ದಿನದ ಸುದ್ದಿ

ದಾವಣಗೆರೆ | ಕುರಿ, ಮೇಕೆ ಮಾಂಸ ಪ್ರತಿ ಕೆ.ಜಿ.ಗೆ ರೂ.500 ನಿಗದಿ : ಹೆಚ್ಚು ಬೆಲೆಗೆ ಮಾರಿದರೆ ಕಾನೂನು ಕ್ರಮ

Published

on

ಸುದ್ದಿದಿನ,ದಾವಣಗೆರೆ : ಏಪ್ರಿಲ್ 5 ರಿಂದ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುರಿ, ಮೇಕೆ ಮಾಂಸ ಮಾರಾಟ ಮಾಡಲು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ಕುರಿ, ಮೇಕೆ ಮಾಂಸ ಮಾರಾಟಗಾರರು ಅತೀ ಹೆಚ್ಚಿನ ಬೆಲೆಗೆ ಮಾಂಸ ಮಾರಾಟ ಮಾಡುತ್ತಿರುವುದು ಕಂಡುಬಂದಿರುತ್ತದೆ. ಆದ್ದರಿಂದ ಪ್ರತೀ ಕೆ.ಜಿಗೆ ರೂ. 500/-ಗಳನ್ನು ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಬೆಲೆಗೆ ಮಾರಾಟ ಮಾಡಿದಲ್ಲಿ ಅಂತಹವರ ವಿರುದ್ಧ ಈ ಪ್ರಾಧಿಕಾರದಿಂದ ನಿಯಮಾನುಸಾರ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version