Connect with us

ದಿನದ ಸುದ್ದಿ

ಕುಂದುವಾಡ | ಬೋನಿಗೆ ಬಿತ್ತು ರೌಡಿ ಕೋತಿ..! ಇಲ್ಲಿದೆ ವಿಡಿಯೋ

Published

on

ಸುದ್ದಿದಿನ,ದಾವಣಗೆರೆ: ಅದು ರೌಡಿ ಕೋತಿ, ಸಿಕ್ಕ ಸಿಕ್ಕವರ ಮೇಲೆ ಎಗರುತ್ತಾ ಕಚ್ಚಿ, ದೂಡಿ ಹೋಗುತ್ತಿತ್ತು, ಕೋತಿಯ ಉಪಟಳಕ್ಕೆ ಜನರು ಬೇಸತ್ತು ಹೋಗಿದ್ದರು, ನಿನ್ನೆ ಬೋನಿನೊಳಗೆ ಬಂದು ಜಸ್ಟ್ ಮಿಸ್ ಆಗಿ ತಪ್ಪಿಸಿಕೊಂಡು ಹೋಗಿದ್ದ ಕೋತಿ ಇಂದು ಬೋನಿಗೆ ಬಿದ್ದು ಲಾಕ್ ಆಗಿದೆ.

ಹೌದು.. ಈ ಘಟನೆ ನಡೆದಿದ್ದು ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ, ಇಪ್ಪತ್ತಕ್ಕೂ ಹೆಚ್ಚು ಜನರಿಗೆ, ಮಕ್ಕಳಿಗೆ ಕಚ್ಚಿ ಘಾಸಿಗೊಳಿಸಿತ್ತು, ಮಕ್ಕಳು ಶಾಲೆಗೆ ಹೋಗಲು, ವಾಪಾಸ್ ಮನೆಗೆ ತೆರಳಲು ಭಯಪಡಿತ್ತಿದ್ದರು, ಕೋತಿ ಬೈಕ್ ಸವಾರರನ್ನೆ ಹೆಚ್ಚು ಟಾರ್ಗೆಟ್ ಮಾಡುತ್ತಿತ್ತು, ಬೈಕ್ ನಲ್ಲಿ ಹೋಗುತ್ತಿದ್ದವರ ಹೆಗಲ ಮೇಲೆ ಓಡಿ ಬಂದು ಕೂತು ಕಚ್ಚುತ್ತಿತ್ತು, ಇದರಿಂದ ಹೆದರಿ ಎಷ್ಟೊ ಜನ ಬೈಕ್ ನಿಂದ ಬಿದ್ದು ಗಾಯಗೊಂಡಿದ್ದರು, ನಿಂತಿದ್ದ ಬೈಕ್ ಗಳನ್ನು ಕಾಲಿನಿಂದ ದೂಡಿ ಬೀಳಿಸುತ್ತಿತ್ತು, ಮುಷ್ಯನ ಕೀಟಲೆಯಿಂದ ಜನರು ಬೇಸತ್ತು ಹೋಗಿದ್ದರು.

ಈ ಹಿನ್ನಲೆ ಜನರು ಅರಣ್ಯ ಇಲಾಖೆ ಉಪಸಂರಕ್ಷಣಾ ಅಧಿಕಾರಿ ಶಶಿಧರ್ ಅವರಿಗೆ ದೂರು ನೀಡಿದ್ದರು, ದೂರು ಹಿನ್ನಲೆ ಕಾರ್ಯಾಚರಣೆಗೆ ಇಳಿದಿದ್ದ ಅರಣ್ಯ ಇಲಾಖೆ ನಾಲ್ಕೈದು ದಿನದಿಂದ ಬೋನಿಟ್ಟು ಕಾದಿತ್ತು, ಬೋನಿನೊಳಗೆ ಬಾಳೆಹಣ್ಣು, ಬಿಸ್ಕೆಟ್ ಇಡಲಾಗಿತ್ತು, ನಿನ್ನೆ ಬಾಳೆಹಣ್ಣು ತಿನ್ನುತ್ತಾ ಬೋನಿನೊಳಗೆ ಕೋತಿ ಹೋಗಿತ್ತು, ಆದರೆ ಕೂಡಲೇ ಎಚ್ಚೆತ್ತ ಕೋತಿ ಲಾಕ್ ಬೀಳುವ ಮೊದಲೇ ಎಸ್ಕೇಪ್ ಆಗಿ ಓಡಿ ಹೋಗಿತ್ತು..

ಮತ್ತೆ ಇಂದು ಬೆಳಿಗ್ಗೆ ಅರಣ್ಯ ಇಲಾಖೆಗೆ ಕರೆ ಮಾಡಿ ಹೆಚ್ಚಿನ ಸಿಬ್ಬಂದಿ ಕಳುಹಿಸುವಂತೆ ಮನವಿ ಮಾಡಿದ ಹಿನ್ನಲೆ ಕೋರಿಕೆಗೆ ಸ್ಪಂದಿಸಿದ ಇಲಾಖೆ, ನಾಲ್ಕು ಜನರ ತಂಡವನ್ನ ಕಳುಹಿಸಿತ್ತು, ಒಂದು ಭಾರೀ ತಪ್ಪಿಸಿಕೊಂಡು ಹೋಗಿದ್ದರಿಂದ ಆ ಒಂದು ಸ್ಥಳದಲ್ಲಿ ಕೋತಿ ಸುಳಿದಿರಲಿಲ್ಲ, ಹೀಗಾಗಿ ಇನ್ನೊಂದು ಪ್ರದೇಶದಲ್ಲಿ ಬೋನಿಟ್ಟು ಮತ್ತೆ ಹಣ್ಣುಗಳನ್ನು ಇಟ್ಟು ಜೊತೆಗೆ ಮಿರರ್ ಇಡಲಾಗಿತ್ತು.

ಇಂದು ಕೋತಿಗೆ ಗ್ರಹಚಾರ ಬೋನಿನ ಮೂಲಕ ಕಾದು ಕೂತಿತ್ತೇನೋ, ಹಣ್ಣು ತಿನ್ನುತ್ತಾ ಬೋನಿನ ಒಳಗೆ ಹೋದ ತಕ್ಷಣ ಸಿಬ್ಬಂದಿ ಬೋನ್ ಲಾಕ್ ಮಾಡಿದ್ದು, ಕೊನೆಗೂ ಬೋನಿಗೆ ಮುಷ್ಯ ಬಿದ್ದಿದೆ, ಇದರಿಂದ ಜನರು ನಿಟ್ಟುಸಿರು ಬಿಟ್ಟಿದ್ದು ಅರಣ್ಯ ಇಲಾಖೆಗೆ ಹಳೇ ಕುಂದುವಾಡ ಗ್ರಾಮಸ್ಥರು ಧನ್ಯವಾದ ತಿಳಿಸಿದ್ದಾರೆ. ಇನ್ನೂ ಸೆರೆಸಿಕ್ಕ ಕೋತಿಯನ್ನ ಕಾಡಿಗೆ ಬಿಡಲು ಸಿದ್ದತೆ ನಡೆಸಲಾಗಿದೆ, ಕಾರ್ಯಚರಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಇದಾಯಿತ್, ಹರೀಶ್, ಮರುಳಸಿದ್ದಪ್ಪ, ದೇವರಾಜ್, ಶರಣಪ್ಪ ಸೇರಿದಂತೆ ಮತ್ತಿತರರು ಭಾಗೀಯಾಗಿದ್ದರು.

ವಿಡಿಯೋ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending