ದಿನದ ಸುದ್ದಿ
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಳೀನ್ ಕುಮಾರ್ ಕಟೀಲ್
ಸುದ್ದಿದಿನ,ಬೆಂಗಳೂರು: ರಾಜ್ಯ ಬಿಜೆಪಿ ಕಛೇರಿ ಜಗನ್ನಾಥ ಭವನದ ಬಳಿ ನಡೆದ ಅದ್ಧೂರಿ ಸಮಾರಂಭದಲ್ಲಿ ನಳೀನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷ ಹುದ್ದೆ ಸ್ವೀಕರಿಸಿದರು. ಸಿಎಂ ಮತ್ತು ಇಷ್ಟು ದಿನಗಳ ಕಾಲ ಪಕ್ಷವನ್ನು ಮುನ್ನಡೆಸಿದ್ದ ಬಿ.ಎಸ್.ಯಡಿಯೂರಪ್ಪ, ಪಕ್ಷದ ಧ್ವಜವನ್ನು ಹಸ್ತಾಂತರಿಸುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಿದರು.
ಕಳೆದ ಜುಲೈ 26ರಂದು ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಒಬ್ಬರಿಗೆ ಒಂದು ಹುದ್ದೆ ಎಂಬ ನಿಯಮದಿಂದ ಪ್ರಕಾರ, ನಳೀನ್ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.