ದಿನದ ಸುದ್ದಿ

ಅಂಬರೀಶ್ ಅಂದ್ರೆ ಮಂಡ್ಯ, ಮಂಡ್ಯ ಅಂದ್ರೆ ಅಂಬರೀಶ್ : ಅಭಿಮಾನಿ‌ಯ ಆಕ್ರೋಶ

Published

on

ಸುದ್ದಿದಿನ, ಮಂಡ್ಯ : ಲೋಕಸಭಾ ‌ಚುನಾವಣೆ ಇನ್ನೇನು ಹತ್ತಿರ ಬರುತ್ತಿದೆ. ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ಜರುಗುತ್ತಿವೆ. ಅದರಲ್ಲೂ ಮಂಡ್ಯ ಲೋಕಸಭಾ ‌ಕಣದಿಂದ ರೆಬೆಲ್ ಸ್ಟಾರ್ ಅಂಬರೀಶ್ ಅವರ ಮಡದಿ ಸುಮಲತ ಅಂಬರೀಶ್ ಅವರನ್ನು ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಸಜ್ಜಾಗಿದೆ.

ಜೆಡಿಎಸ್ ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ಸುಮಲತಾ ಮಂಡ್ಯದ ಗೌಡ್ತಿ ಅಲ್ಲವೆಂದ ಹೇಳಿಕೆ ನೀಡಿ ಅಂಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಈ ನಡುವೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇ ಗೌಡ ಅವರು ಸುಮಲತ ಅಂಬರೀಶ್ ಮಂಡ್ಯದ ಗೌಡ್ತಿ ಅಲ್ಲ, ಅವರು ಆಂದ್ರಪ್ರದೇಶದವರು ಎಂಬ ಹೇಳಿಕೆಯಿಂದ ಅಂಬಿ ಅಭಿಮಾನಿಗಳು ಸಿಡಿದೆದ್ದಿದ್ದಾರೆ.ಈ ಹಿನ್ನೆಲೆಯಲ್ಲಿ ಅಂಬರೀಶ್ ಅಭಿಮಾನಿ‌‌ ಸಂಘದ ಮಹಿಳೆಯೊಬ್ಬರು, ‘ಅಂಬರೀಶ್ ಅಂದ್ರೆ ಮಂಡ್ಯ, ಮಂಡ್ಯ ಅಂದ್ರೆ ಅಂಬರೀಶ್’ ಎಂದು ಮಾದ್ಯಮಗಳ ಮುಂದೆ ಹೇಳಿದ್ದಾರೆ.

ಈ ನಡುವೆ ಜೆಡಿಎಸ್ ಅಭ್ಯರ್ಥಿಯಾಗಿ ನಿವೃತ್ತ ಐ ಆರ್ ಎಸ್ (IRS)ಅಧಿಕಾರಿ ಲಕ್ಷ್ಮೀ ಅಶ್ವಿನ್ ಹೆಸರು ಕೇಳಿ ಬರುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version