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ1 day agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ24 hours agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!


