ದಿನದ ಸುದ್ದಿ

ಪೊಲೀಸರಿಗೆ ಹೆಲ್ಮೆಟ್ ಕಡ್ಡಾಯ : ಅಲೋಕ್‌ಕುಮಾರ್

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬೆಂಗಳೂರು : ರಾಜ್ಯದ ಎಲ್ಲಾ ಪೊಲೀಸರು ದ್ವಿಚಕ್ರ ವಾಹನ ಚಾಲನೆ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ರಾಜ್ಯ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕ ಅಲೋಕ್‌ಕುಮಾರ್ ಆದೇಶ ಹೊರಡಿಸಿದ್ದಾರೆ.

  1. ಮೇಲುಕೋಟೆಯ ಪ್ರಸಿದ್ದ ವೈರಮುಡಿ ಉತ್ಸವ, ನಾಳೆ ಜರುಗಲಿದ್ದು, ಹೊರರಾಜ್ಯಗಳಿಂದಲೂ ಅಪಾರ ಸಂಖ್ಯೆ ಭಕ್ತರು ಭೇಟಿ ನೀಡುತ್ತಿದ್ದಾರೆ. ನಿನ್ನೆ ಧಾರ್ಮಿಕ ಕಾರ್ಯಕ್ರಮದ ಮೂಲಕ ಹತ್ತು ದಿನಗಳ ಉತ್ಸವಕ್ಕ ಚಾಲನೆ ನೀಡಲಾಗಿದೆ. ನಾಳೆ ರಾತ್ರಿ 8.30ಕ್ಕೆ ಚಲುವನಾರಾಯಣ ಸ್ವಾಮಿಗೆ ವಜ್ರಖಚಿತ ಕರೀಟಧಾರಣೆ ಮಾಡಲಾಗುವುದು.
  2. ಬೆಂಗಳೂರಿನಲ್ಲಿ ಅನಗತ್ಯವಾಗಿ ನೀರು ಪೋಲಾಗುವುದನ್ನು ತಡೆಯುವ ಉದ್ದೇಶದಿಂದ ವಾಣಿಜ್ಯ ಮಳಿಗೆ, ಕೈಗಾರಿಕೆ, ಅಪಾರ್ಟ್‌ಮೆಂಟ್, ಐಷಾರಾಮಿ ಹೋಟೆಲ್ ಮತ್ತು ರೆಸ್ಟೊರೆಂಟ್‌ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ತಿಳಿಸಿದ್ದಾರೆ. ಏರಿಯೇಟರ್ ಅಳವಡಿಕೆಗೆ ಇದೇ 31ರವರೆಗೆ ಅವಕಾಶ ನೀಡಲಾಗಿದೆ.
  3. ರಾಜ್ಯದಲ್ಲಿ ಡೆಂಗಿ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದ್ದು, ಕಳೆದ ಒಂದೂವರೆ ತಿಂಗಳಲ್ಲಿ 1 ಸಾವಿರದ 796 ಪ್ರಕರಣಗಳು ವರದಿಯಾಗಿವೆ.
  4. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇದೇ 1 ರಿಂದ 18 ವರೆಗೆ ನಡೆದ ದ್ವಿತಿಯ ಪಿಯುಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರವನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಇದೇ 20 ರಿಂದ 22ರವರೆಗೆ ನಡೆಯಲಿರುವ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.
  5. ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ಪೊಲೀಸರು ಮತ್ತು ಭದ್ರತಾಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರು ಹತರಾಗಿದ್ದಾರೆ.
  6. ಅಮೆರಿಕ ಅಧ್ಯಕ್ಷ ಜೋಬೈಡನ್ ಸರ್ಕಾರ 2024ನೇ ಸಾಲಿನಡಿ ನೀಡಲು ಉದ್ದೇಶಿಸಿರುವ ಎಚ್-1ಬಿ ವೀಸಾ ನೋಂದಣಿ ಪ್ರಕ್ರಿಯೆ ನಾಳೆಗೆ ಮುಕ್ತಾಯಗೊಳ್ಳಲಿದೆ.
  7. ಭಾರತದ ಷಟ್ಲರ್ ಲಕ್ಷ್ಯ ಸೇನ್, ಬ್ಯಾಡ್ಮಿಂಟನ್‌ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಐದು ಸ್ಥಾನಗಳ ಮುನ್ನಡೆಯೊಂದಿಗೆ ವಿಶ್ವದ 13ನೇ ಶ್ರೇಯಾಂಕಕ್ಕೆ ಏರಿದ್ದಾರೆ. ಫ್ರೆಂಚ್ ಓಪನ್ ಮತ್ತು ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಓಪನ್‌ನಲ್ಲಿ ಅವರ ಅತ್ಯುತ್ತಮ ಆಟದ ಪ್ರತಿಫಲವಾಗಿ ಬಿಡಬ್ಲ್ಯೂಎಫ್ ಶ್ರೇಯಾಂಕದಲ್ಲಿ ಏರಿಕೆ ಸಾಧಿಸಲು ನೆರವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version