ದಿನದ ಸುದ್ದಿ
ಎಂಟರ ಈ ಪುಟ್ಟ ಪೋರಿಯ ಬಹುಮಖ ಪ್ರತಿಭೆಯ ಲಿಸ್ಟ್ ಕಳಿದ್ರೆ ನೀವು ದಂಗಾಗುತ್ತೀರ..!
ಸುದ್ದಿದಿನ,ವಿಶೇಷ : ಸಿಂಡ್ರೆಲ್ಲಾ ಸಿಂಡ್ರೆಲ್ಲಾ ಅಂತ ಸಖತ್ತಾಗಿ ಹೆಜ್ಜೆ ಹಾಕುತ್ತಾ ಜೂ.ಬೊಂಬೆ ಮಾನ್ಯ. ಅನಿಸಿಕೊಂಡಿರುವ ಈ ಬಾಲೆ ತನ್ನ ಡ್ಯಾನ್ಸ್ ಪ್ರತಿಭೆ ಇಂದ ಹಲವಾರು ಪ್ರಶಸ್ತಿಗಳನ್ನ ತನ್ನ ಗರಿಗೇರಿಸಿಕೊಂಡಿದ್ದಾಳೆ. ಅಷ್ಟೇ ಅಲ್ಲ, ಬಿಗ್ ಬಾಸ್ ಖ್ಯಾತಿಯ ಕನ್ನಡ ರಾಪರ್ ಚಂದನ್ ಶೆಟ್ಟಿ ಅವರ ಮೇಲೇ ಒಂದು ರಾಪ್ ಸಾಂಗ್ ಮಾಡಿ ಸಖತ್ ಫೇಮಸ್ ಆದ್ಲು ಈ ಹುಡುಗಿ. ಇಷ್ಟಕ್ಕೇ ಈ ಮಾನ್ಯ ಳ ಪ್ರತಿಭೆ ನಿಂತಿಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಚಾಲಂಜಿಂಗ್ ಸ್ಟಾರ್ ದರ್ಶನ್ ಹುಟ್ಟು ಹಬ್ಬಕ್ಕೆ ಒಂದು ರಾಪ್ ಸಾಂಗ್ ಡೆಡಿಕೇಟ್ ಮಾಡಿದ್ದಳು.
ಡಬ್ ಸ್ಮಾಷ್ ಮಾಡುವ ಕ್ರೇಜ್ ಇರುವ ಈ ಹುಡುಗಿ ಗೆ ನಿವೇದಿತಾ ಗೌಡ -ಚಂದನ್ ಶೆಟ್ಟಿ ಎಂದರೆ ಪಂಚಪ್ರಾಣ. ನೋಡೋಕೆ ಅಚ್ಚು ನಿವೇದಿತಾ ಳಂತೆ ಸಿಂಗರಿಸಿ ಕೊಂಡು ಈಕೆ ಮಾಡಿದ ಡಬ್ ಸ್ಮಾಷ್ ಫುಲ್ ವೈರಲ್! ಜೂ.ನಿವೇದಿತಾ ಗೌಡ ಎಂದೇ ಖ್ಯಾತಿ ಪಡೆದಿರುವ ಈ ಹುಡುಗಿಯ ಟ್ಯಾಂಲೆಂಟ್ ಲಿಸ್ಟ್ ಇನ್ನೂ ಮುಗಿದಿಲ್ಲ!
ಯಾರು ಈ ಮಾನ್ಯ ?
ಜೆಪಿ ನಗರ ನಿವಾಸಿ ಚಿತ್ರಶ್ರೀ ಹರ್ಷ ಮತ್ತು ಹರ್ಷ ಬಿ.ಎಸ್. ಅವರ ಮುದ್ದು ಮಗಳು ಮಾನ್ಯ. ಎಂಟು ವರ್ಷದ ಮಾನ್ಯ ವಿಬ್ಗಯಾರ್ ಶಾಲೆಯ ಮೂರನೇ ತರಗತಿಯಲ್ಲಿ ಓದುತ್ತಿಯುವತಿಯರು ಪ್ರತಿಭಾನ್ವಿತ ವಿದ್ಯಾರ್ಥಿನಿ. ಓದುವುದು ಜೊತೆಗೆ ಸಾಂಸ್ಕೃತಿಕ ಚಟುವಟಿಕೆ ಯಲ್ಲೂ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಡ್ಯಾನ್ಸ್, ಹಾಡು, ಮಿಮಿಕ್ರೀ, ಫ್ಯಾಷನ್, ಕ್ರೀಡೆ, ಕವನ,ಪರಿಸರ ಪ್ರೇಮ , ಎಲ್ಲದರಲ್ಲೂ ಮುಂಚೂಣಿಯಲ್ಲಿದ್ದಾರೆ.
ಬಹುಮುಖ್ಯ ಪ್ರತಿಭೆ!
ಮಾನ್ಯ ಕರಾಟೆ ಕೂಡಾ ಕಲಿಯುತ್ತಿದ್ದಾಳೆ. ಸದ್ಯ ಗ್ರೀನ್ ಬೆಲ್ಟ್ ಆಗಿದ್ದು ಓ .ಸ್.ಕೆ ಫೆಡರೇಷನ್ ನ ರಾಜ್ಯ ಮಟ್ಟದ ಕರಾಟೆ ಪಂದ್ಯದಲ್ಲಿ ರನ್ನರ್ ಅಪ್ ಆಗಿ ಗೆದ್ದಿದ್ದಾಳೆ. ಸ್ವಿಮ್ಮಿಂಗ್, ಸ್ಕೇಟಿಂಗ್ ನಲ್ಲೂ ಆಸಕ್ತಿ ಹೊಂದಿರುವ ಮಾನ್ಯ ಹಲವಾರು ಪ್ರಶಸ್ತಿಗಳನ್ನ ಇದ್ದಿದ್ದು, ಬಹುಮುಖ ಪ್ರತಿಭೆ ಎನಿಸಿಕೊಂಡಿದ್ದಾಳೆ.
ಪರಿಸರ ಪ್ರೇಮಿ
ಈ ಪುಟಾಣಿ, ಇಂಗ್ಲಿಷ್ ನಲ್ಲಿ ಪದ್ಯಗಳನ್ನು ಕೂಡಾ ಬರೆಯುತ್ತಾಳೆ. 2018ರ ವಿಶ್ವ ಜಲ ಸಂರಕ್ಷಣಾ ದಿನಾಚರಣೆ ಅಂಗವಾಗಿ ಈಕೆ ತನ್ನ ಸ್ನೇಹಿತ ರೊಂದಿಗೆ ಸೇರಿ, “ಜಲ ಸಂರಕ್ಷಣಾ ಜಾತಾ” ನಡೆಸಿದಳು. ಈ ಪೋರಿಯರು ಕೂಗಿಗೆ ಓಗೊಟ್ಟ ನೂರಾರು ಮಕ್ಕಳು ಮತ್ತು ಮಹಿಳೆಯರು, ಮಕ್ಕಳೇ ಆಯೋಜಿಸಿದ್ದ ಈ ಜಾತಾದಲ್ಲಿ ಭಾಗವಹಿಸಿದ್ದರು.ಪುಟ್ಟೇನಹಳ್ಳಿಯ ಕೆರೆಯಲ್ಲಿ ಗಿಡಗಳನ್ನು ನಡೆವುದರೊಂದಿಗೆ ಈ ಜಾತಾ ಮುಕ್ತಾಯ ವಾಯಿತು.
ಫ್ಯಾಷನ್ ಲೋಕದಲ್ಲೂ ಮಿಂಚುತ್ತಿರುವ ಮಾನ್ಯ, 2018ರ ಕಿಡ್ಸ್ ಫ್ಯಾಷನ್ ವೀಕ್ ನ ಶೋ ಸ್ಟಾಪರ್ ಆಗಿ ಮಿಂಚಿದ್ದಾಳೆ. ಇತ್ತೀಚೆಗೆ ನಡೆದ ಸ್ಟೈಲಿಶ್ ಕಿಡ್ಸ್ ಸ್ಪರ್ಧೆ ಯಲ್ಲಿ “ಮಿಸ್ ಬ್ಯೂಟಿಫುಲ್” ಎಂಬ ಟೈಟಲ್ ತನ್ನ ಗರಿಗೇರಿಸಿಕೊಂಡಿದ್ದಾಳೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಯಲ್ಲಮ್ಮನ ಸವದತ್ತಿ ಕ್ಷೇತ್ರಾಭಿವೃದ್ಧಿಗೆ ಆದ್ಯತೆ : ಸಿಎಂ ಸಿದ್ದರಾಮಯ್ಯ ಭರವಸೆ
ಸುದ್ದಿದಿನಡೆಸ್ಕ್:ಯಲ್ಲಮ್ಮನ ಗುಡ್ಡವಿರುವ ಸವದತ್ತಿ ಕ್ಷೇತ್ರಕ್ಕೆ ಪ್ರತಿವರ್ಷ ಕೋಟ್ಯಾಂತರ ಭಕ್ತಾದಿಗಳು ಭೇಟಿ ನೀಡುತ್ತಾರೆ. ಅವರಿಗೆ ಉತ್ತಮ ವಸತಿ ಹಾಗೂ ಸುಗಮ ದರ್ಶನಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಲ್ಲಮ್ಮನ ಗುಡ್ಡದಲ್ಲಿ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದರು.
ಯಲ್ಲಮ್ಮನ ಗುಡ್ಡಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ಮತ್ತು ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಗೋವಾದಿಂದಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಅವರಿಗೆ ಉತ್ತಮ ವಸತಿ ಸೌಲಭ್ಯ ಕಲ್ಪಿಸಲು ದೇವಸ್ಥಾನ ಮತ್ತು ಸುತ್ತಮುತ್ತಲಿರುವ ಸರ್ಕಾರಿ ಜಮೀನು ಒತ್ತುವರಿಯನ್ನು ನಿಯಂತ್ರಿಸಲು ತಡೆಗೋಡೆ ನಿರ್ಮಿಸಬೇಕು ಎಂದರು.
ಸವದತ್ತಿಯಲ್ಲಿ ವ್ಯಾಪಾರ ವಹಿವಾಟುದಾರರಿಗೆ ಪ್ರತ್ಯೇಕ ಜಾಗವನ್ನು ಗುರುತಿಸಬೇಕು. ಉತ್ತಮ ಸೌಲಭ್ಯ ಒದಗಿಸಿದಲ್ಲಿ, ಪ್ರವಾಸಿಗರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗಲಿದೆ. ತಿರುಪತಿ, ಧರ್ಮಸ್ಥಳ ಕ್ಷೇತ್ರಗಳ ಮಾದರಿಯಲ್ಲಿ ಸವದತ್ತಿಯಲ್ಲೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಹುಣ್ಣಿಮೆ ದಿನಗಳಲ್ಲಿ ಸವದತ್ತಿಗೆ ಚಕ್ಕಡಿಗಳಲ್ಲಿ ಜನರು ಆಗಮಿಸುತ್ತಾರೆ. ಅವರ ಜಾನುವಾರುಗಳಿಗೆ ಮೇವು ಒದಗಿಸಲು ಮೇವು ಬ್ಯಾಂಕ್ ಸ್ಥಾಪಿಸಬೇಕು. ಈ ಎಲ್ಲ ಸೌಲಭ್ಯಗಳಿಗೆ ನೆರವಾಗಲು ಮುಂದಾಗುವ ದಾನಿಗಳು ಮತ್ತು ಸಂಸ್ಥೆಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಿತರ ಸಚಿವರು, ಅಧಿಕಾರಿಗಳು ಉಪಸ್ಥಿತರಿದ್ದರು. ಸವದತ್ತಿ ಕ್ಷೇತ್ರದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ತಾರತಮ್ಯ ನೀತಿ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ : ಡಿಸಿಎಂ ಡಿ.ಕೆ.ಶಿವಕುಮಾರ್
ಸುದ್ದಿದಿನ,ಬೆಂಗಳೂರು:ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯವಾಗಿದ್ದು ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅತಿಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ ತಾರತಮ್ಯವಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹಣವನ್ನು ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ನೀಡುತ್ತಿದ್ದಾರೆ. ಆಂಧ್ರಕ್ಕಿಂತಲೂ ಕಡಿಮೆ ಹಣ ನಮಗೆ ನೀಡಿದ್ದಾರೆ ಎಂದು ಆರೋಪಿಸಿದರು.
ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮೈಸೂರು ದಸರಾ | ಅಂಬಾರಿ ಹೊತ್ತ ಅಭಿಮನ್ಯು ಜಂಬೂ ಸವಾರಿ
ಸುದ್ದಿದಿನಡೆಸ್ಕ್:ಮೈಸೂರು ದಸರಾ ಅಂಗವಾಗಿ ಶನಿವಾರ ವಿಜಯದಶಮಿಯಂದು ಅದ್ಧೂರಿ ಜಂಬೂ ಸವಾರಿ ನಡೆಯಿತು. ಅಕ್ಟೋಬರ್ 3 ರಂದು ದಸರಾ ಉದ್ಘಾಟನೆಯಾದಾಗಿನಿಂದ ಮೈಸೂರು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿದೆ. ಮೈಸೂರಿನ ಜಂಬೂಸವಾರಿಯಲ್ಲಿ 750ಕೆಜಿಯ ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ರಾಜಗಾಂಭಿರ್ಯದಿಂದ ಸಾಗಿದನು. ಈ ಉತ್ಸವವನ್ನು ಸಾವಿರಾರು ಜನರು ಕಣ್ಣು ತುಂಬಿಸಿಕೊಂಡಿದ್ದಾರೆ.
ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮಧ್ಯಾಹ್ನ 1:55ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿದರು.
ವಿಶ್ವವಿಖ್ಯಾತ ಜಂಬೂಸವಾರಿಯ ಸಲುವಾಗಿ ಅಭಿಮನ್ಯು ಆನೆ 750 ಕೆ.ಜಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ರಾಜಬೀದಿಗಳಲ್ಲಿ ಹೆಜ್ಜೆ ಹಾಕಿದನು. ಈ ಐತಿಹಾಸಿಕ ಕ್ಷಣವನ್ನು ದೇಶ- ವಿದೇಶ ಮತ್ತು ನೆರೆಹೊರೆಯ ಜಿಲ್ಲೆಯ ಲಕ್ಷಾಂತರ ಮಂದಿ ಕಣ್ಣುಂಬಿಕೊಳ್ಳಲು ರಾಜ ಬೀದಿಗಳಲ್ಲಿ ಕಿಕ್ಕಿರಿದು ಸೇರಿದ್ದರು.
ಈ ಜಂಬೂಸವಾರಿ ವೀಕ್ಷಣೆಗೆ ಅರಮನೆಯ ಆವರಣದಲ್ಲಿ 40 ಸಾವಿರ ಆಸನ ವ್ಯವಸ್ಥೆ ಮಾಡಲಾಗಿತ್ತು. ಆದರೂ ಅರಮನೆಯ ಬಳಿಕ ಚಿಕ್ಕ ಗಡಿಯಾರ, ಕೆ.ಆರ್.ಆಸ್ಪತ್ರೆ ಹಾಗೂ ಬನ್ನಿಮಂಟಪದ ರಸ್ತೆಗಳಲ್ಲಿ ಜನ ದಟ್ಟಣೆ ಹೆಚ್ಚಾಗಿದೆ. ಅಷ್ಟೇ ಅಲ್ಲದೇ ಜಂಬೂಸವಾರಿ ಸಾಗುವ ಸಮಯದಲ್ಲಿ ಸಾರ್ವಜನಿಕರು ಡಾ.ರಾಜ್‌ಕುಮಾರ್ ಪಾರ್ಕ್‌ನ ಮರಗಳ ಮೇಲೆ ಹಾಗೂ ಕಟ್ಟಡಗಳ ಮೇಲೆ ನಿಂತು ವೀಕ್ಷಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಅ.9 ರಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ6 days ago
ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ
-
ದಿನದ ಸುದ್ದಿ6 days ago
ವಸತಿ ಯೋಜನೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಗ್ರಾಮ ಸಭೆ ಕಡ್ಡಾಯ : ಸಚಿವ ಪ್ರಿಯಾಂಕ ಖರ್ಗೆ
-
ದಿನದ ಸುದ್ದಿ6 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ
-
ದಿನದ ಸುದ್ದಿ4 days ago
ರಂಗ ಸಂಗೀತ ತರಬೇತಿ ಮತ್ತು ರಂಗಗೀತೆಗಳ ಕಲಿಕಾ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ