Connect with us

ರಾಜಕೀಯ

ಮೋದಿಯನ್ನು ಕಾಡುತ್ತಿದೆ ಮೈತ್ರಿಕೂಟ ಭೀತಿ

Published

on

  • ಕೇಂದ್ರದಲ್ಲಿ ಒಂದು ಜಾತ್ಯತೀತ ಸರಕಾರವನ್ನು ರಚಿಸಬಲ್ಲ ಒಂದು ಚುನಾವಣೋತ್ತರ ಮೈತ್ರಿಕೂಟ ರೂಪುಗೊಳ್ಳಲಿದೆ ಎಂಬ ಭೀತಿಯ ಭೂತ ಮೋದಿಯನ್ನು ಕಾಡುತ್ತಿದೆ, ಇಂತಹ ಒಂದು ಸರಕಾರ ಮೈತ್ರಿಕೂಟದ ಎಲ್ಲ ಅಂಗಪಕ್ಷಗಳು ಅಂಗೀಕರಿಸುವ ಒಂದು ಸಮಾನ ಕನಿಷ್ಟ ಕಾರ್ಯಕ್ರಮದ ಆಧಾರದಲ್ಲಿ ರಚನೆಗೊಳ್ಳುತ್ತದೆ. ಇಂತಹ ಒಂದು ಮೈತ್ರಿ ತನ್ನ ಜಾಗದಲ್ಲಿ ಅಧಿಕಾರಕ್ಕೆ ಬರಬಹುದು ಎಂಬ ಭೀತಿಯನ್ನೇ ಮೋದಿ ಮೈತ್ರಿಗಳ ವಿರುದ್ಧ ತನ್ನ ಆರ್ಭಟಗಳ ಮೂಲಕ ಪ್ರದರ್ಶಿಸುತ್ತಿದ್ದಾರೆ. ಆ ಭೀತಿಯ ಭೂತೋಚ್ಛಾಟನೆಗೆ ಅವರು ಪ್ರಯತ್ನಿಸುತ್ತಿದ್ದಾರೆ.

ಚುನಾವಣಾ ಪ್ರಚಾರದಲ್ಲಿ ನರೇಂದ್ರ ಮೋದಿ ಮಹಾಗಟ್‌ಬಂಧನ್ ಅಥವ ಪ್ರತಿಪಕ್ಷಗಳ ಮೈತ್ರಿಯನ್ನು ಮಹಾಮಿಲಾವಟ್(ಮಹಾ ಕಲಸುಮೇಲೋಗರ) ಎಂದು ಅದರ ಮೇಲೆ ದಾಳಿ ನಡೆಸದ ದಿನವೇ ಇಲ್ಲ. ಪ್ರತಿಪಕ್ಷಗಳ ಮುಖಂಡರುಗಳು ಅಧಿಕಾರದಾಹ ತುಂಬಿದ ಸಮಯಸಾಧಕರ ಒಂದು ಪಡೆ ಎಂದು ವರ್ಣಿಸದ ದಿನವೇ ಇಲ್ಲ.

ಪ್ರಚಾರದ ಆರಂಭದಿಂದಲೂ, ಮೋದಿಯವರ ಭಾಷಣಗಳಲ್ಲಿ, ಮಹಾಮಿಲಾವಟ್ ಸರಕಾರ ಹೇಗೆ ಅಭಿವೃದ್ಧಿಗೆ ಕಂಟಕವಾಗುತ್ತದೆ, ರಾಷ್ಟ್ರೀಯ ಭದ್ರತೆಯನ್ನು ಖಾತ್ರಿಪಡಿಸಲಾರದ ಒಂದು ದುರ್ಬಲ ಸರಕಾರವಾಗುತ್ತದೆ, ಹೇಗೆ ಉತ್ತರ ಪ್ರದೇಶ ಮತ್ತು ಇತರೆಡೆಗಳಲ್ಲಿನ ಪ್ರತಿಪಕ್ಷಗಳ ಮೈತ್ರಿ ಮುಖಂಡರ ವೈಯಕ್ತಿಕ ಹಿತಗಳಿಗಾಗಿ ಅಧಿಕಾರವನ್ನು ಬಾಚಿಕೊಳ್ಳುವ ಒಂದು ನೀತಿವಿಹೀನ, ಸಮಯಸಾಧಕರ ಗುಂಪಷ್ಟೇ ಆಗಿದೆ, ಎಂಬುದೇ ನಿರಂತರವಾದ ರಾಗಾಲಾಪ.

ಪ್ರತಿಪಕ್ಷಗಳ ಮೈತ್ರಿಯ ಮೇಲೆ ಇಂತಹ ಒಂದು ಸತತ ದಾಳಿ, ತನ್ನ ಆಳ್ವಿಕೆ ಹೋಗಿ ಒಂದು ಮೈತ್ರಿ ಸರಕಾರ ಬರುವ ಸಂಭವವಿದೆ ಎಂಬ ನಿಜವಾದ ಭೀತಿಯನ್ನು ಮೋದಿ ಹೊಂದಿದ್ದಾರೆ ಎಂಬುದನ್ನು ಪ್ರಕಟಪಡಿಸುತ್ತದೆ.

1977ರಿಂದೀಚೆಗೆ, ಕೆಲವು ಅಪವಾದಗಳನ್ನು ಬಿಟ್ಟರೆ, ಮೈತ್ರಿ ಸರಕಾರಗಳು ಒಂದು ಸಾಮಾನ್ಯ ಸಂಗತಿಯಾಗಿ ಬಿಟ್ಟಿದೆ. ಮೋದಿ ವರ್ಣನೆಗೆ ತದ್ವಿರುದ್ಧವಾಗಿ ಮೈತ್ರಿ ಸರಕಾರಗಳು ಸ್ಥಿರ ಸರಕಾರಗಳನ್ನು ಕೊಟ್ಟಿವೆ ಮತ್ತು ಅಭಿವೃದ್ಧಿ ಕುರಿತಂತೆ ಅವುಗಳ ದಾಖಲೆ ಬೇರೆ ಸರಕಾರಗಳಿಗಿಂತ ಭಿನ್ನವಾಗಿಯೇನೂ ಇಲ್ಲ, ಎಲ್ಲವೂ ಬಂಡವಾಳಶಾಹಿ ಅಭಿವೃದ್ಧಿಯ ಚೌಕಟ್ಟಿನಲ್ಲೇ ಇವೆ. ನಿಜಸಂಗತಿಯೆಂದರೆ, 1999-2004ರ ವಾಜಪೇಯಿ ನೇತೃತ್ವದ ಮೈತ್ರಿ ಸರಕಾರವನ್ನು ಬಿಜೆಪಿಯೇ ಪ್ರಕಾಶಮಾನ ಭಾರತದ ಒಂದು ಮಾದರಿ ಎಂದು ಹೇಳುತ್ತಿತ್ತು.

ಮೋದಿ ಏನೇ ಹೇಳಿಕೊಳ್ಳಲಿ, ಒಂದು ಸಮಾನ ಕನಿಷ್ಟ ಕಾರ್ಯಕ್ರಮವನ್ನು ಆಧರಿಸಿದ ಒಂದು ಚುನಾವಣೋತ್ತರ ಮೈತ್ರಿಯು ಸ್ಥಿರ ಸರಕಾರವೊಂದರ ರಚನೆಗೆ ಆಧಾರವಾಗುವುದಿಲ್ಲ ಎಂದು ನಂಬಲು ಕಾರಣಗಳೇನೂ ಇಲ್ಲ. 2004ರ ಚುನಾವಣೆಗಳ ನಂತರ ಯುಪಿಎ ರಚನೆಗೊಂಡು ಒಂದು ಸಮಾನ ಕನಿಷ್ಟ ಕಾರ್ಯಕ್ರಮ ಅಂಗೀಕಾರವಾಯಿತು ತಾನೇ. ಬಿಜೆಪಿಯ ಅನುಭವವೂ ಇದೇ. 1998 ರಲ್ಲಿ ಮತ್ತು 1999ರಲ್ಲಿ ಚುನಾವಣೆಗಳ ನಂತರ ಎನ್‌ಡಿಎ ಮೈತಿಕೂಟ ರಚಿಸಲು ಅದು ಆಳ್ವಿಕೆಯ ಅಜೆಂಡಾ ಎಂಬುದನ್ನು ರೂಪಿಸಿತು. ಆ ಸಮಯದಲ್ಲಿ ಬಿಜೆಪಿ ಇಂತಹ ಒಂದು ಸರಕಾರದ ರಚನೆಗಾಗಿ, 370ನೇ ವಿಧಿಯ ರದ್ಧತಿ, ರಾಮಮಂದಿರ ನಿರ್ಮಾಣ ಮತ್ತು ಸಮಾನ ನಾಗರಿಕ ಸಂಹಿತೆಯ ತನ್ನ ಮೂಲ ಬೇಡಿಕೆಗಳನ್ನು ಬದಿಗಿಟ್ಟಿತ್ತು. ಮೋದಿ ಈಗ ಇಂತಹ ಮೈತ್ರಿ ಸರಕಾರಗಳನ್ನು ದೂಷಿಸುವುದೆಂದರೆ, ತನ್ನದೇ ಪಕ್ಷದ ಸರಕಾರಗಳನ್ನೂ ಖಂಡಿಸಿದಂತೆಯೇ ಸರಿ.

ಇಂತಹ ಮಹಾಮಿಲಾವಟ್ ಗ್ಯಾಂಗ್ ಸರಕಾರದಲ್ಲಿ ಇದ್ದಾಗ ಮಾವೋವಾದಿ ಚಟುವಟಿಕೆಗಳು ಭುಗಿಲೆದ್ದವು ಎಂದು ದೂಷಿಸಿರುವುದು, ಮತ್ತು ತನ್ನ ಸರಕಾರ ಬಂದ ಮೇಲೆ ಅವನ್ನು ಪರಿಣಾಮಕಾರಿ ಭದ್ರತಾ ಕಾರ್ಯಾಚರಣೆಗಳ ಮೂಲಕ ಮೆಟ್ಟಿ ಹಾಕಲಾಯಿತು ಎಂದಿರುವುದು ಕೂಡ ಮೋದಿಯ ಅಸಂಬದ್ಧ ಹೇಳಿಕೆ. ಮೋದಿಯ ಈ ಸುಳ್ಳು, ಪ್ರಸಕ್ತ ಚುನಾವಣಾ ಪ್ರಚಾರದ ವೇಳೆಯಲ್ಲೇ ಬಯಲಿಗೆ ಬಂದಿದೆ. ಗದ್ಚಿರೊಲಿಯಲ್ಲಿ ಒಂದು ಮಾವೋವಾದಿ ದಾಳಿಯಲ್ಲಿ 15 ಭದ್ರತಾ ಸಿಬ್ಬಂದಿಯ ಪ್ರಾಣ ಹೋದವು, ಮತ್ತು ಛತ್ತಿಸ್‌ಗಡ್‌ನ ದಾಂತೆವಾಡದಲ್ಲಿ ಒಂದು ಸ್ಫೋಟಕ ಉಪಕರಣದಿಂದ ಉಂಟಾದ ಕಾರ್ ಸ್ಫೋಟದಲ್ಲಿ ಆ ಕಾರಿನಲ್ಲಿದ್ದ ಒಬ್ಬ ಬಿಜೆಪಿ ಶಾಸಕ ಮತ್ತು ನಾಲ್ವರು ಭದ್ರತಾ ಸಿಬ್ಬಂದಿ ಕೊಲ್ಲಲ್ಪಟ್ಟರು.

ಈ ಪರಿಶುದ್ಧ ಮೋದಿ ಸರಕಾರದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಸನ್ನಿವೇಶ ಹೇಗೆ ಹದಗೆಟ್ಟಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಅಲ್ಲಿ 2014ರಿಂದ 2019ರ ನಡುವೆ ಭಯೋತ್ಪಾದಕ ದಾಳಿಗಳ ಸಂಖ್ಯೆ 109ರಿಂದ 626ಕ್ಕೆ ಏರಿದೆ ಮತ್ತು ಕೊಲ್ಲಲ್ಪಟ್ಟ ಭದ್ರತಾ ಸಿಬ್ಬಂದಿಯ ಸಂಖ್ಯೆ 130ರಿಂದ 483ಕ್ಕೇರಿದೆ.

ಹೀಗೆ ಇಲ್ಲಿರುವ ಪ್ರಶ್ನೆ ಒಂದು ಏಕ ಪಕ್ಷ ಬಹುಮತದ ಸರಕಾರ ಇದೆಯೇ ಅಥವ ಒಂದು ಮೈತ್ರಿಕೂಟದ ಸರಕಾರ ಇದೆಯೇ ಎಂಬುದಲ್ಲ. ಆ ಸರಕಾರ ಯಾವ ಧೋರಣೆಗಳನ್ನು ಮತ್ತು ಕಾರ್ಯಕ್ರಮವನ್ನು ಅನುಸರಿಸುತ್ತಿದೆ ಎಂಬುದೇ ಪ್ರಶ್ನೆ.

ನೋಟುರದ್ಧತಿಯ ಕರಾಳ ಧೋರಣೆಯನ್ನು ಹೇರಿದ್ದು ಲೋಕಸಭೆಯಲ್ಲಿ ಬಹುಮತ ಹೊಂದಿದ್ದ ಬಿಜೆಪಿಯ ನೇತೃತ್ವದ ಒಂದು ನಿರ್ಣಾಯಕ ಸರಕಾರವೇ ತಾನೇ? ಈ ವಿಧ್ವಂಸಕಾರಿ ಹೆಜ್ಜೆಗೆ ಯಾರನ್ನೂ ಹೊಣೆ ಮಾಡಲಾಗಿಲ್ಲ.

ಮಹಾಗಟ್‌ಬಂಧನ್ ರಚಿಸಿಕೊಂಡಿರುವ ಎಸ್‌ಪಿ-ಬಿಎಸ್‌ಪಿ-ಆರ್‌ಎಲ್‌ಡಿ ಪಕ್ಷಗಳು ಮೋದಿಯವರ ಪ್ರಧಾನ ಗುರಿ, ಏಕೆಂದರೆ, ಈ ಮೈತ್ರಿಕೂಟ ಉತ್ತರಪ್ರದೇಶದಲ್ಲಿ ಬಿಜೆಪಿಗೆ ಒಂದು ನಿರ್ಣಾಯಕ ಸೋಲು ಉಣ್ಣಿಸುವ ಬೆದರಿಕೆ ಒಡ್ಡಿದೆ. ಆದರೆ ಪ್ರತಿಪಕ್ಷಗಳ ಮೈತ್ರಿಗಳ ಮೇಲೆ ದಾಳಿ ಮಾಡುವ ಭರದಲ್ಲಿ ಎನ್‌ಡಿಎ 40 ಪಕ್ಷಗಳ ಒಂದು ಮಹಾಗಟ್‌ಬಂಧನ್ ಎಂಬುದನ್ನು ಮೋದಿ ಮರೆತಿದ್ದಾರೆ.

ಕೇಂದ್ರದಲ್ಲಿ ಒಂದು ಜಾತ್ಯತೀತ ಸರಕಾರವನ್ನು ರಚಿಸಬಲ್ಲ ಒಂದು ಚುನಾವಣೋತ್ತರ ಮೈತ್ರಿಯ ಭೀತಿಯ ಭೂತ ಮೋದಿಯನ್ನು ಕಾಡುತ್ತಿದೆ, ಇಂತಹ ಒಂದು ಸರಕಾರ ಮೈತ್ರಿಕೂಟದ ಎಲ್ಲ ಅಂಗಪಕ್ಷಗಳು ಅಂಗೀಕರಿಸುವ ಒಂದು ಸಮಾನ ಕನಿಷ್ಟ ಕಾರ್ಯಕ್ರಮ.

(ಈ ವಾರದ ಜನಶಕ್ತಿವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಪ್ರಕಾಶ ಕಾರಟ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್‌ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್‌ಒಗಳನ್ನು ಅಥವಾ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್‌ವೈಸರ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.

ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.

1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್‌ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್‌ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.

ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

Published

on

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ.

ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ16 hours ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ3 days ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ3 days ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ5 days ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ6 days ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ7 days ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ1 week ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ1 week ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ2 weeks ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ2 weeks ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

Trending