ದಿನದ ಸುದ್ದಿ

ಈ ಬಾರಿಯ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರು ಯಾರು..?

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಕರ್ನಾಟಕದ ಸುಪ್ರಸಿದ್ಧ ಮೈಸೂರು ದಸರಾ ( Mysore Dasara ) ಮಹೋತ್ಸವದ ಉದ್ಘಾಟಕರ ಆಯ್ಕೆ ಶೀಘ್ರದಲ್ಲೇ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮೈಸೂರಿನಲ್ಲಿ ನಿನ್ನೆ ತಿಳಿಸಿದ್ದಾರೆ.

ಮೈಸೂರು ದಸರಾ ಹಿನ್ನೆಲೆ ಕುಶಾಲು ತೋಪುಗಳಿಗೆ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಉತ್ಸವ ಆಚರಣೆ ಕುರಿತು ಈಗಾಗಲೆ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಆಯಾ ಸಮಿತಿಗಳು ತಮ್ಮ ವ್ಯಾಪ್ತಿಯ ಎಲ್ಲಾ ಕೆಲಸಗಳನ್ನು ನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೈಸೂರು ಮತ್ತು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಹಲವೆಡೆ ಜಲಾವೃತವಾಗಿದ್ದು, ಸಂಚಾರಕ್ಕೆ ತೊಂದರೆಯಾಗಿದೆ. ಹೆದ್ದಾರಿ ಬದಲು ಪರ್ಯಾಯವಾಗಿ ನಾಗಮಂಗಲ ಮತ್ತು ಕನಕಪುರ ರಸ್ತೆಯನ್ನು ಬಳಕೆ ಮಾಡಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಗುಪ್ತಾ, ದಸರಾ ಮೆರವಣಿಗೆ ವೇಳೆ ಹಲವು ಬಾರಿ ಕುಶಾಲು ತೋಪುಗಳನ್ನು ಸಿಡಿಸಲಾಗುತ್ತದೆ. ಅದರ ತಾಲೀಮಿಗೆ ಪೂರ್ವಭಾವಿಯಾಗಿ ನಿನ್ನೆ ಪೂಜೆ ನೆರವೇರಿಸಲಾಯಿತು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version