ದಿನದ ಸುದ್ದಿ
ಪ್ರಾತಃ ಸ್ಮರಣೀಯ ಸಮಾಜವಾದಿ ಮಹಾರಾಜ ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ..!
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/06/nalwadi-krishnaraja-wadiyar-suddidina-32.jpg&description=ಪ್ರಾತಃ ಸ್ಮರಣೀಯ ಸಮಾಜವಾದಿ ಮಹಾರಾಜ ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ..!', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/06/nalwadi-krishnaraja-wadiyar-suddidina-32.jpg&description=ಪ್ರಾತಃ ಸ್ಮರಣೀಯ ಸಮಾಜವಾದಿ ಮಹಾರಾಜ ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ..!', 'pinterestShare', 'width=750,height=350'); return false;" title="Pin This Post">
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ 4, 1848- ಆಗಸ್ಟ್ 3, 1940) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ 24ನೇ ರಾಜರು. ಇವರ ಆಳ್ವಿಕೆ1902 ರಿಂದ1940 ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು1895 ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ 10 ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ರಾಜಕುಮಾರನಿಗೆ ಸೂಕ್ತ ವಿದ್ಯಾಭ್ಯಾಸ, ಆಡಳಿತ ತರಬೇತಿ ಇವುಗಳನ್ನು ಮಹಾರಾಣಿಯವರು ತೀವ್ರ ನಿಗಾ ವಹಿಸಿ ನಡೆಸಿದುದರ ಪರಿಣಾಮವಾಗಿ, ಮೈಸೂರು ರಾಜ್ಯಕ್ಕೆ ಒಬ್ಬ ಸಮರ್ಥ ಆಡಳಿತಗಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರು ದೊರಕಿದರು.
ಮಾದರಿ ಮೈಸೂರು
1902ರ ಆಗಸ್ಟ್ 8ನೇ ತಾರೀಖಿನಿಂದ ಮೈಸೂರು ರಾಜ್ಯದ ನೇರ ಉಸ್ತುವಾರಿ ಕೃಷ್ಣರಾಜ ಒಡೆಯರ ಸುಪರ್ದಿಗೆ ಬಂದಿತು. ಆಗ ದಿವಾನರಾಗಿದ್ದ ಸರ್. ಕೆ. ಶೇಷಾದ್ರಿ ಐಯ್ಯರ್ ರವರ ಸಹಕಾರದೊಡನೆ ಮೈಸೂರು ರಾಜ್ಯದ ಸರ್ವತೋಮಖ ಅಭಿವೃದ್ದಿಗೆ ನಾಲ್ವಡಿ ಕೃಷ್ಣರಾಜ ಒಡೆಯರು ಕಂಕಣ ಬದ್ದರಾದರು.
ಇವರ ಕಾಲದಲ್ಲಿ ಇಡೀ ಭರತ ಖಂಡದಲ್ಲಿ ಯಾವ ಸಂಸ್ಥಾನವೂ ಕಾಣದ ಅಭಿವೃದ್ದಿಯನ್ನು ಮೈಸೂರು ರಾಜ್ಯವು ಕಂಡುದರಿಂದ, ಮೈಸೂರು ಸಂಸ್ಥಾನಕ್ಕೆ ‘ಮಾದರಿ ಮೈಸೂರು’ ಎಂಬ ಕೀರ್ತಿ ಪ್ರಾಪ್ತವಾಯಿತು. ನಾಲ್ವಡಿ ಕೃಷ್ಣರಾಜ ಒಡೆಯ ರು ಅರಸು ಮನೆತನದಿಂದ ಬಂದವರಾಗಿದ್ದರೂ ಸಹ, ಜನತೆ ಆಡಳಿತದಲ್ಲಿ ಪಾಲ್ಗೊಳ್ಳುವಿಕೆಯ ಪರವಾಗಿದ್ದರು.
ಪ್ರಜಾ ಪ್ರತಿನಿಧಿ ಸಭೆ
ಆದುದರಿಂದ ಅವರ ಕಾಲದಲ್ಲಿ ಮೈಸೂರು ರಾಜ್ಯದಲ್ಲಿ ಹೆಸರಿಗೆ ಮಾತ್ರ ಇದ್ದ ‘ಪ್ರಜಾ ಪ್ರತಿನಿಧಿ ಸಭೆ’ಯು ನೂತನ ರೂಪವನ್ನು ಪಡೆದು, ನಿಜವಾದ ಜನ ಪ್ರತಿನಿಧಿ ಸಭೆಯಾಗಿ ಪರಿವರ್ತನೆಯಾಯಿತು. ಅದಕ್ಕಾಗಿ 1923ರರಲ್ಲಿ ಹೊಸ ಕಾನೂನೊಂದನ್ನು ಜಾರಿಗೆ ತಂದು, ಪ್ರಜಾ ಪ್ರತಿನಿಧಿ ಸಭೆಯನ್ನು ಶಾಸನಬದ್ದ ಸಂಸ್ಥೆಯನ್ನಾಗಿ ಮಾರ್ಪಡಿಸಿದರು. ಇದು (ಪ್ರಜಾತಂತ್ರದ ದೃಷ್ಟಿಯಿಂದ ಭಾರತದಲ್ಲಿಯೇ ಮಾದರಿಯಾದ ಸಂಸ್ಥೆಯಾಗಿ ಕಾರ್ಯ ನಿರ್ವಹಿಸಲು ಆರಂಭಿಸಿತು. ಪ್ರಜಾ ಪ್ರತಿನಿಧಿ ಸಭೆಯು ವರ್ಷಕ್ಕೆ ಎರಡು ಬಾರಿ (1 ಜೂನ್ – ಮಹಾರಾಜರ ವರ್ಧಂತಿ , 2 ಅಕ್ಟೋಬರ್ – ದಸರಾ ಮಹೋತ್ಸವ ) ಸಮಾವೇಶಗೊಂಡು ಕಲಾಪಗಳನ್ನು ನಡೆಸುತ್ತಿತ್ತು ಅಲ್ಲಿ ವಾರ್ಷಿಕ ಆಯ ವ್ಯಯ ಪರಿಶೀಲನೆ, ಪ್ರಶ್ನೋತ್ತರಗಳು, ಠರಾವುಗಳನ್ನು ಮಂಡಿಸುವುದು ಮುಂತಾದ ಸಂಸದೀಯ ಮಾದರಿಯ ನಡವಳಿಕೆಗಳು ನಡೆಯುತ್ತಿದ್ದವು. ಪ್ರತಿನಿಧಿ ಸಭೆಯಲ್ಲಿದ್ದ ೨೭೫ ಸದಸ್ಯರಲ್ಲಿ ಹೆಚ್ಚು ಪ್ರತಿನಿಧಿಗಳು ಜನರಿಂದ ಆಯ್ಕೆಯಾದವರಾಗಿದ್ದರು.
ನ್ಯಾಯ ವಿಧಾಯಕ ಸಭೆ
ಇದರ ಜೊತೆಗೆ1907 ರಲ್ಲಿ ‘ನ್ಯಾಯ ವಿಧಾಯಕ’ ಸಭೆಯನ್ನೂ ಸಹ ಸ್ಥಾಪಿಸಲಾಯಿತು. ಇದರ ಸದಸ್ಯರ ಸಂಖ್ಯೆ 50. ಇದರಲ್ಲಿ ಜನರಿಂದ ಆಯ್ಕೆಯಾದವರು 23ಸದಸ್ಯರು. ಮೇಲ್ಮನೆಯ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಸಂಸ್ಥೆ, ಜೂನ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ಬೆಂಗಳೂರಿನಲ್ಲಿ ಸಮಾವೇಶಗೊಳ್ಳುತ್ತಿತ್ತು.
ಪ್ರಜಾ ಪ್ರತಿನಿಧಿ ಸಭೆಯಲ್ಲಿ ಮಂಡಿಸಿದ ಎಲ್ಲ ವಿಷಯಗಳನ್ನೂ ಸಹ ವಿಮರ್ಶಿಸುವ ಅಧಿಕಾರ ಆ ಸಭೆಗೆ ಇದ್ದಿತು. ಮುಖ್ಯವಾಗಿ ಯಾವುದೇ ಕಾನೂನನ್ನು ಜಾರಿಗೊಳಿಸಲು ಆ ಸಭೆಯ ಅನುಮತಿ ಅಗತ್ಯವಾಗಿತ್ತು .ಆ ಸಭೆಗೆ ಸರ್ಕಾರದ ಖರ್ಚು ಗಳನ್ನು ಕಡಿಮೆ ಮಾಡುವ ಅಧಿಕಾರ ಸಹ ಇದ್ದಿತು.
ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ
ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯಕ್ಕೆ ನೀಡಿದ ಅಮೂಲ್ಯ ಕೊಡುಗೆ ಎಂದರೆ, ಸ್ಥಳೀಯ ಸಂಸ್ಥೆಗಳನ್ನು ರಚಿಸಿ, ಆಡಳಿತ ವಿಕೇಂದ್ರೀಕರಣಕ್ಕೆ ಅನುವು ಮಾಡಿ ಕೊಟ್ಟುದು. ರಾಜ್ಯದ ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಸಹ ಮುನಿಸಿಪಾಲಿಟಿಗಳು ರಚನೆಯಾದವು. ಹಳ್ಳಿಗಳಲ್ಲಿ ಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಲು ಆರಂಭ ಮಾಡಿದುದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದಲ್ಲಿ ಜನರ ಭಾಗವಹಿಸುವಿಕೆಗೆ ಅಪಾರ ಉತ್ತೇಜನ ನೀಡಲಾಯಿತು.
ಇವರ ಕಾಲದಲ್ಲಿ…
- ಗ್ರಾಮ ನಿರ್ಮಲೀಕರಣ
- ವೈದ್ಯ ಸಹಾಯ
- ವಿದ್ಯಾ ಪ್ರಚಾರ
- ನೀರಿನ ಸೌಕರ್ಯ
- ಪ್ರಯಾಣ ಸೌಲಭ್ಯ
ಮುಂತಾದ ಕ್ಷೇತ್ರಗಳು ಸ್ವಯಮಾಡಳಿತ ಸಂಸ್ಥೆಗಳಾದವು. ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ ನಾಲ್ವಡಿಯವರನ್ನ ವಿದ್ವಾಂಸರು, ಶಿಕ್ಷಣ ತಜ್ಣರು, ಇತಿಹಾಸಕಾರರು ’ ಸಾಮಾಜಿಕ ಕಾನೂನುಗಳ ಹರಿಕಾರ’ ಎಂದು ಕರೆದಿದ್ದಾರೆ. ಸಾಹಿತ್ಯ, ಸಂಗೀತ, ವಾಸ್ತು ಶಿಲ್ಪಗಳ ಅಭಿವೃದ್ಧಿಗೆ ಪ್ರಾಮುಖ್ಯತೆಯನ್ನು ಕೊಟ್ಟು 1905ರಲ್ಲಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಪ್ರಾರಂಭಿಸಿದರು.
ಹೊಸ ರೈಲು ದಾರಿಗಳ ನಿರ್ಮಾಣ
- ಮೈಸೂರು – ಅರಸೀಕೆರೆ
- ಬೆಂಗಳೂರು – ಚಿಕ್ಕಬಳ್ಳಾಪುರ
- ಚಿಕ್ಕಜಾಜೂರು – ಚಿತ್ರದುರ್ಗ
- ನಂಜನಗೂಡು – ಚಾಮರಾಜನಗರ
- ತರೀಕೆರೆ – ನರಸಿಂಹರಾಜಪುರ
- ಶಿವಮೊಗ್ಗ – ಆನಂದಪುರ
ಈ ಎಲ್ಲ ರೈಲು ಮಾರ್ಗಗಳನ್ನು1931 ರ ವೇಳೆಗೆ ಪೂರೈಸಲಾಯಿತು .
ನೀರಾವರಿ
1907 ರಲ್ಲಿ ‘ವಾಣೀವಿಲಾಸ ಸಾಗರ’ (ಮಾರಿ ಕಣಿವೆ) ಕಟ್ಟಲ್ಪಟ್ಟಿತು. 1911ರಲ್ಲಿ ಆರಂಭವಾದ ‘ಕೃಷ್ಣರಾಜ ಸಾಗರ’ ಭಾರತದ ಮೊಟ್ಟ ಮೊದಲ ಬೃಹತ್ ಜಲಾಶಯ. 1900ರಲ್ಲಿಯೇ ಶಿವನ ಸಮುದ್ರದ ಬಳಿ ಕಾವೇರಿ ನದಿಯಿಂದ ಜಲ ವಿದ್ಯುತ್ ಕೇಂದ್ರ ಆರಂಭವಾಯಿತು. ಇದು ಭಾರತದ ಮೊದಲ ಜಲ ವಿದ್ಯುತ್ ಕೇಂದ್ರ.
ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರದು. ಇದರ ಫಲಿತಾಂಶವಾಗಿ 1905 ಆಗಸ್ಟ್ 3 ರಂದು ಪ್ರಥಮವಾಗಿ ಬೆಂಗಳೂರಿನಲ್ಲಿ ದೀಪಗಳು ಬೆಳಗಿದವು. ಸತತ 24 ವರ್ಷಗಳ ಕಾಲ ಕಾಮಗಾರಿ ನಡೆಸಿ ಕೃಷ್ಣ ರಾಜ ಸಾಗರ ( ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಅಣೆಕಟ್ಟು) ನಿರ್ಮಿಸಿದರು.
ವಿದ್ಯಾಭ್ಯಾಸ
ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು, ಉಚಿತವಾಗಿ ಮತ್ತು ಕಡ್ಡಾಯವಾಗಿ ಆರಂಭಿಸಲಾಯಿತು. ನಾಲ್ವಡಿ ಕೃಷ್ಣರಾಜರ ಮಹತ್ತರ ಸಾಧನೆಯೆಂದರೆ ಮೈಸೂರು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿದುದು. ದೇಶದಲ್ಲೇ ಮೊಟ್ಟಮೊದಲ ವಿಶ್ವವಿದ್ಯಾನಿಲಯವನ್ನು ಮೈಸೂರಿನಲ್ಲಿ ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ 270 ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದವು.
ಬೆಂಗಳೂರಿನ ಮಿಂಟೊ ಕಣ್ಣಾಸ್ಪತ್ರೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿತ್ತು. ಮೈಸೂರಿನ ಕ್ಷಯರೋಗ ಆಸ್ಪತ್ರೆ ಉತ್ತಮಗೊಂಡಿತು. ವಾಣಿಜ್ಯ ಕ್ಷೇತ್ರದಲ್ಲಿ ಮೈಸೂರು ಬ್ಯಾಂಕ್ ಖಾಸಗೀ ಸಹಭಾಗಿತ್ವದೊಡನೆ ಕಾರ್ಯಾರಂಭ ಮಾಡಿತು. 1096 ರಲ್ಲಿಯೇ ಸಹಕಾರ ಸಂಘಗಳನ್ನು ಸ್ಥಾಪಿಸಲಾಯಿತು. ರೈತರಿಗಾಗಿ ಜಮೀನು ಅಡಮಾನ ಬ್ಯಾಂಕುಗಳು ಆರಂಭವಾದವು.
ಜಾರಿ ಮಾಡಿದ ಸಾಮಾಜಿಕ ಕಾನೂನುಗಳು
- 1909 ರಲ್ಲಿ ದೇವದಾಸಿ ಪದ್ಧತಿ ನಿಷೇಧ
- 1910ರಲ್ಲಿ ಬಸವಿ ಪದ್ಧತಿ ರದ್ಧತಿ
- 1910 ರಲ್ಲಿ ’ಗೆಜ್ಜೆಪೂಜೆ’ ಪದ್ಧತಿ ಸಂಪೂರ್ಣ ನಿರ್ಮೂಲನೆ
- 1936 ಜುಲೈ 14 ರಂದು ವೇಶ್ಯಾವೃತ್ತಿ ತಡೆಗಟ್ಟುವ ಕಾಯ್ದೆ ಜಾರಿ
- 1936ಜುಲೈ 7 ರಂದು ವಿಧವೆಯರಿಗೆ ಮರುವಿವಾಹ ಮಾಡಿಕೊಳ್ಳುವ ಕಾಯ್ದೆಯ ಜಾರಿ
- 1936 ಜುಲೈ 7 ರಂದು ಸ್ತ್ರೀಯರಿಗೆ ಕಡ್ಡಾಯ ಶಿಕ್ಷಣ ಜಾರಿ
- 1914 ರಲ್ಲಿ ಶಾಲಾ ಪ್ರವೇಶಕ್ಕೆ ಜಾತಿ ಪರಿಗಣನೆಯ ನಿಷೇಧ
- 1919ರಲ್ಲಿ ಮಾಧ್ಯಮಿಕ ಶಾಲಾ ಮಟ್ಟದಲ್ಲಿ ಶಿಕ್ಷಣ ಶುಲ್ಕ ರದ್ಧತಿ
- 1927 ರಲ್ಲಿ ಸ್ತ್ರೀಯರಿಗೆ ಮತದಾನದ ಹಕ್ಕನ್ನು ಮೊಟ್ಟಮೊದಲ ಬಾರಿಗೆ ಕಲ್ಪಿಸಿಕೊಟ್ಟರು
- 1905 ರಲ್ಲಿ ಸಹಕಾರಿ ಕಾರ್ಮಿಕ ಪರಿಹಾರ ಕಾಯ್ದೆಯನ್ನು ಜಾರಿಗೆ ತಂದರು
- 1913 ರಲ್ಲಿ ಮೈಸೂರು ಗ್ರಾಮ ನ್ಯಾಯಾಲಯ ಕಾಯ್ದೆಯನ್ನು ಜಾರಿ ಮಾಡಿದರು
- 1918 ರಲ್ಲಿ ಗ್ರಾಮ ಪಂಚಾಯ್ತಿಗಳ ಕಾಯ್ದೆಯನ್ನು ಜಾರಿಗೆ ತಂದರು
ನೂರು ವರ್ಷಗಳ ಹಿಂದೆಯೇ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾತಿ ಕೊಟ್ಟವರು.
ಮಹಾತ್ಮ ಗಾಂಧಿ ಯವರಿಂದ ” ರಾಜರ್ಷಿ ” ಎಂಬ ಗೌರವ ಪಡೆದವರು.
–ಮಾಹಿತಿ : ವಿವಿಧ ಮೂಲಗಳು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.
ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.
ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.
ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.
ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.
ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.
ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.
ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.
2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ3 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ3 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ6 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ6 hours agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

