Connect with us

ದಿನದ ಸುದ್ದಿ

ಜನವರಿ 6 ಕ್ಕೆ ಮಡಿವಾಳ ಜನಾಂಗದ ಜಾಗೃತಿ‌ ಮಹಾ ಸಮ್ಮೇಳನ

Published

on

ಸುದ್ದಿದಿನ ಡೆಸ್ಕ್ : ಮಡಿವಾಳ ಜನಾಂಗದ ಜಾಗೃತಿ ಮಹಾ ಸಮ್ಮೇಳನ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದ ಶಂಕುಸ್ಥಾಪನೆ ದಶಮಾನೋತ್ಸವ , ಶ್ರೀ ಬಸವ ಮಾಚಿದೇವ ಸ್ವಾಮೀಜಿಗಳವರ ಜಂಗಮದೀಕ್ಷಾ 29ನೇ ವಸಂತೋತ್ಸವ ಮತ್ತು ಶ್ರೀ ಬಸವ ಮಾಚಿದೇವ ಸ್ವಾಮೀಜಿಗಳವರ 38ನೇ ಜಯಂತ್ಯೋತ್ಸವ ” ಪರಮಪೂಜ್ಯ ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳವರ ಪಟ್ಟಾಧಿಕಾರ ಮಹೋತ್ಸವ ದಿನಾಂಕ : 6 ಜನವರಿ 2019 , ಭಾನುವಾರ , ಸಮಯ ಬೆಳಗ್ಗೆ 10 . 00 ಗಂಟೆಗೆ ಸ್ಥಳ : ಚಿತ್ರದುರ್ಗ ಮಡಿವಾಳ ಸಮುದಾಯ ಇಡೀ ರಾಜ್ಯದಲ್ಲಿ ಸುಮಾರು 15 . 00 ಲಕ್ಷ ಜನಸಂಖ್ಯೆ ಇದ್ದು ಶೇ 99 % ರಷ್ಟು ತಮ್ಮ ಕುಲಕಸುಬು ಮತ್ತು ಕೂಲಿ – ನಾಲಿಯ ಆಧಾರದ ಮೇಲೆ ಜೀವನವನ್ನು ನಡೆಸುತ್ತಾ ಬಂದಿರುವಂತದ್ದಾಗಿದೆ.

ಸ್ವತಂತ್ರ ಬಂದು ಇಷ್ಟು ವರ್ಷಗಳಾದರೂ ಸರ್ಕಾರದ ಯಾವುದೇ ರೀತಿಯ ಸೌಕರ್ಯಗಳಿಂದ ವಂಚಿತರಾಗಿದ್ದಾರೆ . ಈ ಸಮುದಾಯ ಎಲ್ಲಾ ಸಮುದಾಯಗಳ ಜೊತೆಯಲ್ಲಿ ಮುಖ್ಯ ವಾಹಿನಿಗೆ ಬರಬೇಕಾದಂತಹ ಅನಿವಾರ್ಯತೆ ಇದೆ . ಇಂದಿಗೂ ಕೂಡ ಆರ್ಥಿಕ , ಶೈಕ್ಷಣಿಕ , ಸಾಮಾಜಿಕ ಮತ್ತು ರಾಜಕೀಯವಾಗಿ ಯಾವುದೇ ಪ್ರಾತಿನಿಧ್ಯಗಳು ಸಿಗದೆ ನಮ್ಮ ಹಕ್ಕುಗಳನ್ನು ಪಡೆಯಲಿಕ್ಕೆ ನಿರಂತರವಾದ ಹೋರಾಟವನ್ನ ನಡೆಸುವ ಕರ್ತವ್ಯ ನಮ್ಮದಾಗಿದೆ , ಪ್ರತಿಯೊಬ್ಬರಿಗೆ ಧಾರ್ಮಿಕ ಅರಿವು ಬಹಳ ಮುಖ್ಯ . ನಾಡಿನಲ್ಲಿ ಪ್ರತಿಷ್ಠಿತ ಮಠಗಳು ಇವೆ . ಅವುಗಳಿಂದ ಹೇಗೆ ಜನ ಪ್ರಜ್ಞಾವಂತರಾದರು , ವೈಯಕ್ತಿಕ ಹಾಗೂ ಸಾಮಾಜಿಕವಾಗಿ ಬೆಳವಣಿಗೆಯಾಗಿದ್ದಾರೆ ಎಂಬುದನ್ನು ನೋಡುತ್ತಿದ್ದೀರಿ . ಮಠಗಳು ಜನರ ಶಕ್ತಿಯ ಕೇಂದ್ರಗಳಾಗಿವೆ . ಬಹುಶಃ ಮಠಗಳು ಇರದಿದ್ದರೇ ಧಾರ್ಮಿಕ ವಂಚನೆಯನ್ನು ಅನುಭವಿಸಬೇಕಾಗಿತ್ತು . ಇಂದಿನ ಕಾಲಮಾನದಲ್ಲಿ ಮಠಗಳು ಅದನ್ನು ತಪ್ಪಿಸಿ ಪ್ರತಿಯೊಬ್ಬರನ್ನು ಪ್ರಜ್ಞಾವಂತರನ್ನಾಗಿಸಲು ಮತ್ತು ಸಾಮಾಜಿಕ ಜವಾಬ್ದಾರಿಯ ಜಾಗೃತಿ ಮೂಡಿಸಲು ಸಹಾಯಕವಾಗಿವೆ . ಎಲ್ಲರನ್ನು ಮೇಲೆತ್ತುವ ಕಾರ್ಯ ನಡೆದಿದೆ . – ಚಿತ್ರದುರ್ಗದ ಮುರುಘಾಮಠದ ಡಾ . ಶಿವಮೂರ್ತಿ ಮುರುಘಾ ಶರಣರ ದೂರದೃಷ್ಟಿಯಿಂದಾಗಿ ಹಿಂದುಳಿದ ಸಮಾಜಗಳಿಗೆ ಮಠಗಳನ್ನು ಸ್ಥಾಪಿಸಿ , ಅದೇ ಸಮಾಜದವರನ್ನು ಗುರುಗಳನ್ನಾಗಿ ಮಾಡಿ ( ದುರ್ಬಲ ) ಶಕ್ತಿಹೀನ ವರ್ಗಗಳಿಗೆ ಶಕ್ತಿ ತುಂಬಿದ್ದಾರೆ . ಅವರ ಪ್ರಗತಿಯ ಕನಸುಗಳ ಸಾಕಾರದಲ್ಲಿ ಚಿತ್ರದುರ್ಗದ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠವೂ ಒಂದು ! ಚಿತ್ರದುರ್ಗದ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠವು ಮಡಿವಾಳ ಜನಾಂಗದಲ್ಲಿ ಸಂಘಟನೆಯ ಕ್ರಾಂತಿ ಮಾಡಿ ಸಾಮಾಜಿಕ ಸಂಚಲನವನ್ನುಂಟು ಮಾಡಿದೆ . ಈ ದಶಮಾನ ಅನೇಕ ಅನುಭವಗಳನ್ನು ತಂದುಕೊಟ್ಟು ಸಾಧನೆಗಳಿಗೆ ಸಾಕ್ಷಿಯಾಗಿದೆ .

ಶುಭಕೋರುವವರು

ಈ ಎಲ್ಲ ಸಾಧನೆಗಳು ನಮೊಂದಿಗೆ ನಿಮ್ಮೆಲ್ಲರ ತಂಡರೂಪದ ಶಮದಿಂದಲೇ ಆಗಿವೆ . ಮನಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಕಳೆದ ಹತ್ತು ವರ್ಷಗಳ ಕಾಲವೇ ಜ್ವಲಂತ ನಿದರ್ಶನವಾಗಿದೆ . ಅದುವೇ ಸಾರ್ಥಕ ದಶಮಾನವಾಗಿದೆ . ಇದೊಂದು ಅಭೂತಪೂರ್ವವಾದ ದಶಮಾನ , ಈ ಸಮ್ಮೇಳನಕ್ಕೆ ನಾಡಿನ ಪ್ರಮುಖ ಮಠಾಧೀಶರು , ರಾಜಕಾರಣಿಗಳು , ಸಾಹಿತಿಗಳು ಮತ್ತು ಹೊರರಾಜ್ಯ ಸಮಾಜದ ಬಂದುಗಳು ಬರುವುದರಿಂದ ಈ ಕಾರ್ಯಕ್ರಮವನ್ನು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ವಿನಂತಿ ಉಜ್ವಲ ಭವಿಷ್ಯಕ್ಕಾಗಿ ನಿಮ್ಮ ದೇಣಿಗೆ # SRI MACHIDEVA MAT , STATE BANK OF INDIA ” CHITRASURGA ACCOUNT NO : 30110063927 , IFSC CODE : SBINO005618 ನಮೊಂದಿಗೆ ಕರ್ನಾಟಕ ರಾಜ್ಯ ಮಡಿವಾಳ ಸಂಘದ ಅಧ್ಯಕ್ಷರು , ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು , ಕರ್ನಾಟಕ ರಾಜ್ಯ ಮಹಿಳಾ ಘಟಕ ಮತ್ತು ಯುವ ಘಟಕದ ಅಧ್ಯಕ್ಷರು , ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಅಲ್ಲಾ , ತಾಲ್ಲೂಕು , ಮಡಿವಾಳ ಸಂಘಗಳ ಅಧ್ಯಕ್ಷರು , ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು , ಜಿಲ್ಲಾ ತಾಲ್ಲೂಕು ಮಹಿಳಾ ಮತ್ತು ಯುವ ಘಟಕದ ಅಧ್ಯಕ್ಷರು , ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಸಂಸ್ಥೆಗಳು ಆಪ್‌ಗಳು ಸಮಿತಿಗಳು ಒಕ್ಕೂಟಗಳು ಮತ್ತು ಮರಿ ಕಟ್ಟೆಗಳ ಅಧ್ಯಕ್ಷರು , ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಹಾಗೂ ಸಮಾಜದ ಹಿರಿಯ ಮುಖಂಡರು , ಕುಲಬಂಧುಗಳು ಉತ್ಸಾಹಿ ಬಾಂಧವರೇ ಸಾಧನೆಯ ಸಾರ್ಥಕತೆಯನ್ನು ಸವಿಯಲು ಲಕ್ಷ ಲಕ್ಷ ಸಂಖ್ಯೆಯಲ್ಲಿ ಬನ್ನಿರಿ !

ಸಂಪರ್ಕಿಸಿ : ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠ ( ಮಡಿವಾಳ , ಗೋಧಿ , ಅಗಸ , ಪರೀಟ , ರಜಕ , ಚಾಕಲ , ಮಣ್ಣಿನ ಸಾಕಲ , ಮನ , ಪೆರೇಡಸ್ , ಸಾಕಲವಾಡು ಜನಾಂಗದ ಗುರುಪೀS ) ರಾಷ್ಟ್ರೀಯ ಹೆದ್ದಾರಿ 4 , ದಾವಣಗೆರೆ ರಸ್ತೆ , ಚಿತ್ರದುರ್ಗ – 577502 ದೂ : 9620839656 / 9448442512 ಇಮೇಲ್ : machidevarmatt9 @ gmail . com ವೆಬ್ಸೈಟ್ : www . machidevarmattin

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು....

ದಿನದ ಸುದ್ದಿ1 day ago

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ...

ದಿನದ ಸುದ್ದಿ3 days ago

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ...

ದಿನದ ಸುದ್ದಿ4 days ago

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು...

ದಿನದ ಸುದ್ದಿ5 days ago

ಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು. ಜಿಎಂ ವಿಶ್ವವಿದ್ಯಾಲಯದ ಎಲ್ಲಾ...

ದಿನದ ಸುದ್ದಿ5 days ago

ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು. ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ5 days ago

ದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ

ಸುದ್ದಿದಿನ,ದಾವಣಗೆರೆ:ಕಾರ್ಮಿಕರಿಗೆ ತ್ವರಿತವಾಗಿ, ಕೆಲಸದ ಸ್ಥಳಗಳಲ್ಲೇ ವೈದ್ಯಕೀಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ‘ಸಂಚಾರಿ ಆರೋಗ್ಯ ಘಟಕ’ (ಮೊಬೈಲ್ ಮೆಡಿಕಲ್ ಯುನಿಟ್) ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಕಾರ್ಮಿಕರು ಇದರ...

ದಿನದ ಸುದ್ದಿ5 days ago

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನದಡಿ ಮೀನುಮಾರಾಟಗಾರರಿಂದ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ1 week ago

ಎಂನರೇಗಾ ಯೋಜನೆ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ತಾಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಇಚ್ಛಿಸುವ ರೈತರಿಂದ...

ದಿನದ ಸುದ್ದಿ2 weeks ago

ಅಡ್ಡ ಬಂದ ನಾಯಿ ಉಳಿಸಲು ಹೋಗಿ ಕಾರು ಪಲ್ಟಿ : ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ

ಸುದ್ದಿದಿನಡೆಸ್ಕ್:ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಂಬಂಧಿಕರ ಮದುವೆಗೆಂದು ವಿಜಯಪುರಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ...

Trending