Connect with us

ದಿನದ ಸುದ್ದಿ

ಎನ್ ಇ ಪಿ ತಡೆ | ಶಿಕ್ಷಣ ತಜ್ಞರ ಜತೆ ಚರ್ಚಿಸಿ ತೀರ್ಮಾನ : ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್

Published

on

ಸುದ್ದಿದಿನ,ಚಿಕ್ಕಬಳ್ಳಾಪುರ : ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಕಳೆದ ಎರಡು ವರ್ಷಗಳಲ್ಲಿ ಆಗಿರುವ ಬದಲಾವಣೆಗಳು ಸಾಧಕ ಬಾಧಕಗಳು ಹಾಗೂ ಸಮಸ್ಯೆಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಎಲ್ಲಾ ವಿವರಗಳನ್ನು ಸಂಗ್ರಹಿಸಿದ ನಂತರ ವಿವಿಧ ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಹಾಗೂ ಶಿಕ್ಷಣ ತಜ್ಞರ ಜೊತೆ ಚರ್ಚಿಸಿ ರಾಷ್ಟ್ರೀಯ ಶಿಕ್ಷಣ ನೀತಿ ಕೈ ಬಿಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಮ್ಮ‌ ಪೂರ್ವಿಕ ಶಿವನೂ ; ಅವರ ಡುಬಾಕು ಸನಾತನವೂ..

Published

on

  • ಹರ್ಷಕುಮಾರ್ ಕುಗ್ವೆ

ಲಿಂಗವು ದೇವರಲ್ಲ ಶಿವನು ದೇವರಲ್ಲ
ಶಕ್ತಿಯೂ ದೇವರಲ್ಲ. ಮನುಷ್ಯನ ಕಲ್ಪನೆಯ ಆಳವನ್ನು ಮೀರಿದ ಯಾವ ದೇವರೂ ಇಲ್ಲ. ಅಸಲಿಗೆ ಇಡೀ ಜಗತ್ತನ್ನು ನಡೆಸುವ ದೇವರೆಂಬುದೇ ಇಲ್ಲ.

ಶಿವನು ನಮ್ಮ ಪೂರ್ವಿಕ, ಗೌರಿ ಅತವಾ ಶಕ್ತಿ ನಮ್ಮ ಪೂರ್ವಿಕಳು. ಗಂಗೆ ನಮ್ಮ ಬದುಕು. ಶಿವನ ಕೊರಳಿನ ನಾಗ ನಮ್ಮ ಕುಲ. ಲಿಂಗ ಫಲವಂತಿಕೆಯ ಸಂಕೇತವೂ ಹೌದು, ಶಿವ ಶಕ್ತಿಯರ ಸಮಾಗಮದ ಸಂಕೇತವೂ ಹೌದು. ನಮ್ಮ ಜನರಿಗೆ ಸಂಕೇತಗಳು ಶಕ್ತಿಯಾಗಿದ್ದವು, ಪ್ರೇರಣೆಯಾಗಿದ್ದವು. ಡೊಳ್ಳು ಹೊಡೆದು ಕೇಕೆ ಹಾಕಿದಾಗ ಮಳೆ ಬಂದರೆ, ನಮ್ಮ ಡೊಳ್ಳಿನ ಸದ್ದಿನ ಶಕ್ತಿಯಿಂದಲೇ, ನಮ್ಮ ಕೇಕೆಯಿಂದಲೇ ಮಳೆ ಬಂತು ಎಂದು ನಂಬಿದರು. ಇದನ್ನು primitive magic ಪರಿಕಲ್ಪನೆ ಎನ್ನಲಾಗಿದೆ.‌ ನಮ್ಮ ಬಳ್ಳಾರಿಯ ಸಂಗನಕಲ್ಲಿನಲ್ಲಿ 3000 ವರ್ಷಗಳ ಹಿಂದೆ ಕಲ್ಲು ಬಂಡೆಗಳ ಮೇಲೆ ಕೆತ್ತಿದ ಹೋರಿ ಮತ್ತು ಉದ್ದ ಕೊಂಬಿನ ಕೆತ್ತನೆಗಳು ಸಹ ಇಂತಹ ಒಂದು ಆದಿಮ ಮಾಂತ್ರಿಕ ಶಕ್ತಿಯ ಆಚರಣೆಯಾಗಿದೆ.

ನಂಬಿಕೆಗಳನ್ನು ಸಂಸ್ಕೃತಿಯಾಗಿ, ಪರಂಪರೆಯಾಗಿ ಗ್ರಹಿಸಬೇಕೇ ಹೊರತು ದೇವರಾಗಿ ಅಲ್ಲ. ದೇವ ಎಂಬ ಕಲ್ಪನೆಯೇ ದ್ರಾವಿಡರಲ್ಲಿ ಇರಲಿಲ್ಲ. 50 ಸಾವಿರ ವರ್ಷಗಳಿಂದ ಬಂದ ಲಿಂಗ- ಯೋನಿ ಪೂಜೆ, ಗೌರಿ ಪೂಜೆ, 9,000 ವರ್ಷಗಳಿಂದ ಬಂದ ಬೂಮ್ತಾಯಿ ಪೂಜೆ, ಅರಳಿ ಮರದ ಪೂಜೆ, ಐದು ಸಾವಿರ ವರ್ಷಗಳಿಂದ ಬಂದ ಶಿವನ ಪೂಜೆ, ಗಣಪತಿ ಪೂಜೆ, ನಾಗನ ಪೂಜೆ, 4000 ವರ್ಷಗಳಿಂದ ಬಂದ ಗತಿಸಿದ ಹಿರೀಕರ ಪೂಜೆ, ಇದರ ಮುಂದುವರಿಕೆಯಾಗಿಯೇ 2600 ವರ್ಷಗಳ ಹಿಂದೆ ಬುದ್ದ ಗುರುವು ತೀರಿದ ಬಳಿಕ ಅವನ ಅಸ್ತಿಯನ್ನು ಇಟ್ಟ ಸ್ತೂಪಗಳನ್ನು ಪೂಜಿಸಿದೆವು, ದೂಪ ಹಾಕಿದೆವು..‌. ಇದುವೇ ಈ ನೆಲದ ಪೂಜನ ಸಂಸ್ಕತಿಯಾಗಿತ್ತು.

‘ದೇವ’ ಮತ್ತು ಅಸುರ ಇಬ್ಬರೂ ಬಂದಿದ್ದು ಮಧ್ಯ ಏಷ್ಯಾದಿಂದ ಹೊರಟಿದ್ದ ಆರ್ಯರಿಂದಲೇ. ಅವರಿಗೆ ಪೂಜೆ ಗೊತ್ತಿರಲಿಲ್ಲ. ಯಜ್ಞ ಗೊತ್ತಿತ್ತು, ಹೋಮ ಗೊತ್ತಿತ್ತು. ‘ದೇವ’ ಅತವಾ “ದ-ಏವ” ಕೂಡಾ ಮೂಲದಲ್ಲಿ ಆರ್ಯರ ಪೂರ್ವಿಕ ಕುಲ ನಾಯಕರೇ ಆಗಿದ್ದಾರು.‌.. ಹೀಗಾಗಿಯೇ ಆರ್ಯ ವೈದಿಕರ ದೇವ ಎಂದರೆ ಅವರ ದಾಯಾದಿಗಳಾಗಿದ್ದ ಪಾರ್ಸಿಯನ್ (ಜೊರಾಸ್ಟ್ರಿಯನ್) ಆರ್ಯ ಅವೆಸ್ತನ್ನರಿಗೆ ಕೆಡುಕಿನ ಸಂಕೇತ‌ವಾಗಿತ್ತು. ಹಾಗೇ ಆರ್ಯ ವೈದಿಕರು ಕೆಡುಕು ಎಂದ ಅಸುರ (ಅಹುರ) ಆರ್ಯ ಅವೆಸ್ತನ್ನರ ಪಾಲಿಗೆ “ನಾಯಕ”ನಾಗಿದ್ದ. ಅವರನ್ನು ಅಹುರ ಮಜ್ದಾ ಎಂದು ಕರೆದು ಆರಾದಿಸಿದರು.

ಭಾರತಕ್ಕೆ ಪ್ರವೇಶಿಸಿದ ಬಳಿಕ ಆರ್ಯ ವೈದಿಕರಿಗೆ ಈ ನೆಲದ ಮೊದಲ ನಿವಾಸಿಗಳ ಮೇಲೆ ಯಜಮಾನಿಕೆ ಸ್ತಾಪಿಸಬೇಕಿತ್ತು. ಅದಕ್ಕಾಗಿ ನಮ್ಮಿಂದ ಪೂಜೆಗೊಳ್ಳುತ್ತಿದ್ದ ಪೂರ್ವಿಕರನ್ನು ತಮ್ಮ “ದೇವರು” ಮಾಡಿದರು. ಆ ದೇವರ ಪೂಜೆಗೆ ಅವರೇ ನಿಂತರು. ತಮ್ಮ ಜುಟ್ಟು ಬಿಟ್ಟುಕೊಂಡು ನಮ್ಮ ಜುಟ್ಟು ಹಿಡಿದರು. ನಾವು ಪೂರ್ವಿಕರನ್ನು ಬಿಟ್ಟು ಕೊಟ್ಟು, ಅವರ ಕೈಯಲ್ಲಿ ದೇವರುಗಳ ಪೂಜೆ ನಡೆಯುವಾಗ ನಮ್ಮ ಪೂರ್ವಿಕರಿಗೆ ಗೊತ್ತೇ ಇರದಿದ್ದ ವೇದ ಮಂತ್ರಗಳನ್ನ ಕೇಳಿ ಪುನೀತರಾದೆವು. ಈ ಮಂತ್ರ ಭಾಷೆಯೇ ದೇವರಿಗೆ ಅರ್ಥವಾಗುವುದು ಎಂದು ಪುಂಗಿದ್ದಕ್ಕೆ ತಲೆಯಾಡಿಸಿ ಕೈಮುಗಿದು ಗರ್ಭಗುಡಿಯ ಹೊರಗೆ ಸಾಲಿನಲ್ಲಿ ನಿಂತೆವು.‌ ಮುಂದಿನ 2000 ವರ್ಷಗಳ ಕಾಲ ಗುಲಾಮರಾದೆವು.‌ ಪುರಾಣಗಳನ್ನು ಕೇಳಿದೆವು, ನಂಬಿದೆವು ಮತಿಗೆಟ್ಟೆವು, ಗತಿಗೆಟ್ಟೆವು.

ಇನ್ನೂ ಉಳಿದಿರುವುದೇನು?
ನಾವು ಶಿವನ ವಕ್ಕಲು, ಗೌರಿ- ಗಂಗೆಯರ ಒಕ್ಕಲು. ಅವರು ಇಂದ್ರ ಅಗ್ನಿಯರ ವಕ್ಕಲಾಗಿದ್ದವರು ತಮ್ಮ ದೇವರಿಗೆ ಕಿಮ್ಮತ್ತಿಲ್ಲ ಎಂದರಿತು ಅವರನ್ನೇ ಬಿಟ್ಟರು. ಈಗ ಹೇಳುತ್ತಾರೆ ನಾವೇ ಸನಾತನರು ಎಂದು! ಅವರ ಡುಬಾಕು ಸನಾತನದಲ್ಲಿ ನಮ್ಮತನ ಕಳೆದುಕೊಂಡ “ಶೂದ್ರ ಮುಂಡೇಮಕ್ಕಳಾಗಿ”, ಅವರಿಗಾಗಿ ಬಾಳು ಬದುಕು ಹಾಳುಮಾಡಿಕೊಂಡು, ಅವರ ಹೋಮ ಹವನ ಮಾಡಿಸಿ, ನಮ್ಮ ಉಳಿಕೆ ಕಾಸು ಕಳೆದುಕೊಂಡು, ಗೌರವ ಗನತೆ ಕಳೆದುಕೊಳ್ಳುವುದೇ ಇವತ್ತಿನ ಸನಾತನ!

– ಹರ್ಷಕುಮಾರ್ ಕುಗ್ವೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿಕ್ಕಮಗಳೂರು | ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ

Published

on

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಮೂಡಿಗೆರೆ ಹಾಗು ಕಳಸ ತಾಲೂಕುಗಳಲ್ಲಿ ಉಂಟಾದ ಪ್ರತ್ಯೇಕ ಕಾಡ್ಗಿಚ್ಚು ಪ್ರಕರಣಗಳಲ್ಲಿ 15 ಎಕರೆ ಕಾಫಿ ತೋಟ ಮತ್ತು 25 ಕ್ಕು ಹೆಚ್ಚು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಬಾಳೂರು ಮೀಸಲು ಅರಣ್ಯ ಪ್ರದೇಶದ ದೇವರಮನೆ ಗುಡ್ಡದಲ್ಲಿ ಕಾಡ್ಗಿಚ್ಚು ಉಂಟಾಗಿ 10 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಸುಟ್ಟು ನಾಶವಾಗಿದೆ. ಕುಂದೂರು ಸಮೀಪದ ಕಣೇಗದ್ದೆ ಗ್ರಾಮದಲ್ಲಿ ಕಾಫಿತೋಟಕ್ಕೆ ಬೆಂಕಿ ಬಿದ್ದು ಸುಮಾರು 15 ಎಕರೆ ಕಾಫಿ ತೋಟ ನಾಶವಾಗಿದೆ. ಮೂಡಿಗೆರೆ ಅಗ್ನಿ ಶಾಮಕದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.

ಕಳಸ ತಾಲೂಕು ಬಲಿಗೆ ಅರಣ್ಯದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು ಸಾಕಷ್ಟು ಅರಣ್ಯ ನಾಶವಾಗಿದೆ. ಅರಣ್ಯಾಧಿಕಾರಿಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಂದಗಲ್‌ ಗ್ರಾಮ ಪಂಚಾಯಿತಿ ನೂತನ ಆಧ್ಯಕ್ಷರಾಗಿ ಎಲ್‌.ಆರ್.‌ ಚಂದ್ರಪ್ಪ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:ತಾಲೂಕಿನ ಕಂದಗಲ್‌ ಗ್ರಾಮ ಪಂಚಾಯಿತಿಯ ನೂತನ ಆಧ್ಯಕ್ಷರಾಗಿ ಫೆ.21 ರಂದು ಎಲ್‌.ಆರ್.‌ ಚಂದ್ರಪ್ಪ ಆಯ್ಕೆಯಾಗಿದ್ದಾರೆ. ಎರಡನೇ ಅವಧಿಗೆ ಸಾಮಾನ್ಯ ಪುರುಷ ಮೀಸಲಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಆಧಿಕಾರಿಯಾಗಿ ಕೋಆಪರೇಟಿವ್‌ ಸೊಸೈಟಿಯ ನಿಬಂಧಕರಾದ ಮಂಜುಳಾ ಅವರು ಕಾರ್ಯನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಿಡಿಓ ಬಿ.ಆರ್‌ ಹೇಮಲತ, ಕಾರ್ಯದರ್ಶಿ ಪುಟ್ಟಣ್ಣ, ಉಪಾಧ್ಯಕ್ಷೆ ಶ್ವೇತ ಮಾರುತಿ ಗ್ರಾಮ ಪಂಚಾಯತಿ ಸದಸ್ಯರಾದ ಬಕ್ಕಳ್ಳಿ ಹನುಮಮ್ಮ, ಸುಂದರಮ್ಮ, ಶಿವಲಿಂಗಮ್ಮ, ಕರಿಯಮ್ಮ, ಜ್ಯೋತಿ ಮುಧೋಳ, ಓಂಕಾರಪ್ಪ‌ ಕೆ.ವಿ, ಎಂ.ಬಿ ಹಾಲೇಶ್, ಕೋಟ್ಯಪ್ಪ, ಚನ್ನಬಸಪ್ಪ ಜಿ.ಎಸ್‌, ಕೆ.ಜಿ.ರಾಜೇಶ್‌, ಪಂಚಾಯಿತಿ ಸಿಬಂಧಿ ಹಾಗೂ ಗ್ರಾಮಸ್ಥರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending