ದಿನದ ಸುದ್ದಿ
ಜೀತಕ್ಕೆ ದಲಿತ ಮಹಿಳೆ ಎತ್ಯೊಯ್ದ ಪ್ರಕರಣ : ನ್ಯಾಯ ಒದಗಿಸಿದ ಮುತ್ತಯ್ಯಗೆ ಸನ್ಮಾನ
ಸುದ್ದಿದಿನ,ಮಂಡ್ಯ : ಜಿಲ್ಲೆಯ ಮದ್ದೂರು ತಾಲೂಕಿನ ಬೆಕ್ಕಳಲೆ ಗ್ರಾಮದಲ್ಲಿ ನಡೆದ ಜೀತ ಪ್ರಕರಣದಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಿದ ನ್ಯಾಯ ಒದಗಿಸಿದ ಜೀವಿಕ ಸಂಸ್ಥೆಯ ತಾಲ್ಲೂಕು ಅದ್ಯಕ್ಷರಾದ ಗೋಪನಹಳ್ಳಿ ಮುತ್ತಯ್ಯ ರವರೆಗೆ ಇಂದು ಬೆಂಗಳೂರಿನ ಕೇಂದ್ರ ಕಛೇರಿಯಲ್ಲಿ ಜೀವಿಕ ಸಂಸ್ಥೆಯ ಅಧ್ಯಕ್ಷರಾದ ಕಿರಣ್ ಕಮಲ್ ಪ್ರಸಾದ್ ರವರು ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ನಂತರ ಮಾತನಾಡಿದ ಅವರು ಬೆಕ್ಕಳಲೆ ಗ್ರಾಮದಲ್ಲಿ ನಡೆದ ಪ್ರಕರಣವನ್ನು ನಮ್ಮ ಸಂಸ್ಥೆಯ ಮುಖಂಡರುಗಳು ಅತೀ ಜರೂರಾಗಿ ಸಮಾಜದ ಮುಖ್ಯವಾಹಿನಿಗೆ ತರಲು ತುಂಬಾ ಶ್ರಮವಹಿಸಿದರು ಈ ಒಂದು ಪ್ರಕರಣ ಇಡೀ ದೇಶದಲ್ಲಿ ತುಂಬಾ ಸುದ್ದಿಯಾಗಿತ್ತು, ತಕ್ಷಣ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮುಂದೆ ಇಂತಹ ಪ್ರಕರಣಗಳು ಬೆಳಕಿಗೆ ಬಂದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಸಿದರು ನಂತರ ಈ ಪ್ರಕರಣದಲ್ಲಿ ನ್ಯಾಯ ಒದಗಿಸಿದಮಂಡ್ಯ ಜಿಲ್ಲೆಯ ಜೀವಿಕ ಸಂಸ್ಥೆಯ ಎಲ್ಲಾ ಸದಸ್ಯರುಗಳಿಗೆ ಅಭಿನಂದನೆ ಸಲ್ಲಿಸಿದರು ಸಭೆಯಲ್ಲಿ ಜಿಲ್ಲಾ ಸಂಚಾಲಕರು ತಾಲ್ಲೂಕು ಸಂಚಾಲಕರು ಹಾಗೂ ಇತರೆ ಮುಖಂಡರುಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !
ಹಿರಿಯೂರು/ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ವೇಳೆ, ಕೆ.ಆರ್. ಹಳ್ಳಿ ಗೇಟ್ ಸಮೀಪ ದಿಢೀರನೆ ಮತ್ತೊಂದು ಕಾರು ಅಡ್ಡ ಬಂದಿದೆ. ಅಡ್ಡ ಬಂದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿದ ಶಾಸಕರ ಕಾರು ರಸ್ತೆ ಡಿವೈಡರ್‌ಗೆ ಭೀಕರವಾಗಿ ಡಿಕ್ಕಿಯಾಗಿದೆ.
http://Visit : www.suddidina.com
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆಯಾದರೂ, ಕಾರಿನಲ್ಲಿದ್ದ ಶಾಸಕ ಸಮರ್ಥ್ ಶಾಮನೂರು ಹಾಗೂ ಸಿಬ್ಬಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಸುರಕ್ಷಿತವಾಗಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಿನದ ಸುದ್ದಿ
ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
ದಾವಣಗೆರೆ: ಭದ್ರಾ ಡ್ಯಾಂ ನೀರು ಹರಿಸಬೇಕು ಎಂದು ಒತ್ತಾಯಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆ ಇತ್ತು. ವಾಹನಗಳ ಓಡಾಟವೂ ಯಥಾಸ್ಥಿತಿ ಇತ್ತು. ಅಂಗಡಿ ಮುಂಗಟ್ಟುಗಳು ಬಂದ್ ಆಗಲಿಲ್ಲ. ಶಾಲಾ ಕಾಲೇಜುಗಳು ಎಂದಿನಂತೆ ನಡೆದವು.
ನಗರದ ಜಯದೇವ ವೃತ್ತದಲ್ಲಿ ಮಾಜಿ ಸಚಿವ ಎಸ್. ಎ. ರವೀಂದ್ರನಾಥ್ ನೇತೃತ್ವದಲ್ಲಿ ಲೋಕಿಕೆರೆ ನಾಗರಾಜ್, ಲಿಂಗರಾಜ್ ಶಾಮನೂರು, ಕೊಳೇನಹಳ್ಳಿ ಸತೀಶ್ ಸೇರಿದಂತೆ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಹೆದ್ದಾರಿ ಬಂದ್ ನಡೆಸಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಸಂಜೆ ಹೊತ್ತಿಗೆ ಬಿಡುಗಡೆ ಮಾಡಿದರು.
http://Visit : www.suddidina.com
ದಾವಣಗೆರೆ ಬಂದ್ ಯಶಸ್ವಿ ಆಗಲಿಲ್ಲ. ಬಂದ್ ಎಂಬಂತ ವಾತಾವರಣವೂ ನಿರ್ಮಾಣ ಆಗಿರಲಿಲ್ಲ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿಲ್ಲ. ಮಳೆ ಆರಂಭವಾದ ಕಾರಣ ಕಡಿಮೆ ಪ್ರಮಾಣದಲ್ಲಿ ಸೇರಿದ್ದ ರೈತ ಮುಖಂಡರು ರಾಜ್ಯ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ವಿರುದ್ಧ ಘೋಷಣೆ ಹಾಕಿದರು. ಕೂಡಲೇ ಭದ್ರಾ ಡ್ಯಾಂ ನೀರು ಹರಿಸುವ ಮೂಲಕ ರೈತರ ಹಿತ ಕಾಪಾಡುವಂತೆ ಒತ್ತಾಯಿಸಿದರು.

ದಿನದ ಸುದ್ದಿ
ಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ!
ಕಣ್ಣೂರು: ಮಗಳು ಬೇರೆ ಜಾತಿಯ ಯುವಕನನ್ನು ವಿವಾಹವಾದ ಬಳಿಕ ತಮ್ಮನ್ನು ದೇವಸ್ಥಾನದ ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ಕಣ್ಣೂರಿನ ಮುಚ್ಚಿಲೋಟ್ ಭಗವತಿ ದೇವಸ್ಥಾನದ ಉಪಕರ್ಮಿ ಸಿ.ವಿ. ರಾಜನ್ ಆರೋಪಿಸಿದ್ದಾರೆ. ಈ ಆರೋಪವು ದೇವಸ್ಥಾನದ ಆಚರಣೆಗಳು, ಜಾತಿ ವ್ಯವಸ್ಥೆ ಹಾಗೂ ವೈಯಕ್ತಿಕ ಆಯ್ಕೆಯ ಹಕ್ಕಿನ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮಾರ್ಚ್ 15, 2026ರಂದು ವಾಣಿ ಸಮುದಾಯಕ್ಕೆ ಸೇರಿದ ರಾಜನ್ ಅವರ ಮಗಳು ಪೊದುವಾಲ್ ಸಮುದಾಯದ ಯುವಕನನ್ನು ವಿವಾಹವಾಗಿದ್ದರು. ಮದುವೆಗೂ ಮುನ್ನವೇ, 2025ರ ಆಗಸ್ಟ್‌ನಲ್ಲಿ ನಡೆದ ನಿಶ್ಚಿತಾರ್ಥದ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ರಾಜನ್ ಅವರನ್ನು ಕೆಲಸದಿಂದ ದೂರವಿರಲು ಸೂಚಿಸಿತ್ತು ಎಂದು ಅವರು ಹೇಳಿದ್ದಾರೆ.
ಸುಮಾರು 30 ವರ್ಷಗಳಿಂದ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿರುವ ರಾಜನ್, ದೇವಸ್ವಂ ಮಂಡಳಿಯ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಹಿಂದೆ ಕೆಲಸ ಮುಂದುವರಿಸಲು ಅವಕಾಶ ದೊರೆತಿತ್ತು. ಆದರೆ ಇದೀಗ ಹೊರಡಿಸಿರುವ ಅಮಾನತು ಆದೇಶದಲ್ಲಿ, ಸಮಿತಿ ಸದಸ್ಯರು ಹಾಗೂ ಭಕ್ತರೊಂದಿಗೆ ಅನುಚಿತವಾಗಿ ವರ್ತಿಸಿರುವುದು ಮತ್ತು ಪೂರ್ವಜರಿಂದ ಬಂದ ಸಾಂಪ್ರದಾಯಿಕ ಆಚರಣೆಗಳನ್ನು ಉಲ್ಲಂಘಿಸಿರುವುದು ಕಾರಣವೆಂದು ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.
http://Visit : www.suddidina.com
ಈ ಆರೋಪಗಳಿಗೆ ಸೂಕ್ತ ಸಾಕ್ಷ್ಯ ನೀಡಲಾಗಿಲ್ಲ. ಹಾಗೂ ತಮ್ಮ ಮಗಳ ಅಂತರ್ಜಾತಿ ವಿವಾಹವೇ ತಮ್ಮ ವಿರುದ್ಧದ ಕ್ರಮಕ್ಕೆ ಪ್ರಮುಖ ಕಾರಣ ಎಂದು ಆರೋಪಿಸಿದ್ದು, ನನ್ನ ವಿರುದ್ಧದ ಆರೋಪಗಳಿಗೆ ಸಾಕ್ಷ್ಯ ನೀಡಿದ್ದಲ್ಲಿ ಅಥವಾ ತಪ್ಪು ಸಾಬೀತಾದಲ್ಲಿ ಕೆಲಸ ತೊರೆಯಲು ನಾನು ಸಿದ್ಧನಿದ್ದೇನೆ ಎಂದು ರಾಜನ್ ಅವರು ತಮ್ಮ ವಾದವನ್ನು ಮಂಡಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ದೇವಸ್ಥಾನದ ಸಮಿತಿ ಕಾರ್ಯದರ್ಶಿಗಳಾದ ಹರೀಂದ್ರನ್ ಅವರು, ರಾಜನ್ ಮುಂದುವರಿಯುವುದಕ್ಕೆ ಸಮಿತಿಗೆ ಯಾವುದೇ ಆಕ್ಷೇಪವಿಲ್ಲ ಮತ್ತು ಅಂತಿಮ ನಿರ್ಧಾರವನ್ನು ವ್ಯವಸ್ಥಾಪಕ ಟ್ರಸ್ಟಿ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಈ ನಡುವೆ ರಾಜನ್ ಅವರು ತಮಗೆ ಆದ ಅನ್ಯಾಯದ ಕುರಿತು ಮಲಬಾರ್ ದೇವಸ್ವಂ ಮಂಡಳಿ, ಮಾನವ ಹಕ್ಕುಗಳ ಆಯೋಗ ಹಾಗೂ ಸ್ಥಳೀಯ ಶಾಸಕರಾದ ವಿ ಕುಂಞಕೃಷ್ಣನ್ ಅವರಿಗೆ ದೂರು ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆ ಮುಂದಿನ ತಿಂಗಳು ದೇವಸ್ವಂ ಮಂಡಳಿಯಲ್ಲೇ ನಡೆಯಲಿದೆ ಎಂದು ತಿಳಿಸಿದ್ದಾರೆ.
ಒಟ್ಟಾರೆಯಾಗಿ ಒಬ್ಬ ವಯಸ್ಕ ವ್ಯಕ್ತಿಯ ವಿವಾಹದ ಆಯ್ಕೆಗೆ ಆತನ ಪೋಷಕರೇ ಬೆಲೆ ತೆರಬೇಕೇ? ಎಂಬ ಪ್ರಶ್ನೆಯನ್ನು ಈ ಪ್ರಕರಣ ಮತ್ತೆ ಮುನ್ನೆಲೆಗೆ ತಂದಿದೆ.

-
ಅಂತರಂಗ6 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ4 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ2 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ30 minutes agoಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ!
-
ದಿನದ ಸುದ್ದಿ23 minutes agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ20 minutes agoಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !



