ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತ ; ಅಧಿಸೂಚನೆ ಪ್ರಕಟ

Published

on

ಸುದ್ದಿದಿನ ಡೆಸ್ಕ್ : 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಅಧಿಸೂಚನೆ ಪ್ರಕಟವಾಗಿದೆ. ಮೊದಲ ಹಂತದಲ್ಲಿ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.

ಇದೇ 27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಇದೇ 30 ಕೊನೆಯ ದಿನವಾಗಿದ್ದು, ಏಪ್ರಿಲ್ 19ರಂದು ಮತದಾನ ಜರುಗಲಿದೆ. ಅದರಂತೆ, ಏಪ್ರಿಲ್ 19ರಂದು ನಡೆಯಲಿರುವ ಮೊದಲ ಹಂತದಲ್ಲಿ ತಮಿಳುನಾಡಿನ 29ಸ್ಥಾನಗಳು, ರಾಜಸ್ಥಾನದ 12, ಉತ್ತರ ಪ್ರದೇಶದ 8, ಮಧ್ಯ ಪ್ರದೇಶದ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದ ತಲಾ 5, ಬಿಹಾರದ 4, ಪಶ್ಚಿಮ ಬಂಗಾಳದ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದ ತಲಾ 2 ಹಾಗೂ ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ, ಅಂಡಮಾನ್ ಮತ್ತು ನಿಕೋಬಾರ್, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯ ತಲಾ ಒಂದು ಸ್ಥಾನಗಳಿಗೆ ಮತದಾನ ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version