ದಿನದ ಸುದ್ದಿ
ಕರೋನ ಎರಡನೇ ಅಲೆಯ ನಡುವೆಯೂ, ನೀರಿನ ಮಹತ್ವ ಸಾರಲು #SoloCleanUpDrive ಹಮ್ಮಿಕೊಂಡ ಹತ್ತು ವರ್ಷದ ಕನ್ನಡದ ಕಿರಿಯ ಲೇಖಕಿ
ಸುದ್ದಿದಿನ ಡೆಸ್ಕ್ : ವಿಶ್ವ ನೀರಿನ ದಿನಾಚರಣೆ ಅಂಗವಾಗಿ ಬೆಂಗಳೂರಿನ ವಿಬ್ಗಯಾರ್ ಶಾಲೆಯ ಐದನೇ ತರಗತಿಯ ಬಾಲಕಿ ಮಾನ್ಯ, ನೀರಿನ ಮಹತ್ವ ಸಾರಲು ಯಡಯೂರಿನ ಮಾರ್ಕೋನಹಳ್ಳಿ ಜಲಾಶಯದ ಹಿಂಬದಿಯ ಕೆರೆ ( backwaters bed) ಯಲ್ಲಿ , ಸ್ವಯಂ ಪ್ರೇರಿತರಾಗಿ ಕಸ ತೆಗೆದು ಜಾಗವನ್ನು ಸ್ವಚ್ಛ ಗೊಳಿಸುವುದರೊಂದಿಗೆ , ನೀರಿನ ದಿನದ ಮಹತ್ವ ಸಾರಿದಳು.
ಮಾನ್ಯ ತನ್ನ ಎಂಟನೇ ವಯಸ್ಸಿಗೇ ಪ್ರಕೃತಿ ಯ ಬಗ್ಗೆ ಅಪಾರ ಕಾಳಜಿ ಬೆಳಸಿಕೊಂಡಿದ್ದು, ಮಾರ್ಚಿ 22 2018 , ರಲ್ಲಿ ಚಿನ್ನರ ವಾಕಥಾನ್ ಆಯೋಜಿಸುವುದರೊಂದಿಗೆ, 36 ಮಕ್ಕಳು ಮತ್ತು 54 ಪೋಷಕರು ಭಾಗವಹಿಸಿದ ವಾಕಥಾನ್ನಲ್ಲಿ ಯಶಸ್ವಿಯಾಗಿ ಭಾಗವಹಿಸಿದ್ದರು.
2019ರಲ್ಲಿ ಕನ್ನಡದಲ್ಲಿ ನೀರಿನ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕನ್ನಡದಲ್ಲಿ ರಾಪ್ ಹಾಡು ರಚಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. 2020 ರಲ್ಲಿ, “ನೀರಿನ ಪುಟಾಣಿ ಸಂರಕ್ಷಕರು ” ಎಂಬ ಮಕ್ಕಳ ಕನ್ನಡ ಕಾದಂಬರಿ ರಚಿಸುವುದರೊಂದಿಗೆ, ಇಂಡಿಯಾ ಬುಕ್ ಆಫ್ ರೆಕಾರ್ಡ್ ವತಿಯಿಂದ ” ಕನ್ನಡದ ಕಿರಿಯ ಲೇಖಕಿ “ಎಂಬ ಬಿರುದು ನೀಡಿ ಮಾನ್ಯಳನ್ನು ಗೌರವಿಸಲಾಗಿದೆ. ” ಕರ್ನಾಟಕ ಬುಕ್ ಆಫ್ ರೆಕಾರ್ಡ್ “, ” ಎಕ್ಸ್ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ” ವತಿಯಿಂದಲೂ ಈ ಪುಟ್ಟ ಬಾಲಕಿಗೆ ಬಿರುದಿನ ಸನ್ಮಾನ-ಗೌರವ ನೀಡಲಾಗಿದೆ.
2021 ರಲ್ಲಿ, ಕರೋನ ಎರಡನೇ ಅಲೆಯ ನಡುವೆಯೂ ಪ್ರಕೃತಿ ಪ್ರೇಮ ಮೆರೆದು ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಮಾನ್ಯ ಯಶಸ್ವಿಯಾಗಿದ್ದಾಳೆ.
ಬೆಂಗಳೂರಿನ ವಿಬ್ಗಯಾರ್ ಶಾಲೆಯ ಐದನೇ ತರಗತಿಯಲ್ಲಿ ಓದುತ್ತಿರುವ ಮಾನ್ಯ, ಬೆಂಗಳೂರಿನ ಜೆ.ಪಿ. ನಗರ ನಿವಾಸಿಗಳಾದ ಚಿತ್ರ-ಹರ್ಷ ದಂಪತಿಗಳ ಮಗಳಾಗಿದ್ದು, ಪರಿಸರ ಜಾಗೃತಿ ಬಗ್ಗೆ ಆಂಗ್ಲ ಭಾಷೆಯಲ್ಲಿ ಮೂರು ಹಾಗೂ ಕನ್ನಡದಲ್ಲಿ ಎರಡು ಪುಸ್ತಕಗಳನ್ನು ಬರೆದಿದ್ದಾಳೆ.
ಪ್ರಸ್ತುತ ತನ್ನ ಮುಂದಿನ ಕನ್ನಡ-ಆಂಗ್ಲ ಭಾಷೆಯ ಕೃತಿಯ ಮೇಲೆ ಗಮನ ಹರಿಸಿರುವ ಈ ಬಾಲಕಿ, ಈ ಪುಸ್ತಕವೂ ಪ್ರಕೃತಿಯ ಬಗ್ಗೆ ಜಾಗೃತಿ ಮೂಡಿಸುವ ವಿಷಯ ಆಧಾರಿಸಿದ ಕೃತಿ ಆಗಿದೆ.
View this post on Instagram
Dont wait for one, BE A WATER HERO YOURSELF
BE THE CHANGE YOU WISH 2 C#WorldWaterDay #WorldWaterDay2021 #Water2me #ValuingWater #waterday #JalShaktiAbhiyan #MissionPaani #SaveWater #SaveWaterSaveLife #climatechange @UNwatervideos @UNinIndia @MoJSDoWRRDGR @PMOIndia @narendramodi pic.twitter.com/wLUq7URrtw— Manya Harsha ( young Naturist) ( Storyteller) (@Indian82997028) March 21, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ5 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ4 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

