Connect with us

ಅಸಾಮಾನ್ಯಳು

ಗ್ರಾಂಡ್ ಮಾಸ್ಟರ್ ಮಾನ್ಯ ಹರ್ಷ ; ಈಕೆ ಭಾರತದ ಅತ್ಯಂತ ಕಿರಿಯ ಕವನಗಾರ್ತಿ..!

Published

on

  • ಸುದ್ದಿದಿನ ಡೆಸ್ಕ್

ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ನಾನ್ನುಡಿಯಂತೆ, ಒಂಭತ್ತನೇ ವಯಸ್ಸಿಗೇ ಪುಸ್ತಕ ಬರೆದು, ಭಾರತದ ಅತ್ಯಂತ ಕಿರಿಯ ಕವನಗಾರ್ತಿ ಎಂಬ ಬಿರುದಿಗೆ ಪಾತ್ರರಾಗಿದ್ದಾಳೆ ಬೆಂಗಳೂರಿನ ಚಿತ್ರ ಹಾಗೂ ಹರ್ಷ ದಂಪತಿಗಳ ಮುದ್ದಿನ ಮಗಳು ಮಾನ್ಯ ಹರ್ಷ. ಬೆಂಗಳೂರಿನ ವಿಬ್ಗಯಾರ್ ಹೈ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿರುವ ಈಕೆ , ಮೂರು ದಾಖಲೆಗಳ‌ ಒಡತಿ. ಏಷಿಯಾ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ವಜ್ರ ವರ್ಲ್ಡ್ ರೆಕಾರ್ಡ್, ವತಿಯಿಂದ ಮೂರು ಬಿರುದುಗಳು ಈ ಪುಟ್ಟ ಪೋರಿಗೆ ಪ್ರಾಪ್ತ ವಾಗಿದೆ.

ಚಿಕ್ಕ ವಯಸ್ಸಿನಲ್ಲೇ, ಪರಿಸರ ಪ್ರಜ್ಞೆ ಹಾಗೂ ಕಾಳಜಿ ಬೆಳೆಸಿಕೊಂಡಿರುವ ಒಂಬತ್ತರ ಹರೆಯದ ಮಾನ್ಯ ಹರ್ಷ,ಈ ಸಣ್ಣ ವಯಸ್ಸಿನಲ್ಲೇ “ ನೇಚರ್ ಅವರ್ ಫ್ಯೂಚರ್” ಪುಸ್ತಕ ಬರೆದು “ಭಾರತದ ಕಿರಿಯ ಕವನಗಾರ್ತಿ ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾಳೆ.

ಜುಲೈ 5, 2019ರಂದು ಮುದ್ರಣಗೊಂಡ “ನೇಚರ್ ಅವರ್ ಫ್ಯೂಚರ್” ಪುಸ್ತಕ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ ಗಿಟ್ಟಿಸಿಕೊಂಡಿದೆ. 55 ಕವನಗಳನ್ನು ಒಳಗೊಂಡಿರುವ ಈ ಪುಸ್ತಕ, ಚಿನ್ನರಲ್ಲಿ ಪರಿಸರ ಪ್ರಜ್ಞೆ ಮೂಡಿಸಿದೆ. ದೇಶ, ದೇಶ ಪ್ರೇಮ,ಸೈನಿಕರ‌ ತ್ಯಾಗ-ಬಲಿದಾನ, ಪ್ರಕೃತಿ, ಪರಿಸರ‌, ಹೆಣ್ಣಿನ ಮಹತ್ವದ ಬಗ್ಗೆ ಕವನಗಳನ್ನು ಒಳಗೊಂಡಿರುವ ಈ ಪುಸ್ತಕ ದಾಖಲೆ ಸೃಷ್ಟಿಸಿದೆ.

  1. ವಜ್ರ ವರ್ಲ್ಡ್ ರೆಕಾರ್ಡ್ ವತಿಯಿಂದ ಈ ಪುಸ್ತಕ ಬರೆದ ಮಾನ್ಯ ಹರ್ಷ “ಭಾರತದ  ಅತ್ಯಂತ ಕಿರಿಯ ಕವನಗಾರ್ತಿ” ಎಂಬ ಬಿರುದು ನೀಡಿ ಸನ್ಮಾನಿಸಲಾಗಿದೆ.
  2. ಏಷಿಯಾ ಬುಕ್ ಆಫ್ ರೆಕಾರ್ಡ್ಸ್  ವತಿಯಿಂದ, “ಗ್ರಾಂಡ್ ಮಾಸ್ಟರ್” ಬಿರುದು , ಪಾರಿತೋಷಕ ನೀಡಿ ಗೌರವಿಸಲಾಗಿದೆ.
  3. ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ವತಿಯಿಂದ” ಪರಿಸರ ಕುರಿತ ಕವನಗಳು ರಚಿಸಿದ  ಅತ್ಯಂತ ಕಿರಿಯ ಕವನಗಾರ್ತಿ ಎಂಬ ಬಿರುದು, ಪಾರಿತೋಷಕ, ಮೆಡಲ್ ನೀಡಿ ಗೌರವಿಸಲಾಗಿದೆ.

ಸಣ್ಣ ವಯಸ್ಸಿನಲ್ಲೇ ಬರೆಯುವ ಗೀಳು ಅಂಟಿಸಿಕೊಂಡ ಮಾನ್ಯ, ಆರನೇ ವಯಸ್ಸಿಗೇ ಹಲವಾರು ಕವನಗಳನ್ನು ರಚಿಸತೊಡಗಿದಳು. ಇದನ್ನು ಕಂಡ ಆಕೆಯ ಶಾಲಾ ಶಿಕ್ಷಕರು, ಈ ಪುಟ್ಟ ಕವನಗಾರ್ತೀಯ ಬರೆಯುವ ಹವ್ಯಾಸವನ್ನು ಮತ್ತಷ್ಟು ಪ್ರೋತ್ಸಾಹಿಸಿದರು.

2018ರ ಕಿಡ್ಸ್ ವರ್ಲ್ಡ್ ಅಂತಾರಾಷ್ಟ್ರೀಯ ಸಣ್ಣ ಕಥೆಗಳ ಪ್ರಶಸ್ತಿಗೂ ಮಾನ್ಯ ಪಾತ್ರರಾಗಿದ್ದಾಳೆ. ಈಕೆ ರಚಿಸಿದ,” ಥಾಂಕ್ಸ್ ಗಿವಿಂಗ್” ಸಣ್ಣ ಕಥೆಯು ಭಾರೀ ಪ್ರಶಂಸೆಗೆ ಒಳಪಟ್ಟಿದೆ.

ಮೂರು ವರ್ಷಗಳ,  ಪುಸ್ತಕ ಮುದ್ರಿಸುವ,  ಈಕೆಯ ಕನಸು ಈಗ ನನಸಾಗಿದೆ. “ನೇಚರ್ ಅವರ್ ಫ್ಯೂಚರ್” ಪುಸ್ತಕ ಮಾನ್ಯಾಳ ಪರಿಸರ ಪ್ರಜ್ಞೆ ಹಾಗೂ ಕಾಳಜಿ ಗೆ ಕನ್ನಡಿ ಹಿಡಿದಂತಿದೆ.ಮಾರ್ಚ್ 22,2018 ರೈ ವಿಶ್ವ ಜಲ ಸಂರಕ್ಷಣಾ ದಿನಾಚರಣೆ ಅಂಗವಾಗಿ , ಚಿನ್ನದ ವಾಕಥಾನ್ ಆಯೋಜಿಸಿದ್ದ ಈ ಪೋರಿ, ಸ್ನೇಹಿತರೊಂದಿಗೆ”ನೀರು ಉಳಿಸಿ” ಆಂದೋಲನ  ನಡೆಸಿದ್ದಳು.

ಅಂತೆಯೇ,ಜೆ.ಪಿ.ನಗರದ ಪುಟ್ಟೇನಹಳ್ಳಿ ಕೆರೆಗೆ ಕಾಲ್ನಡಿಗೆಯಲ್ಲಿ ತೆರಳಿ, ಗಿಡಗಳನ್ನು ನೆಟ್ಟು ಪರಿಸರ ಪ್ರಜ್ಞೆ ಮೂಡಿಸದಳು ಮಾನ್ಯ ಹರ್ಷ. ಕಲೆ, ಕ್ರೀಡೆ ಯಲ್ಲಿ ವಿಶೇಷ ಆಸಕ್ತಿ ಹೊಂದಿರುವ ಮಾನ್ಯ,ಹಾಡು, ಕುಣಿತ,ಈಜುಗಾರಿಕೆಯಲ್ಲಿ ಹಲವಾರು ಪ್ರಶಸ್ತಿ ಗೌರವಗಳನ್ನು ಪಡೆದಿದ್ದಾಳೆ. ಕರಾಟೆ ಹಾಗೂ ಟೆಕ್ವಾಂಡೋ ವಿದ್ಯೆ ರೂಢಿಸಿಕೊಂಡಿರುವ ಮಾನ್ಯ ಕಲೆ-ಸಾಹಿತ್ಯ-ಕ್ರೀಡೆಗಳಲ್ಲಿ ಮುಂಚೂಣಿಯಲ್ಲಿದ್ದಾಳೆ.

ಇಷ್ಪಕ್ಕೇ ನಿಲ್ಲದೆ ಮಾನ್ಯಾಳ ಪುಸ್ತಕ ಪ್ರೀತಿ, ಈಗ ಈಕೆ ಕನ್ನಡದಲ್ಲಿ ರಚಿಸಿರುವ ಕವನ ಹಾಗೂ ಕಥೆಗಳ ಗುಚ್ಛವನ್ನು ಮುದ್ರಿಸುವ ತವಕದಲ್ಲಿದ್ದಾಳೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಸಾಮಾನ್ಯಳು

ಭಾರತದ ಕಿರಿಯ ಲೇಖಕಿ ‘ಮಾನ್ಯ ಹರ್ಷ’..!

Published

on

ಮಾನ್ಯ ಹರ್ಷ

ತ್ತು ವರ್ಷದ ಈ ಪುಟ್ಟ ಲೇಖಕಿ ಮಾನ್ಯ ಹರ್ಷ ಗೆ ಓದುವುದು ಬರೆಯುವುದು ಎಂದರೆ ತುಂಬಾ ಇಷ್ಟವಂತೆ. ಬೆಂಗಳೂರಿನ ಚಿತ್ರ ಮತ್ತು ಹರ್ಷ ದಂಪತಿಗಳ ಮಗಳಾದ ಮಾನ್ಯ ಹತ್ತು ವರ್ಷಕ್ಕೆ ಕನ್ನಡದಲ್ಲಿ ಪುಸ್ತಕ ಬರೆದು ಕನ್ನಡದ ಕಿರಿಯ ಲೇಖಕಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ.

ಈಕೆ ಬರೆದಿರುವ “ ನೀರಿನ ಪುಟಾಣಿ ಸಂರಕ್ಷಕರು ” ಮಕ್ಕಳ ಕಾದಂಬರಿಗೆ , ಇಂಡಿಯಾ ಬುಕ್ ಆಫ್ ರೆಕಾರ್ಡ್ ವತಿಯಿಂದ ” ಕನ್ನಡದಲ್ಲಿ ಪುಸ್ತಕ ಬರೆದಿರುವ ಕಿರಿಯ ಲೇಖಕಿ “ ಎಂಬ ಬಿರುದಿಗೆ ಪಾತ್ರಳಾಗಿದ್ದಾಳೆ ಮಾನ್ಯ.

ಬೆಂಗಳೂರಿನ ಬಿ.ಟಿ.ಎಮ್ ಬಡಾವಣೆ ಯ ವಿಬ್ಗಯಾರ್ ಶಾಲೆಯ ಐದನೇ ತರಗತಿಯಲ್ಲಿ ಓದುತ್ತಿರುವುದು ಮಾನ್ಯ ತಾನು ಅಪ್ಪಟ ಕನ್ನಡತಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾಳೆ. ಚಿಕ್ಕ ವಯಸ್ಸಿನಲ್ಲೇ ಸಾಹಿತ್ಯ ಆಸಕ್ತಿ ಯನ್ನು ಬೆಳಸಿಕೊಂಡಿರುವ ಮಾನ್ಯ, ತನ್ನ ಅಜ್ಜಿಯ ಬಾಯಿಂದ ಕನ್ನಡ ಕಥೆ-ಕವನಗಳನ್ನು ಕೇಳಿ ಬೆಳೆದ ಹುಡುಗಿ. ಕನ್ನಡದಲ್ಲಿ ಪುಸ್ತಕ ಬರೆಯಲು ನನ್ನ ಅಜ್ಜಿಯೇ ನನಗೆ ಸ್ಫೂರ್ತಿ ಎನ್ನುತ್ತಾಳೆ ಮಾನ್ಯ.

ಈಗಾಗಲೇ ” ನೇಚರ್ ಅವರ್ ಫ್ಯೂಚರ್” ಪುಸ್ತಕ ಬರೆದು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಐದು ರೆಕಾರ್ಡ್ ಬುಕ್ಗಳಲ್ಲಿ ಹೆಸರು ಮಾಡಿರುವ ಈ ಪುಟ್ಟ ಲೇಖಕಿ, ವಜ್ರ ಬುಕ್ ಆಫ್ ರೆಕಾರ್ಡ್ ವತಿಯಿಂದ ” ಭಾರತದ ಕಿರಿಯ ಕವಿಯಿತ್ರಿ” ಎಂಬ ಬಿರುದನ್ನೂ ಮುಡಿಗೇರಿಸಿಕೊಂಡಿದ್ದಾಳೆ.

ನೀರಿನ ಪುಟಾಣಿ ಸಂರಕ್ಷಕರು” ಈಕೆಯ ಎರಡನೆಯ ಪುಸ್ತಕವಾಗಿದ್ದು , ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲೂ ಬರೆದಿದ್ದಾಳೆ.
ಆಂಗ್ಲ ಅವತರಣಿಕೆ ” ದಿ ವಾಟರ್ ಹೀರೋಸ್” ಮತ್ತು ಕನ್ನಡದಲ್ಲಿ ” ನೀರಿನ ಪುಟಾಣಿ ಸಂರಕ್ಷಕರು ” ಹೆಸರಲ್ಲಿ ರಚಿತವಾಗಿರುವ ಈ ಪುಸ್ತಕ ಸದ್ಯ ಕಾಡುತ್ತಿರುವ ನೀರಿನ ಕೊರತೆ ಮತ್ತು ಇದರ ಸಂರಕ್ಷಣೆಯ ತೀವ್ರತೆಯ ಮೇಲೆ ಬೆಳಕು ಚೆಲ್ಲುತ್ತದೆ.

ಈ ಪುಸ್ತಕ ಮಾರ್ಚ್ 22 ಕ್ಕೆ , ವಿಶ್ವ ಜಲ ದಿನದಂದು ಬಿಡುಗಡೆ ಆಗಬೇಕಿತ್ತು. ಆದ್ರೆ ವಿಶ್ವವನ್ನು ಕಾಡುತ್ತಿರುವ ಕರೋನ ಕಾಟದಿಂದಾಗಿ ಪುಸ್ತಕ ಬಿಡುಗಡೆ ತುಂಬಾ ಕಷ್ಟ ಆಯ್ತು. ಲಾಕ್ಡೌನ್ ನಡುವೆಯೂ ಪುಸ್ತಕವನ್ನು ಆನ್ಲೈನ್ ನಲ್ಲೇ ಬಿಡುಗಡೆ ಮಾಡಿದೆವು ಎಂದು ತಮ್ಮ ಅಳಲು ವ್ಯಕ್ತ ಪಡಿಸಿದರು.

ಪುಟ್ಟ ಲೇಖಕಿಯು, ದೈನಂದಿನ ಜೀವನದ ಸರಳ ನಿದರ್ಶನಗಳ ಮೂಲಕ ನೀರಿನ ಸಮಸ್ಯೆ ಯನ್ನು ಸ್ವಾರಸ್ಯಕರವಾಗಿ ನಿರೂಪಿಸಲು ಪ್ರಯತ್ನಿಸಿದ್ದಾರೆ.

ನೀರನ್ನು ಉಳಿಸಲು ಪ್ರತಿಯೊಬ್ಬರೂ ಅನುಸರಿಸಬೇಕಾದ ಅತ್ಯಂತ ಸರಳ ಮತ್ತು ಸುಲಭ ನಿಯಮಗಳನ್ನು ಈ ಪುಸ್ತಕ ಒಳಗೊಂಡಿದೆ.

ಇಂದಿನ ಮಕ್ಕಳೇ ನಾಳೆಯ ಪ್ರಜೆಗಳು. ಚಿಕ್ಕ ವಯಸ್ಸಿನಲ್ಲೇ ಪ್ರಕೃತಿಯ ಬಗೆಗಿನ ಜವಾಬ್ದಾರಿ ಅರಿತ ಮಕ್ಕಳು ಹೇಗೆ ತಮ್ಮ ಪುಟ್ಟ ಕೈಗಳಿಂದ ದೊಡ್ಡ ಕೆಲಸ ಮಾಡಿ ತೋರಿಸುತ್ತಾರೆ ಎಂಬುದರ ಕಥಾಸಂಗಮವೇ ” ” ಪುಟಾಣಿ ಸಂರಕ್ಷಕರು ” .

ನೀರು ಪ್ರಕೃತಿಯ ಅಮೂಲ್ಯ ದ್ರವವಾಗಿದೆ. ನೀರು ಇಲ್ಲದೆ ಜೀವನವು ಅಸ್ತಿತ್ವದಲ್ಲಿಲ್ಲ. 3/4 ನೇ ಭಾಗದಷ್ಟು ಭೂಮಿಯ ಮೇಲ್ಮೈ ಜಲಮೂಲಗಳಿಂದ ಆವರಿಸಿದ್ದರೂ, ಈ ನೀರಿನ 97 ಪ್ರತಿಶತ ಉಪ್ಪು ನೀರಿನ ರೂಪದಲ್ಲಿ ಸಾಗರಗಳಲ್ಲಿದೆ, ಮತ್ತು ಮಾನವ ಬಳಕೆಗೆ ಅನರ್ಹವಾಗಿದೆ.

ಕೇವಲ 2.7% ಮಾತ್ರ ಶುದ್ದ ನೀರು ಇದ್ದು ಭ ಇದರಲ್ಲಿ ಸುಮಾರು 70% ರಷ್ಟು ನೀರು
ಹಿಮನದಿಗಳಾಗಿವೆ. ಅದರಲ್ಲಿ ಕೇವಲ 1% ಶುದ್ಧ ನೀರು ಲಭ್ಯವಿದ್ದು ಮಾನವ ಬಳಕೆಗೆ ಯೋಗ್ಯವಾಗಿದೆ. ಆದ್ದರಿಂದ ಈ ಅಮೂಲ್ಯವಾದ ಸಂಪನ್ಮೂಲವನ್ನು ಸಂರಕ್ಷಿಸುವುದು ಬಹಳ ಮುಖ್ಯ ಎಂದು ಸಾರಿ ಹೇಳುತ್ತಿದ್ದಾರೆ ಈ ಪುಟ್ಟ ಲೇಖಕಿ. ಈ ಪುಸ್ತಕವು ಪ್ರಕೃತಿ ತಾಯಿಗೆ ಅರ್ಪಿತವಾಗಿವೆ.

ವಿಶ್ವ ಜಲ ದಿನಾಚರಣೆ, ಮಾರ್ಚ್ 22, 2018 ರಂದು, ಮಾನ್ಯ , 38 ಮಕ್ಕಳು ಮತ್ತು 36 ಪೋಷಕರೊಂದಿಗೆ ನೀರು ಉಳಿಸಿ ಮೆರವಣಿಗೆ ಜಾತಾ ಹಮ್ಮಿಕೊಂಡಿದ್ದಳು. ದೊರೆಸಾನಿ ಅರಣ್ಯ ಪ್ರದೇಶ ದಿಂದ ಪ್ರಾರಂಭವಾದ ಜಾತಾ ಪುಟ್ಟನ್‌ಹಳ್ಳಿ ಕೆರೆ ಯಲ್ಲಿ ಸಸಿಗಳನ್ನು ನೆಡುವ ಮೂಲಕ ಕೊನೆಗೊಂಡಿತು. ಮಕ್ಕಳು ನೀರನ್ನು ಉಳಿಸುವ ವಾಗ್ದಾನ ಮಾಡಿದರು ಮತ್ತು ನೀರು ಸಂರಕ್ಷಣೆ ಬಗ್ಗೆ ಸ್ಥಳೀಯರಲ್ಲಿ ಜಾಗೃತಿ ಮೂಡಿಸಿದರು.

ಮನ್ಯಾ ಕನ್ನಡದಲ್ಲಿ ರಾಪ್ ಹಾಡನ್ನು ಬರೆದು ಹಾಡಿದ್ದಾರೆ. ಪ್ರಕೃತಿಯ ಸಂರಕ್ಷಣೆ ಬಗೆಗಿನ ಈ ರಾಪ್ ಸಂಗ ಸಾಮಾಜಿಕ ಮಾಧ್ಯಮ ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವಿಬ್ಗಿಯರ್ ಬಿಟಿಎಂ ಶಾಲೆಯ ವಿದ್ಯಾರ್ಥಿಗಳು ಹಾಡಿದ ಸ್ಟ್ರೈಕ್ ಆಫ್ ಪ್ಲಾಸ್ಟಿಕ್ ಗೀತೆಯ ಸಾಹಿತ್ಯವನ್ನೂ ಮಾನ್ಯಾ ಬರೆದಿದ್ದಾರೆ. ಇದೇ ಶಾಲೆಯ ಮ್ಯೂಸಿಕ್ ಸರ್ ಈ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದು , ದೊಡ್ಡ ಹಿಟ್ ಆಗಿದೆ.

ಭಾರತ ಕೇಂದ್ರ ಸರಕಾರ ಹಮ್ಮಿಕೊಂಡಿದ್ದ #WaterHeroes ಸ್ಪರ್ಧೆ ಯಲ್ಲಿ ಕೂಡ ಮಾನ್ಯಳ ನೀರಿನ ಹೋರಾಟ ಮತ್ತು ಕಳಕಳಿ ಗೆ ಪ್ರಶಸ್ತಿ ಬಂದಿದೆ.

UN -Water ನ ಫೇಸ್ ಬುಕ್ ಖಾತೆಯಲ್ಲಿ ಈ ಪುಟ್ಟ ಬಾಲೆಯ ನೀರಿನ ಹೋರಾಟ ಹಾಗೂ ನೀರಿನ ಸಂರಕ್ಷಣೆ ಕಳಕಳಿ ಬಗ್ಗೆ ಹಂಚಿಕೊಳ್ಳಲಾಗಿದೆ.

ಈ ಕಿರಿಯ ಕವಿಯಿತ್ರಿಯ ಕಿವಿಮಾತು

ನೀವು ಉಪದೇಶ ಮಾಡುವ ಮೊದಲು ಸ್ವಯಂ
ಅಭ್ಯಾಸ ಮಾಡಿ”.

ಅಪ್ರತಿಮ ಪ್ರತಿಭೆಯ ಈ ಪುಟ್ಟ ಬಾಲೆ ಹೆಚ್ಚು ಹೆಚ್ಚು ಪ್ರಶಸ್ತಿಗಳನ್ನು ಮುಡಿಗೇರಿಸಲಿ. ಮತ್ತಷ್ಟು
ಯಶಸ್ಸ ಈಕೆಯದಾಗಲಿ ಎಂದು ಹಾರೈಸೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಸಾಮಾನ್ಯಳು

ಅರ್ಪಣ ‘ಆರಾಧನ’ಕ್ಕೆ 10ನೇ ವಾರ್ಷಿಕೋತ್ಸವದ ಸಂಭ್ರಮ.!

Published

on

  • ಇದೇ ಆಗಸ್ಟ್ 11 ಆರಾಧನ ಟ್ರಸ್ಟ್ ನ 10 ನೇ ವಾರ್ಷಿಕೋತ್ಸವದ ದಿನ ಈ ಎಲ್ಲಾ ಮಹಿಳೆಯರು ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಇನ್ನೂ ಮಹಿಳೆಯರ ಈ ಆಸಕ್ತಿಯನ್ನು ಮನಗಂಡ ಅಪರ್ಣರವರು ಸದ್ಯ ಹನುಮಂತನಗರದಲ್ಲಿ ತಮ್ಮ‌ ನೃತ್ಯ ಶಾಲೆಯ ಇನ್ನೊಂದು ಶಾಖೆಯನ್ನು ತೆರೆದಿದ್ದಾರೆ. ಆ ಮೂಲಕ ‌ಕಲೆ ಮತ್ತು ಕಲಾಸಕ್ತರನ್ನು ಒಂದು ಗೂಡಿಸುವ ಪ್ರಯತ್ನ ಮಾಡ್ತಿದ್ದಾರೆ.

ಲ್ಲರೊಳಗೊಂದು ಕಲೆ ಇರುತ್ತದೆ, ಕಾಲೇಜು ದಿನಗಳು ಮುಗಿದ ನಂತರ ಕೆಲಸ, ಆ ಒಂದು ಅನಿವಾರ್ಯತೆ ಅದನ್ನು ನನ್ನಿಂದ ದೂರ ಮಾಡಿಬಿಡುತ್ತೆ, ಕೆಲವರು ಅದೆಲ್ಲವನ್ನೂ ಮೀರಿ ತಮ್ಮ ಪ್ರತಿಭೆಯನ್ನ ಉಳಿಸಿಕೊಂಡು ಹೋಗುತ್ತಾರೆ, ಕೆಲವರು
ಅದನ್ನು ಮರೆತು ಬಿಡುತ್ತಾರೆ, ಆದ್ರೆ ನಿಜವಾಗಲೂ ಅದರ ಪ್ರೀತಿ ಇರುವವರು ಅದರಲ್ಲಿ ಬದುಕನ್ನು ಕಂಡುಕೊಳ್ಳುತ್ತಾರೆ. ಅಪರ್ಣಾ ಆನಂದ್ ಉತ್ತಮ ಉದಾಹರಣೆ.

ಹಾಡುಗಾರಿಕೆ ಅದು ಆತ್ಮ ತೃಪ್ತಿ

ನಾವು ಮಾಡೋ ಕೆಲಸ ಬಗ್ಗೆ ನಮಗೆ ಆತ್ಮ ತೃಪ್ತಿ ಇದ್ದಾಗಷ್ಟೇ ಅಲ್ಲ… ಯಶಸ್ಸು ಸಾಧಿಸೋದಕ್ಕೆ ಸಾಧ್ಯ. ಇದನ್ನು ಅರಿತುಕೊಂಡಅಪರ್ಣಾ ತಮಗೆ ಆತ್ಮ ಸೃಷ್ಟಿ ನೀಡುವ ಹಾಡುಗಾರಿಕೆ ಮತ್ತು ನೃತ್ಯ ಸೇವೆಯಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ, ಇವತ್ತಿನ ಸಮುದಾಯ ಡಿಗ್ರಿ ಮುಗಿಸುತ್ತಲೇ ಸಂಬಳದ ಕಡೆಗೆ ಜಾರುತ್ತಾರೆ, ಆದಕ್ಕಾಗಿಯೇ ಸಾಕಷ್ಟು ಕೋರ್ಸ್ ಗಳನ್ನು ಮಾಡಿಕೊಂಡು ಮುಂದುವರೆಯುತ್ತಾರೆ, ಈ ಹಂತದಲ್ಲೇ ತಮ್ಮೊಳಗಿರುವ ಒಬ್ಬ ಹಾಡುಗಾರ , ನೃತ್ಯ, ಕ್ರೀಡಾ ಪಟು ವನ್ನು ಕಳೆದುಕೊಳ್ಳುತ್ತಾರೆ, ಆದ್ರೆ
ಆ ಅವರ ಹಾದಿ ಮಾತ್ರ ಭಿನ್ನ.

ಬಾಲ್ಯ ಬರೆದಿತ್ತು ಡೆಸ್ಟಿನಿ

ಹಾಡು ಮತ್ತು ನೃತ್ಯವನ್ನು ಜೀವವೆಂದುಕೊಂಡಿದ್ಮ ಹುಡುಗಿ ಅಪರ್ಣ, ಅದಕ್ಕಾಗಿ ಯನ್ನು 5ನೇ ವಯಸ್ಸಿನಲ್ಲಿಯೇ ಹಾಡುಗಾರಿಕೆ ಆರಂಭಿಸಿದರು. 7ನೇ ತರಗತಿ ಯಲ್ಲಿದ್ದಾಗ ಮೊದಲ ಬಾರಿಗೆ ವೇದಿಕೆ ಹತ್ತಿದರು. ಆ ನಂತರ ನೃತ್ಯವನ್ನು ಜೊತೆಜೊತೆಯಲೆ ಅಭ್ಯಾಸ ಮಾಡಿದರು. ಮೂಲತಃ ಮೈಸೂರಿನವರಾದ ಅಪರ್ಣಾ ಅವರ ಕಲೆಗೆ ಕಾಲೇಜಿನಲ್ಲೂ ಒಳ್ಳೆಯ ಪ್ರೋತ್ಸಾಹ ಸಿಕ್ಕಿತು. ಕಾಲೇಜು ದಿನಗಳಲ್ಲಿ, ಸಿ್ಖಕ್ಕ ಈ ಪ್ರೋತ್ಸಾಹಕ್ಕೆ, ಭರತನಾಟ್ಯದಲ್ಲೇ ಎಂ.ಎ ಮುಗಿಸಿದರು. ಈ ಹಂತದಲ್ಲಿ ಸಾಕಷ್ಟು ಸಂಗೀತ ಮತ್ತು ನೃತ್ಯ
ಕಛೇರಿಯನ್ನು ನೀಡುತ್ತಿದ್ದರು. ತಾವು ಸಿರೀಕ್ಷಿಸದಷ್ಟು ಸಂಭಾವನೆ ಸಿಗದಿದ್ದರೂ ಕೆಡಿಸಿಕೊಳ್ಳದಿದರೂ, ಆ ಹಣ ಕೀರ್ತಿ ಗೌರವ ಅವರನ್ನು ಹಿಂಬಾಲಿಸಿತು.

ಆರಾಧನ

ಆರಾಧನದ ಆರಾಧನೆ

ತಮ್ಮ ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಬಂದ ಅಪರ್ಣ ಎದೆ ತುಂಬಿ ಹಾಡುವೆನು ಸ್ಪರ್ಧೆಯಲ್ಲಿ ಹೆಸರುಗಳಿಸಿದರು. ನಂತರ
ಬೆಂಗಳೂರಿನಲ್ಲಿಯೇ ತಮ್ಮ ಪತಿ ಆನಂದ್ ಜೊತೆಗೆ ನೆಲೆ ನಿಂತ ಅಪರ್ಣಾ ಗೆ ಸುಮ್ಮನೆ ಮನೆಯಲ್ಲಿ ಕೂರುವುದು ಇಷ್ಟವಿರಲಿಲ್ಲ. ಬದುಕಿನ ಎಲ್ಲ ಹಂತದಂತೆ ಮದುವೆ, ಮಗುವಿನ ಜೊತೆ ಕಲೆಯನ್ನು ಆರಾಧಿಸೋ ತವಕ ಮುಂದುವರೆದಿತ್ತು. ಇದೇ ಇಚ್ಚಾಶಕ್ತಿಯನ್ನು ಪ್ರಭಲವಾಗಿಸಿಕೊಂಡು ತಾವು ನೆಲೆಸಿದ್ದ ಮನೆಯಲ್ಲೇ ಆರಾಧನಾ ಫರ್ಫಾರ್ಮಿಂಗ್ ಸ್ಕೂಲ್ ಆರಂಭಿಸಿದರು. ಮೊದಲು ಸಣ್ಣ ಮಟ್ಟದಲ್ಲೇ ಬೆಳೆದ ಸಂಸ್ಥೆ ಇಂದು ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದೆ.

ಗುರು ಶಿಷ್ಯ ಪರಂಪರೆಯ ರಾಯಭಾರಿ

ತಾವು ಗುರು ಶಿಷ್ಯ ಪರಂಪರೆಯಲ್ಲಿ ಕಲಿತಿದ್ದ ಅಪರ್ಣಾ ಆದನ್ನೆ ತಮ್ಮ ಕಲಾಸೇವೆಗೆ ಮೀಸಲಿಟ್ಟರು. ಇಂದಿನ ಯುವ ಜನತೆಗೆ ಕಲೆಯ ಪರಿಚಯ ಸ್ಟೇಜ್, ಕೋ ಆರ್ಡಿನೇಷನ್, ಥಿಯೇಟರ್, ಪರ್ಫಾಮೆನ್ಸ್ ಬಗ್ಗೆ ಹೆಚ್ಚು ಜ್ಞಾನ ನೀಡುವುದು ಮುಖ್ಯ ಉದ್ಮಶವಾಗಿತ್ತು. ಆ
ಹಿನ್ನೆಲೆಯಲ್ಲಿ ಆರಂಭವಾದ ಅರಾಧನಾ ಇಂದು 30 ಜನ ವಿದ್ಯಾರ್ಥಿಗಳನ್ನು ಒಳಗೊಂಡಿದೆ. ಇಲ್ಲಿ ಬರಲು ಯಾವುದೇ ವಯಸ್ಸಿನ ಮಿತಿ ಇಲ್ಲ. ನಿಮಗೆ ಕಲಿಯೋ ಹುಮ್ಮಸಿದರೆ ಸಾಕು ಅಂತಾರೆ ಅಪರ್ಣಾ. ಇದನ್ನು ಇನ್ನು ದೊಡ್ಡ ಮಟ್ಟದಲ್ಲಿ ವಿಸ್ತರಿಸೋ ಕನಸು
ಹೊಂದಿದ್ದಾರೆ. ಆ ಮೂಲಕ ತಮ್ಮ ಕನಸು ಮತ್ತು ಬದುಕು ಎರಡನ್ನು ನೃತ್ಯದಲ್ಲಿ ಕಟ್ಟಿಕೊಂಡಿದ್ದಾರೆ.

ಇವತ್ತು ಕಲೆ ಅನ್ನೋದು ಕೇವಲ ಮನರಂಜನೆ ಯಾಗಿ ಮಾತ್ರ ಉಳಿದಿಲ್ಲ. ದೇಶದ ಆರ್ಥಿಕ ಪ್ರಗತಿಯಲ್ಲಿ ಇದು ದೊಡ್ಡ ಸ್ಥಾನಗಳಿಸಿಕೊಂಡಿದೆ. ಇದೇ ಹಿನ್ನೆಲೆಯಲ್ಲಿ ಇವತ್ತು ಎಷ್ಟೋ ಜನರು ತಮ್ಮ ಉದ್ಯೋಗಗಳನ್ನು ತೊರೆದು ತಮ್ಮ ಆತ್ಮದ ಕರೆಗೆ ಓಗೊಟ್ಟು ತಮ್ಮ ಕೈಹಿಡಿದಿದ್ದ ಕಲಾ ಸೇವೆಗೆ ಮರಳುತ್ತಿದ್ದಾರೆ. ಇನ್ನೂ ಕೆಲವರು ಕಲೆಯನ್ನು ಉಸಿರಾಗಿಸಿಕೊಂಡ ಅಪರ್ಣಾ ರಂಥ ಯುವ ಮನಸು ಅದರಲ್ಲಿ ತೊಡಗಿಸಿಕೊಂಡು ತಮ್ಮ ಬದುಕನ್ನು ಕಟ್ಟಕೊಂಡಿದ್ದಾರೆ. ಅದಕ್ಕೆ ಹೇಳೋದು ಮನಸ್ಸಿಗೆ ಇಷ್ಟವಾದುದನ್ನು ಮಾಡುತ್ತಾ ಹೋದರೆ ಕೀರ್ತಿ ಹಣ ಮತ್ತು ಯಶಸ್ಸು ನಿಮ್ಮದಾಗುತ್ತದೆ ಅಂತ!

ಆಗಸ್ಟ್ 11ಕ್ಕೆ ‘ಆರಾಧನ’ ವಾರ್ಷಿಕೋತ್ಸವ

ಕಲಿಕೆಗೆ ಯಾವುದೇ ವಯಸ್ಸಿಲ್ಲ. ಅದಕ್ಕೆ ಪೂರಕವಾಗಿ ಉದ್ಯೋಗಸ್ಥ, ಸ್ವ ಉದ್ಯೋಗಸ್ಥ ಮಹಿಳೆಯರು. ತಮಗೆ ಸಿಗುವ ಸ್ವಲ್ಪ ಸಮಯದಲ್ಲೇ ಅಪರ್ಣ ಅವರ ಬಳಿ ನೃತ್ಯ ಕಲಿಯುತ್ತಿದ್ದಾರೆ. ಇದೇ ಆಗಸ್ಟ್ 11 ಆರಾಧನ ಟ್ರಸ್ಟ್ ನ 10 ನೇ ವಾರ್ಷಿಕೋತ್ಸವದ ದಿನ ಈ ಎಲ್ಲಾ ಮಹಿಳೆಯರು ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಇನ್ನೂ ಮಹಿಳೆಯರ ಈ ಆಸಕ್ತಿಯನ್ನು ಮನಗಂಡ ಅಪರ್ಣರವರು ಸದ್ಯ ಹನುಮಂತನಗರದಲ್ಲಿ ತಮ್ಮ‌ ನೃತ್ಯ ಶಾಲೆಯ ಇನ್ನೊಂದು ಶಾಖೆಯನ್ನು ತೆರೆದಿದ್ದಾರೆ.

ಆ ಮೂಲಕ ‌ಕಲೆ ಮತ್ತು ಕಲಾಸಕ್ತರನ್ನು ಒಂದು ಗೂಡಿಸುವ ಪ್ರಯತ್ನ ಮಾಡ್ತಿದ್ದಾರೆ. ಇನ್ನೂ ತಿರುಪತಿಯ TTD ,SVBC ಯಲ್ಲಿ ಕಾರ್ಯಕ್ರಮ ‌ನೀಡಿದ್ದಾರೆ. ತಾಂಜವೂರಿನ ಬೃಹದೀಶ್ವರ ದಲ್ಲಿ ನಾಟ್ಯಂಜಲಿ , ವೆಲ್ಲೂರ್ ಜಲಕಂಠೇಶ್ವರಲ್ಲಿ ಕಲಾ ಪ್ರದರ್ಶನ ನೀಡಿದ್ದಾರೆ. ಇನ್ನು ಸಂಸ್ಥೆಯಲ್ಲಿ‌ ಕಲಿಯುತ್ತಿರುವ ಮಕ್ಕಳೆಲ್ಲರೂ ಕರ್ನಾಟಕ ಎಜುಕೇಷನ್ ಬೋರ್ಡ್‌ನಡೆಸುವ ಸಂಗೀತ, ನೃತ್ಯ ಪರೀಕ್ಷೆಯಲ್ಲಿ 90% ಗಿಂತ ಹೆಚ್ಚಿನ ಅಂಕ ಗಳಿಸಿ ಉತ್ತೀರ್ಣರಾಗಿದ್ದಾರೆ. ಹೀಗೆ ಅಪರ್ಣ ಆನಂದ್‌ರವರು ನಿರಂತರ ಕಲಾ ಸೇವೆಯನ್ನೇ ಬದುಕಾಗಿಸಿಕೊಂಡಿದ್ದಾರೆ.

ಇದೇ ಆಗಸ್ಟ್ 11 ರಂದು ತಮ್ಮ ಆರಾಧನ ಇನ್ ಸ್ಟಿಟ್ಯೂಟ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ಟ್ರಸ್ಟ್ ನ 10 ನೇ ವಾರ್ಷಿಕೋತ್ಸವವನ್ನು , ಕತ್ರಿಗುಪ್ಪೆ, ಬಿ ಎಸ್ ಕೆ 3rd ಸ್ಟೇಜ್ ನಲ್ಲಿರುವ ಪರಂಪರೆ ಆಡಿಟೋರಿಯಂನಲ್ಲಿ‌ ಆಯೋಜಿಸಿದ್ದಾರೆ.‌ಜೊತೆಗೆ ಸಂಸ್ಥೆಯ ‌ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನವು ಇರುತ್ತದೆ. ತಪ್ಪದೇ ಕಲಾಸಕ್ತರು ಭಾಗವಹಿಸಿ. ಆರಾಧನ ಟ್ರಸ್ಟ್ ನ ಈ ಕಾರ್ಯವನ್ನು ಪ್ರೋತ್ಸಾಹಿಸಿ.

ಚೈತ್ರ ಮೈಸೂರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್,...

ದಿನದ ಸುದ್ದಿ3 days ago

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ...

ದಿನದ ಸುದ್ದಿ1 week ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ1 week ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ1 week ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ1 week ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ1 week ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

ದಿನದ ಸುದ್ದಿ1 week ago

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ...

ದಿನದ ಸುದ್ದಿ1 week ago

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ...

ದಿನದ ಸುದ್ದಿ1 week ago

ಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪಸಮಿತಿ...

Trending