ದಿನದ ಸುದ್ದಿ

ಪಶುಭಾಗ್ಯ ಯೋಜನೆ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ, ಚಿತ್ರದುರ್ಗ | ಜಿಲ್ಲೆಗೆ 2018-19 ನೇ ಸಾಲಿನಲ್ಲಿ ಸರ್ಕಾರದಿಂದ ಪಶುಭಾಗ್ಯ ಯೋಜನೆ ಅನುಷ್ಠಾನಗೊಳಿಸಲು 146 ಗುರಿ ನಿಗದಿಪಡಿಸಿದ್ದು, ಇದರಲ್ಲಿ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ಹಾಗೂ ಕರು ಘಟಕ ಒಳಗೊಂಡಿರುತ್ತದೆ. ಈ ಯೋಜನೆಯನ್ನು ಗ್ರಾಮ ವ್ಯಾಪ್ತಿಯ ವಾಣಿಜ್ಯ ಬ್ಯಾಂಕ್‍ಗಳ ಮೂಲಕ ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಿದ್ದು, ಅರ್ಹ ಪರಿಶಿಷ್ಟಜಾತಿ/ಪಂಗಡದವರಿಗೆ ಶೇ.50 ಹಾಗೂ ಇತರ ಫಲಾನುಭವಿಗಳಿಗೆ ಶೇ.25 ರಷ್ಟು ಸಹಾಯಧನ ಇರುತ್ತದೆ.

ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 9 ರೊಳಗಾಗಿ ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರಿಗೆ ಸಲ್ಲಿಸಲು ಕೊನೆಯ ದಿನವಾಗಿದೆ ಎಂದು ಚಿತ್ರದುರ್ಗ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version