ದಿನದ ಸುದ್ದಿ

ಪೊಕ್ಸೋ ಕಾಯ್ದೆಯ ಬೆಂಬಲ ವ್ಯಕ್ತಿಗಳಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪೊಕ್ಸೋ ಕಾಯ್ದೆಯಡಿ ಸಂತ್ರಸ್ತೆ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ಪ್ರತಿ ಪ್ರಕರಣಕ್ಕೆ ರೂ. 3000/- ಸಂಭಾವನೆ ನಿಗಧಿಗೊಳಿಸಲಾಗಿದೆ. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆ ಕೂಡ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುತ್ತದೆ.

ಅರ್ಜಿ ನಮೂನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆದು ಅ.28 ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಾಲಭವನ ಕಚೇರಿ.(ಟ್ರೈನ್ ಪಾರ್ಕ್) ಜೆ.ಹೆಚ್ ಪಟೇಲ್ ಬಡಾವಣೆ, ನಾಗನೂರು ರಸ್ತೆ, ಶಾಮನೂರು, ದಾವಣಗೆರೆ ಸಲ್ಲಿಬೇಕು. ಹೆಚ್ಚಿನ ಮಾಹಿತಿಗಾಗಿ ದೂ: 08192-222701, ಸಂಪರ್ಕಿಸಬಹುದೆಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version