ಸಿನಿ ಸುದ್ದಿ
‘ನವರಾತ್ರಿ’ ಚಿತ್ರದಲ್ಲಿ ನಾಯಕಿ ಹೃದಯ ಅವಂತಿ
ಲಕ್ಷ್ಮೇಕಾಂತ್ ಚೆನ್ನ ನಿರ್ದೇಶನದ ‘ನವರಾತ್ರಿ’ ಚಿತ್ರದಲ್ಲಿ ‘ಒರಟ ಐ ಲವ್ಯೂ’ ಹಾಗೂ ‘ತ್ರಾಟಕ’ ಚಿತ್ರದ ಖ್ಯಾತಿಯ ನಟಿ ಹೃದಯ ಅವಂತಿ ನಾಯಕಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.
ಕಾಫಿಸ್ ಸಿನಿಮಾ’ ಬ್ಯಾನರ್ ಅಡಿಯಲ್ಲಿ ನಿರ್ಮಿತವಾಗಿರುವ ಈ ಚಿತ್ರಕ್ಕೆ ಸಮನ್ಯ ರೆಡ್ಡಿ ವಂಶಿ ಬಂಡವಾಳವನ್ನು ಹೂಡಿದ್ದಾರೆ.
ನವರಸಗಳಿಂದ ಕೂಡಿದ ಪಾತ್ರವನ್ನು ಮಾಡುತ್ತಿರುವ ನಾಯಕಿಯೂ ಈ ಚಿತ್ರದಲ್ಲಿ ಮಾರ್ಡನ್ ಹಾಗೂ ಸಾಂಪ್ರದಾಯಿಕ ಲುಕ್ ಎರಡರಲ್ಲೂ ಕಾಣಿಸಿಕೊಂಡಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥೆಯನ್ನು ಒಳಗೊಂಡಿದ್ದೂ, ನವರಸಗಳಿಂದ ಕೂಡಿದ ಅಂಶಗಳನ್ನು ಒಳಗೊಂಡಿದೆ. ಇಲ್ಲಿ ದೇವರು ಹಾಗೂ ದೆವ್ವ ಎರಡು ಅಂಶಗಳು ಪ್ರಮುಖವಾದ ಪಾತ್ರವನ್ನು
ವಹಿಸಿದೆ.
ಪದ್ಮವಾತಿ ಸೀರಿಯಲ್ ಖ್ಯಾತಿಯ ತ್ರಿವಿಕ್ರಮ್ ನಾಯಕನಾದರೆ, ಶಿವ ಮಂಜು, ಕಾರ್ತಿಕ್, ಪ್ರಣಯ ಮೂರ್ತಿ, ಲೋಕೇಶ್ ಸೇರಿದಂತೆ ಅನೇಕರು ಪ್ರಮುಖ ಪಾತ್ರಧಾರಿಗಳಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಒಂದು ಫೈಟ್ ಒಳಗೊಂಡಿದ್ದೂ, ಯಾವುದೇ ರೀತಿಯ ಹಾಡಿಲ್ಲದಿರುವುದೇ ಚಿತ್ರದ ವಿಶೇಷವಾಗಿದೆ.
ಸಂಗೀತ ನಿರ್ದೇಶಕರಾಗಿ ತೆಲುಗು ಸಿನಿಮಾ ‘ಛೋಟಾ ಭೀಮ್’ ಹಾಗೂ ‘ಮನು’ ಖ್ಯಾತಿಯ ನರೇಶ್ ಕುಮಾರನ್ ಸಂಯೋಜನೆ ಮಾಡಿದ್ದಾರೆ.
ಚಿತ್ರವೂ 1. 55 ನಿಮಿಷಗಳನ್ನು ಒಳಗೊಂಡಿದ್ದೂ, ಸಂಕಲನವು ಲೋಕೇಶ್ ಚೆನ್ನ ಹಾಗೂ ಛಾಯಾಗ್ರಹಣ ಸಂಕಲನವನ್ನು ಅನ್ನಪೂರ್ಣ ಸ್ಟುಡಿಯೋಸ್ ಮಾಡಿದೆ.
ಅತಿ ಶೀಘ್ರದಲ್ಲಿಯೇ ಈ ಚಿತ್ರವೂ ಪ್ರೇಕ್ಷಕರ ಮುಂದೆ ತೆರೆಕಾಣಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಗುರುಪ್ರಸಾದ್ ಮೇಲೆ ಸಾಲು ಸಾಲು ಚೆಕ್‌ಬೌನ್ಸ್ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್ ಗೌಡ.
ಹಣ ವಾಪಸ್ ಕೊಡಲಾಗದೇ ಕಿರಿಕ್ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್ ಅವರು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದ, ಗುರುಪ್ರಸಾದ್ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್. ಮೆಡಿಕಲ್ ರಿಪೋರ್ಟ್ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.
ನಿನ್ನೆ ಅಂದರೆ ನವೆಂಬರ್ 2ಕ್ಕೆ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್ ರೀಚಬಲ್ ಬಂದಿತ್ತು ಮೊಬೈಲ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
52 ವರ್ಷದ ಕನಕಪುರ ಮೂಲದ ಗುರುಪ್ರಸಾದ್ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್ ಚಿತ್ರದ ಮೂಲಕ ಮನೆಮಾತಾಗಿದ್ದರು.
ನಿರ್ದೇಶಕ ʻಮಠʼ ಗುರುಪ್ರಸಾದ್ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್ ಡೇ ವಿಶ್ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್ ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು, ಗುರುಪ್ರಸಾದ್ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಅಂತಾರಾಷ್ಟ್ರೀಯ, ನವೋದಯ ಮಟ್ಟದ ಉತ್ಕೃಷ್ಟ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿಯೂ ಸಿಗಬೇಕು: ಜಿ. ಬಿ. ವಿನಯ್ ಕುಮಾರ್
-
ದಿನದ ಸುದ್ದಿ6 days ago
ನ್ಯಾಕ್ ಗ್ರೇಡ್ ನೀಡಲು ಲಂಚ ಸ್ವೀಕಾರ ; ದಾವಣಗೆರೆ ವಿವಿ ಪ್ರಾಧ್ಯಾಪಕಿ ಬಂಧನ
-
ದಿನದ ಸುದ್ದಿ4 days ago
ಹಿಂದುಳಿದ ಸಮಾಜಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡೆದು ಸಂಘಟಿತರಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ
-
ದಿನದ ಸುದ್ದಿ15 hours ago
ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್‍ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ