ಲೈಫ್ ಸ್ಟೈಲ್
ಮೋಬೈಲ್ ಗೀಳು ನೆಮ್ಮದಿ ಹಾಳು..!
- ಹುಸೇನಸಾಬ ವಣಗೇರಿ,ಉಪನ್ಯಾಸಕರು
ಮೊಬೈಲ್ ಎಂಬುವುದು ಪ್ರತಿಯೊಬ್ಭರ ಜೀವನದಲ್ಲಿ ಹಾಸುಹೊಕ್ಕಾಗಿದೆ. ಹಸುಗೊಸಿನಿಂದ ಹಿಡಿದು ಎಲ್ಲಾ ವಯೋಮಾನದವರೂ ತಿಳಿದು ತಿಳಿಯದಂತೆ ಮಾಯಂಗೆಗೆ ಮಾರುಹೋಗಿ ಪ್ರಪಂಚವನ್ನೆ ಮರೆತು ಅಂಟುರೋಗಕ್ಕೆ ಗಂಟುಬಿದ್ದು ತಮ್ಮದೇಯಾದ ಕಾಲ್ಪನಿಕ ಲೋಕದಲ್ಲಿ ಕೈಗೆಟುಕದ ಹಾಗೇ ಲೀನವಾಗಿದ್ದಾರೆ. ಮಾತಿಲ್ಲ ಕಥೆಯಿಲ್ಲ, ಮಾನವೀಯ ಮೌಲ್ಯಗಳ ಸುಳಿವಿಲ್ಲ, ಭಾವನೆಗಳಿಗೆ ಬೆಲೆಯಿಲ್ಲ ಈ ಮೋಬೈಲ್ ಮಾಯೆಯ ಛಾಯೆಯಿಂದ.
ಅನ್ನ ನೀರು ಬಿಟ್ಟಾರು ಆದರೆ ಒಂದು ಕ್ಷಣ ಮೊಬೈಲ್ ಬಿಟ್ಟಿರಲಾರದ ಸಾಕ್ಷಸಂಗತಿಗಳನ್ನು ನೋಡಿದರೆ ನಮ್ಮ ಈ ಯುವ ಪೀಳಿಗೆಯ ಬಗ್ಗೆ ಭಯವಾಗುತ್ತದೆ. ನೋವು-ನಲಿವು, ಕಷ್ಟ-ಸು:ಖಗಳ ಸಮ್ಮಿಶ್ರಣದ ಈ ಜೀವನದಲ್ಲಿ ಮೋಬೈಲ್ ಬಳಕೆಗೆ ಅಂಟಿಕೊಂಡು ದಿನವೀಡಿ ಸ್ಕ್ರೀನಮೇಲೆ ಬೆರೆಳಾಡುಸುತ್ತಾ ಕಾಲಹರಣ ಮಾಡುತ್ತಾ ಉದ್ವೇಗ, ಒತ್ತಡ, ಖಿನ್ನತೆಯಂತ ಸಮಸ್ಯೆಗಳಿಗೆ ಆಹ್ವಾನ ನೀಡುತ್ತದ್ದೇವೆ.
ವಿಶ್ವವೇ ಮಾರು ಹೋಗಿರುವ ಈ ಮೊಬೈಲ್ ಅನುಕೂಲಕ್ಕಿಂತ ಅನಾನೂಕೂಲತೆಗಳಿಗೆ ಎಡೆಮಾಡಿಕೊಟ್ಟಿರುವುದು ಅಕ್ಷರಶ: ಸತ್ಯಸಂಗತಿ. ಅತಿಯಾದ ಮೊಬೈಲ್ ಬಳಕೆಯಿಂದ ಅದೆಷ್ಟೋ ತೊಂದರೆಗಳನ್ನು ಏದುರಿಸಿದ್ದೇನೆ ಅಂತಹ ಕಹಿ ಅನುಭವಗಳ ಗುಚ್ಛನನ್ನಲ್ಲಿದೆ. ಹಾಲಾದ ಈ ಮೊಬೈಲ್ ಸರಿಯಾಗಿ ಕಣ್ಣಿಗೆ ನಿದ್ದೆಯಿಲ್ಲ, ಮನಸ್ಸಿಗೆ ನೆಮ್ಮದಿಯಿಲ್ಲ ಬರೀ ಫೆಸ್‍ಬುಕ್, ವ್ಯಾಟ್ಸಪ್, ಯುಟ್ಯೂಬ್‍ಗಳಲ್ಲಿ ಮುಳುಗಿ ನಡುಗಿ ಹೋಗಿದ್ದೇನೆ.
ಅದೊಂದಿನ ಹುಡುಗಿಯೊರ್ವಳ ಪರಿಚಯವಾಗಿ, ಪರಿಚಯ ಸ್ನೇಹವಾಗಿ ಮಾರ್ಪಟ್ಟಿತ್ತು.. ಪ್ರತಿದಿನ 10ಘಂಟೆಯಾದರೆ ಸಾಕು ಮೊಬೈಲ್ ಬಾಯ್ ಹೇಳಿ ನಿದ್ದೆಗೆ ಹಾಯ್ ಅಂದು ನಿದ್ರೆಗೆ ಜಾರುತ್ತಿದ್ದೆ ಆದರೆ ಅಂದು ಮೋಬೈಲ್ ಮಾಯೆಯಲ್ಲಿ ಮುಳುಗಿದ ನನಗೆ ಹೊಟ್ಟೆ ಹಸಿದಿದ್ದರೂ ಊಟ ಸೇರಲಿಲ್ಲ, ಕುಳಿತ ಜಾಗ ಬಿಟ್ಟು ಕದಲಲು ಮನಸ್ಸು ಬರಲಿಲ್ಲ ಸಂದೇಶಗಳ ಮೇಲೆ ಸಂದೇಶ ಬರುತ್ತಲೇ ಇದ್ದವು ನಾನು ಪ್ರತಿಕ್ರಿಯಿಸುತ್ತಲೇ ಇದ್ದೆ.
ಅಲ್ಲಿಗೆ ಚಾಲುವ ಆಯ್ತುನೋಡಿ ನಮಗ ಅಂಟುರೋಗ ನಮ್ಗೆ ತಿಳಿಯದ ಹಾಗೇ ನಗು ಉಲ್ಬಣವಾಗಿ ಶಮನವಾಗುತ್ತಿತ್ತು. ಮೊಬೈಲ್ ನೋಡಿ ಸುಮ್ಮನೇ ನಗೋದು ನೋಡಿದ ನನ್ನ ಗೆಳೆಯರು ಬೇಸರವಾಗಿದ್ದೂ ಆಯ್ತು ಬೈಯ್ದಿದ್ದು ಆಯ್ತು. ಮಧ್ಯರಾತ್ರಿ 1ಘಂಟೆಯಾದ್ರು ನಿದ್ದೆ ಹತ್ತುತ್ತಿಲ್ಲ, ಇತ್ತ ಕಣ್ಗಗಳ ಉರಿ, ಮಲಗಬೇಕು ಅಂದುಕೊಂಡರೆ ಬೆಂಬಿಡದ ಮೋಬೈಲ್ ಮಾಯೆ ದೊಡ್ಡ ಮನಸ್ಸು ಮಾಡಿ ಮೊಬೈಲ್ ಸೈಡಿಗೆ ಇಟ್ಟು ನದ್ರೆಗೆ ಹೋದೆ ಕ್ಷಣಮಾತ್ರವೇನೋ ಮತ್ತ ಎಚ್ಚರವಾಯ್ತು ಮತ್ತದೇ ಮೊಬೈಲ್ ಬಳಕೆಯಲಿ ಮುಳುಗಿದೆ ಅದೇ ಸಮಯಕ್ಕೆ ಚಾರ್ಜಬೇರೆ ಕಾಲಿಯಾಗಬೇಕೆ ಆದರೂ ಬಿಡಲಿಲ್ಲ ಚಾರ್ಜ ಹಾಕಿಕೊಂಡು ಮೊಬೈಲ್ ಸ್ಕ್ರೀನ್‍ಮೇಲೆ ಬೆರೆಳಾಡಿಸುತ್ತಾ ನಿಂತುಕೊಂಡೆ ಮಧ್ಯರಾತ್ರಿಯಾದ್ರು ಅದೇ ಕಥೆ.
ಬೆಳಿಗ್ಗೆ ಎದ್ದು ಕೆಲಸಕ್ಕೆ ಹೋಗಬೇಕಾಗಿದ್ದರಿಂದ ಅನಿವಾರ್ಯವಾಗಿ 3ಗಂಟೆಗೆ ಕಣ್ಮುಚ್ಚಿಕೊಂಡೆ ಬೆಳಿಗ್ಗೆ ಎದ್ದು ಆತುರದಲ್ಲಿ ಮೊಬೈಲ್ ಹಿಡಿದುಕೊಂಡು ನಡೆಯುವಾಗ ದಾರಿಯಲ್ಲಿದ್ದ ಕಲ್ಲೆಗೆ ಎಡವಿ ಕಾಲಿಗೆ ಗಾಯಮಾಡಿಕೊಂಡು ಗದಗದಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಿದೆ ಮತ್ತದೇ ಚಾಳಿ ಮೊಬೈಲ್ ಮಗ್ನನಾಗಿ ಹುಬ್ಬಳ್ಳಿ ತಲುಪಿದೆ. ಹೊಸೂರ್ ಕ್ರಾಸ್‍ಗೆ ಹೋಗಬೇಕಾಗಿದ್ದರಿಂದ ಬಿ.ಆರ್.ಟಿ ಬಸ್ಸನ್ನೇರಿ ಕುಳಿತೆ ನೆಕ್ಟ ಸ್ಟಾಪ್‍ಗೆ ಇಳಿಯಬೇಕಾದವನು ಮೊಬೈಲ್ ಇಯರ್‍ಪೋನು ಸಿಕ್ಕಿಸಿಕೊಂಡು ಅದರಲ್ಲೆ ಕಳೆದು ಹೋಗಿದ್ದೆ. ಹೆಂಗೋ ಎಚ್ಚೆತ್ತುಕೊಂಡು ನೋಡಿದರೆ ತಲುಪಬೇಕಾದ ಸ್ಥಳಕ್ಕಿಂತ ನಾಲ್ಕು ಸ್ಟಾಪ್ ಮುಂದೆ ಬಂದಿದ್ದೇನೆ.
ಮೊಬೈಲ್ ಮುಳುಗಿದ್ದ ನನ್ನ ಗ್ರಹಚಾರ ಅಂದುಕೊಂಡು ತಿರುಗಿ ಬರುವಷ್ಟರಲ್ಲಿ ಸಮಯ ಇಮ್ಮಡಿಯಾಗಿತ್ತು. ಉಪನ್ಯಾಸಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ನನಗೆ ತರಗತಿಗೆ ತೊಂದರೆಯಾಗಿತು ಮತ್ತು ನನ್ನ ಮೂರ್ಖತನಕ್ಕೆ ಉದಾಹರಣೆಯಾಯಿತು. ತದನಂತರ ಅರ್ಥವಾಯಿತು ಮೊಬೈಲ್ ಮಾಯೆಯ ಮುಂದೆ ಮತ್ತಾವ ಮಾಯೆಯಿಲ್ಲ ಎಂಬುದು ಇದು ನಂದಷ್ಟೆ ಕಥೆಯಲ್ಲ ಮೊಬೈಲ್ ಮಾಯೆಗೆ ಮಾರು ಹೋದವರು ದಿನಂಪ್ರತಿ ಒಂದಿಲ್ಲೊಂದು ಸಮಸ್ಯೆಗೆ ಸಿಲುಕಿದ್ದಾರೆಂದು.
(ಹುಸೇನಸಾಬ ವಣಗೇರಿ
ಉಪನ್ಯಾಸಕರು
ಸ್ನಾತಕೋತ್ತರ ಸಮಾಜಕಾರ್ಯಅಧ್ಯಯನ ವಿಭಾಗ
ಮಹಿಳಾ ವಿದ್ಯಾಪೀಠ, ಹುಬ್ಬಳ್ಳಿ.
ಪೋನ್ ನಂ: 7829606194)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

ದಿನದ ಸುದ್ದಿ
ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.
ಗೃಹ ಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243




