ದಿನದ ಸುದ್ದಿ
ಜನವರಿ 6 ಕ್ಕೆ ಮಡಿವಾಳ ಜನಾಂಗದ ಜಾಗೃತಿ ಮಹಾ ಸಮ್ಮೇಳನ
ಸುದ್ದಿದಿನ ಡೆಸ್ಕ್ : ಮಡಿವಾಳ ಜನಾಂಗದ ಜಾಗೃತಿ ಮಹಾ ಸಮ್ಮೇಳನ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದ ಶಂಕುಸ್ಥಾಪನೆ ದಶಮಾನೋತ್ಸವ , ಶ್ರೀ ಬಸವ ಮಾಚಿದೇವ ಸ್ವಾಮೀಜಿಗಳವರ ಜಂಗಮದೀಕ್ಷಾ 29ನೇ ವಸಂತೋತ್ಸವ ಮತ್ತು ಶ್ರೀ ಬಸವ ಮಾಚಿದೇವ ಸ್ವಾಮೀಜಿಗಳವರ 38ನೇ ಜಯಂತ್ಯೋತ್ಸವ ” ಪರಮಪೂಜ್ಯ ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳವರ ಪಟ್ಟಾಧಿಕಾರ ಮಹೋತ್ಸವ ದಿನಾಂಕ : 6 ಜನವರಿ 2019 , ಭಾನುವಾರ , ಸಮಯ ಬೆಳಗ್ಗೆ 10 . 00 ಗಂಟೆಗೆ ಸ್ಥಳ : ಚಿತ್ರದುರ್ಗ ಮಡಿವಾಳ ಸಮುದಾಯ ಇಡೀ ರಾಜ್ಯದಲ್ಲಿ ಸುಮಾರು 15 . 00 ಲಕ್ಷ ಜನಸಂಖ್ಯೆ ಇದ್ದು ಶೇ 99 % ರಷ್ಟು ತಮ್ಮ ಕುಲಕಸುಬು ಮತ್ತು ಕೂಲಿ – ನಾಲಿಯ ಆಧಾರದ ಮೇಲೆ ಜೀವನವನ್ನು ನಡೆಸುತ್ತಾ ಬಂದಿರುವಂತದ್ದಾಗಿದೆ.
ಸ್ವತಂತ್ರ ಬಂದು ಇಷ್ಟು ವರ್ಷಗಳಾದರೂ ಸರ್ಕಾರದ ಯಾವುದೇ ರೀತಿಯ ಸೌಕರ್ಯಗಳಿಂದ ವಂಚಿತರಾಗಿದ್ದಾರೆ . ಈ ಸಮುದಾಯ ಎಲ್ಲಾ ಸಮುದಾಯಗಳ ಜೊತೆಯಲ್ಲಿ ಮುಖ್ಯ ವಾಹಿನಿಗೆ ಬರಬೇಕಾದಂತಹ ಅನಿವಾರ್ಯತೆ ಇದೆ . ಇಂದಿಗೂ ಕೂಡ ಆರ್ಥಿಕ , ಶೈಕ್ಷಣಿಕ , ಸಾಮಾಜಿಕ ಮತ್ತು ರಾಜಕೀಯವಾಗಿ ಯಾವುದೇ ಪ್ರಾತಿನಿಧ್ಯಗಳು ಸಿಗದೆ ನಮ್ಮ ಹಕ್ಕುಗಳನ್ನು ಪಡೆಯಲಿಕ್ಕೆ ನಿರಂತರವಾದ ಹೋರಾಟವನ್ನ ನಡೆಸುವ ಕರ್ತವ್ಯ ನಮ್ಮದಾಗಿದೆ , ಪ್ರತಿಯೊಬ್ಬರಿಗೆ ಧಾರ್ಮಿಕ ಅರಿವು ಬಹಳ ಮುಖ್ಯ . ನಾಡಿನಲ್ಲಿ ಪ್ರತಿಷ್ಠಿತ ಮಠಗಳು ಇವೆ . ಅವುಗಳಿಂದ ಹೇಗೆ ಜನ ಪ್ರಜ್ಞಾವಂತರಾದರು , ವೈಯಕ್ತಿಕ ಹಾಗೂ ಸಾಮಾಜಿಕವಾಗಿ ಬೆಳವಣಿಗೆಯಾಗಿದ್ದಾರೆ ಎಂಬುದನ್ನು ನೋಡುತ್ತಿದ್ದೀರಿ . ಮಠಗಳು ಜನರ ಶಕ್ತಿಯ ಕೇಂದ್ರಗಳಾಗಿವೆ . ಬಹುಶಃ ಮಠಗಳು ಇರದಿದ್ದರೇ ಧಾರ್ಮಿಕ ವಂಚನೆಯನ್ನು ಅನುಭವಿಸಬೇಕಾಗಿತ್ತು . ಇಂದಿನ ಕಾಲಮಾನದಲ್ಲಿ ಮಠಗಳು ಅದನ್ನು ತಪ್ಪಿಸಿ ಪ್ರತಿಯೊಬ್ಬರನ್ನು ಪ್ರಜ್ಞಾವಂತರನ್ನಾಗಿಸಲು ಮತ್ತು ಸಾಮಾಜಿಕ ಜವಾಬ್ದಾರಿಯ ಜಾಗೃತಿ ಮೂಡಿಸಲು ಸಹಾಯಕವಾಗಿವೆ . ಎಲ್ಲರನ್ನು ಮೇಲೆತ್ತುವ ಕಾರ್ಯ ನಡೆದಿದೆ . – ಚಿತ್ರದುರ್ಗದ ಮುರುಘಾಮಠದ ಡಾ . ಶಿವಮೂರ್ತಿ ಮುರುಘಾ ಶರಣರ ದೂರದೃಷ್ಟಿಯಿಂದಾಗಿ ಹಿಂದುಳಿದ ಸಮಾಜಗಳಿಗೆ ಮಠಗಳನ್ನು ಸ್ಥಾಪಿಸಿ , ಅದೇ ಸಮಾಜದವರನ್ನು ಗುರುಗಳನ್ನಾಗಿ ಮಾಡಿ ( ದುರ್ಬಲ ) ಶಕ್ತಿಹೀನ ವರ್ಗಗಳಿಗೆ ಶಕ್ತಿ ತುಂಬಿದ್ದಾರೆ . ಅವರ ಪ್ರಗತಿಯ ಕನಸುಗಳ ಸಾಕಾರದಲ್ಲಿ ಚಿತ್ರದುರ್ಗದ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠವೂ ಒಂದು ! ಚಿತ್ರದುರ್ಗದ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠವು ಮಡಿವಾಳ ಜನಾಂಗದಲ್ಲಿ ಸಂಘಟನೆಯ ಕ್ರಾಂತಿ ಮಾಡಿ ಸಾಮಾಜಿಕ ಸಂಚಲನವನ್ನುಂಟು ಮಾಡಿದೆ . ಈ ದಶಮಾನ ಅನೇಕ ಅನುಭವಗಳನ್ನು ತಂದುಕೊಟ್ಟು ಸಾಧನೆಗಳಿಗೆ ಸಾಕ್ಷಿಯಾಗಿದೆ .
ಈ ಎಲ್ಲ ಸಾಧನೆಗಳು ನಮೊಂದಿಗೆ ನಿಮ್ಮೆಲ್ಲರ ತಂಡರೂಪದ ಶಮದಿಂದಲೇ ಆಗಿವೆ . ಮನಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಕಳೆದ ಹತ್ತು ವರ್ಷಗಳ ಕಾಲವೇ ಜ್ವಲಂತ ನಿದರ್ಶನವಾಗಿದೆ . ಅದುವೇ ಸಾರ್ಥಕ ದಶಮಾನವಾಗಿದೆ . ಇದೊಂದು ಅಭೂತಪೂರ್ವವಾದ ದಶಮಾನ , ಈ ಸಮ್ಮೇಳನಕ್ಕೆ ನಾಡಿನ ಪ್ರಮುಖ ಮಠಾಧೀಶರು , ರಾಜಕಾರಣಿಗಳು , ಸಾಹಿತಿಗಳು ಮತ್ತು ಹೊರರಾಜ್ಯ ಸಮಾಜದ ಬಂದುಗಳು ಬರುವುದರಿಂದ ಈ ಕಾರ್ಯಕ್ರಮವನ್ನು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ವಿನಂತಿ ಉಜ್ವಲ ಭವಿಷ್ಯಕ್ಕಾಗಿ ನಿಮ್ಮ ದೇಣಿಗೆ # SRI MACHIDEVA MAT , STATE BANK OF INDIA ” CHITRASURGA ACCOUNT NO : 30110063927 , IFSC CODE : SBINO005618 ನಮೊಂದಿಗೆ ಕರ್ನಾಟಕ ರಾಜ್ಯ ಮಡಿವಾಳ ಸಂಘದ ಅಧ್ಯಕ್ಷರು , ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು , ಕರ್ನಾಟಕ ರಾಜ್ಯ ಮಹಿಳಾ ಘಟಕ ಮತ್ತು ಯುವ ಘಟಕದ ಅಧ್ಯಕ್ಷರು , ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಅಲ್ಲಾ , ತಾಲ್ಲೂಕು , ಮಡಿವಾಳ ಸಂಘಗಳ ಅಧ್ಯಕ್ಷರು , ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು , ಜಿಲ್ಲಾ ತಾಲ್ಲೂಕು ಮಹಿಳಾ ಮತ್ತು ಯುವ ಘಟಕದ ಅಧ್ಯಕ್ಷರು , ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಸಂಸ್ಥೆಗಳು ಆಪ್ಗಳು ಸಮಿತಿಗಳು ಒಕ್ಕೂಟಗಳು ಮತ್ತು ಮರಿ ಕಟ್ಟೆಗಳ ಅಧ್ಯಕ್ಷರು , ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಹಾಗೂ ಸಮಾಜದ ಹಿರಿಯ ಮುಖಂಡರು , ಕುಲಬಂಧುಗಳು ಉತ್ಸಾಹಿ ಬಾಂಧವರೇ ಸಾಧನೆಯ ಸಾರ್ಥಕತೆಯನ್ನು ಸವಿಯಲು ಲಕ್ಷ ಲಕ್ಷ ಸಂಖ್ಯೆಯಲ್ಲಿ ಬನ್ನಿರಿ !
ಸಂಪರ್ಕಿಸಿ : ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠ ( ಮಡಿವಾಳ , ಗೋಧಿ , ಅಗಸ , ಪರೀಟ , ರಜಕ , ಚಾಕಲ , ಮಣ್ಣಿನ ಸಾಕಲ , ಮನ , ಪೆರೇಡಸ್ , ಸಾಕಲವಾಡು ಜನಾಂಗದ ಗುರುಪೀS ) ರಾಷ್ಟ್ರೀಯ ಹೆದ್ದಾರಿ 4 , ದಾವಣಗೆರೆ ರಸ್ತೆ , ಚಿತ್ರದುರ್ಗ – 577502 ದೂ : 9620839656 / 9448442512 ಇಮೇಲ್ : machidevarmatt9 @ gmail . com ವೆಬ್ಸೈಟ್ : www . machidevarmattin
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ
ಸುದ್ದಿದಿನಡೆಸ್ಕ್:ಹಳೆ ಪಿಂಚಣಿ ಪದ್ಧತಿ ಮರು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಹಂತಗಳಲ್ಲಿ ಹೋರಾಟ ಸೇರಿದಂತೆ ಇನ್ನಿತರೆ ನಿರ್ಣಯಗಳಿಗೆ ಬೆಂಬಲ ಸೂಚಿಸಲು ದಾವಣಗೆರೆಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆ ನಿರ್ಧರಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗದು ರಹಿತ ಚಿಕಿತ್ಸೆ ಯೋಜನೆಯ ತ್ವರಿತ ಜಾರಿಗೆ ಒತ್ತಾಯಿಸುವುದು, 2026ಕ್ಕೆ ಕೇಂದ್ರ ಸರ್ಕಾರದ ಮಾದರಿ ವೇತನಕ್ಕಾಗಿ ಹೋರಾಟ ರೂಪಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಿ ಆಂಡ್ ಆರ್ ನಿಯಮಕ್ಕೆ ತಿದ್ದುಪಡಿ ತರುವಂತೆ ಆಗ್ರಹಿಸಿ, ನಡೆಸಲಾಗುವ ಹೋರಾಟವನ್ನು ಬೆಂಬಲಿಸುವುದು, ವೈದ್ಯಕೀಯ ವೆಚ್ಚ ಮರುಪಾವತಿ ಬಿಲ್ಗಳಿಗೆ ಶೀಘ್ರವೇ ಹಣ ಬಿಡುಗಡೆ ಮಾಡಿಸುವ ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂದು ಸಿ.ಎಸ್.ಷಡಕ್ಷರಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಬೈಲಹೊಂಗಲದಲ್ಲಿ ಚಾಲನೆ
ಸುದ್ದಿದಿನಡೆಸ್ಕ್:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2025ಕ್ಕೆ ಇಂದು ಮುಂಜಾನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಅದ್ದೂರಿ ಚಾಲನೆ ನೀಡಲಾಯಿತು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಉತ್ಸವವು ಪ್ರತಿವರ್ಷದಂತೆ ಸಾಂಪ್ರದಾಯಿಕವಾಗಿ ಆರಂಭಗೊಂಡಿದೆ. ಸಂಗೊಳ್ಳಿಯ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪ್ರಾತಃಕಾಲದ ಪೂಜೆ ಸಲ್ಲಿಸಲಾಯಿತು.
ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಜ್ಯೋತಿಯನ್ನು ಸ್ವಾಗತಿಸಿದರು. ಉಪ ವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪುರ, ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನದ ಆವರಣದಲ್ಲಿ ಕಿತ್ತೂರು ಸಂಸ್ಥಾನದ ಧ್ವಜಾರೋಹಣ ನೆರವೇರಿಸಿದರು. ಬಳಿಕ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಜಾನಪದ ಕಲಾವಾಹಿನಿಗೆ ಚಾಲನೆ ನೀಡಿದರು.
ಪೂರ್ಣ ಕುಂಭ ಹೊತ್ತ ಮಹಿಳೆಯರು, ಪೂಜಾ ಕುಣಿತ, ನಂದಿಕೋಲು, ವೀರಗಾಸೆ, ಡೊಳ್ಳು, ಬೊಂಬೆ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಉತ್ಸವಕ್ಕೆ ಮೆರುಗು ತಂದಿತು. ಸಂಗೊಳ್ಳಿ ರಾಯಣ್ಣ ಸ್ಮಾರಕದ ಬಳಿಯಿಂದ ಆರಂಭಗೊಂಡ ಕಲಾವಾಹಿನಿಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಇಂದು ಸಂಜೆ 8 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉತ್ಸವದ ಅಧಿಕೃತ ಉದ್ಘಾಟನೆ ನೆರವೇರಿಸಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ನಾಳೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ವೀರರ ಸ್ಮರಣಾರ್ಥ ದೀಪೋತ್ಸವ, ರಾಯಣ್ಣನ ಕುರಿತಾದ ವಿಚಾರ ಸಂಕಿರಣ, ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ ಸೇರಿದಂತೆ ಇತರೆ ಸ್ಪರ್ಧೆಗಳು ನಡೆಯಲಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಾಳೆಯಿಂದ ಜಗಳೂರಿನಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ
ಸುದ್ದಿದಿನ,ದಾವಣಗೆರೆ:ಜಗಳೂರು ಪಟ್ಟಣದಲ್ಲಿ ಜನವರಿ 11 ಮತ್ತು 12 ರಂದು ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ.
ಜನವರಿ 11 ರಂದು ಬೆಳಿಗ್ಗೆ 8 ಗಂಟೆಗೆ ಅಪರ ಜಿಲ್ಲಾಧಿಕಾರಿ ಪಿ ಎನ್ ಲೋಕೇಶ್ ರಾಷ್ಟ್ರ ಧ್ವಜಾರೋಹಣ ನೆರೆವೇರಿಸುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ. ವಾಮದೇವಪ್ಪ ಪರಿಷತ್ತಿನ ಧ್ವಜಾರೋಹಣ ನೆರೆವೇರಿಸುವರು.ಜಗಳೂರು ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ನಾಡ ಧ್ವಜಾರೋಹಣ ನೆರೆವೇರಿಸುವರು. ನವಚೇತನ ಶಾಲೆಯ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ, ನಾಡಗೀತೆ ಹಾಡುವರು.
ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ತಾಯಿ ಭುವನೇಶ್ವರಿ ಮತ್ತು ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡುವರು.
ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷರಾದ ಲೋಕಮ್ಮ ಜೆ ಸಿ ಓಬಣ್ಣ, ಡಿ.ಡಿ.ಪಿ.ಯು ಕರಿಸಿದ್ದಪ್ಪ ಎಸ್.ಜಿ, ಡಿ.ಡಿ.ಪಿ.ಐ ಕೋಟ್ರೇಶ್.ಜಿ, ಜಗಳೂರು ವೃತ್ತ ನಿರೀಕ್ಷಕರು ಶ್ರೀನಿವಾಸರಾವ್, ತಾಲ್ಲೂಕು ಪಂಚಾಯಿತಿ, ಸಿ.ಇ.ಓ ಕೆಂಚಪ್ಪ, ಜಗಳೂರು ಬಿ.ಇ.ಓ ಹಾಲಮೂರ್ತಿ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಬೀರೇಂದ್ರ ಕುಮಾರ್ ಭಾಗವಹಿಸುವರು. ಮೆರವಣಿಗೆ ತಾಲೂಕು ಕಚೇರಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಬಯಲು ರಂಗಮಂದಿರವರೆಗೆ ತಾಯಿ ಭುವನೇಶ್ವರಿ ಮೆರವಣಿಗೆ ನಡೆಯುತ್ತದೆ.
ಡೊಳ್ಳು ಕುಣಿತ,ಹಗಲುವೇಷ, ಬೊಂಬೆ ಮೇಳ, ಉರುಮೆ, ತಪ್ಪಡಿ, ಕಹಳೆ, ವೀರಗಾಸೆ, ಕರಡಿ ಮಜಲು, ನಂದಿಧ್ವಜ, ಭಜನೆ, ಕೋಲಾಟ, ಎತ್ತಿನಗಾಡಿಗಳ ಮೆರವಣಿಗೆ, ಮಹಿಳೆಯರಿಂದ ಪೂರ್ಣಕುಂಭ, ಇಲಾಖೆಗಳ ಸ್ತಬ್ಧ ಚಿತ್ರಗಳು ಇತ್ಯಾದಿ.
ಬೆಳಿಗ್ಗೆ 11 ಗಂಟೆಗೆ ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸಾಹಿತಿಗಳಾದ ಡಾ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸುವರು. ಜಗಳೂರು ಶಾಸಕರಾದ ಬಿ.ದೇವೆಂದ್ರಪ್ಪ ಅಧ್ಯಕ್ಷತೆ ವಹಿಸುವರು.
ಸಂಸ್ಕøತಿ ಚಿಂತಕರು ಸಾಹಿತಿಗಳಾದ ಡಾ.ಎ.ಬಿ.ರಾಮಚಂದ್ರಪ್ಪ ಸಮ್ಮೇಳನಾಧ್ಯಕ್ಷರಾಗಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ವಾಮದೇವಪ್ಪ ಆಶಯ ನುಡಿಗಳಾನ್ನಾಡುವರು. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಮಹಲಿಂಗರಂಗ ವೇದಿಕೆಯನ್ನು ಉದ್ಘಾಟಿಸುವರು. ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಚಿನ್ನಹಗರಿಯ ನುಡಿ ತೇರು ಸ್ಮರಣ ಸಂಚಿಕೆಯ ಲೋಕಾರ್ಪಣೆ ಮಾಡುವರು. ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಜೆ.ಎಂ ಇಮಾಮ್ ಮಹಾದ್ವಾರವನ್ನು ಉದ್ಘಾಟಿಸುವರು.
ಕ.ಸಾ.ಪ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ವಿದ್ಯಾರತ್ನ ಡಾ.ಟಿ.ತಿಪ್ಪೇಸ್ವಾಮಿ ಸಭಾಂಗಣವನ್ನು ಉದ್ಘಾಟಿಸುವರು. ನಿಕಟ ಪೂರ್ವ ಸಮ್ಮೇಳಧ್ಯಕ್ಷರಾದ ಪ್ರೊ.ಸಿ.ವಿ ಪಾಟೀಲ್ ಕನ್ನಡ ಧ್ವಜ ಹಸ್ತಾಂತರ ಮಾಡುವರು. ಜಗಳೂರು ಕ್ಷೇತ್ರದ ಮಾಜಿ ಶಾಸಕರಾದ ಟಿ.ಗುರುಸಿದ್ದನಗೌಡ, ಎಸ್.ವಿ ರಾಮಚಂದ್ರಪ್ಫ, ಹೆಚ್.ಪಿ.ರಾಜೇಶ್ ಕೃತಿಗಳ ಲೋಕಾರ್ಪಣೆ ಮಾಡುವರು.
ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಪ್ರೊ.ಎಸ್.ಬಿ ರಂಗನಾಥ್ ಪುಸ್ತಕ ಮಳಿಗೆ ಉದ್ಘಾಟಿಸುವರು. ಜಗಳೂರು ಪಟ್ಟಣದ ಅಧ್ಯಕ್ಷರಾದ ಕೆ.ಎಸ್ ನವೀನ್ ಕುಮಾರ್ ಡಾ.ಎಂ.ಜಿ.ಈಶ್ವರಪ್ಪ ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಹೊನ್ನಾಳಿ ಶಾಸಕರಾದ ಡಿ.ಜಿ.ಶಾಂತನಗೌಡ, ಹರಿಹರ ಶಾಸಕರಾಧ ಬಿ.ಪಿ ಹರೀಶ್, ಚನ್ನಗಿರಿ ಶಾಸಕರಾದ ಬಸವರಾಜ ವಿ. ಶಿವಗಂಗ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಅಸಗೋಡು ಜಯಸಿಂಹ, ತಾಂಡ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎನ್ ಜಯದೇವ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್ ನವೀನ್, ನಾ.ರವಿಕುಮಾರ, ಡಿ.ಟಿ.ಶ್ರೀನಿವಾಸ್, ಡಾ.ಚಿದಾನಂದ ಎಂ.ಗೌಡ, ಜಿ.ಸ.ನೌ ಸಂಘದ ಅಧ್ಯಕ್ಷರಾದ ವೀರೇಶ್ ಎಸ್ ಒಡೇನಪುರ, ಜಿಲ್ಲಾ ವರದಿಗಾರರ ಕೂಟ ನಾಗರಾಜ್.ಎಸ್ ಬಡದಾಳ್, ಯುವ ಮುಖಂಡರಾದ ಕೆ.ಪಿ ಪಾಲಯ್ಯ, ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷರಾದ ಮಂಜುನಾಥ ಕುರ್ಕಿ, ತಾ.ಸ.ನೌ ಸಂಘದ ಎ.ಎಲ್ ತಿಪ್ಪೇಸ್ವಾಮಿ, ಕಾರ್ಯಕಾರಿ ಸಮಿಯಿಯ ಅಧ್ಯಕ್ಷರಾದ ಜಿ.ರುದ್ರಯ್ಯ, ಪ್ರಗತಿಪರ ಕೃಷಿಕರು ಕಲ್ಲೇರುದ್ರೇಶ್ ಪಾಲ್ಗೋಳ್ಳುವರು.
ಮಧ್ಯಾಹ್ನ 2 ಗಂಟೆಗೆ ಗೋಷ್ಠಿ-1ರಲ್ಲಿ. ಸಾಹಿತ್ಯ ಮತ್ತು ಸಾಮಾಜಿಕ ನೆಲೆಗಳು, ಮಧ್ಯಾಹ್ನ 3:45 ಕ್ಕೆ ಗೋಷ್ಠಿ -2ರಲ್ಲಿ ಸೌಹಾರ್ದತೆ- ಸಮಾನತೆ-ಸಾಮಾಜಿಕ ನ್ಯಾಯ, ಗೋಷ್ಠಿ-3ರಲ್ಲಿ ಸಂಜೆ 5.30ಕ್ಕೆ ದಾವಣಗೆರೆ ಜಿಲ್ಲೆಯ ಐತಿಹಾಸಿಕ ನೆಲೆಗಳು, ಗೋಷ್ಠಿಗಳು ನಡೆಸಲಾಗುವುದು.
ಸಂಜೆ 6:15 ಗಂಟೆಗೆ ಜಗಳೂರು ತಾಲ್ಲೂಕು ಕಸಾಪ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ ಕಾರ್ಯಕ್ರಮ ಇರುತ್ತದೆ. ನಂತರ ಡಾ. ಶುಭಾ ಮರವಂತೆ, ಗಂಗಾವತಿ ಪ್ರಾಣೇಶ್ ಮತ್ತು ತಂಡದವರಿಂದ ಹಾಸ್ಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯುತ್ತವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ವಿಜಯನಗರ | ನಿಲ್ಲದ ಅಕ್ರಮ ಕಲ್ಲು ಗಣಿಗಾರಿಕೆ ; ಕಣ್ಣುಮುಚ್ಚಿಕುಳಿತ ಅಧಿಕಾರಿಗಳು
-
ದಿನದ ಸುದ್ದಿ5 days ago
ಸಂತೇಬೆನ್ನೂರು | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ವಮಾನವ ದಿನಾಚರಣೆ’
-
ದಿನದ ಸುದ್ದಿ2 days ago
ನಾಳೆಯಿಂದ ಜಗಳೂರಿನಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ
-
ದಿನದ ಸುದ್ದಿ6 hours ago
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಬೈಲಹೊಂಗಲದಲ್ಲಿ ಚಾಲನೆ
-
ದಿನದ ಸುದ್ದಿ6 hours ago
ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ