ದಿನದ ಸುದ್ದಿ
ಕವಿ ಡಾ.ಸಿದ್ದಲಿಂಗಯ್ಯ ಇನ್ನಿಲ್ಲ
ಸುದ್ದಿದಿನ, ಬೆಂಗಳೂರು: ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ (67) ಅವರು ಕೊರೋನಾದಿಂದ ಕೆಲವು ದಿನಗಳಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲ್ಲೂಕಿನ ಮಂಚನಬೆಲೆಯಲ್ಲಿ 1954ರಲ್ಲಿ ಜನಿಸಿದ್ದ ಸಿದ್ದಲಿಂಗಯ್ಯನವರು, ‘ದಲಿತ ಕವಿ’ ಎಂದೇ ಪ್ರಸಿದ್ಧರಾಗಿದ್ದರು.
ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದ್ದರು. ಕಾವ್ಯ,ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥೆ ಊರುಕೇರಿ ಮೂರು ಭಾಗಗಳಲ್ಲಿ ಪ್ರಕಟವಾಗಿದ್ದು, ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243