ದಿನದ ಸುದ್ದಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ದಾಖಲೆಗಳು ಕಣ್ಮರೆ ; ತನಿಖೆಗೆ ಆದೇಶ : ಮುಡ ಅಧ್ಯಕ್ಷ ಎಚ್.ವಿ.ರಾಜೀವ್
ಸುದ್ದಿದಿನ, ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ಕೆಲವು ಮಹತ್ವದ ದಾಖಲೆಗಳು ಕಣ್ಮರೆಯಾಗಿರುವ ಬಗ್ಗೆ ತನಿಖೆಗೆ ಆದೇಶಿಸಲಾಗುವುದು ಎಂದು ಮುಡ ಅಧ್ಯಕ್ಷ ಎಚ್.ವಿ.ರಾಜೀವ್ ತಿಳಿಸಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೆಯ ದಾಖಲಾತಿಗಳನ್ನು ಗಣಕೀಕರಣಗೊಳಿಸುವ ಸಂದರ್ಭದಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ಕೆಲವು ಮಹತ್ವದ ಕಡತಗಳು ಕಾಣೆಯಾಗಿರುವ ಸಂಗತಿ ಗೋಚರವಾಗಿದೆ ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
.