ದಿನದ ಸುದ್ದಿ
ಅಡ್ಡ ಬಂದ ನಾಯಿ ಉಳಿಸಲು ಹೋಗಿ ಕಾರು ಪಲ್ಟಿ : ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ
ಸುದ್ದಿದಿನಡೆಸ್ಕ್:ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಸಂಬಂಧಿಕರ ಮದುವೆಗೆಂದು ವಿಜಯಪುರಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೀವರ್ಗಿ ಬಳಿ ಕಾರು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಅವರ ಇಬ್ಬರು ಸಹೋದರರು ಸಹ ಸಾವನ್ನಪ್ಪಿದ್ದು, ಮೂವರು ಸಹೋದರರು ಸಾವಿನಲ್ಲೂ ಒಂದಾಗಿದ್ದಾರೆ.
ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಏಕಾಏಕಿ ನಾಯಿ ಅಡ್ಡ ಬಂದಿದ್ದು, ಅದನ್ನು ಉಳಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ.
ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA 04, NC 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಮೂವರು ಸಹೋದರರು ದುರಂತ ಅಂತ್ಯ ಕಂಡಿದ್ದಾರೆ.
ಸಂಜೆ 5.30ರ ಸುಮಾರಿಗೆ ಗೌನಹಳ್ಳಿ ಬಳಿ ಬೀಳಗಿ ಅವರ ಕುಟುಂಬವಿದ್ದ ಇನ್ನೋವಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆಯಿತು. ಇದರಿಂದಾಗಿ ಸ್ಥಳದಲ್ಲೇ ಅವರ ಸಹೋದರ ಸಂಬಂಧಿಗಳಾದ ಶಂಕರ ಬೀಳಗಿ, ಈರಣ್ಣ ಬೀಳಗಿ ಮೃತಪಟ್ಟರು. ಮಹಾಂತೇಶ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.
ರಾಮದುರ್ಗದವರಾದ ಮಹಾಂತೇಶ ಬೀಳಗಿ ಅವರು ಧಾರವಾಡದಲ್ಲಿ ಇಂಗ್ಲಿಷ್ ಟ್ಯೂಷನ್ ಹೇಳುತ್ತಿದ್ದರು. ನಂತರ ಧಾರವಾಡ ಎಸಿಯಾಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗಳನ್ನು ನಿಭಾಯಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243