ದಿನದ ಸುದ್ದಿ
ಯುವ ಮತದಾರರ ನೊಂದಣಿ : ಕಾಲೇಜುಗಳಲ್ಲಿ ಕ್ಯಾಂಪಸ್ ಅಂಬಾಸಿಡರ್ ನೇಮಕ
ಸುದ್ದಿದಿನ, ಮಂಡ್ಯ : ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲ್ಲೆಯಲ್ಲಿ ಹೆಚ್ಚು ಯುವ ಮತದಾರರನ್ನು ನೋಂದಣೆ ಮಾಡಲು ಕಾಲೇಜುಗಳಲ್ಲಿ ಕ್ಯಾಂಪಸ್ ಅಂಬಾಸಿಡರ್ ನೇಮಕ ಮಾಡುವುದರ ಮೂಲಕ ಮತದಾನ ಜಾಗೃತಿ ಮೂಡಿಸಲು ಅಗತ್ಯ ಕ್ರಮವಹಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸ್ವೀಪ್ ಚಟುವಟಿಕೆಗಳಿಗೆ ಕುರಿತಂತೆ ಮತದಾರರಿಗೆ ಜಾಗೃತಿ ಮೂಡಿಸಲು ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಲೋಕಸಭಾ ವ್ಯಾಪ್ತಿಗೆ ಬರುವಂತಹ ಎಲ್ಲಾ ವಿಧಾನಸಭಾ ವ್ಯಾಪ್ತಿಯಲ್ಲಿ 18 ವರ್ಷ ತುಂಬಿರುವ ಯುವಕ ಯುವತಿಯರುಗಳನ್ನು ಹೆಸರು ನೋಂದಾಯಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಆಯಾ ತಾಲ್ಲೂಕಿನ ತಹಶೀಲ್ದರ್ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಕಾಲೇಜುಗಳಿಗೆ ಭೇಟಿ ನೀಡಿ ನೈತಿಕ ಮತದಾನದ ಬಗ್ಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅವರು ತಿಳಿಸಿದ ಅವರು ಈ ಕಾರ್ಯಕ್ರಮಗಳನ್ನು ಪದವಿ ಕಾಲೇಜು, ಇಂಜಿನಿಯರ್, ಮೆಡಿಕಲ್ ಹಾಗೂ ಐ.ಟಿಐ ಕಾಲೇಜಿಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅವರು ತಿಳಿಸಿದರು.
ನೈತಿಕ ಮತದಾನದ ಬಗ್ಗೆ ಚುನಾವಣೆ ಘೋಷಣೆಯಾದ ನಂತರ ಜನರಿಗೆ ಜಾಗೃತಿ ಮೂಡಿಸಲು ಗ್ರಾಮಗಳಲ್ಲಿ ಬೀದಿ ನಾಟಕ ಹಮ್ಮಿಕೊಳ್ಳುವುದು. ಪೋಸ್ಟರ್ ಹಾಕುವುದು, ವೈದರು ನೀಡುವ ಔಷಧಿ ಚೀಟಿಗಳಲ್ಲಿ ಮತದಾನ ಮಾಡವ ಬಗ್ಗೆ ತಿಳಿಸುವುದು. ಗ್ರಾಮೀಣಾ ಪ್ರದೇಶದಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ ಅವರು ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನವಾಗುವ ನಿಟ್ಟಿನಲ್ಲಿ ಹಾಗೂ ಚುನವಾಣೆಯಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ಕೈಗಾರಿಕಾ ಪ್ರದೇಶದಲ್ಲಿರುವ ಜನರಿಗೆ ಮತದಾನ ಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ಪ್ರತಿ ಸರ್ಕಾರಿ ಕಚೇರಿಗಳಲ್ಲಿ ಮತದಾನದ ಪೋಸ್ಟರ್‍ಗಳನ್ನು ಅಳವಡಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಶಾಲೆಗಳಲ್ಲಿ ಚಿತ್ರ ಕಲಾ ಸ್ಪರ್ಧೆಗಳನ್ನು ಏರ್ಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕೆ.ಯಾಲಕ್ಕಿಗೌಡ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣರಾಜು, ಮಂಡ್ಯ ಉಪವಿಭಾಗಧೀಕಾರಿಗಳಾದ ರಾಜೇಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ
https://suddidina.com/daily-news/about-siddaramaiah-tweet-3/
ಸುದ್ದಿದಿನ.ಕಾಂ|ವಾಟ್ಸಾಪ್|9986715401