Connect with us

ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಎಂಬ ದಣಿವರಿಯದ ಜೀವ

Published

on

mallikarjun kharge_suddidina
  • ಜಗದೀಶ್ ಕೊಪ್ಪ

1972 ರಲ್ಲಿ ಗುಲ್ಬರ್ಗಾ ಜಿಲ್ಲೆಯ ಗುರುಮಿಟ್ಕಲ್ ಕ್ಷೇತ್ರದಿಂದ ಕಾಂಗ್ರೇಸ್ ಪಕ್ಷದ ಶಾಸಕನಾಗಿ ವಿಧಾನ ಸಭೆ ಪ್ರವೇಶಿಸುವುದರ ಮೂಲಕ ರಾಜ್ಯ ರಾಜಕಾರಣಕ್ಕೆ ಕಾಲಿಟ್ಟ ಮಲ್ಲಿಕಾರ್ಜುನ ಖರ್ಗೆಯವರು ಐವತ್ತು ವರ್ಷಗಳ ತಮ್ಮ ಸುಧೀರ್ಘ ರಾಜಕಾರಣದಲ್ಲಿ ರಾಜ್ಯ ಹಾಗೂ ಮತ್ತು ಕೇಂದ್ರ ರಾಜಕೀಯದಲ್ಲಿದ್ದುಕೊಂಡು , ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಸುವುದರ ಮೂಲಕ ರಾಷ್ಟ್ರದ ಗಮನ ಸ ಳೆದ ಹಿರಿಯ ಮುತ್ಸದಿ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ.

ಹೈದರಾಬಾದ್ ಕರ್ನಾಟಕದಲ್ಲಿ ಸುದೀರ್ಘ ರಾಜಕಾರಣದಲ್ಲಿದ್ದುಕೊಂಡು ಒಂಬತ್ತು ಬಾರಿ ರಾಜ್ಯ ವಿಧಾನಸಭೆಗೆ ಹಾಗೂ ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗುವುದರ ಮೂಲಕ ಖರ್ಗೆಯವರು ಸೋಲಿಲ್ಲದ ಸರದಾರರಾಗಿ ದಾಖಲೆ ನಿರ್ಮಿಸಿರುವುದು ಸುಲಭದ ಸಂಗತಿಯಲ್ಲ. . ರಾಜಕಾರಣವೆಂದರೆ, ಅಧಿಕಾರವನ್ನು ಅನುಭವಿಸುವುದು ಎನ್ನುವ ಮಾತು ಚಾಲ್ತಿಯಲ್ಲಿರುವ ಈ ಕಾಲಘಟ್ಟದಲ್ಲಿ ಜನರ ಸೇವೆಯನ್ನು ಮತ್ತು ತನ್ನ ಕ್ಷೇತ್ರದ ಅಭಿವೃದ್ಧಿಯನ್ನು ಕಾಯಕವೆಂದು ಭಾವಿಸಿ, ಅದನ್ನು ಒಂದು ತಪಸ್ಸಿನಂತೆ ಧ್ಯಾನಿಸಿದ ಖರ್ಗೆಯ ಕರ್ತೃತ್ವ ಶಕ್ತಿ ನಿಜಕ್ಕೂ ಬೆರಗು ಮೂಡಿಸುವಂತಹದ್ದು.

ಸದಾ ಸುದ್ದಿಜಗತ್ತು ಮತ್ತು ಪ್ರಚಾರದಿಂದ ದೂರವಿರುವ ಮಲ್ಲಿಕಾರ್ಜುನ ಖರ್ಗೆಯವರು ಮೇಲುನೋಟಕ್ಕೆ ತೀರಾ ಗಂಭೀರವಾದ ವ್ಯಕ್ತಿತ್ವದವರು ನಿಜ. ಆದರೆ, ಅಧಿಕಾರದ ಹಪಾಹಪಿತನವಿಲ್ಲದ, ಎಂದಿಗೂ ಗುಂಪುಗಾರಿಕೆಯನ್ನು ಮಾಡದ ಅಥವಾ ತನ್ನ ಜಾತಿಯ ಹಿನ್ನಲೆಯಲ್ಲಿ ಅಧಿಕಾರಕ್ಕಾಗಿ ಲಾಬಿ ಮಾಡದ ಖರ್ಗೆಯವರ ಸ್ವಾಭಿಮಾನದ .ಗುಣಗಳ ಹಿಂದೆ ಅವರ ಅಪಾರ ಓದು, ತಿಳುವಳಿಕೆ, ವಿದ್ವತ್ತು ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಗೌತಮ ಬುದ್ಧನ ಪ್ರಭಾವಗಳಿವೆ. ಅತ್ಯಂತ ಮಾಗಿದ ಹಾಗೂ ಪ್ರಬುದ್ಧ ಚಿಂತನೆಗಳ ವ್ಯಕ್ತಿತ್ವದ ಖರ್ಗೆಯವರ ಬಳಿ ಅರ್ಧ ಗಂಟೆ ಕುಳಿತು ಮಾತನಾಡಿದರೆ ಸಾಕು, ಅವರು ಎಂತಹ ಧೀಮಂತ ರಾಜಕಾರಣಿ ಎಂಬುವುದು ನಮ್ಮ ಅನುಭವಕ್ಕೆ ಬರುತ್ತದೆ.
ಖರ್ಗೆಯವರ ಬಾಲ್ಯದ ಬಡತನ.

ಅವರ ಅವರ ಓದಿನ ಆಕಾಂಕ್ಷೆ ಮತ್ತು ತನ್ನ ಪುತ್ರನನನ್ನು ಓದಿಸಿ ಸಾಹೇಬನನ್ನಾಗಿ ಮಾಡಬೇಕೆಂಬ ಏಕೈಕ ಆಸೆಯಿಂದ ಬೀದರ್ ಜಿಲ್ಲೆಯ ಹಳ್ಳಿಯಿಂದ ಇಟ್ಟಿಗೆ ತಯಾರಿಸುವವರ ಬಳಿ ಕೂಲಿ ಕಾರ್ಮಿಕರಾಗಿದ್ದ ಖರ್ಗೆಯವರ ತಂದೆ ಮಾಪಣ್ಣನವರು ಗುಲ್ಬರ್ಗ ನಗರಕ್ಕೆ ಬಂದು ಅಲ್ಲಿನ ಜವಳಿ ಮಿಲ್ ನಲ್ಲಿ ಕೂಲಿ ಕಾರ್ಮಿಕನಾಗಿ ಸೇರಿಕೊಂಡು ಪುತ್ರನ ಏಳಿಗೆಗಾಗಿ ಇಡೀ ಬದುಕನ್ನು ಗಂಧದ ಕೊರಡಿನಂತೆ ತೇಯ್ದ ಕಥೆ ನಿಜಕ್ಕೂ ಹೃದಯ ಕಲಕುವಂತಹ ಕಥನವಾಗಿದೆ.

ಖರ್ಗೆಯವರ ಬಡವರ ಹಾಗೂ ಹಿಂದುಳಿದವರ ಮೇಲಿನ ಪ್ರೀತಿ ಮತ್ತು ನಿಷ್ಕಳಂಕ ಕಾಳಜಿಯ ಹಿಂದೆ ಅವರ ತಂದೆಯವರ ಪ್ರಭಾವವಿದೆ. ತಾನು ಮತ್ತು ತನ್ನ ಕೃತಿಯಲ್ಲ ತಟ್ಟೆಯಲ್ಲಿ ಕುಳಿತು ಊಟ ಮಾಡುತ್ತಿದ್ದನ್ನು ಹಾಗೂ ತನ್ನನ್ನು ಅಪ್ಪ ಬೆಳಿಗ್ಗೆ ಹೆಗಲ ಮೇಲೆ ಕೂರಿಸಿಕೊಂಡು ಹೋಗಿ ಶಾಲೆಗೆ ಬಿಟ್ಟು, ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಘಟನೆ ಮತ್ತು ಆನಂತರ ಕೂಲಿ ಕೆಲಸ ಮುಗಿಸಿ ಬಂದು ಸಂಜೆ ಶಾಲೆಯಿಂದ ಹೆಗಲ ಮೇಲೆ ಕೂರಿಸಿಕೊಂಡು ಬರುತ್ತಿದ್ದದನ್ನು ಭಾವುಕರಾಗಿ ನೆನೆಯುವಾಗ ಮಲ್ಲಿಕಾರ್ಜುನ ಖರ್ಗೆಯವರ ಕಣ್ಣಾಲಿಗಳು ಒದ್ದೆಯಾಗುತ್ತವೆ.

1972 ರಲ್ಲಿ ಪ್ರಥಮವಾಗಿ ವಿಧಾನ ಸಭೆಗೆ ಶಾಸಕರಾಗಿ ಪ್ರವೇಶ ಮಾಡಿದ ದಿನದಿಂದ ಇಂದಿನವರೆಗೂ ಖರ್ಗೆಯವರು ಶಾಸಕರಾಗಿ, ಸಚಿವರಾಗಿ ಮತ್ತು ಲೋಕಸಭೆಯ ಸದಸ್ಯರಾಗಿ ಮಾಡಿರುವ ಕೆಲಸಗಳನ್ನು ಲೇಖಕರಾದ ಹೆಚ್.ಟಿ. ಪೋತೆಯವರು ಖರ್ಗೆ ಕುರಿತಾದ ಕೃತಿಯಲ್ಲಿ ಸವಿವರಾಗಿ ಅಂಕಿ ಅಂಶಗಳ ಸಮೇತ ದಾಖಲಿಸಿದ್ದಾರೆ. ಜೊತೆಗೆ ಕಳೆದ ಒಂದು ದಶಕದಲ್ಲಿ ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಯಲ್ಲಿ ಅದರಲ್ಲೂ ವಿಶೇಷವಾಗಿ ಗುಲ್ಬರ್ಗಾ ನಗರವನ್ನು ಅವರು ಪರಿವರ್ತಿಸಿರುವ ರೀತಿ ನಿಜಕ್ಕೂ ಬೆರಗು ಮೂಡಿಸುವಂತಹದ್ದು.

ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ಕೇಂದ್ರದಲ್ಲಿ ರೈಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ ಹೈದರಾಬಾದ್ ಕರ್ನಾಟಕಕ್ಕೆ ವಿಸ್ತರಿಸಿದ ರೈಲ್ವೆ ಯೋಜನೆಗಳು, ಅಲ್ಲಿಗೆ ತಂದ ಕಛೇರಿಗಳು ಮತ್ತು ಕಾರ್ಮಿಕ ಸಚಿವರಾಗಿದ್ದ ಸಂದರ್ಭದಲ್ಲಿ ಗುಲ್ಬರ್ಗಾ ನಗರಕ್ಕೆ ಸುಸಜ್ಜಿತ ಇ.ಎಸ್.ಐ. ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜು, ಅವುಗಳ ಭವ್ಯ ಕಟ್ಟಡ, ಬೆಂಗಳೂರು ಮತ್ತು ಹುಬ್ಬಳ್ಳಿ ನಗರಗಳಲ್ಲಿ ಮೇಲ್ದರ್ಜೆಗೆ ಏರಿಸಲ್ಪಟ್ಟ ಆಸ್ಪತ್ರೆಗಳು, ಗುಲ್ಬರ್ಗಾ ನಗರದಲ್ಲಿ ನಿರ್ಮಾಣವಾಗಿರುವ ರಿಂಗ್ ರಸ್ತೆ ಹಾಗೂ ಅಲ್ಲಿನ ವಿಶಾಲವಾದ ಮುಖ್ಯ ರಸ್ತೆಗಳು ಇವೆಲ್ಲವೂ ಖರ್ಗೆಯವರ ಹೆಸರನ್ನು ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತೆ ಮಾಡಿವೆ. ಜೊತೆಗೆ ಹೈದರಾಬಾದ್ ಕರ್ನಾಟಕದ ಹರಿಕಾರನನ್ನಾಗಿ ಮಾಡಿವೆ.

ಗುಲ್ಬರ್ಗಾ ನಗರವನ್ನು ಪ್ರಸಿದ್ಧ ಪ್ರವಾಸಿ ತಾಣ ಮಾಡುವುದಲ್ಲಿ ಖರ್ಗೆಯವರ ಸಾಧನೆ ಅಪ್ರತಿಮವಾದುದು. ಸೇಡಂ ರಸ್ತೆಯಲ್ಲಿ ಗುಲ್ಬರ್ಗಾ ವಿ.ವಿ. ಗೆ ಹೊಂದಿಕೊಂಡಿರುವ ಹದಿನೆಂಟು ಎಕರೆ ವಿಸ್ತಾರವಾದ ಪ್ರದೇಶದಲ್ಲಿ ಸಿದ್ಧಾರ್ಥ ವಿಹಾರ ಎಂಬ ಬುದ್ಧ ದೇಗುಲವನ್ನು ನಿರ್ಮಿಸಿ, ಅದನ್ನು ದಕ್ಷಿಣ ಭಾರತ ಮಾತ್ರವಲ್ಲದೆ, ದಕ್ಷಿಣ ಏಷ್ಯಾದ ಅತ್ಯುತ್ತಮ ಬುದ್ಧ ದೇಗುಲವನ್ನಾಗಿ ಮಾಡಿದ್ದಾರೆ. ಅಲ್ಲಿನ ಪ್ರಶಾಂತ ಮೌನ, ಸ್ವಚ್ಛತೆ ಮತ್ತು ಗಿಡಮರಗಳ ಹಸಿರು, ಎಲ್ಲವೂ ಮನಸ್ಸಿಗೆ ಮುದನೀಡುತ್ತವೆ. ಒಂದು ಸಂಸ್ಥೆ ಅಥವಾ ಒಂದು ಸರ್ಕಾರ ಮಾಡಬಹುದಾದ ಕೆಲಸವನ್ನು ಇಚ್ಛಾ ಶಕ್ತಿ ಇರುವ ಒಬ್ಬ ವ್ಯಕ್ತಿ ಕೂಡ ಮಾಡಬಲ್ಲ ಎಂಬುದನ್ನು ಈ ದೇಗುಲದ ಮೂಲಕ ಮಲ್ಲಿಕಾರ್ಜುನ ಖರ್ಗೆಯವರು ತಮ್ಮೊಳಗಿನ ದೈತ್ಯ ಶಕ್ತಿಯನ್ನು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ.

2017 ರಲ್ಲಿ ನಾನು ಅವರ ಸಿದ್ಧಾರ್ಥ ವಿಹಾರ ಸಂಸ್ಥೆಗಾಗಿ ಡಾ. ಅಂಬೇಡ್ಕರ್ ಅವರ ಬುದ್ಧ ಮತ್ತು ಆತನ ಧಮ್ಮ ಕೃತಿಯನ್ನು ಅನುವಾದಿಸಿಕೊಟ್ಟೆ. ಅವರಿಗೆ ಅನುವಾದ ಹೇಗಿರುತ್ತೋ ಎಂಬ ಆತಂಕವಿತ್ತು. ಹಿಂದಿನ ರಾತ್ರಿ ದೆಹಲಿಯಿಂದ ಗುಲ್ಬರ್ಗಾ ಕ್ಕೆ ಬಂದಿದ್ದ ಖರ್ಗೆಯವರು ರಾತ್ರಿಯಿಡಿ ಕೃತಿಯನ್ನು ಓದಿ ಸಂತೋಷಪಟ್ಟರು. ಬೆಳಗಿನ ಜಾವ ಏಳುಗಂಟೆಗೆ ಸಿದ್ಧಾರ್ಥ ವಿಹಾರದ ಕಚೇರಿಗೆ ಬಂದು ಪಕ್ಕದ ಗುಲ್ಬರ್ಗಾ ವಿ.ವಿ. ಅತಿಥಿ ಗೃಹದಲ್ಲಿ ತಂಗಿದ್ದ ನನ್ನನ್ನು ಕರೆಸಿಕೊಂಡು ಧನ್ಯವಾದ ಹೇಳಿದರು. ಜೊತೆಗೆ ಪ್ರೊ.ಮಲ್ಲೇಪುರಂ ವೆಂಕಟೇಶ್ ನಿಮ್ಮನ್ನು ಆಯ್ಕೆ ಮಾಡಡುವುದರ ಮೂಲಕ ಅಂಬೇಡ್ಕರ್ ಮತ್ತು ಬುದ್ಧ ಇಬ್ಬರಿಗೂ ನ್ಯಾಯ ಒದಗಿಸಿದ್ದಾರೆ ಎಂದು ಅವರ ಬಗ್ಗೆ ಮೆಚ್ಚುಗೆ ಸೂಚಿಸಿದರು.

ಬುದ್ಧನ ಕುರಿತಾಗಿ ಹಾಗೂ ಅಲ್ಲಿನ ದೇಗುಲ ಕುರಿತಾಗಿ ಅವರು ಎಷ್ಟು ಆಳವಾಗಿ ಭಾವನಾತ್ಮಕ ಸಂಬಂಧ ಹೊಂದಿದ್ದಾರೆಂದರೆ, ಬುದ್ಧ ಪೂರ್ಣಿಮೆಯ ದಿನದಂದು ಬೆಳಗಿನ ವೇಳೆ ಅವರೊಂದಿಗೆ ಮಾತನಾಡುತ್ತಾ ದೇಗುಲದ ಆವರಣದಲ್ಲಿ ನಾನು ಸುತ್ತಾಡುತ್ತಿದ್ದೆ. ನೆಲಕ್ಕೆ ಹಾಸಿರುವ ಕಲ್ಲುಚಪ್ಪಡಿಯ ಮೇಲೆ ಬಿದ್ದಿದ್ದ ಒಣಗಿದ ಬೇವಿನ ಮರದ ಎಲೆಗಳನ್ನು ಒಂದೊಂದಾಗಿ ಆಯ್ದು ಅವುಗಳನ್ನು ಕಸದ ಬುಟ್ಟಿಗೆ ಹಾಕುತ್ತಾ ಅವರು ನಡೆಯುತ್ತಿದ್ದರು. ಬೇಸಿಗೆಯಲ್ಲಿ ನಲವತ್ತೈದು ಡಿಗ್ರಿ ಉಷ್ಣಾಂಶ ಇರುವ ಗುಲ್ಬರ್ಗಾ ನಗರದಲ್ಲಿ ಬೌದ್ಧ ವಿಹಾರದ ಬಳಿ ಸೆಕೆ ಅಥವಾ ಬಿಸಿಲು ಎನಿಸುವುದಿಲ್ಲ.ಅಷ್ಟೊಂದು ಬೇವಿನ ಮರಗಳನ್ನು ಅವರು ಮಕ್ಕಳ ಹಾಗೆ ಜೋಪಾನ ಮಾಡಿ ಬೆಳಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರನ್ನು ಹಲವು ವರ್ಷಗಳಿಂದ ಬಹಳ ಆಸಕ್ತಿಯಿಂದ ನಾನು ಗಮನಿಸುತ್ತಾ ಬಂದಿದ್ದೀನಿ. ಅವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಮೋದಿ ಸರ್ಕಾರವನ್ನು ವಿಮರ್ಶೆಗೆ ಒಳಪಡಿಸುವ ರೀತಿಗೆ ಮತ್ತು ಅವರ ವಾಕ್ ಚಾತುರ್ಯಕ್ಕೆ ನಾನು ವಿಸ್ಮಯಗೊಂಡಿದ್ದೇನೆ. ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾದ ನಂತರ, ಲೋಕಸಭೆಯಲ್ಲಿ ಖರ್ಗೆಯವರು ಸರ್ಕಾರದ ಸಾಧನೆಯನ್ನು ಬಣ್ಣಿಸುತ್ತಾ “ ನಿಮ್ಮದು ಚಾರ್ ಆಣೆ ಕಾ ಮುರ್ಗಾ, ಬಾರ್ ಆಣೆ ಕಾ ಮಸಾಲ’ ಎಂಬ ಉರ್ದು ಗಾದೆಯಂತೆ ನಾಲ್ಕಾಣೆ ಕೋಳಿಗೆ ಹನ್ನೆರೆಡಾಣೆ ಮಸಾಲೆ ಅರೆಯುವ ಸರ್ಕಾರ ಎಂದು ಜರಿದಿದ್ದರು.

ವಿಧಾನ ಸಭೆಯಲ್ಲಾಗಲಿ, ಲೋಕಸಭೆಯಲ್ಲಾಗಲಿ ಎಂದಿಗೂ ಅಸಂಸದೀಯ ಪದ ಬಳಕೆ ಮಾಡದ, ತುಟಿ ಮೀರಿ ಮಾತನಾಡದ ಖರ್ಗೆಯವರು ಚರ್ಚೆಗೆ ಮುನ್ನ ನಿಖರವಾದ ಅಂಕಿ ಅಂಶಗಳನ್ನು ಎದುರಿಗೆ ಇಟ್ಟುಕೊಂಡು ವಾದ ಮಂಡಿಸುವ ಪರಿಗೆ ಆಡಳಿತಾ ರೂಡ ಬಿ.ಜೆ.ಪಿ. ಪಕ್ಷದ ಎಲ್ಲಾ ನಾಯಕರಲ್ಲಿ ಖರ್ಗೆಯವರ ಕುರಿತಾಗಿ ಒಂದು ರೀತಿ ನೈತಿಕ ಭಯವಿತ್ತು. ಇದು ಮಾತ್ರವಲ್ಲದೆ ರಾಷ್ಟ್ರ ಮಟ್ಟದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿರುವ ಕಾಂಗ್ರೇಸ್ ಪಕ್ಷಕ್ಕೆ ಖರ್ಗೆಯವರ ನಾಯಕತ್ವ ಮತ್ತು ಅವರ ನಡುವಳಿಕೆ ಹಾಗೂ ಮಾತುಗಾರಿಕೆಯಿಂದ ಒಂದಿಷ್ಟು ಘನತೆ ಮತ್ತು ಮೌಲ್ಯ ಉಳಿದುಕೊಂಡಿದೆ ಎಂದರೆ ತಪ್ಪಾಗಲಾರದು.

ಇಂತಹ ಹಿರಿಯ ಧೀಮಂತ ರಾಜಕಾರಣಿ ಮತ್ತು ರಾಜಕೀಯ ಮುತ್ಸದಿಗೆ ರಾಜ್ಯದ ಮುಖ್ಯಮಂತ್ರಿ ಪದವಿ ಇದುವರೆಗೆ ಏಕೆ ದಕ್ಕಲಿಲ್ಲ ಎಂಬುದು ನಿಜಕ್ಕೂ ಸೋಜಿಗದ ಸಂಗತಿ. ಎಂದಿಗೂ ಕೆಳಮಟ್ಟದ ರಾಜಕಾರಣಕ್ಕೆ ಇಳಿಯಲಾರದ ಅವರ ಘನತೆಯ ರಾಜಕಾರಣ ಇದಕ್ಕೆ ಕಾರಣವಿರಬಹುದು. ಇದನ್ನು ಮನಸ್ಸಿಗೆ ಹಚ್ಚಿಕೊಳ್ಳದೆ ಅವರು ತನ್ನ ನೆಲ ಹಾಗೂ ಜನರ ಪರವಾಗಿ ಅವರು ಸೇವೆ ಸಲ್ಲಿಸುತ್ತಿರುವ ಪರಿ ಅಚ್ಚರಿ ಮೂಡಿಸುತ್ತದೆ. ಇಂದಿಗೂ ಕೂಡ ತಾನು ಹುಟ್ಟಿ ಬೆಳೆದ ಬೀದರ್ ಜಿಲ್ಲೆಯ ಬಾಲ್ಕಿ ತಾಲ್ಲೂಕಿನ ವರವಟ್ಟಿ ಗ್ರಾಮವನ್ನು ಅವರು ಮರೆತಿಲ್ಲ.

ತಾವು ಪ್ರತಿನಿಧಿಸುವ ಲೋಕ ಸಭಾ ಕ್ಷೇತ್ರಕ್ಕೆ ಅದು ಒಳಪಡದಿದ್ದರೂ ಸಹ, ಆ ಗ್ರಾಮವನ್ನು ಅವರು ಅಭಿವೃದ್ಧಿ ಪಡಿಸುರುವ ರೀತಿ ಪ್ರತಿಯೊಬ್ಬ ಜನಪ್ರತಿನಿಧಿಗೆ ಮಾದರಿಯಾಗಿದೆ. ಹೈಸ್ಕೂಲು, ಕಾಲೇಜು, ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯಕೀಯ ಆಸ್ಪತ್ರೆ, ಕೃಷಿ ಸಲಹಾ ಕೇಂದ್ರ, ಕುಡಿಯುವ ನೀರು, ರಸ್ತೆ ಇವೆಲ್ಲವನ್ನು ಒಳಗೊಂಡಿರುವ ವರವಟ್ಟಿ ಗ್ರಾಮದ ಜನತೆ ನಿಜಕ್ಕೂ ಪುಣ್ಯವಂತರು.ಏಕೆಂದರೆ, ಅವರು ಈ ನಾಡಿಗೆ ಒಬ್ಬ ಶ್ರೇಷ್ಠ ಜನಪ್ರತಿನಿಧಿಯನ್ನು ಹಾಗೂ , ಸ್ವಾಭಿಮಾನದ ರಾಜಕೀಯ ನಾಯಕನನ್ನು ನಾಡಿಗೆ ನೀಡಿದ ಕೀರ್ತಿ ಆ ನೆಲಕ್ಕೆ ಸಲ್ಲುತ್ತದೆ.

ಇಂತಹ ಕರ್ನಾಟಕ ಕಂಡ ಅಪರೂಪದ ಪ್ರತಿಭೆ ಇಂದು ಅಖಿಲ ಭಾರತೀಯ ಕಾಂಗ್ರೇಸ್ ಪಕ್ಷದ ಅಧ್ಯಕ್ಷರಾಗಿ ಆತ್ಕೆಯಾಗಿರುವುದು ಪ್ರತಿಯಯೊಬ್ಬ ಕನ್ನಡಿಗನೂ ಹೆಮ್ಮೆ ಪಡುವಂತಹ ವಿಷಯವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending