ದಿನದ ಸುದ್ದಿ
ಹಿಂದುಳಿದವರ್ಗದವರು ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಆಹ್ವಾನ
ಸುದ್ದಿದಿನ,ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಶಿವಮೊಗ್ಗ ಜಿಲ್ಲೆಯಿಂದ ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಆರ್ಥಿಕ ಅಭಿವೃದ್ಧಿಗಾಗಿ ಚೈತನ್ಯ ಸಹಾಯಧನ ಯೋಜನೆ, ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಯೋಜನೆ, ಕಿರುಸಾಲ ಯೋಜನೆ, ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸುಬುದಾರರಿಗೆ ಸಾಲ ಮತ್ತು ಸಹಾಯಧನ ಯೋಜನೆ, ವಿದೇಶಿ ವಿವಿಗಳಲ್ಲಿ ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ ಸಾಲ ಯೋಜನೆ ಹಾಗೂ ಗಂಗಾ ಕಲ್ಯಾಣ ನೀರಾವತಿ ಯೋಜನೆಗೆ ಅರ್ಹ ಹಿಂದುಳಿದ ವರ್ಗಗಳ ಪ್ರವರ್ಗ-1,2ಎ,3ಎ ಮತ್ತು 3ಬಿಗೆ ಸೇರಿದ 18 ರಿಂದ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹಿಂದುಳಿದ ಪ್ರವರ್ಗಗಳಿಗೆ ಸೇರಿದವರಾಗಿದ್ದು, ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರ ಪ್ರದೇಶದವರಿಗೆ ರೂ. 40 ಸಾವಿರ ಹಾಗೂ ನಗರ ಪ್ರದೇಶದವರಿಗೆ ರೂ. 55 ಸಾವಿರ ಮಿತಿಯಲ್ಲಿರಬೇಕು.
ಆಸಕ್ತ ಅಭ್ಯರ್ಥಿಗಳು ನಿಗಧಿತ ನಮೂನೆ ಅರ್ಜಿಯನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 12 ರೊಳಗಾಗಿ ಸಲ್ಲಿಸುವುದು.
ಮಾಹಿತಿಗಾಗಿ ದೂ.ಸಂ.: 08182-229634 ಅಥವಾ ವೆಬ್‍ಸೈಟ್, ಲಿಂಕ್ ಮೇಲೆ ಕ್ಲಿಕ್ ಮಾಡಿ www.karnataka.gov.in/dbcdc ನ್ನು ಸಂಪರ್ಕಿಸುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243