ರಾಜಕೀಯ
ಮೋದಿಯನ್ನು ಕಾಡುತ್ತಿದೆ ಮೈತ್ರಿಕೂಟ ಭೀತಿ
- ಕೇಂದ್ರದಲ್ಲಿ ಒಂದು ಜಾತ್ಯತೀತ ಸರಕಾರವನ್ನು ರಚಿಸಬಲ್ಲ ಒಂದು ಚುನಾವಣೋತ್ತರ ಮೈತ್ರಿಕೂಟ ರೂಪುಗೊಳ್ಳಲಿದೆ ಎಂಬ ಭೀತಿಯ ಭೂತ ಮೋದಿಯನ್ನು ಕಾಡುತ್ತಿದೆ, ಇಂತಹ ಒಂದು ಸರಕಾರ ಮೈತ್ರಿಕೂಟದ ಎಲ್ಲ ಅಂಗಪಕ್ಷಗಳು ಅಂಗೀಕರಿಸುವ ಒಂದು ಸಮಾನ ಕನಿಷ್ಟ ಕಾರ್ಯಕ್ರಮದ ಆಧಾರದಲ್ಲಿ ರಚನೆಗೊಳ್ಳುತ್ತದೆ. ಇಂತಹ ಒಂದು ಮೈತ್ರಿ ತನ್ನ ಜಾಗದಲ್ಲಿ ಅಧಿಕಾರಕ್ಕೆ ಬರಬಹುದು ಎಂಬ ಭೀತಿಯನ್ನೇ ಮೋದಿ ಮೈತ್ರಿಗಳ ವಿರುದ್ಧ ತನ್ನ ಆರ್ಭಟಗಳ ಮೂಲಕ ಪ್ರದರ್ಶಿಸುತ್ತಿದ್ದಾರೆ. ಆ ಭೀತಿಯ ಭೂತೋಚ್ಛಾಟನೆಗೆ ಅವರು ಪ್ರಯತ್ನಿಸುತ್ತಿದ್ದಾರೆ.
ಈ ಚುನಾವಣಾ ಪ್ರಚಾರದಲ್ಲಿ ನರೇಂದ್ರ ಮೋದಿ ಮಹಾಗಟ್‌ಬಂಧನ್ ಅಥವ ಪ್ರತಿಪಕ್ಷಗಳ ಮೈತ್ರಿಯನ್ನು ಮಹಾಮಿಲಾವಟ್(ಮಹಾ ಕಲಸುಮೇಲೋಗರ) ಎಂದು ಅದರ ಮೇಲೆ ದಾಳಿ ನಡೆಸದ ದಿನವೇ ಇಲ್ಲ. ಪ್ರತಿಪಕ್ಷಗಳ ಮುಖಂಡರುಗಳು ಅಧಿಕಾರದಾಹ ತುಂಬಿದ ಸಮಯಸಾಧಕರ ಒಂದು ಪಡೆ ಎಂದು ವರ್ಣಿಸದ ದಿನವೇ ಇಲ್ಲ.
ಪ್ರಚಾರದ ಆರಂಭದಿಂದಲೂ, ಮೋದಿಯವರ ಭಾಷಣಗಳಲ್ಲಿ, ಮಹಾಮಿಲಾವಟ್ ಸರಕಾರ ಹೇಗೆ ಅಭಿವೃದ್ಧಿಗೆ ಕಂಟಕವಾಗುತ್ತದೆ, ರಾಷ್ಟ್ರೀಯ ಭದ್ರತೆಯನ್ನು ಖಾತ್ರಿಪಡಿಸಲಾರದ ಒಂದು ದುರ್ಬಲ ಸರಕಾರವಾಗುತ್ತದೆ, ಹೇಗೆ ಉತ್ತರ ಪ್ರದೇಶ ಮತ್ತು ಇತರೆಡೆಗಳಲ್ಲಿನ ಪ್ರತಿಪಕ್ಷಗಳ ಮೈತ್ರಿ ಮುಖಂಡರ ವೈಯಕ್ತಿಕ ಹಿತಗಳಿಗಾಗಿ ಅಧಿಕಾರವನ್ನು ಬಾಚಿಕೊಳ್ಳುವ ಒಂದು ನೀತಿವಿಹೀನ, ಸಮಯಸಾಧಕರ ಗುಂಪಷ್ಟೇ ಆಗಿದೆ, ಎಂಬುದೇ ನಿರಂತರವಾದ ರಾಗಾಲಾಪ.
ಪ್ರತಿಪಕ್ಷಗಳ ಮೈತ್ರಿಯ ಮೇಲೆ ಇಂತಹ ಒಂದು ಸತತ ದಾಳಿ, ತನ್ನ ಆಳ್ವಿಕೆ ಹೋಗಿ ಒಂದು ಮೈತ್ರಿ ಸರಕಾರ ಬರುವ ಸಂಭವವಿದೆ ಎಂಬ ನಿಜವಾದ ಭೀತಿಯನ್ನು ಮೋದಿ ಹೊಂದಿದ್ದಾರೆ ಎಂಬುದನ್ನು ಪ್ರಕಟಪಡಿಸುತ್ತದೆ.
1977ರಿಂದೀಚೆಗೆ, ಕೆಲವು ಅಪವಾದಗಳನ್ನು ಬಿಟ್ಟರೆ, ಮೈತ್ರಿ ಸರಕಾರಗಳು ಒಂದು ಸಾಮಾನ್ಯ ಸಂಗತಿಯಾಗಿ ಬಿಟ್ಟಿದೆ. ಮೋದಿ ವರ್ಣನೆಗೆ ತದ್ವಿರುದ್ಧವಾಗಿ ಮೈತ್ರಿ ಸರಕಾರಗಳು ಸ್ಥಿರ ಸರಕಾರಗಳನ್ನು ಕೊಟ್ಟಿವೆ ಮತ್ತು ಅಭಿವೃದ್ಧಿ ಕುರಿತಂತೆ ಅವುಗಳ ದಾಖಲೆ ಬೇರೆ ಸರಕಾರಗಳಿಗಿಂತ ಭಿನ್ನವಾಗಿಯೇನೂ ಇಲ್ಲ, ಎಲ್ಲವೂ ಬಂಡವಾಳಶಾಹಿ ಅಭಿವೃದ್ಧಿಯ ಚೌಕಟ್ಟಿನಲ್ಲೇ ಇವೆ. ನಿಜಸಂಗತಿಯೆಂದರೆ, 1999-2004ರ ವಾಜಪೇಯಿ ನೇತೃತ್ವದ ಮೈತ್ರಿ ಸರಕಾರವನ್ನು ಬಿಜೆಪಿಯೇ ಪ್ರಕಾಶಮಾನ ಭಾರತದ ಒಂದು ಮಾದರಿ ಎಂದು ಹೇಳುತ್ತಿತ್ತು.
ಮೋದಿ ಏನೇ ಹೇಳಿಕೊಳ್ಳಲಿ, ಒಂದು ಸಮಾನ ಕನಿಷ್ಟ ಕಾರ್ಯಕ್ರಮವನ್ನು ಆಧರಿಸಿದ ಒಂದು ಚುನಾವಣೋತ್ತರ ಮೈತ್ರಿಯು ಸ್ಥಿರ ಸರಕಾರವೊಂದರ ರಚನೆಗೆ ಆಧಾರವಾಗುವುದಿಲ್ಲ ಎಂದು ನಂಬಲು ಕಾರಣಗಳೇನೂ ಇಲ್ಲ. 2004ರ ಚುನಾವಣೆಗಳ ನಂತರ ಯುಪಿಎ ರಚನೆಗೊಂಡು ಒಂದು ಸಮಾನ ಕನಿಷ್ಟ ಕಾರ್ಯಕ್ರಮ ಅಂಗೀಕಾರವಾಯಿತು ತಾನೇ. ಬಿಜೆಪಿಯ ಅನುಭವವೂ ಇದೇ. 1998 ರಲ್ಲಿ ಮತ್ತು 1999ರಲ್ಲಿ ಚುನಾವಣೆಗಳ ನಂತರ ಎನ್‌ಡಿಎ ಮೈತಿಕೂಟ ರಚಿಸಲು ಅದು ಆಳ್ವಿಕೆಯ ಅಜೆಂಡಾ ಎಂಬುದನ್ನು ರೂಪಿಸಿತು. ಆ ಸಮಯದಲ್ಲಿ ಬಿಜೆಪಿ ಇಂತಹ ಒಂದು ಸರಕಾರದ ರಚನೆಗಾಗಿ, 370ನೇ ವಿಧಿಯ ರದ್ಧತಿ, ರಾಮಮಂದಿರ ನಿರ್ಮಾಣ ಮತ್ತು ಸಮಾನ ನಾಗರಿಕ ಸಂಹಿತೆಯ ತನ್ನ ಮೂಲ ಬೇಡಿಕೆಗಳನ್ನು ಬದಿಗಿಟ್ಟಿತ್ತು. ಮೋದಿ ಈಗ ಇಂತಹ ಮೈತ್ರಿ ಸರಕಾರಗಳನ್ನು ದೂಷಿಸುವುದೆಂದರೆ, ತನ್ನದೇ ಪಕ್ಷದ ಸರಕಾರಗಳನ್ನೂ ಖಂಡಿಸಿದಂತೆಯೇ ಸರಿ.
ಇಂತಹ ಮಹಾಮಿಲಾವಟ್ ಗ್ಯಾಂಗ್ ಸರಕಾರದಲ್ಲಿ ಇದ್ದಾಗ ಮಾವೋವಾದಿ ಚಟುವಟಿಕೆಗಳು ಭುಗಿಲೆದ್ದವು ಎಂದು ದೂಷಿಸಿರುವುದು, ಮತ್ತು ತನ್ನ ಸರಕಾರ ಬಂದ ಮೇಲೆ ಅವನ್ನು ಪರಿಣಾಮಕಾರಿ ಭದ್ರತಾ ಕಾರ್ಯಾಚರಣೆಗಳ ಮೂಲಕ ಮೆಟ್ಟಿ ಹಾಕಲಾಯಿತು ಎಂದಿರುವುದು ಕೂಡ ಮೋದಿಯ ಅಸಂಬದ್ಧ ಹೇಳಿಕೆ. ಮೋದಿಯ ಈ ಸುಳ್ಳು, ಪ್ರಸಕ್ತ ಚುನಾವಣಾ ಪ್ರಚಾರದ ವೇಳೆಯಲ್ಲೇ ಬಯಲಿಗೆ ಬಂದಿದೆ. ಗದ್ಚಿರೊಲಿಯಲ್ಲಿ ಒಂದು ಮಾವೋವಾದಿ ದಾಳಿಯಲ್ಲಿ 15 ಭದ್ರತಾ ಸಿಬ್ಬಂದಿಯ ಪ್ರಾಣ ಹೋದವು, ಮತ್ತು ಛತ್ತಿಸ್‌ಗಡ್‌ನ ದಾಂತೆವಾಡದಲ್ಲಿ ಒಂದು ಸ್ಫೋಟಕ ಉಪಕರಣದಿಂದ ಉಂಟಾದ ಕಾರ್ ಸ್ಫೋಟದಲ್ಲಿ ಆ ಕಾರಿನಲ್ಲಿದ್ದ ಒಬ್ಬ ಬಿಜೆಪಿ ಶಾಸಕ ಮತ್ತು ನಾಲ್ವರು ಭದ್ರತಾ ಸಿಬ್ಬಂದಿ ಕೊಲ್ಲಲ್ಪಟ್ಟರು.
ಈ ಪರಿಶುದ್ಧ ಮೋದಿ ಸರಕಾರದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಸನ್ನಿವೇಶ ಹೇಗೆ ಹದಗೆಟ್ಟಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಅಲ್ಲಿ 2014ರಿಂದ 2019ರ ನಡುವೆ ಭಯೋತ್ಪಾದಕ ದಾಳಿಗಳ ಸಂಖ್ಯೆ 109ರಿಂದ 626ಕ್ಕೆ ಏರಿದೆ ಮತ್ತು ಕೊಲ್ಲಲ್ಪಟ್ಟ ಭದ್ರತಾ ಸಿಬ್ಬಂದಿಯ ಸಂಖ್ಯೆ 130ರಿಂದ 483ಕ್ಕೇರಿದೆ.
ಹೀಗೆ ಇಲ್ಲಿರುವ ಪ್ರಶ್ನೆ ಒಂದು ಏಕ ಪಕ್ಷ ಬಹುಮತದ ಸರಕಾರ ಇದೆಯೇ ಅಥವ ಒಂದು ಮೈತ್ರಿಕೂಟದ ಸರಕಾರ ಇದೆಯೇ ಎಂಬುದಲ್ಲ. ಆ ಸರಕಾರ ಯಾವ ಧೋರಣೆಗಳನ್ನು ಮತ್ತು ಕಾರ್ಯಕ್ರಮವನ್ನು ಅನುಸರಿಸುತ್ತಿದೆ ಎಂಬುದೇ ಪ್ರಶ್ನೆ.
ನೋಟುರದ್ಧತಿಯ ಕರಾಳ ಧೋರಣೆಯನ್ನು ಹೇರಿದ್ದು ಲೋಕಸಭೆಯಲ್ಲಿ ಬಹುಮತ ಹೊಂದಿದ್ದ ಬಿಜೆಪಿಯ ನೇತೃತ್ವದ ಒಂದು ನಿರ್ಣಾಯಕ ಸರಕಾರವೇ ತಾನೇ? ಈ ವಿಧ್ವಂಸಕಾರಿ ಹೆಜ್ಜೆಗೆ ಯಾರನ್ನೂ ಹೊಣೆ ಮಾಡಲಾಗಿಲ್ಲ.
ಮಹಾಗಟ್‌ಬಂಧನ್ ರಚಿಸಿಕೊಂಡಿರುವ ಎಸ್‌ಪಿ-ಬಿಎಸ್‌ಪಿ-ಆರ್‌ಎಲ್‌ಡಿ ಪಕ್ಷಗಳು ಮೋದಿಯವರ ಪ್ರಧಾನ ಗುರಿ, ಏಕೆಂದರೆ, ಈ ಮೈತ್ರಿಕೂಟ ಉತ್ತರಪ್ರದೇಶದಲ್ಲಿ ಬಿಜೆಪಿಗೆ ಒಂದು ನಿರ್ಣಾಯಕ ಸೋಲು ಉಣ್ಣಿಸುವ ಬೆದರಿಕೆ ಒಡ್ಡಿದೆ. ಆದರೆ ಪ್ರತಿಪಕ್ಷಗಳ ಮೈತ್ರಿಗಳ ಮೇಲೆ ದಾಳಿ ಮಾಡುವ ಭರದಲ್ಲಿ ಎನ್‌ಡಿಎ 40 ಪಕ್ಷಗಳ ಒಂದು ಮಹಾಗಟ್‌ಬಂಧನ್ ಎಂಬುದನ್ನು ಮೋದಿ ಮರೆತಿದ್ದಾರೆ.
ಕೇಂದ್ರದಲ್ಲಿ ಒಂದು ಜಾತ್ಯತೀತ ಸರಕಾರವನ್ನು ರಚಿಸಬಲ್ಲ ಒಂದು ಚುನಾವಣೋತ್ತರ ಮೈತ್ರಿಯ ಭೀತಿಯ ಭೂತ ಮೋದಿಯನ್ನು ಕಾಡುತ್ತಿದೆ, ಇಂತಹ ಒಂದು ಸರಕಾರ ಮೈತ್ರಿಕೂಟದ ಎಲ್ಲ ಅಂಗಪಕ್ಷಗಳು ಅಂಗೀಕರಿಸುವ ಒಂದು ಸಮಾನ ಕನಿಷ್ಟ ಕಾರ್ಯಕ್ರಮ.
(ಈ ವಾರದ ಜನಶಕ್ತಿವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
–ಪ್ರಕಾಶ ಕಾರಟ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಿಜೆಪಿ ರೈತ ಮೋರ್ಚಾದಿಂದ ಬಂದ್‌ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್‌ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು
ಸುದ್ದಿದಿನ,ದಾವಣಗೆರೆ: ಮೇಲ್ಭದ್ರ ಯೋಜನೆಯ ನೀರನ್ನು ಸಮರ್ಪಕವಾಗಿ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಬಂದ್‌ಗೆ ಕರೆ ನೀಡಿದೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನಗರದ ವಿವಿಧ ವೃತ್ತಗಳಲ್ಲಿ ಪ್ರತಿಭಟನಾಕಾರರು ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಮೇಲ್ಭದ್ರ ಯೋಜನೆಯ ನೀರು ದಾವಣಗೆರೆ ಭಾಗದ ರೈತರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ನೀರಿನ ಲಭ್ಯತೆ ಕೃಷಿ ಚಟುವಟಿಕೆಗಳ ಮೇಲೆ ನೇರ ಪರಿಣಾಮ ಬೀರುವ ಹಿನ್ನೆಲೆಯಲ್ಲಿ, ನೀರು ಬಿಡುಗಡೆ ವಿಚಾರದಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಬೇಡಿಕೆಗೆ ತ್ವರಿತವಾಗಿ ಸ್ಪಂದಿಸಬೇಕು ಎಂಬ ಆಗ್ರಹವೂ ಕೇಳಿಬಂತು.
http://Visit : www.suddidina.com
ಗುಟ್ಕಾ, ಪಾನ್ ಮಸಾಲಾ ನಿಷೇಧಕ್ಕೂ ಆಗ್ರಹ
ಬಂದ್‌ನ ಮತ್ತೊಂದು ಪ್ರಮುಖ ಬೇಡಿಕೆ ಗುಟ್ಕಾ ಹಾಗೂ ಪಾನ್ ಮಸಾಲಾ ನಿಷೇಧಕ್ಕೆ ಸಂಬಂಧಿಸಿದೆ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಇಂತಹ ಉತ್ಪನ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾ ಒತ್ತಾಯಿಸಿದೆ.
ಈ ಎರಡು ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್‌ಗೆ ಬೆಂಬಲ ನೀಡುವಂತೆ ವ್ಯಾಪಾರಸ್ಥರು, ವಿದ್ಯಾರ್ಥಿಗಳು, ಶಾಲಾ-ಕಾಲೇಜು ಆಡಳಿತ ಮಂಡಳಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿದ್ದು, ಬಂದ್‌ಗೆ ಬೆಂಬಲ ಪಡೆಯಲು ಸಂಘಟಕರು ಕರೆ ನೀಡಿದ್ದಾರೆ.
https://x.com/ians_india/status/2094602342230528256
ಟೈರ್‌ಗೆ ಬೆಂಕಿ; ಪೊಲೀಸರ ಮಧ್ಯಪ್ರವೇಶ
ಪ್ರತಿಭಟನೆಯ ವೇಳೆ ನಗರದ ಹಲವು ವೃತ್ತಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಲಾಯಿತು. ಇದರಿಂದ ಕೆಲಕಾಲ ರಸ್ತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು.
ಸಾರ್ವಜನಿಕ ಪ್ರತಿಭಟನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಪರಿಸ್ಥಿತಿಯನ್ನು ಗಮನಿಸಲಾಗಿದ್ದು, ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಪ್ರಯತ್ನ ನಡೆದಿದೆ.
ಬಂದ್‌ಗೆ ವ್ಯಾಪಾರಸ್ಥರ ಬೆಂಬಲ?
ಬಂದ್ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವ್ಯಾಪಾರಸ್ಥರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಸಹಕರಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ. ಆದರೆ ಬಂದ್‌ಗೆ ವಿವಿಧ ವರ್ಗಗಳಿಂದ ಎಷ್ಟರ ಮಟ್ಟಿಗೆ ಬೆಂಬಲ ದೊರೆಯಲಿದೆ ಎಂಬುದು ದಿನದ ಬೆಳವಣಿಗೆಗಳಿಂದ ಸ್ಪಷ್ಟವಾಗಲಿದೆ.
ಮೇಲ್ಭದ್ರ ನೀರಿನ ವಿಚಾರ ದಾವಣಗೆರೆ ಜಿಲ್ಲೆಯ ರೈತರ ಪಾಲಿಗೆ ದೀರ್ಘಕಾಲದ ಪ್ರಮುಖ ವಿಷಯವಾಗಿದ್ದು, ಇದೀಗ ಈ ಬೇಡಿಕೆ ಮತ್ತೊಮ್ಮೆ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಯ ಕೇಂದ್ರಕ್ಕೆ ಬಂದಿದೆ. ಇದರ ಜತೆಗೆ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧದ ಬೇಡಿಕೆಯನ್ನೂ ಮುನ್ನೆಲೆಗೆ ತರುವ ಮೂಲಕ ಬಿಜೆಪಿ ರೈತ ಮೋರ್ಚಾ ಹೋರಾಟಕ್ಕೆ ವ್ಯಾಪಕ ಸ್ವರೂಪ ನೀಡಲು ಮುಂದಾಗಿದೆ.
ಒಟ್ಟಿನಲ್ಲಿ, ಮೇಲ್ಭದ್ರ ನೀರು ಬಿಡುಗಡೆ ಮತ್ತು ಗುಟ್ಕಾ–ಪಾನ್ ಮಸಾಲಾ ನಿಷೇಧ ಎಂಬ ಎರಡು ಪ್ರಮುಖ ಬೇಡಿಕೆಗಳೊಂದಿಗೆ ದಾವಣಗೆರೆಯಲ್ಲಿ ಬಂದ್ ಹಾಗೂ ಪ್ರತಿಭಟನೆ ಕಾವು ಪಡೆದಿದ್ದು, ಸರಕಾರದ ಮುಂದಿನ ಪ್ರತಿಕ್ರಿಯೆ ಇದೀಗ ಕುತೂಹಲ ಮೂಡಿಸಿದೆ.

ದಿನದ ಸುದ್ದಿ
ಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ
ಬೆಂಗಳೂರು: ಸರ್ಕಾರಿ ಸೇವೆ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆಯಬೇಕಾದ ದಿನಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಸೆಪ್ಟೆಂಬರ್ 5ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಅಭಿಯಾನ ಆರಂಭವಾಗಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹರಿಸುವ ವ್ಯವಸ್ಥೆ ರೂಪಿಸಲಾಗಿದೆ.
ಇದುವರೆಗೆ ವಿವಿಧ ಇಲಾಖೆ, ಯೋಜನೆ ಅಥವಾ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆ ಎದುರಾದಾಗ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಂಪರ್ಕಿಸಲು ಜನರು ಹಲವು ಬಾರಿ ಕಚೇರಿಗಳಿಗೆ ತೆರಳಬೇಕಾಗುತ್ತಿತ್ತು. ಇದೀಗ ಈ ಅಲೆದಾಟ ಕಡಿಮೆ ಮಾಡಿ ಜನರ ಮನೆ ಬಾಗಿಲಿಗೆ ಆಡಳಿತವನ್ನು ಕೊಂಡೊಯ್ಯುವುದು ಪ್ರಜಾಸೇವೆಯ ಪ್ರಮುಖ ಉದ್ದೇಶವಾಗಿದೆ.
ಹೈಲೈಟ್ಸ್: ಸೆ.5ರಿಂದ ಹೊಸ ಆಡಳಿತ ವ್ಯವಸ್ಥೆಗೆ ಚಾಲನೆ |
|
http://Visit : www.suddidina.com
ಪ್ರತಿ ಶನಿವಾರ ಜನರೊಂದಿಗೆ ನೇರ ಸಂಪರ್ಕ
ಪ್ರತಿ ಶನಿವಾರ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಸಭೆಗಳನ್ನು ಪರ್ಯಾಯವಾಗಿ ನಡೆಸಲು ನಿರ್ಧರಿಸಲಾಗಿದೆ. ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕೇಂದ್ರದಲ್ಲಿ ಸಭೆ ನಡೆಯಲಿದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಲಾಗುತ್ತದೆ.
ಸಭೆಗಳ ಕುರಿತು ಸಾರ್ವಜನಿಕರಿಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಮನೆ-ಮನೆಗೆ ಕರಪತ್ರ ವಿತರಿಸುವುದರ ಜತೆಗೆ AI ಆಧಾರಿತ ಕಾಲ್ ಸೆಂಟರ್ ಮೂಲಕ ಸಭೆಯ ದಿನಾಂಕ, ಸ್ಥಳ ಹಾಗೂ ಸಮಯದ ಕುರಿತು ಮಾಹಿತಿ ನೀಡಲಾಗುತ್ತದೆ.
ಗ್ರಾಮ ಒನ್‌ನಲ್ಲೇ ಅರ್ಜಿ ಸಲ್ಲಿಕೆ
ಜನರು ತಮ್ಮ ಅರ್ಜಿ ಹಾಗೂ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮ ಒನ್ ಕೇಂದ್ರದಲ್ಲಿ ಸಲ್ಲಿಸಬಹುದು. ಸಭಾ ಸ್ಥಳದಲ್ಲಿಯೂ ಗ್ರಾಮ ಒನ್ ಮಳಿಗೆ ಸ್ಥಾಪಿಸಿ ಕಂಪ್ಯೂಟರ್, ಪ್ರಿಂಟರ್ ಮತ್ತು ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ.
ಈ ಸಭೆಗಳಲ್ಲಿ ಹೊಸ ಅಹವಾಲುಗಳು ಮತ್ತು ಈಗಾಗಲೇ ದೂರು ದಾಖಲಿಸಿದ್ದರೂ ಪರಿಹಾರವಾಗದ ಅಹವಾಲುಗಳಿಗೆ ಪ್ರತ್ಯೇಕ ವ್ಯವಸ್ಥೆ ಇರಲಿದೆ. 21 ದಿನಗಳ ಬಳಿಕವೂ ಸಮರ್ಪಕ ಪರಿಹಾರ ಸಿಗದ ಪ್ರಕರಣಗಳನ್ನೂ ಆದ್ಯತೆಯಿಂದ ಪರಿಗಣಿಸಲಾಗುತ್ತದೆ.
ಬುಧವಾರ ಮೂರು ಹಂತದ ಪರಿಶೀಲನೆ
ಪ್ರಜಾಸೇವಾ ಸಭೆಗಳಲ್ಲಿ ಸ್ವೀಕರಿಸಿದ ಅರ್ಜಿ ಮತ್ತು ಅಹವಾಲುಗಳ ಮೇಲೆ ಪ್ರತಿ ಬುಧವಾರ ಮೂರು ಹಂತದ ಪರಿಶೀಲನೆ ನಡೆಯಲಿದೆ. ಬೆಳಗ್ಗೆ 9ರಿಂದ 11ರವರೆಗೆ ತಾಲ್ಲೂಕು ಮಟ್ಟದಲ್ಲಿ, 11ರಿಂದ ಮಧ್ಯಾಹ್ನ 1ರವರೆಗೆ ಉಪವಿಭಾಗ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಜಿಲ್ಲಾ ಮಟ್ಟದಲ್ಲಿ ಪರಿಶೀಲನೆ ನಡೆಯಲಿದೆ.
ತಾಲ್ಲೂಕಿನಲ್ಲಿ ಬಗೆಹರಿಯದ ಸಮಸ್ಯೆಗಳು ಉಪವಿಭಾಗಾಧಿಕಾರಿಗೆ, ಅಲ್ಲಿಂದ ಜಿಲ್ಲಾಧಿಕಾರಿಗೆ ಮೇಲ್ದರ್ಜೆಗೆ ವರ್ಗಾವಣೆಯಾಗಲಿವೆ. ನಿಗದಿತ ಅವಧಿಯಲ್ಲಿ ಪರಿಹಾರವಾಗದ ಪ್ರಕರಣಗಳು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಮಟ್ಟಕ್ಕೂ ಸ್ವಯಂಚಾಲಿತವಾಗಿ ಎಸ್ಕಲೇಷನ್ ಆಗುವ ವ್ಯವಸ್ಥೆ ಇರಲಿದೆ.
ಸ್ಥಳದಲ್ಲೇ ಮಂಜೂರಾತಿ, ಆನ್‌ಲೈನ್‌ನಲ್ಲಿ ಸ್ಥಿತಿ
ಅರ್ಹ ಫಲಾನುಭವಿಗಳಿಗೆ ಕೆಲವು ಯೋಜನೆಗಳ ಮಂಜೂರಾತಿ ಪತ್ರವನ್ನು ಸ್ಥಳದಲ್ಲೇ ನೀಡಲು ಅವಕಾಶವಿದೆ. ಅರ್ಜಿ ಅಥವಾ ದೂರು ಯಾವ ಹಂತದಲ್ಲಿದೆ ಎಂಬುದನ್ನು ಸಾರ್ವಜನಿಕರು ನೈಜ-ಸಮಯದ ಸ್ಥಿತಿ ಪರಿಶೀಲನಾ ವ್ಯವಸ್ಥೆಯ ಮೂಲಕ ತಿಳಿದುಕೊಳ್ಳಬಹುದು.
ಇದಲ್ಲದೆ, ಪ್ರತಿ ಸಭೆಯ ಸಂಪೂರ್ಣ ವಿವರ, ಛಾಯಾಚಿತ್ರ, ವೀಡಿಯೋ ಹಾಗೂ ಫಲಾನುಭವಿಗಳ ಅಭಿಪ್ರಾಯಗಳನ್ನು ಪೋರ್ಟಲ್‌ನಲ್ಲಿ ದಾಖಲಿಸಲಾಗುತ್ತದೆ. ಸಾರ್ವಜನಿಕರು 1902 ಸಹಾಯವಾಣಿ ಅಥವಾ ಅಧಿಕೃತ IPGRS ಪೋರ್ಟಲ್ ಮೂಲಕವೂ ಕುಂದುಕೊರತೆ ದಾಖಲಿಸಬಹುದು.
ಆಡಳಿತಕ್ಕೆ ಹೊಣೆಗಾರಿಕೆ, ಜನರಿಗೆ ಉತ್ತರ
ಪ್ರಜಾಸೇವಾ ಅಭಿಯಾನದ ಯಶಸ್ಸು ಕೇವಲ ಸಭೆ ನಡೆಸುವುದರಲ್ಲಿ ಇಲ್ಲ; ದೂರು ಸ್ವೀಕರಿಸಿ, ಕಾಲಮಿತಿಯಲ್ಲಿ ಪರಿಹರಿಸಿ, ಅದರ ಹೊಣೆಗಾರಿಕೆಯನ್ನು ನಿಗದಿಪಡಿಸುವುದರಲ್ಲಿ ಇದೆ. ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳು, ಅಧಿಕಾರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳ ನಿರಂತರ ಮೇಲ್ವಿಚಾರಣೆಯ ಮೂಲಕ ಬಾಕಿ ಪ್ರಕರಣಗಳ ವಿಲೇವಾರಿಗೆ ಒತ್ತು ನೀಡಲಾಗಿದೆ. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಹೆಚ್ಚಿಸುವ ಈ ವ್ಯವಸ್ಥೆ ಆಡಳಿತದ ಹೊಸ ಮಾದರಿಯಾಗುವ ನಿರೀಕ್ಷೆ ಮೂಡಿಸಿದೆ.

ದಿನದ ಸುದ್ದಿ
ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 35 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ಮತ್ತೊಮ್ಮೆ ತನ್ನದಾಗಿಸಿಕೊಂಡಿದ್ದಾರೆ. ಬಿಜೆಪಿಯ ಅಭ್ಯರ್ಥಿಗಳು 29 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.
ಈ ಫಲಿತಾಂಶದೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ರಾಜಕೀಯದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣಗೊಂಡಿದೆ.
ಮೇಯರ್ ಸ್ಥಾನಕ್ಕೆ ಅಜಿಲ್ ಅಹಮದ್ ಗೋಲಾ
ಈ ಚುನಾವಣೆಯಲ್ಲಿ 21ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯ ಅಜಿಲ್ ಅಹಮದ್ ಗೋಲಾ ಅವರು ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಮತದಾನದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗೆ ಬಹುಮತ ದೊರೆತಿದ್ದು, ಅವರು ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ.
ಪಾಲಿಕೆಯ ಮುಂದಿನ ಆಡಳಿತದಲ್ಲಿ ಮೇಯರ್ ಸ್ಥಾನ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಅಜಿಲ್ ಅಹಮದ್ ಗೋಲಾ ಅವರ ಆಯ್ಕೆ ಇದೀಗ ಗಮನ ಸೆಳೆದಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ 35 ಮತಗಳು ದೊರೆತಿರುವುದು ಚುನಾವಣೆಯಲ್ಲಿ ಪಕ್ಷದ ಬಲವನ್ನು ತೋರಿಸಿದೆ.
ಉಪ ಮೇಯರ್ ಸ್ಥಾನವೂ ಕಾಂಗ್ರೆಸ್ ಪಾಲು
20ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊರೆತ ಬಹುಮತದ ಹಿನ್ನೆಲೆಯಲ್ಲಿ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಮೇಯರ್ ಹಾಗೂ ಉಪ ಮೇಯರ್ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿರುವುದರಿಂದ ಪಾಲಿಕೆಯ ಆಡಳಿತದ ಮೇಲೆ ಪಕ್ಷದ ಹಿಡಿತ ಮತ್ತಷ್ಟು ಬಲಗೊಂಡಿದೆ.
ಆಗಸ್ಟ್ 7ರಿಂದ ಆಗಸ್ಟ್ 29ಕ್ಕೆ ಮುಂದೂಡಿಕೆ
ಆರಂಭದಲ್ಲಿ ಈ ಚುನಾವಣೆ ಆಗಸ್ಟ್ 7ರಂದು ನಡೆಯಬೇಕಿತ್ತು. ಆದರೆ ಕೆಲವು ಅನಿವಾರ್ಯ ಕಾರಣಗಳಿಂದ ಚುನಾವಣೆ ಮುಂದೂಡಲ್ಪಟ್ಟಿತ್ತು. ಬಳಿಕ ಪ್ರಾದೇಶಿಕ ಆಯುಕ್ತರ ಆದೇಶದ ನಂತರ ಪರಿಷ್ಕೃತ ದಿನಾಂಕ ನಿಗದಿಪಡಿಸಿ ಆಗಸ್ಟ್ 29ರಂದು ಚುನಾವಣೆ ನಡೆಸಲಾಯಿತು.
ಅದರಂತೆ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಒಟ್ಟು ಮತಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್ 35 ಮತಗಳನ್ನು ಪಡೆದರೆ, ಬಿಜೆಪಿ 29 ಮತಗಳಿಗೆ ಸೀಮಿತವಾಯಿತು.
ಈ ಮೂಲಕ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಆಡಳಿತದ ಚುಕ್ಕಾಣಿ ಮತ್ತೊಮ್ಮೆ ಕಾಂಗ್ರೆಸ್ ಕೈಗೆ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಾಲಿಕೆಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ವಿಚಾರಗಳಲ್ಲಿ ಹೊಸ ಮೇಯರ್ ಮತ್ತು ಉಪ ಮೇಯರ್ ಅವರ ಕಾರ್ಯವೈಖರಿ ಹೇಗಿರಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

-
ದಿನದ ಸುದ್ದಿ6 days agoಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ
-
ದಿನದ ಸುದ್ದಿ7 days agoಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
-
ದಿನದ ಸುದ್ದಿ4 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ4 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ4 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ5 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ5 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ5 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ



