ದಿನದ ಸುದ್ದಿ
ಪೊಲೀಸರಿಗೆ ಹೆಲ್ಮೆಟ್ ಕಡ್ಡಾಯ : ಅಲೋಕ್ಕುಮಾರ್
ಸುದ್ದಿದಿನ,ಬೆಂಗಳೂರು : ರಾಜ್ಯದ ಎಲ್ಲಾ ಪೊಲೀಸರು ದ್ವಿಚಕ್ರ ವಾಹನ ಚಾಲನೆ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ರಾಜ್ಯ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕ ಅಲೋಕ್ಕುಮಾರ್ ಆದೇಶ ಹೊರಡಿಸಿದ್ದಾರೆ.
- ಮೇಲುಕೋಟೆಯ ಪ್ರಸಿದ್ದ ವೈರಮುಡಿ ಉತ್ಸವ, ನಾಳೆ ಜರುಗಲಿದ್ದು, ಹೊರರಾಜ್ಯಗಳಿಂದಲೂ ಅಪಾರ ಸಂಖ್ಯೆ ಭಕ್ತರು ಭೇಟಿ ನೀಡುತ್ತಿದ್ದಾರೆ. ನಿನ್ನೆ ಧಾರ್ಮಿಕ ಕಾರ್ಯಕ್ರಮದ ಮೂಲಕ ಹತ್ತು ದಿನಗಳ ಉತ್ಸವಕ್ಕ ಚಾಲನೆ ನೀಡಲಾಗಿದೆ. ನಾಳೆ ರಾತ್ರಿ 8.30ಕ್ಕೆ ಚಲುವನಾರಾಯಣ ಸ್ವಾಮಿಗೆ ವಜ್ರಖಚಿತ ಕರೀಟಧಾರಣೆ ಮಾಡಲಾಗುವುದು.
- ಬೆಂಗಳೂರಿನಲ್ಲಿ ಅನಗತ್ಯವಾಗಿ ನೀರು ಪೋಲಾಗುವುದನ್ನು ತಡೆಯುವ ಉದ್ದೇಶದಿಂದ ವಾಣಿಜ್ಯ ಮಳಿಗೆ, ಕೈಗಾರಿಕೆ, ಅಪಾರ್ಟ್ಮೆಂಟ್, ಐಷಾರಾಮಿ ಹೋಟೆಲ್ ಮತ್ತು ರೆಸ್ಟೊರೆಂಟ್ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ತಿಳಿಸಿದ್ದಾರೆ. ಏರಿಯೇಟರ್ ಅಳವಡಿಕೆಗೆ ಇದೇ 31ರವರೆಗೆ ಅವಕಾಶ ನೀಡಲಾಗಿದೆ.
- ರಾಜ್ಯದಲ್ಲಿ ಡೆಂಗಿ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದ್ದು, ಕಳೆದ ಒಂದೂವರೆ ತಿಂಗಳಲ್ಲಿ 1 ಸಾವಿರದ 796 ಪ್ರಕರಣಗಳು ವರದಿಯಾಗಿವೆ.
- ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇದೇ 1 ರಿಂದ 18 ವರೆಗೆ ನಡೆದ ದ್ವಿತಿಯ ಪಿಯುಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರವನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಇದೇ 20 ರಿಂದ 22ರವರೆಗೆ ನಡೆಯಲಿರುವ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.
- ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರು ಮತ್ತು ಭದ್ರತಾಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರು ಹತರಾಗಿದ್ದಾರೆ.
- ಅಮೆರಿಕ ಅಧ್ಯಕ್ಷ ಜೋಬೈಡನ್ ಸರ್ಕಾರ 2024ನೇ ಸಾಲಿನಡಿ ನೀಡಲು ಉದ್ದೇಶಿಸಿರುವ ಎಚ್-1ಬಿ ವೀಸಾ ನೋಂದಣಿ ಪ್ರಕ್ರಿಯೆ ನಾಳೆಗೆ ಮುಕ್ತಾಯಗೊಳ್ಳಲಿದೆ.
- ಭಾರತದ ಷಟ್ಲರ್ ಲಕ್ಷ್ಯ ಸೇನ್, ಬ್ಯಾಡ್ಮಿಂಟನ್ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಐದು ಸ್ಥಾನಗಳ ಮುನ್ನಡೆಯೊಂದಿಗೆ ವಿಶ್ವದ 13ನೇ ಶ್ರೇಯಾಂಕಕ್ಕೆ ಏರಿದ್ದಾರೆ. ಫ್ರೆಂಚ್ ಓಪನ್ ಮತ್ತು ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಓಪನ್ನಲ್ಲಿ ಅವರ ಅತ್ಯುತ್ತಮ ಆಟದ ಪ್ರತಿಫಲವಾಗಿ ಬಿಡಬ್ಲ್ಯೂಎಫ್ ಶ್ರೇಯಾಂಕದಲ್ಲಿ ಏರಿಕೆ ಸಾಧಿಸಲು ನೆರವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
-
ಅಂಕಣ3 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ6 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ1 day agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ14 hours agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ17 hours agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ಕ್ರೀಡೆ17 hours agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ

