ದಿನದ ಸುದ್ದಿ
ಗಂಡನ ಕೊಂದು ಅವನ ಮಾಂಸದಿಂದಲೇ ಅಡುಗೆ ಮಾಡಿ ಬಡಿಸಿದ ಹೆಂಡತಿ..!

ಸುದ್ದಿದಿನ ಡೆಸ್ಕ್: ಪತ್ನಿಯೇ ಪತಿಯನ್ನು ಕೊಂದು ನೆರೆ ಮನೆಯವರಿಗೆ ಉಣಬಡಿಸಿದ ಘನಘೋರ ಘಟನೆವೊಂದು ನಡೆದಿದೆ. ತನ್ನ ಪತಿ ಮತ್ತೊಬ್ಬಳನ್ನು ಮದುವೆಯಾಗುತ್ತಿದ್ದಾನೆ ಎಂದು ತಿಳಿದ ಪತ್ನಿ ಸಂಚು ಹೂಡಿ ಕೊಲೆಗೈದಿದ್ದಾಳೆ. ಅರಬ್ ದೇಶದಲ್ಲಿ ನೆಲೆಸಿದ್ದ ಮೊರಾಕೊ ಮೂಲದ ಮಹಿಳೆ ತನ್ನ ಪತ್ನಿಯನ್ನು ಕೊಂದು ಅಡುಗೆ ಮಾಡಿ ಮನೆ ಹತ್ತಿರದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರಿಗೆ ಉಣಬಡಿಸಿದ್ದಳು. ಡಿಎನ್ಎ ಟೆಸ್ಟ್ ಬಳಿಕ ವಿಚಾರ ತಿಳಿದಿದೆ.
ಮೂರು ತಿಂಗಳ ಬಳಿಕ ಕೊಲೆಯಾದ ವ್ಯಕ್ತಿಯ ಸಹೋದರ ಅಣ್ಣನನ್ನು ನೋಡಲು ಆಗಮಿಸಿದ್ದಾಗ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಆತ ಪೊಲೀಸ್ ಠಾಣೆಗೆ ತಿಳಿಸಿದ್ದಾನೆ. ಮಹಿಳೆ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಮಹಿಳೆ ಪತಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಆದರೆ, ಆಕೆ ಹೇಗೆ ಕೊಲೆ ಮಾಡಿದ್ದಾಳೆಂದು ಪೊಲೀಸರು ತಿಳಿಸಿಲ್ಲ. ಈ ಘಟನೆ ನಡೆದಿರುವುದು ಓಮನಿನ ಅಲ್ ಆಯಿನ್ ಎಂಬ ಸ್ಥಳದಲ್ಲಿ.

ದಿನದ ಸುದ್ದಿ
ಶಿಷ್ಯವೇತನಕ್ಕೆ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯದಿನವಾಗಿರುತ್ತದೆ. ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ www.sw.kar.nic.in ಅಥವಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಸಂಪರ್ಕಿಸಲು ಉಪನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹಜ್ಯೋತಿ ಆಗಸ್ಟ್ 1 ರಂದು ಜಾರಿಗೆ ಸಿದ್ಧತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ’ಗೃಹಜ್ಯೋತಿ’ ಯೋಜನೆ ಆಗಸ್ಟ್ 1 ರಂದು ಹಾಗೂ ಮನೆ ಯಜಮಾನಿಗೆ 2ಸಾವಿರ ರೂಪಾಯಿ ಅವರ ಖಾತೆಗೆ ಹಾಕುವ ’ಗೃಹ ಲಕ್ಷ್ಮಿ’ ಯೋಜನೆಗೆ ಆಗಸ್ಟ್ 17 ಅಥವಾ 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು ಎಂದು ಅವರು ಹೇಳಿದರು. ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. “ಪ್ರವೇಶ ಪತ್ರ” ತೋರಿಸಿ, ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್5 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ7 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ
-
ದಿನದ ಸುದ್ದಿ7 days ago
ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ5 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ5 days ago
ಜೂನ್ 8 ರಿಂದ ಕೋಳಿ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ7 days ago
ದಾವಣಗೆರೆ | ಶತಮಾನದ ಕೆ.ಆರ್.ಪೇಟೆ ಸರ್ಕಾರಿ ಶಾಲೆಗೆ ಡಿಸಿ ಶಿವಾನಂದ ಕಾಪಶಿ ಭೇಟಿ ; ಕಟ್ಟಡದ ಗುಣಮಟ್ಟದ ವರದಿ ನೀಡಲು ಇಂಜಿನಿಯರ್ಗೆ ಸೂಚನೆ
-
ದಿನದ ಸುದ್ದಿ5 days ago
ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ