ರಾಜಕೀಯ

ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

Published

on

ಸುದ್ದಿದಿನ,ನವದೆಹಲಿ: 2ನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ದಾಮೋದರ್ ದಾಸ್ ಮೋದಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್,​ ನರೇಂದ್ರ ಮೋದಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಧಾನಿಯಾಗಿ ಮೋದಿ, ಈಶ್ವರನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ವಿಶೇಷ ಅಂದ್ರೆ, ಬಿಜೆಪಿಯ ಚಾಣಕ್ಯ ಅಮಿತ್​ ಶಾ, ಕೂಡ ಈ ಬಾರಿ ಮೋದಿ ಸಂಪುಟ ಸೇರಿದ್ದಾರೆ. ಇನ್ನು, ಮೋದಿ ಮಂತ್ರಿ ಮಂಡಲದಲ್ಲಿ ಕರ್ನಾಟಕದ 4 ಸಂಸದರೂ ಸೇರಿದಂತೆ ಒಟ್ಟು 44 ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ರು.

ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್​ ಅಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಕಾಂಗ್ರೆಸ್​ ಹಿರಿಯ ನಾಯಕ ಗುಲಾಂ ನಬಿ ಆಜಾದ್, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್, ನಟ, ರಾಜಕಾರಣಿ ರಜಿನಿಕಾಂತ್ ಹಾಗೂ BIMSTEC ಸದಸ್ಯ ರಾಷ್ಟ್ರ ನಾಯಕರು ಸೇರಿದಂತೆ ಒಟ್ಟು 8 ಸಾವಿರ ದೇಶ, ವಿದೇಶ ಗಣ್ಯರ ಸಮ್ಮುಖದಲ್ಲಿ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version