ದಿನದ ಸುದ್ದಿ
ಸಾಧನೆ ಹಾದಿಯಲ್ಲಿ ‘ಪಾಳಾ’ ಗ್ರಾಮದ ವಿದ್ಯಾರ್ಥಿಗಳು..!
ಕೋವಿಡ್ ಕಾಲದಲ್ಲಿ ತಂತ್ರಜ್ಞಾನಗಳು ವರದಾನ ವಾದರೂ ಗ್ರಾಮೀಣ ಭಾಗದಲ್ಲಿನ ಮೂಲಸೌಕರ್ಯ ಕೊರತೆ ಆರ್ಥಿಕ ಕಾರಣಗಳು ಬಡ ವಿದ್ಯಾರ್ಥಿಗಳಿಗೆ ಹಲವು ಸಮಸ್ಯೆಗಳನ್ನು ಹುಟ್ಟುಹಾಕಿವೆ. ಇದನ್ನು ಸರಿಪಡಿಸುವಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಬೇಕಿದೆ.
ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶಗಳು ಸಿಕ್ಕಿದ್ದರೆ ಉತ್ತಮ ಸಾಧನೆ ಮಾಡಬಲ್ಲರು ಎಂಬುದಕ್ಕೆ ಈ ಬಾರಿ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸುವ ಮೂಲಕ ಸಾಧನೆಗೈದಿದ್ದಾರೆ. ಈ ಪ್ರತಿಭಾವಂತ ವಿದ್ಯಾರ್ಥಿಗಳು ಎಲ್ಲರ ಹುಬ್ಬೇರಿಸುವಂತೆ ಸಾಧನೆ ಮಾಡಿದ್ದಾರೆ.
ಸಂತೋಷದ ವಿಷಯ ಏನೆಂದರೆ ನಮ್ಮ ಗುಲ್ಬರ್ಗದ ಜಿಲ್ಲೆಯ ಪಾಳಾ ಗ್ರಾಮದ ವಿದ್ಯಾರ್ಥಿಗಳು ತಮ್ಮ-ತಮ್ಮ ಪರೀಕ್ಷೆಯಲ್ಲಿ ಉತ್ತಮವಾದ ಸಾಧನೆಯನ್ನು ಮಾಡಿದ್ದು ನಮ್ಮ ಗ್ರಾಮಕ್ಕೆ ಗೌರವವನ್ನು ತಂದುಕೊಟ್ಟಿದ್ದಾರೆ.
ಗ್ರಾಮೀಣ ಪ್ರದೇಶದ, ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಹೆಚ್ಚು. ಎಲ್ಲಿಯೂ ಸಲ್ಲದವರು ಇಲ್ಲಿ ಸಲ್ಲುತ್ತಾರೆ ಎಂದು ಹಂಗಿಸುವವರು ಇದ್ದಾರೆ. ಇಂತಹ ಮನಸ್ಥಿತಿಗಳಿಂದಾಗಿಯೇ ಸರ್ಕಾರಿ ಶಾಲೆಗಳೆಂದರೆ ಕೆಲವರಿಗೆ ಅಸಡ್ಡೆ. ಆದರೆ ಕಳೆದ ಎರಡು ವರ್ಷಗಳಿಂದ ಹೊರ ಬರುತ್ತಿರುವ ಪರೀಕ್ಷಾ ಫಲಿತಾಂಶ ಟೀಕಾಕಾರರಿಗೆ ಉತ್ತರ ನೀಡುವಂತಹ ವಾತಾವರಣ ಮೂಡಿಸುತ್ತಿದೆ.
ಸರ್ಕಾರಿ ಶಾಲೆಗಳ ಮಕ್ಕಳು ವಿಶೇಷವಾಗಿ ಗ್ರಾಮೀಣ ಸಮುದಾಯದ ವಿದ್ಯಾರ್ಥಿಗಳು ನಗರ ವಿದ್ಯಾರ್ಥಿಗಳೊಂದಿಗೆ ಸ್ಪರ್ಧೆಗೆ ಇಳಿದಿದ್ದಾರೆ. ಒಟ್ಟಾರೆ ಶೇಕಡಾವಾರು ಫಲಿತಾಂಶದಲ್ಲಿ ಕುಸಿತದ ಆತಂಕ ಎದುರಾದರೂ, ಗ್ರಾಮೀಣ ಪ್ರದೇಶಗಳ ಕನ್ನಡ ಶಾಲೆಗಳ ಮಕ್ಕಳ ಸಾಧನೆಯ ಫಲಿತಾಂಶ ಕನವರಿಕೆಯಿಂದ ಹೊರಬರುವಂತೆ ಮಾಡಿದೆ.
ಏನೇ ಆಗಲಿ ಈ ಬಾರಿ ಪಾಳಾ ಗ್ರಾಮದ ಉನ್ನತ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯಲ್ಲಿ ತಾವು ಪಡೆದುಕೊಂಡಿರುವ ಅಂಕಗಳನ್ನು ತಮ್ಮ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಇತರರಿಗೆ ಮಾದರಿಯಾಗುವಂತೆ ಮಾಡಿದ್ದಾರೆ.
ವಿದ್ಯಾರ್ಥಿಗಳು ಕೇವಲ ಅಂಕವನ್ನು ಗಳಿಸುವುದಕ್ಕಾಗಿ ವಿದ್ಯಾಭ್ಯಾಸವನ್ನು ಮಾಡದೆ ಉತ್ತಮವಾದ ಜ್ಞಾನವನ್ನು ಸಂಪಾದಿಸುವುದಕ್ಕಾಗಿ ವಿದ್ಯಾಭ್ಯಾಸ ಮಾಡಬೇಕೆಂದು ಇತರರಿಗೆ ಮಾದರಿ ಆಗಬೇಕೆಂಬ ಗ್ರಾಮೀಣ ವಿದ್ಯಾರ್ಥಿಗಳ ಆಶಯ.
ನಮ್ಮ ಪಾಳಾ ಗ್ರಾಮದ ಶ್ರೀ ಡಾ. ಗುರುಮೂರ್ತಿ ಶಿವಾಚಾರ್ಯ ಮೂಲ ಕಟ್ಟಿಮನಿ ಹಿರೇಮಠ ಸಂಸ್ಥಾನ ಪಾಳಾ ಇವರು ಹಮ್ಮಿಕೊಂಡಿರುವ ಎಸೆಸೆಲ್ಸಿ ಹಾಗೂ ಪಿಯುಸಿ ಯಲ್ಲಿ ಅತ್ಯಧಿಕ ಅಂಕವನ್ನು ಪಡೆದುಕೊಂಡಿರುವ ಗ್ರಾಮೀಣ ವಿದ್ಯಾರ್ಥಿಗಳಿಗೆ ನಿರ್ಭಯ ಸಾಧಕ ಎಂಬ ಪ್ರಶಸ್ತಿ ಪ್ರದಾನ ನೀಡಿ ವಿದ್ಯಾರ್ಥಿಗಳಿಗೆ ಗೌರವವನ್ನು ಸಲ್ಲಿಸಲಾಯಿತು.
ಗ್ರಾಮೀಣ ಕನ್ನಡ ಶಾಲೆಗಳಲ್ಲಿ ಓದಿ ವಿವಿಧ ವಲಯಗಳಲ್ಲಿ ಕೆಲಸ ಮಾಡುತ್ತಿರುವವರು ಅಂದಿನ ಗ್ರಹಿಕೆಯನ್ನು ಇಂದಿಗೂ ಮರೆತಿಲ್ಲ. ನಗರ ಪ್ರದೇಶದ ವಿದ್ಯಾರ್ಥಿಗಳು ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಬಹುದು. ಆದರೆ ಮೂಲಶಿಕ್ಷಣವನ್ನು ಜ್ಞಾಪಿಸಿಕೊಳ್ಳುವವರು, ಸಂದರ್ಭ ಬಂದಾಗ ಅದನ್ನು ಹೊರ ಹಾಕುವವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೆ. ವ್ಯಾಕರಣ, ಸಂಧಿ-ಸಮಾಸ, ಅಲ್ಪಪ್ರಾಣ, ಮಹಾಪ್ರಾಣ ಇತ್ಯಾದಿ ಕಾಗುಣಿತ ವಿಷಯಗಳನ್ನು ಗ್ರಾಮೀಣ ವಿದ್ಯಾರ್ಥಿಗಳು ಚನ್ನಾಗಿ ಬಲ್ಲವರಿದ್ದಾರೆ. ಎಲ್ಲಿ ಹೋದರೂ ಸ್ಪಷ್ಟವಾಗಿ ಉಚ್ಚರಿಸುತ್ತಾರೆ.
ಮಾತುಗಳು ಮುಳ್ಳಿನಂತಿದ್ದೂರು ಮತ್ತೊಬ್ಬನನ್ನು ಎಚ್ಚರಿಸಿ ಸರಿದಾರಿಗೆ ತರುವ ಮುಳ್ಳಾಗಬೇಕೆ ವಿನಃ ಮನಸ್ಸು ಚುಚ್ಚುವ ಮುಳ್ಳಾಗಬಾರದು. ಯಾಕೆ ಈ ಮಾತನ್ನು ಹೇಳುತ್ತಿದ್ದೇನೆ ಎಂದರೆ
ಕೋರನ ಮಧ್ಯೆಯೂ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮನೆಯಲ್ಲಿ ಪೋಷಕರಿಗೆ ಆತಂಕ, ಮಕ್ಕಳು ಪರೀಕ್ಷೆ ಬರೆದು ಮನೆಗೆ ಬರುವ ತನಕ ಪೋಷಕರಲ್ಲಿ ಆತಂಕ ಮೂಡಿತ್ತು.
ಈ ಕೋರನ ಮಧ್ಯೆಯೂ ಪರೀಕ್ಷೆ ಬರೆದು ಸಾಧನೆ ಮಾಡಿದ್ದಾರೆ.
ಎಸೆಸೆಲ್ಸಿ ಎಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಕೀರ್ತಿ, ಶಿವಪುತ್ರ , ಪೂಜಾ , ಅಂಕಿತ , ಪವಿತ್ರ , ಈಶ್ವರ್ , ಮಾರುತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಳಾ ಹಾಗೂ ಸರಕಾರಿ ಪ್ರೌಢಶಾಲೆ ಮುಖ್ಯಗುರುಗಳಾದ ಮಾರುತಿ ಹುಜರತಿ ಹಾಗೂ
ನಾಗಲಾಂಬಿಕ ರವರು ಹಾಗೂ ಶಾಲಾ ವಿಭಾಗದ ಶಿಕ್ಷಕರು ಹಾಗೂ ಶಿಕ್ಷಕಿಯರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪ್ರೀತಿಪಾತ್ರರು ಆಗಿದ್ದಾರೆ.
– ರಾಣಪ್ಪ ಡಿ ಪಾಳಾ
ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ
ಮನೋವಿಜ್ಞಾನ ವಿಭಾಗ
ಮೋ 9663727268
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


