ದಿನದ ಸುದ್ದಿ
ರಾಜ್ಯಾದ್ಯಂತ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ’ನಮ್ಮ ಕ್ಲಿನಿಕ್’ ಆರಂಭ : ಡಾ.ಸಿ.ಎನ್.ಅಶ್ವತ್ಥ ನಾರಾಯಣ
ಸುದ್ದಿದಿನ ಡೆಸ್ಕ್ : ರಾಜ್ಯಾದ್ಯಂತ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ’ನಮ್ಮ ಕ್ಲಿನಿಕ್’ ಆರಂಭಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
’ನಮ್ಮ ಕ್ಲಿನಿಕ್’ ಗಳಲ್ಲಿ ಸಾಮಾನ್ಯ ಖಾಯಿಲೆ, ಮತ್ತಿತರ ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಗತ್ಯ ಪರಿಕರಗಳನ್ನು ಒದಗಿಸಲಾಗುತ್ತಿದೆ ಎಂದು ಟ್ವೀಟ್‌ನಲ್ಲಿ ಸಚಿವರು ತಿಳಿಸಿದ್ದಾರೆ.
ಆರಂಭಿಕ ಹಂತವಾಗಿ 438 ನಮ್ಮ ಕ್ಲಿನಿಕ್‌ಗಳನ್ನು ತೆರೆಯಲಾಗುತ್ತಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 36 ಲಕ್ಷ ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ 34 ಲಕ್ಷ ರೂಪಾಯಿ ವೆಚ್ಚ ಮಾಡಲಾಗುತ್ತಿದೆ. ಜನತೆಯ ಆರೋಗ್ಯ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243