ದಿನದ ಸುದ್ದಿ
ಅಂಬರೀಶ್ ಅಂದ್ರೆ ಮಂಡ್ಯ, ಮಂಡ್ಯ ಅಂದ್ರೆ ಅಂಬರೀಶ್ : ಅಭಿಮಾನಿಯ ಆಕ್ರೋಶ
ಸುದ್ದಿದಿನ, ಮಂಡ್ಯ : ಲೋಕಸಭಾ ಚುನಾವಣೆ ಇನ್ನೇನು ಹತ್ತಿರ ಬರುತ್ತಿದೆ. ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ಜರುಗುತ್ತಿವೆ. ಅದರಲ್ಲೂ ಮಂಡ್ಯ ಲೋಕಸಭಾ ಕಣದಿಂದ ರೆಬೆಲ್ ಸ್ಟಾರ್ ಅಂಬರೀಶ್ ಅವರ ಮಡದಿ ಸುಮಲತ ಅಂಬರೀಶ್ ಅವರನ್ನು ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಸಜ್ಜಾಗಿದೆ.
ಜೆಡಿಎಸ್ ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ಸುಮಲತಾ ಮಂಡ್ಯದ ಗೌಡ್ತಿ ಅಲ್ಲವೆಂದ ಹೇಳಿಕೆ ನೀಡಿ ಅಂಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಈ ನಡುವೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇ ಗೌಡ ಅವರು ಸುಮಲತ ಅಂಬರೀಶ್ ಮಂಡ್ಯದ ಗೌಡ್ತಿ ಅಲ್ಲ, ಅವರು ಆಂದ್ರಪ್ರದೇಶದವರು ಎಂಬ ಹೇಳಿಕೆಯಿಂದ ಅಂಬಿ ಅಭಿಮಾನಿಗಳು ಸಿಡಿದೆದ್ದಿದ್ದಾರೆ.ಈ ಹಿನ್ನೆಲೆಯಲ್ಲಿ ಅಂಬರೀಶ್ ಅಭಿಮಾನಿ ಸಂಘದ ಮಹಿಳೆಯೊಬ್ಬರು, ‘ಅಂಬರೀಶ್ ಅಂದ್ರೆ ಮಂಡ್ಯ, ಮಂಡ್ಯ ಅಂದ್ರೆ ಅಂಬರೀಶ್’ ಎಂದು ಮಾದ್ಯಮಗಳ ಮುಂದೆ ಹೇಳಿದ್ದಾರೆ.
ಈ ನಡುವೆ ಜೆಡಿಎಸ್ ಅಭ್ಯರ್ಥಿಯಾಗಿ ನಿವೃತ್ತ ಐ ಆರ್ ಎಸ್ (IRS)ಅಧಿಕಾರಿ ಲಕ್ಷ್ಮೀ ಅಶ್ವಿನ್ ಹೆಸರು ಕೇಳಿ ಬರುತ್ತಿದೆ.
ಅಂಬರೀಷ್ ಅಂದ್ರೆ ಮಂಡ್ಯ , ಮಂಡ್ಯ ಅಂದ್ರೆ ಅಂಬರೀಷ್ – ಮಂಡ್ಯದ ಹೆಣ್ಣು #ambareesh #mandya #sumalathaambareesh #tv5kannada
Posted by TV5 Kannada on Wednesday, 6 February 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಹೊಲಿಗೆ, ವೀಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಾಫಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೊಲಿಗೆ ತರಬೇತಿಗೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿ 18 ರಿಂದ 40 ವರ್ಷದೊಳಗಿರಬೇಕು. ವಿಡಿಯೋಗ್ರಾಫಿ ತರಬೇತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣ, ಅನುತ್ತೀರ್ಣರಾಗಿದ್ದು 18 ರಿಂದ 40 ವರ್ಷ ವಯೋಮಾನದವರಾಗಿರಬೇಕು.
ಅರ್ಜಿಯನ್ನು ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 25 ರೊಳಗೆ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08192-237480 ದೂರವಾಣಿಗೆ ಸಂಪರ್ಕಿಸಲು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ ಅಧಿಸೂಚನೆ ರದ್ದು
ಸುದ್ದಿದಿನ,ಚನ್ನಗಿರಿ:ತಾಲ್ಲೂಕಿನಲ್ಲಿ ಖಾಲಿ ಇದ್ದ 16 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 52 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು ಇದನ್ನು ರದ್ದುಪಡಿಸಲಾಗಿದೆ. ಮುಂದೆ ನಡೆಯುವ ನೇಮಕಾತಿ ಬಗ್ಗೆ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ರಾಜಾನಾಯ್ಕ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಅಳವಡಿಕೆ
ಸುದ್ದಿದಿನ,ದಾವಣಗೆರೆ:ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್ಗಳನ್ನು ತೆಗೆದು ಉಚಿತವಾಗಿ ಹೊಸ ಡಿಜಿಟಲ್ ಮೀಟರ್ಗಳನ್ನು ಅಳವಡಿಸಲಾಗುತ್ತಿದ್ದು ಬೆಸ್ಕಾಂ ಗ್ರಾಹಕರ ಬಳಿ ಹಳೆ ಮಾಪಕ ಎಲೆಕ್ಟ್ರೋ ಮೆಕ್ಯಾನಿಲ್ ಬದಲಾಗಿ ಎಲೆಕ್ಟ್ರೋ ಸ್ಟ್ಯಾಟಿಕ್ ಡಿಜಿಟಲ್ ಮಾಪಕ ಅಳವಡಿಸಿಕೊಳ್ಳಲು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರಿ ಜನ್ಮದಿನ ; ದೇಶದೆಲ್ಲೆಡೆ ಸ್ಮರಣೆ
-
ದಿನದ ಸುದ್ದಿ6 days ago
ಬಾಪೂಜಿ ಪ್ರಬಂಧ ಸ್ಪರ್ಧೆ ; ಸಚಿವರಿಂದ ವಿಜೇತರಿಗೆ ನಗದು ಬಹುಮಾನ ವಿತರಣೆ
-
ದಿನದ ಸುದ್ದಿ6 days ago
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ ; 2027 ಕ್ಕೆ ಜನವರಿಯೊಳಗೆ ರೈಲು ಸಂಚಾರಕ್ಕೆ ಕ್ರಮ : ಸಚಿವರಾದ ವಿ.ಸೋಮಣ್ಣ
-
ದಿನದ ಸುದ್ದಿ4 days ago
ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ2 days ago
ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ4 days ago
ಇನ್ನು ನಾಲ್ಕು ದಿನಗಳಲ್ಲಿ ಎರಡು ಕಂತಿನ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ
-
ದಿನದ ಸುದ್ದಿ7 days ago
KEA | ನಾಳೆ ಪಿಎಸ್ಐ ಪರೀಕ್ಷೆ, ದಾವಣಗೆರೆಯಲ್ಲಿ ಸುಗಮ ಪರೀಕ್ಷೆ ನಡೆಸಲು ಕಟ್ಟೆಚ್ಚರ ; ಇಲ್ಲಿದೆ ಸಂಪೂರ್ಣ ಮಾಹಿತಿ, ಮಿಸ್ ಮಾಡ್ದೆ ಓದಿ
-
ದಿನದ ಸುದ್ದಿ4 days ago
ಗ್ರಂಥಾಲಯ ಇಲಾಖೆಯಿಂದ 2021 ರ ಮೊದಲ ಆವೃತಿಯಲ್ಲಿ ಆಯ್ಕೆಯಾದ ಪುಸ್ತಕಗಳ ಪ್ರಕಟ