ದಿನದ ಸುದ್ದಿ

ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್‍ಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Published

on

ಸುದ್ದಿದಿನ,ಕೋಲಾರ : ಕೋಲಾರ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ 11 ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್‍ಗಳ ಹುದ್ದೆಗಳ ನೇರ ನೇಮಕಾತಿ ಸಂಬಂಧ ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ www.kolarpolice.com ನಲ್ಲಿ ಹಾಗೂ ಜಿಲ್ಲಾ ಪೊಲೀಸ್ ಕಛೇರಿ ಸೂಚನಾ ಫಲಕದಲ್ಲಿ ಜುಲೈ 10 ರಂದು ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ಜಿಲ್ಲಾ ಪೊಲೀಸ್ ಕಛೇರಿಯ ಸೂಚನಾ ಫಲಕ ಮತ್ತು ಆನ್ ಲೈನ್ ಮುಖಾಂತರ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪೊಲೀಸ್ ಕಛೇರಿ ಕೋಲಾರ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಕಾರ್ತಿಕ್ ರೆಡ್ಡಿ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version