Connect with us

ರಾಜಕೀಯ

ಬಲಪಂಥದತ್ತ ಜಾಗತಿಕ ಪಲ್ಲಟದ ಈ ಸಮಯ

Published

on

  • ಜಾಗತಿಕ ಅರ್ಥವ್ಯವಸ್ಥೆಯು ಬಿಕ್ಕಟ್ಟಿಗೆ ಒಳಗಾಗಿರುವ ಪರಿಸ್ಥಿತಿಯಲ್ಲಿ ಮತ್ತು ಅದರ ಪರಿಣಾಮವಾಗಿ ನಿರುದ್ಯೋಗವು ಉಲ್ಬಣಗೊಂಡ ಪರಿಸ್ಥಿತಿಯಲ್ಲಿ ಜಗತ್ತಿನಾದ್ಯಂತ ಬಲ ಪಂಥದತ್ತ ಪಲ್ಲಟ ಕಾಣುತ್ತಿದೆ. ಬಲಪಂಥದ ಬೆಳವಣಿಗೆಗೆ ಅದು ಆರ್ಥಿಕ ಬಿಕ್ಕಟ್ಟು ಮತ್ತು ನಿರುದ್ಯೋಗವನ್ನು ಗಮನಕ್ಕೆ ತಗೊಂಡಿರುವುದು ಮತ್ತು ಅಧಿಕಾರಸ್ಥರ ಪರವಾದ ರಾಜಕೀಯ ಪಕ್ಷಗಳು ಗಮನಕ್ಕೆ ತಗೊಂಡಿರದಿರುವುದೇ ಕಾರಣ ಎನ್ನಬಹುದು. ಭಾರತದಲ್ಲಿಯೂ ಸಹ ಅಭಿವೃದ್ಧಿ ಅಜೆಂಡಾದ ಮೂಲಕವೇ 2014ರಲ್ಲಿ ಮೋದಿ ಅಧಿಕಾರ ಹಿಡಿದದ್ದು. ನವ ಉದಾರವಾದವನ್ನು ಪ್ರತಿನಿಧಿಸುವ ಕಾಂಗ್ರೆಸ್‌ನಂತಹ ಒಂದು ಪಕ್ಷದಿಂದ ಬಿಜೆಪಿಯಂತಹ ಒಂದು ಬಲ ಪಂಥೀಯ ಪಕ್ಷದತ್ತ ಪಲ್ಲಟವು ಸಾಧ್ಯವಾಗಿರುವುದು ನವ-ಉದಾರವಾದದ ಬಿಕ್ಕಟ್ಟಿನಿಂದಾಗಿಯೇ ಎಂಬ ಸಂಗತಿಯಂತೂ ಸ್ಪಷ್ಟ.

ಮೋದಿಯವರ ಪುನರಾಯ್ಕೆಯು, ಜಗತ್ತು ಬಲ ಪಂಥಾಭಿಮುಖವಾಗಿ ಸರಿಯುತ್ತಿರುವ ವಿದ್ಯಮಾನದ ಒಂದು ಭಾಗವಾಗಿದೆ ಎಂಬ ಆಯಾಮವನ್ನು ನಾವು ಗಮನಿಸುವುದೇ ಇಲ್ಲ. ಹಾಗಾಗಿ, ಮೋದಿಯವರ ಪುನರಾಯ್ಕೆಯ ಬಗ್ಗೆ ನಾವು ಚರ್ಚಿಸುವಾಗ, ಇಡೀ ಜಗತ್ತೇ ಬಲಕ್ಕೆ ವಾಲುತ್ತಿದೆ ಎಂಬ ಅಂಶದ ಪ್ರಸ್ತಾಪ ನಮ್ಮ ಚರ್ಚೆಯಲ್ಲಿ ಬಹುತೇಕ ಇರುವುದಿಲ್ಲ. ಇಸ್ರೇಲ್‌ನಲ್ಲಿ ನೆತನ್ಯಾಹು ಪುನರಾಯ್ಕೆಗೊಂಡಿದ್ದಾರೆ. ಟರ್ಕಿಯಲ್ಲಿ ಎರ್ಡೊಗಾನ್ ಪ್ರಚಂಡ ಬಹುಮತದಿಂದ ಪುನರಾಯ್ಕೆಯಾಗಿದ್ದಾರೆ. ಚುನಾವಣೆಗೆ ಮುನ್ನ ಈ ಪಕ್ಷವು ಪುನರಾಯ್ಕೆ ಆಗುವುದೇ ಇಲ್ಲ ಎನ್ನುವ ಭವಿಷ್ಯ ನುಡಿಯನ್ನು ಸುಳ್ಳಾಗಿಸಿ, ಆಸ್ಟ್ರೇಲಿಯಾದಲ್ಲಿ ಕನ್ಸರ್ವೇಟಿವ್ ಪಕ್ಷವು ಅಧಿಕಾರಕ್ಕೆ ಮರಳಿದೆ.

ಎಡ ಪಂಥವು ಹಲವು ಹತ್ತು ದೇಶಗಳಲ್ಲಿ ಮರು ಹುಟ್ಟು ಪಡೆಯುವಂತಹ ಸ್ಪೂರ್ತಿ ತುಂಬುವ ಭರವಸೆ ಇತರರಲ್ಲಿ ಮೂಡಲು ಕಾರಣವಾಗಿದ್ದ ಎಡ ಪಕ್ಷಗಳು ಇತ್ತೀಚಿನವರೆಗೆ ಅಧಿಕಾರದಲ್ಲಿದ್ದ ಲ್ಯಾಟಿನ್ ಅಮೇರಿಕಾದಲ್ಲಿ, ಒಂದರ ನಂತರ ಮತ್ತೊಂದು ದೇಶದಲ್ಲಿ ಬಲ ಪಂಥೀಯ ಸರ್ಕಾರಗಳು ಅಧಿಕಾರಕ್ಕೆ ಬಂದಿವೆ. ಇಂತಹ ಬದಲಾವಣೆಗಳ ಪೈಕಿ, ಅತ್ಯಂತ ಮಹತ್ವದ್ದು ಮತ್ತು ಅದೇ ಸಮಯದಲ್ಲಿ ಕುಖ್ಯಾತ ಎನ್ನಬಹುದಾದ ಬದಲಾವಣೆ ಬ್ರೆಜಿಲ್‌ನಲ್ಲಿ ಆಗಿದೆ.

ಅಲ್ಲಿ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೇರ್ ಬೊಲ್ಸೊಮಾರೊ ಕೆಲ ವರ್ಷಗಳ ಹಿಂದೆ ಬ್ರೆಜಿಲ್‌ನಲ್ಲಿ ಅಧಿಕಾರದಲ್ಲಿದ್ದ ಮಿಲಿಟರಿ ಆಡಳಿತವನ್ನು ಹಾಡಿ ಹೊಗಳಿರುವುದೇ ಅಲ್ಲದೆ, ಮಿಲಿಟರಿಯು ಇನ್ನೂ ಹೆಚ್ಚು ಮಂದಿಯನ್ನು ಕೊಂದು ಹಾಕಿದ್ದರೆ ಒಳ್ಳೆಯದಿತ್ತು ಎಂದು ಹೇಳಿರುವುದು ದಾಖಲಾಗಿದೆ. ಈ ಎಲ್ಲವಕ್ಕೂ ಕಳಶವಿಟ್ಟಂತೆ, ಕಳೆದ ಭಾನುವಾರ ಯೂರೋಪಿಯನ್ ಒಕ್ಕೂಟದ 28ಸದಸ್ಯ ದೇಶಗಳಲ್ಲಿ ಯೂರೊ ಪಾರ್ಲಿಮೆಂಟಿಗೆ ನಡೆದ ಚುನಾವಣೆಗಳ ಫಲಿತಾಂಶವು ಯೂರೋಪಿನಲ್ಲಿ ಗಮನಾರ್ಹ ಸಂಖ್ಯೆಯ ಜನತೆಯ ಒಲವು ಬಲ ಪಂಥದತ್ತ ಸರಿಯುತ್ತಿರುವ ಅಂಶವನ್ನು ಸಾರುತ್ತದೆ.

ಫ್ರಾನ್ಸ್‌ನಲ್ಲಿ ಮುಂಬರುವ ಮಹಾ ಚುನಾವಣೆಯಲ್ಲಿ ಮರೀನ್ ಲೇ ಪೆನ್ ಅವರ ಉಗ್ರ ಬಲಪಂಥೀಯ ಪಕ್ಷವು, ಹಾಲಿ ಅಧ್ಯಕ್ಷ ಎಮ್ಯಾನ್ಯುಅಲ್ ಮೆಕ್ರಾನ್ ಅವರ ನಡು ಪಂಥೀಯ ಪಕ್ಷಗಳ ಮೈತ್ರಿಕೂಟವನ್ನು ಹಿಂದಿಕ್ಕಿ, ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಬಹುದೆಂದು ಈಗ ತೋರುತ್ತದೆ. ಇಟಲಿಯ ಉಪ ಪ್ರಧಾನ ಮಂತ್ರಿ ಮಾತ್ತಿಯೊ ಸಲ್ವಿನಿ ಅವರ ಉಗ್ರ ಬಲಪಂಥೀಯ ಪಕ್ಷವು ಇಟಲಿಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮುವುದಷ್ಟೇ ಅಲ್ಲದೆ, ಯೂರೊ ಪಾರ್ಲಿಮೆಂಟಿನಲ್ಲಿ ಜರ್ಮನಿಯ ಛಾನ್ಸೆಲರ್ ಅಂಜೆಲಾ ಮರ್ಕೆಲ್ ಅವರ ಪಕ್ಷವನ್ನು ಹಿಂದಿಕ್ಕಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಮರ್ಕೆಲ್ ಅವರ ಪಕ್ಷವು ಐದು ವರ್ಷಗಳ ಹಿಂದಿನ ಚುನಾವಣೆಯಲ್ಲಿ ಗಳಿಸಿದ್ದಕ್ಕಿಂತ 9% ಕಡಿಮೆ ಮತಗಳಿಸಿದೆ. ಅಷ್ಟೇ ಅಲ್ಲ, ಜರ್ಮನಿಯ ಆಲ್ಟರ್‌ನೆಟೀವ್ ಫಾರ್ ಜರ್ಮನಿ ಎಂಬ ಉಗ್ರ ಬಲಪಂಥೀಯ ಪಕ್ಷವು 10.೫% ಮತ ಹೆಚ್ಚಿಸಿಕೊಂಡಿದೆ. ಹಂಗೆರಿಯಲ್ಲಿ, ಅಧ್ಯಕ್ಷ ವಿಕ್ಟರ್ ಒರ್ಬಾನ್ ಅವರ ಬಲಪಂಥೀಯ ಪಕ್ಷವು ಮತ್ತೊಮ್ಮೆ ಪುನರಾಯ್ಕೆಗೊಳ್ಳುವ ಹಾದಿಯಲ್ಲಿದೆ.

ಮೋದಿಯವರ ಗೆಲುವು ದೇಶದಲ್ಲಿ ಜರುಗಿದ ಅನೇಕ ಬೆಳವಣಿಗೆಗಳಿಗೆ ಸಲ್ಲುತ್ತದೆ ಎಂಬುದು ಸ್ಪಷ್ಟವಿದ್ದರೂ ಸಹ, ಇಡೀ ವಿಶ್ವವೇ ಬಲ ಪಂಥಾಭಿಮುಖವಾಗಿ ದಾಪುಗಾಲು ಹಾಕುತ್ತಿರುವ ಈ ಸನ್ನಿವೇಶವನ್ನು ಮರೆಯಬಾರದು. ಬಲ ಪಂಥದ ಕಡೆಗೆ ಕೊಂಡೊಯ್ಯುವ ಉದ್ದೇಶಪೂರ್ವಕ ಪ್ರಯತ್ನಗಳು ಚಾಲನೆಯಲ್ಲಿರುವ ಈ ಸಂದರ್ಭದಲ್ಲಿ, ಇದು ಹೀಗೆಯೇ ಆಗುತ್ತಿರುವುದು ಏಕೆ? ಎಂಬ ಪ್ರಶ್ನೆಯನ್ನು ನಾವು ಕೇಳಬೇಕಾಗುತ್ತದೆ. ಉದಾರ ಮನೋಭಾವದ ಬೂರ್ಜ್ವಾ ವಿಶ್ಲೇಷಕರು, ಈ ಎಲ್ಲ ದೇಶಗಳ ಪಕ್ಷಗಳು ಮತ್ತು ಚಳವಳಿಗಳ ನಡುವೆ ಗೋಚರಿಸುವ ಒಂದು ಸಮಾನ ಅಂಶವನ್ನು ಕಾಣುವುದರ ಬದಲಾಗಿ, ಈ ವಾಸ್ತವದ ಚಿತ್ರವನ್ನು ತುಂಡರಿಸಿ ವಿಶ್ಲೇಷಿಸುವ ಪ್ರವೃತ್ತಿ ಬೆಳಸಿಕೊಂಡಿದ್ದಾರೆ: ಅವರು ಯೂರೋಪ್ ದೇಶದ ರಾಜಕೀಯ ಪಕ್ಷಗಳನ್ನು ಯೂರೋಪಿಯನ್ ಒಕ್ಕೂಟ ಪರ ಮತ್ತು ಯೂರೋಪಿಯನ್ ಒಕ್ಕೂಟ ವಿರೋಧಿ, ಅಥವಾ, ವಲಸೆ-ಪರ ಅಥವಾ ವಲಸೆ-ವಿರೋಧಿ ಎಂದೇ ವಿಭಜಿಸುತ್ತಾರೆ.

ಅದೇ ರೀತಿಯಲ್ಲಿ, ಬೂರ್ಜ್ವಾ ವಿಶ್ಲೇಷಕರು ಮೋದಿಯವರ ಗೆಲುವನ್ನು ಹಿಂದುತ್ವದೊಂದಿಗೆ ತಳುಕು ಹಾಕಿಕೊಂಡಿರುವ ಒಂದು ವಿದ್ಯಮಾನವಾಗಿ ನೋಡುತ್ತಾರೆಯೇ ಹೊರತು, ಯೂರೋಪಿನಲ್ಲಿ ಆಗುತ್ತಿರುವ ವಿದ್ಯಮಾನಕ್ಕೂ ಮತ್ತು ಭಾರತದ ಈ ವಿದ್ಯಮಾನಕ್ಕೂ ಒಂದಕ್ಕೊಂದು ಸಂಬಂಧವೇ ಇಲ್ಲ ಎಂಬಂತೆಯೇ ನೋಡುತ್ತಾರೆ. ಡೊನಾಲ್ಡ್ ಟ್ರಂಪ್ ಅವರ ಬಲಗೊಳ್ಳುತ್ತಿರುವ ಪುನರಾಯ್ಕೆಯನ್ನೂ ಸಹ ಈ ಬೆಳವಣಿಗೆಗಳಿಂದ ಪ್ರತ್ಯೇಕಿಸಿಯೇ ಕಾಣುತ್ತಾರೆ. ಆದರೆ, ಈ ರೀತಿ ಪ್ರತ್ಯೇಕಿಸಿ ನೋಡುವುದು ಮಾರ್ಕ್ಸ್‌ವಾದಿ ವಿಶ್ಲೇಷಣೆಗೆ ಸಲ್ಲುವಂತದ್ದಲ್ಲ. ಮಾರ್ಕ್ಸ್‌ವಾದಿ ವಿಶ್ಲೇಷಣೆ ಘಟನೆಗಳನ್ನು ಸಮಗ್ರವಾಗಿ ನೋಡುತ್ತದೆ, ಅನಾವರಣಗೊಳ್ಳುತ್ತಿರುವ ಘಟನಾವಳಿಗಳ ನಡುವೆ ಇರುವ ಸಮಾನ ರೂಪ, ಕ್ರಮ ಅಥವಾ ಏರ್ಪಾಡು ಮತ್ತು ಅದರ ವರ್ಗ ವಿನ್ಯಾಸವನ್ನು ಗುರುತಿಸುತ್ತದೆ. ಅಂತಾದರೆ, ಜಗತ್ತಿನಾದ್ಯಂತ ಬಲ ಪಂಥದತ್ತ ಸರಿಯುತ್ತಿರುವುದರ ಬಗ್ಗೆ ಮಾರ್ಕ್ಸ್‌ವಾದಿಗಳು ಏನು ಹೇಳಬಹುದು?

ಇದು ಸ್ಪಷ್ಟವಾಗಿ 2008ರಲ್ಲಿ ಆರಂಭವಾಗಿ ಇನ್ನೂ ಜಾಗತಿಕ ಅರ್ಥವ್ಯವಸ್ಥೆಯನ್ನು ಬಿಗಿದುಕೊಂಡಿರುವ ಆರ್ಥಿಕ ಬಿಕ್ಕಟ್ಟನ್ನು ವ್ಯಕ್ತಪಡಿಸುತ್ತದೆ. ಈ ಬಿಕ್ಕಟ್ಟಿನಿಂದ ಸ್ವಲ್ಪ ಚೇತರಿಕೆಯ ಲಕ್ಷಣಗಳು ಆಗೊಮ್ಮೆ ಈಗೊಮ್ಮೆ ಪ್ರಕಟಗೊಂಡಿವೆ. ಆದರೆ, ಚೇತರಿಕೆಯ ಲಕ್ಷಣಗಳು ಕಾಣಿಸಿಕೊಂಡ ಸ್ವಲ್ಪವೇ ಸಮಯದಲ್ಲಿ ಜಾಗತಿಕ ಅರ್ಥವ್ಯವಸ್ಥೆಯು ಮತ್ತೊಮ್ಮೆ ಬಿಕ್ಕಟ್ಟಿನಲ್ಲಿ ಮುಳುಗುತ್ತಿತ್ತು. ಒಂದು ಪುಟಿಯುವ ರಬ್ಬರ್ ಚೆಂಡಿನ ಉಪಮಾನವು ಜಾಗತಿಕ ಅರ್ಥವ್ಯವಸ್ಥೆಯ ಈ ಪರಿಸ್ಥಿತಿಗೆ ಸೊಗಸಾಗಿ ಹೋಲುತ್ತದೆ: ಚೆಂಡು ನೆಲದಿಂದ ಪುಟಿದ ಕೂಡಲೇ ಚೇತರಿಕೆಯ ಉತ್ಸಾಹ ಏರುತ್ತಿತ್ತು; ಪುಟಿದ ಚೆಂಡು ಮತ್ತೆ ನೆಲಕ್ಕೆ ಬಿದ್ದ ಕೂಡಲೇ ಆ ಉತ್ಸಾಹ ಇಳಿಯುತ್ತಿತ್ತು.

ಇಂತಹ ವಾದದ ಬಗ್ಗೆ ತಕರಾರು ಎತ್ತಬಹುದು. ಈ ತಕರಾರಿನ ಸಮರ್ಥನೆಯಾಗಿ ಅಮೇರಿಕಾದಲ್ಲಿ ನಿರುದ್ಯೋಗದ ದರವು ಹಿಂದಿನ ದಶಕಗಳಿಗಿಂತಲೂ ಕೆಳ ಮಟ್ಟಕ್ಕೆ ಈಗ ಇಳಿದಿದೆ ಎಂದು ಹೇಳಬಹುದು. ಆದರೆ, ಉದ್ಯೋಗದಲ್ಲಿ ಭಾಗವಹಿಸುವಿಕೆಯ ದರವು 2008ರಲ್ಲಿ ಇದ್ದದ್ದಕ್ಕಿಂತಲೂ ಕೆಳಗಿದೆ. ಉದ್ಯೋಗ ಭಾಗವಹಿಸುವಿಕೆಯ ದರವು ಈಗಲೂ 2008ರಲ್ಲಿ ಇದ್ದಷ್ಟೇ ಇದೆ ಎಂದು ಊಹಿಸಿಕೊಂಡರೆ, ಅಮೇರಿಕಾದ ಇಂದಿನ ನಿರುದ್ಯೋಗದ ದರ 8% ಆಗುತ್ತದೆ, ಅಧಿಕೃತ ಅಂಕಿಗಳು ಹೇಳುವ ಹಾಗೆ 4% ಅಲ್ಲ.

ಜಾಗತಿಕ ಅರ್ಥವ್ಯವಸ್ಥೆಯು ಬಿಕ್ಕಟ್ಟಿಗೆ ಒಳಗಾಗಿರುವ ಪರಿಸ್ಥಿತಿಯಲ್ಲಿ ಮತ್ತು ಅದರ ಪರಿಣಾಮವಾಗಿ ನಿರುದ್ಯೋಗವು ಉಲ್ಬಣಗೊಂಡ ಪರಿಸ್ಥಿತಿಯಲ್ಲಿ ಜಗತ್ತಿನಾದ್ಯಂತ ಬಲ ಪಂಥದತ್ತ ಪಲ್ಲಟ ಕಾಣುತ್ತಿದೆ. ಅರ್ಥವ್ಯವಸ್ಥೆಯ ಬಿಕ್ಕಟ್ಟು ಮತ್ತು ನಿರುದ್ಯೋಗದ ಪ್ರಶ್ನೆ ಬಂದಾಗ, ಉದಾರವಾದೀ ಬೂರ್ಜ್ವಾ ಪಕ್ಷಗಳು ಸಾಮಾನ್ಯವಾಗಿ ನಿರಾಕರಣೆಯ ಧೋರಣೆ ತಳೆಯುತ್ತವೆ. ನಿರುದ್ಯೋಗ ಉಂಟಾಗುವುದಕ್ಕೆ ವ್ಯವಸ್ಥೆ ಕಾರಣವಲ್ಲ; ವಲಸಿಗರೇ ಕಾರಣ; ಆದುದರಿಂದ ವಲಸೆಯನ್ನು ತಡೆಯಬೇಕು ಎಂದು ಪ್ರತಿಪಾದಿಸುವ ಬಲ ಪಂಥವು, ಕೊನೆಯ ಪಕ್ಷ, ನಿರುದ್ಯೋಗವು ಉಂಟುಮಾಡುವ ಯಾತನೆಯನ್ನು ಗುರುತಿಸುತ್ತದೆ.

ಯೂರೋಪಿಯನ್ ಒಕ್ಕೂಟ ವ್ಯವಸ್ಥೆಯಲ್ಲಿ, ಅದರ ದುಡಿಮೆಗಾರರು ಒಕ್ಕೂಟದ 28 ಸದಸ್ಯ ದೇಶಗಳಲ್ಲಿ ಯಾವುದೇ ದೇಶಕ್ಕೆ ವಲಸೆ ಹೋಗುವ ಅವಕಾಶವು ಮುಕ್ತವಾಗಿರುವುದರಿಂದ, ಕೆಲವು ಬಲ ಪಂಥೀಯ ಪಕ್ಷಗಳು ಯೂರೋಪಿಯನ್ ಒಕ್ಕೂಟದ ವಿರೋಧಿಗಳೂ ಆಗಿದ್ದಾರೆ. ಆಡಳಿತದಲ್ಲಿರುವ ಮತ್ತು ಅವರಿಗೆ ವಿರೋಧವಿರುವ ಉದಾರವಾದೀ ಬೂರ್ಜ್ವಾ ಪಕ್ಷಗಳು ಬಿಕ್ಕಟ್ಟು ಇದೆಯೆನ್ನುವುದನ್ನೇ ಒಪ್ಪಿಕೊಳ್ಳದ ಪರಿಸ್ಥಿತಿಯಲ್ಲಿ ಮತ್ತು ಎಡ ಪಂಥವು ಈ ಬಿಕ್ಕಟ್ಟಿನಿಂದ ಹೊರಬರುವ ಒಂದು ಪರ್ಯಾಯ ಅಜೆಂಡಾವನ್ನು ಜನತೆಯ ಮುಂದಿಡುವಲ್ಲಿ ನಿಧಾನವಾಗಿರುವ ಪರಿಸ್ಥಿತಿಯಲ್ಲಿ, ಇಂತಹ ಪರಿಸ್ಥಿತಿ ನಿರ್ಮಾಣವಾಗುವುದನ್ನೇ ಕಾಯುತ್ತಿದ್ದ ಬಲ ಪಂಥವು ಕಿಂದರಿಜೋಗಿಯಂತೆ ರಂಗ ಪ್ರವೇಶಿಸಿ ನಿರುದ್ಯೋಗ ಪರಿಹರಿಸುವ ಕಿಂದರಿ ಬಾರಿಸಿತು. ಒಂದು ವಲಸೆ-ವಿರೋಧಿ ಅಜೆಂಡಾವನ್ನು ಜನತೆಯ ಮುಂದಿಡುವ ಮೂಲಕ ಬಲ ಪಂಥವು ತನ್ನ ಚಟುವಟಿಕೆಗಳಿಗೆ ಚಾಲನೆ ಕೊಟ್ಟಿದೆ. ಹೀಗೆ ಜಗತ್ತಿನ ಉದ್ದಗಲದಲ್ಲೂ ಅದರ ಬೆಳವಣಿಗೆಗೆ ಅದು ಬಿಕ್ಕಟ್ಟು ಮತ್ತು ನಿರುದ್ಯೋಗವನ್ನು ಗಮನಕ್ಕೆ ತಗೊಂಡಿರುವುದು ಮತ್ತು ಅಧಿಕಾರಸ್ಥರ ಪರವಾದ ರಾಜಕೀಯ ಪಕ್ಷಗಳು ಗಮನಕ್ಕೆ ತಗೊಂಡಿರದಿರುವುದೇ ಕಾರಣ ಎನ್ನಬಹುದು.

ಹಾಗಾದರೆ, ಭಾರತದಲ್ಲಿನ ಕತೆ ಈ ವಿವರಣೆಯ ಚೌಕಟ್ಟಿಗೆ ಹೊಂದಿಕೊಳ್ಳುತ್ತದೆಯೇ? ಭಾರತದಲ್ಲಿಯೂ ಸಹ ಅಭಿವೃದ್ಧಿ ಅಜೆಂಡಾದ ಮೂಲಕವೇ 2014ರಲ್ಲಿ ಮೋದಿ ಅಧಿಕಾರ ಹಿಡಿದದ್ದು. ಅದಕ್ಕೂ ಮುನ್ನವೇ ಯುಪಿಎ-2 (2009-14) ಅವಧಿಯಲ್ಲಿ ಆರ್ಥಿಕ ಬೆಳವಣಿಗೆ ದರ ಇಳಿಮುಖವಾಗಿತ್ತು. ಹಾಗಾಗಿ, ಪ್ರತಿಯೊಬ್ಬರ ಅದೃಷ್ಟ ಖುಲಾಯಿಸುವ ನವ ಉದಾರವಾದದ ಭರವಸೆ ಮಬ್ಬಾಗಲಾರಂಭಿಸಿತ್ತು. ಜನತೆಗೆ ಕೊಟ್ಟಿದ್ದ ಅಭಿವೃದ್ಧಿ ಅಥವಾ ವಿಕಾಸ ಭರವಸೆಯನ್ನು ಈಡೇರಿಸಲು ಮೋದಿ ಸರ್ಕಾರವು ಅಧಿಕಾರದ ಅವಧಿಯಲ್ಲಿ(2014-19) ಅಕ್ಷರಷಃ ಏನನ್ನೂ ಮಾಡಲಿಲ್ಲ.

ಆ ಕಾರಣದಿಂದಾಗಿಯೇ ಈಗ ತಾನೇ ಮುಗಿದ ಚುನಾವಣೆಯಲ್ಲಿ ಅಭಿವೃದ್ಧಿ ಅಥವಾ ವಿಕಾಸದ ಬಗ್ಗೆ ಮೋದಿಯವರು ಒಂದೇ ಒಂದು ಶಬ್ದವನ್ನೂ ಉಚ್ಛರಿಸಲಿಲ್ಲ. ಆದರೆ, ಭಯೋತ್ಪಾದನೆ ವಿರುದ್ಧ ಹೋರಾಡುವೆ, ರಾಷ್ಟ್ರವನ್ನು ರಕ್ಷಿಸುವೆ, ಪಾಕೀಸ್ತಾನಕ್ಕೆ ಪಾಠ ಕಲಿಸುವೆ ಮತ್ತು ಹಿಂದುತ್ವ ಪ್ರತಿಷ್ಠಾಪನೆಯಂತಹ ಮಾತುಗಳ ಮೂಲಕ ಇಡೀ ಚರ್ಚೆಯ ದಿಕ್ಕನ್ನೇ ಮೋದಿ ಬದಲಿಸಿದರು. ಈ ತಂತ್ರಗಾರಿಕೆಯ ಮಾತುಗಳ ಮೂಲಕ, ಅಧಿಕಾರದ ಅವಧಿಯಲ್ಲಿ ಅಭಿವೃದ್ಧಿ ಸಾಧಿಸಲು ತಮ್ಮ ಸರ್ಕಾರ ಮಾಡಿದ್ದೇನು ಎಂಬುದರ ಕುರಿತು ಎದುರಾಗುವ ಇರುಸು ಮುರುಸಿನ ಪ್ರಶ್ನೆಗಳನ್ನು ನಿರಾಯಾಸವಾಗಿ ತಪ್ಪಿಸಿಕೊಂಡರು. ಅದರಿಂದ ಅವರಿಗೆ ಭರ್ಜರಿ ಅನುಕೂಲವೇ ಆಯ್ತು.

ನವ ಉದಾರವಾದವನ್ನು ಪ್ರತಿನಿಧಿಸುವ ಕಾಂಗ್ರೆಸ್‌ನಂತಹ ಒಂದು ಪಕ್ಷದಿಂದ ಬಿಜೆಪಿಯಂತಹ ಒಂದು ಬಲ ಪಂಥೀಯ ಪಕ್ಷದತ್ತ ಪಲ್ಲಟವು ಸಾಧ್ಯವಾಗಿರುವುದು ನವ ಉದಾರವಾದದ ಬಿಕ್ಕಟ್ಟಿನಿಂದಾಗಿಯೇ ಎಂಬ ಸಂಗತಿಯಂತೂ ಉಳಿದೇ ಉಳಿಯುತ್ತದೆ. ನವ ಉದಾರವಾದವು ಅಭಿವೃದ್ಧಿ ತರುತ್ತದೆ ಎಂಬುದಾಗಿ ಸೋಗುಹಾಕುವುದು ಕಾಗ್ರೆಸ್ ಪಕ್ಷಕ್ಕೆ ಇನ್ನೆಷ್ಟೂ ಸಾಧ್ಯವಿರಲಿಲ್ಲ. ಬಿಜೆಪಿಯಂತೂ ಅಭಿವೃದ್ಧಿಯ ಬಗ್ಗೆ ಮಾತಾಡಲೇ ಇಲ್ಲ. ಆದರೆ, ಕಥನ-ಪ್ರವಚನದ ದಿಕ್ಕನ್ನೇ ಬದಲಿಸಿತು. ಅದು ಕಾರ್ಪೊರೇಟ್-ಹಣಕಾಸು ಕುಳಗಳಿಗೆ ಹಿಡಿಸಿತು ಕೂಡ (ಅದೆಷ್ಟು ಅಂದರೆ, ಬಿಜೆಪಿ ಗೆಲ್ಲುತ್ತದೆಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದ ಕೂಡಲೇ ಷೇರು ಪೇಟೆ ಸೂಚ್ಯಂಕ ಸರ್ರನೆ ಏರಿತು).

ಬದಲಾದ ಇಂತಹ ಸಂವಾದ-ಕಥನಗಳ ಪ್ರಭಾವ ತಾತ್ಕಾಲಿಕ. ನವ ಉದಾರವಾದವು ಸಿಕ್ಕಿಹಾಕಿಕೊಂಡಿರುವ ಬಿಕ್ಕಟ್ಟಿನಿಂದ ಹೊರಬರುವುದು ಹೇಗೆ ಎಂಬುದರ ಬಗ್ಗೆ ಯಾವ ಸುಳಿವೂ ಕಾಂಗ್ರೆಸ್‌ಗೂ ಇಲ್ಲ, ಬಿಜೆಪಿಗೂ ಇಲ್ಲ. ಆದ್ದರಿಂದ, ಕೋಟ್ಯಂತರ ನಿರುದ್ಯೋಗಿಗಳಿಗೆ ಅವರು ಉದ್ಯೋಗ ಒದಗಿಸಲಾರರು. ಹಾಗೆ ಹೇಳುವುದಾದರೆ, ಕಾಂಗ್ರೆಸ್ ಪಕ್ಷದ ಕೆಲವರಿಗೆ ನವ ಉದಾರವಾದದ ಹಾದಿಯಲ್ಲಿ ಮುಂದೆ ಹೋಗುವುದು ಅದೆಷ್ಟು ಕಷ್ಟ ಎಂಬುದರ ಅರಿವಿತ್ತು. ಹಾಗಾಗಿಯೇ, ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಐದು ಕೋಟಿ ಕಡು ಬಡ ಕುಟುಂಬಗಳಿಗೆ ವಾರ್ಷಿಕ 72,000 ರೂ ಹಣ ವರ್ಗಾಯಿಸುವ ನ್ಯಾಯ ಯೋಜನೆಯ ಘೋಷಣೆ ಕೊಟ್ಟಿತ್ತು. ಮಾಮೂಲು ಪರಿಸ್ಥಿತಿಯಲ್ಲಿ ಸಾಕಷ್ಟು ಉತ್ಸಾಹ ತುಂಬುವ ಸಾಧ್ಯತೆ ಹೊಂದಿದ್ದ ಮತ್ತು ಪಕ್ಷದ ಪಾಲಿಗೆ ಅಧಿಕಾರ ತಂದುಕೊಡುವಂತಹ ಒಂದು ಯೋಜನೆಯೇ ಠುಸ್ ಪಟಾಕಿಯಂತಾಯಿತು. ಏಕೆಂದರೆ, ಅದಕ್ಕೆ ಬೇಕಾಗುವ ಹಣ ಯಾವ ಮೂಲದಿಂದ ಬರುತ್ತದೆ ಎಂಬುದನ್ನು ಕಾಂಗ್ರೆಸ್ ಪಕ್ಷವು ಹೇಳದೇ ಇದ್ದುದರಿಂದ ಅದು ಜನರ ವಿಶ್ವಾಸ ಗಳಿಸಲಿಲ್ಲ. ಇದೊಂದು ಚುನಾವಣಾ ಭರವಸೆ, ಚುನಾವಣೆಯ ಮರು ದಿನವೇ ಅದನ್ನು ಮುರಿಯಲಾಗುತ್ತದೆ ಎಂದೇ ಜನ ಸಹಜವಾಗಿ ಭಾವಿಸಿದರು.

ಅರ್ಥವ್ಯವಸ್ಥೆಯನ್ನು ಮುನ್ನೆಡೆಸುವುದು ಹೇಗೆ ಎಂಬುದರ ಬಗ್ಗೆ ಮಧ್ಯಮಾರ್ಗಿ, ಉದಾರವಾದೀ ಬೂರ್ಜ್ವಾ ಪಕ್ಷವಾದ ಕಾಂಗ್ರೆಸ್‌ಗೆ ಒಂದು ಸ್ಪಷ್ಟ ಕಲ್ಪನೆಯೇ ಇಲ್ಲ. ಆ ಪಕ್ಷಕ್ಕೆ ಸರಿಸಮನಾಗಿ ಬಿಜೆಪಿಗೂ ಅದರ ಬಗ್ಗೆ ಯಾವುದೇ ಸುಳಿವೂ ಇಲ್ಲ. ಬಿಜೆಪಿಯ ಅತಿರೇಕದ ರಾಷ್ಟ್ರವಾದವು ಬಹಳ ಬೇಗನೇ ತೆಳುವಾಗುತ್ತದೆ. ಹಸಿವು ಮತ್ತು ನಿರುದ್ಯೋಗದಿಂದ ನರಳುತ್ತಿರುವ ಜನತೆಯನ್ನು ಗಾಳಕ್ಕೆ ಸಿಕ್ಕಿಸಿದ ಹುಳ ತಿನ್ನುವ ಮೀನುಗಳೆಂದು ಭಾವಿಸಿ, ಅವರಿಗೆ ದಿನನಿತ್ಯವೂ ಪಾಕೀಸ್ತಾನ-ವಿರೋಧೀ ಮತ್ತು ಮುಸ್ಲಿಂ-ವಿರೋಧೀ ಮಾತುಗಳನ್ನೇ ಉಣಬಡಿಸುವ ಆಟ ಬಹಳ ಕಾಲ ನಡೆಯುವುದಿಲ್ಲ. ಅಲ್ಲದೆ, ಆರ್ಥಿಕ ಪರಿಸ್ಥಿತಿ ನಿಂತಲ್ಲೇ ನಿಶ್ಚಲವಾಗಿ ಉಳಿಯುವುದಿಲ್ಲ.

ಮೋದಿ ಸರ್ಕಾರವು ಆರ್ಥಿಕ ವಲಯದತ್ತ ತಲೆ ಹಾಕಿ ಮಲಗದೇ ಇದ್ದರೂ ಸಹ, ಅರ್ಥವ್ಯವಸ್ಥೆಯು ಮೋದಿಯವರನ್ನು ಅವರಷ್ಟಕ್ಕೆ ಅವರು ಇರಲು ಬಿಡುವುದಿಲ್ಲ, ಬೆನ್ನು ಹತ್ತಿದ ಬೇತಾಳನಂತೆ ಕಾಡುತ್ತದೆ. ಕಾಲಕ್ರಮೇಣ, ಆರ್ಥಿಕ ಚಟುವಟಿಕೆಗಳ ಹಿಂಜರಿತ ಮತ್ತು ವಿದೇಶ ವ್ಯಾಪಾರದ ಬಾಕಿ ಚುಕ್ತಾ ಮಾಡುವುದೇ ಒಂದು ಸಮಸ್ಯೆಯಾದಾಗ, ಆರ್ಥಿಕ ಬಿಕ್ಕಟ್ಟು ಉಲ್ಬಣಗೊಳ್ಳುತ್ತದೆ. ಆಗ, ಉತ್ತರ ಕೊಡಲು ಮೋದಿ ಸರ್ಕಾರದ ಬಳಿ ಹೇಳಿಕೊಳ್ಳುವ ಸಮರ್ಥನೆಗಳಿರುವುದಿಲ್ಲ. ಮತ್ತು, ಬಿಕ್ಕಟ್ಟಿನಿಂದ ಅರ್ಥವ್ಯವಸ್ಥೆಯನ್ನು ಪಾರುಮಾಡುವುದು ಆ ವೇಳೆಗಾಗಲೇ ಇನ್ನೂ ಹೆಚ್ಚು ಕಷ್ಟಕರವಾಗುತ್ತದೆ.

ಜನತೆಯ ದಿನನಿತ್ಯದ ಬದುಕಿನ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ನವ ಉದಾರವಾದದ ಎರಡೂ ಪಡೆಗಳು (ಕಾಂಗ್ರೆಸ್ ಮತ್ತು ಬಿಜೆಪಿ) ಅಸಮರ್ಥವಾಗಿವೆ. ಈ ಪರಿಸ್ಥಿತಿಯಲ್ಲಿ, ಅರ್ಥವ್ಯವಸ್ಥೆಯನ್ನು ಬಿಕ್ಕಟ್ಟಿನಿಂದ ಹೊರ ಬರುವ ಮಾರ್ಗದರ್ಶನವನ್ನು ಎಡ ಪಂಥ ಮಾತ್ರ ಒದಗಿಸಬಲ್ಲದು. ಎಡ ಪಂಥದ ಈ ಮಾರ್ಗವು ನಮ್ಮನ್ನು ಬಂಡವಾಳಶಾಹಿಯಿಂದ ಆಚೆಗೆ ಕೊಂಡೊಯ್ಯಬಲ್ಲದು. ನವ ಉದಾರ ಬಂಡವಾಳಶಾಹಿ ದಿಗಂತದಿಂದ ಆಚೆಗಿನ ಕಣ್ಣೋಟ ಹೊಂದಿರುವುದು ಎಡ ಪಂಥ ಮಾತ್ರ. ಆದ್ದರಿಂದ, ಎಡ ಪರ್ಯಾಯ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವಕ್ಕೇ ಸಲ್ಲುತ್ತದೆ.

ಸಂಕ್ಷಿಪ್ತವಾಗಿ, ನಾವೀಗ ಒಂದು ಚಾರಿತ್ರಿಕ ಪರ್ವಕಾಲವನ್ನು ನೋಡುತ್ತಿದ್ದೇವೆ. ಈ ಸನ್ನಿವೇಶದಲ್ಲಿ, ಬಲಪಂಥವು ಒಂದು ಹುಸಿ ಅಥವಾ ವಿಭಜನಕಾರೀ ಅಜೆಂಡಾದ ಸುತ್ತ ಜನರನ್ನು ಅಲ್ಪ ಕಾಲದಲ್ಲೇ ಅಣಿನೆರೆಸುವಲ್ಲಿ ಎಷ್ಡೇ ಯಶಸ್ವಿಯಾಗಿದ್ದರೂ ಸಹ, ನಿರುದ್ಯೋಗ ಮತ್ತು ಹತಾಶೆಯ ಪರಿಸ್ಥಿತಿಗೆ ಒಳಗಾಗಿರುವ ಆ ಜನರನ್ನು ಆ ಪರಿಸ್ಥಿತಿಯಿಂದ ಹೊರತರುವ ಮಾರ್ಗ ತೋರಲು ಬಲ ಪಂಥವು ಮೂಲಭೂತವಾಗಿ ಅಸಮರ್ಥವಾಗಿದೆ.

ಒಂದು ರಾಷ್ಟ್ರದ ಚರಿತ್ರೆಯಲ್ಲಿ, ಅಸ್ತಿತ್ವದಲ್ಲಿರುವ ವ್ಯವಸ್ಥೆಯು ಸ್ಥಿರವಾಗಿ ಮತ್ತು ದೀರ್ಘವಾಗಿ ಬಾಳುವ ಸಾಮರ್ಥ್ಯವುಳ್ಳದ್ದೆಂದು ತೋರುವ ಕ್ಷಣಗಳಿರುತ್ತವೆ. ಆದರೆ, ಇವೆಲ್ಲವೂ ಕ್ಷಿಪ್ರವಾಗಿ ಬದಲಾಗುತ್ತವೆ, ಹಿಂದಿನಂತೆಯೆ ಸಾಗುವುದು ಇನ್ನು ಸಾಧ್ಯವಿಲ್ಲವೆಂಬ ಪರಿಸ್ಥಿತಿಯಲ್ಲಿ ಹೊಸ ಕ್ಷಣಗಳು ಕಾಣಿಸಿಕೊಳ್ಳುತ್ತವೆ. ಅಂತಹ ಒಂದು ಕ್ಷಣ ಬಂಡವಾಳಶಾಹಿಗೆ ಈಗ ಬಂದಿದೆ, ಭಾರತದಲ್ಲಿ ಮಾತ್ರವಲ್ಲ ವಿಶ್ವದ ಎಲ್ಲೆಡೆಯಲ್ಲೂ. ಭಾರತದಲ್ಲಿ ಮತ್ತು ಬೇರೆ ಹಲವು ದೇಶಗಳಲ್ಲಿ ಬಲಪಂಥವು ಎಷ್ಡೇ ಚುನಾವಣಾ ಯಶಸ್ಸು ಗಳಿಸಿದರೂ, ಅದು ಈ ಮೂಲಭೂತ ಅಂಶವನ್ನು ಮಾರ್ಪಡಿಸಲಾರದು.

ಪ್ರೊ.ಪ್ರಭಾತ್ ಪಟ್ನಾಯಕ್
ಅನು: ಕೆ.ಎಂ.ನಾಗರಾಜ್

ಕೃಪೆ : ಜನಶಕ್ತಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ

Published

on

ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾ‌ರ್ ಆದೇಶಿಸಿದ್ದಾರೆ.

ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.

ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.

ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಬದಲಾಯಿಸದಂತೆ ಬ್ರಿಕ್ಸ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯ

Published

on

ಸುದ್ದಿದಿನಡೆಸ್ಕ್:ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಹೊಸ ಕರೆನ್ಸಿಯನ್ನು ಪರಿಚಯಿಸುವುದಾಗಲಿ ಅಥವಾ ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಅನ್ನು ಬದಲಿಸಿ ಬೇರೆ ಕರೆನ್ಸಿಗಳನ್ನು ಬೆಂಬಲಿಸುವ ಕೆಲಸ ಮಾಡದಿರಲು ಬದ್ಧವಾಗಿರಬೇಕು, ಇಲ್ಲವಾದಲ್ಲಿ, 100 ಪ್ರತಿಶತ ಸುಂಕಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯಿಸಿದ್ದಾರೆ.

ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಅವರು, ಈ ದೇಶಗಳು ಯುಎಸ್ ಡಾಲರ್ ಅನ್ನು ಬದಲಿಸುವ ಕೆಲಸ ಮಾಡುವುದಿಲ್ಲ ಎಂಬ ಬದ್ಧತೆಯ ಅಗತ್ಯವಿದೆ. ಅಂತರಾಷ್ಟ್ರೀಯ ವ್ಯಾಪಾರದಲ್ಲಿ ಬ್ರಿಕ್ಸ್ ಅಮೆರಿಕಾ ಡಾಲರ್ ಅನ್ನು ಬದಲಿಸುವ ಯಾವುದೇ ಅವಕಾಶವಿಲ್ಲ, ಮತ್ತು ಇದನ್ನು ಪ್ರಯತ್ನಿಸುವ ಯಾವುದೇ ದೇಶ ಅಮೆರಿಕದೊಂದಿಗಿನ ಸಂಬಂಧಗಳಿಗೆ ವಿದಾಯ ಹೇಳಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 days ago

ವಿದ್ಯಾರ್ಥಿಗಳಿಗೆ ಡಿಜಿಟಲ್ ಕೌಶಲ್ಯ ಅಗತ್ಯ : ಡಾ. ವೆಂಕಟೇಶ್ ಬಾಬು

ಸುದ್ದಿದಿನ,ಚನ್ನಗಿರಿ:ವಿದ್ಯಾರ್ಥಿಗಳು ಇಂದಿನ ಯುಗಕ್ಕೆ ಅಗತ್ಯವಿರುವ ಎಲ್ಲಾ ಜೀವನ ಹಾಗೂ ತಂತ್ರಜ್ಞಾನ, ವಿಶೇಷವಾಗಿ ಡಿಜಿಟಲ್ ಕೌಶಲ್ಯಗಳನ್ನು ಅರಿತಿರಬೇಕು ಎಂದು ಪ್ರಾಧ್ಯಾಪಕ ಡಾ. ವೆಂಕಟೇಶ್ ಬಾಬು ಅವರು ತಿಳಿಸಿದರು. ಬುಧವಾರ...

ದಿನದ ಸುದ್ದಿ1 week ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಖರೀದಿಸಲು ನೋಂದಣಿ ಆರಂಭ

ಸುದ್ದಿದಿನ,ದಾವಣಗೆರೆ:ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ ರೂ.2300 ಹಾಗೂ ಎ ಗ್ರೇಡ್ ಪ್ರತಿ ಕ್ವಿಂಟಾಲ್‍ಗೆ ರೂ.2320 ರಂತೆ ಹಾಗೂ ಪ್ರತಿ ಕ್ವಿಂಟಾಲ್‍ಗೆ...

ದಿನದ ಸುದ್ದಿ2 weeks ago

ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು...

ದಿನದ ಸುದ್ದಿ2 weeks ago

ದಾವಣಗೆರೆ | 14 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ.ಎ.ಬಿ.ರಾಮಚಂದ್ರಪ್ಪ ಆಯ್ಕೆ

ಸುದ್ದಿದಿನ,ದಾವಣಗೆರೆ:ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನವು ಜಗಳೂರು ಪಟ್ಟಣದಲ್ಲಿ ದಿನಾಂಕ 11 ಮತ್ತು 12 ಜನವರಿ 2025 ರಂದು ನಡೆಯಲಿದೆ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಿಶ್ರಾಂತ ಕನ್ನಡ...

ದಿನದ ಸುದ್ದಿ3 weeks ago

ವಿಶಾಖಪಟ್ಟಣಂನಲ್ಲಿ ಆಲ್ ಇಂಡಿಯ ಕ್ರೀಡಾಕೂಟಕ್ಕೆ ಪೇದೆ ಕೆ.ಆರ್.ಹುಲಿರಾಜ ಆಯ್ಕೆ

ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಬಳ್ಳಾರಿ: ಉದ್ಯೋಗದೊಂದಿಗೆ ಆರೋಗ್ಯದ ದೃಷ್ಟಿಯಿಂದ ಪ್ರತಿನಿತ್ಯ ಒಂದು ತಾಸಿನ ಕಾಲ ದೇಹದಂಡನೆ ಮಾಡಿದರೇ ಕರ್ತವ್ಯ ನಿರ್ವಹಿಸಲು ಅನುಕೂಲಕರವಾಗುತ್ತದೆ ಎಂದು ವಿಶಾಲಪಟ್ಟಣಂ ಆಲ್...

ದಿನದ ಸುದ್ದಿ3 weeks ago

ಚನ್ನಗಿರಿ |ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಹಾಗೂ ಇತರೆ ಚಟುವಟಿಕೆ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ಚನ್ನಗಿರಿ ಶಾಸಕ...

ಕ್ರೀಡೆ3 weeks ago

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ...

ಕ್ರೀಡೆ3 weeks ago

ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ

ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ...

ಕ್ರೀಡೆ3 weeks ago

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ...

ದಿನದ ಸುದ್ದಿ3 weeks ago

ಫೆಂಗಲ್ ಚಂಡಮಾರುತ | ರಾಜ್ಯದ ವಿವಿಧೆಡೆ ಮಳೆ ; ಕೆಲವು ಜಿಲ್ಲೆಯಲ್ಲಿ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಫೆಂಗಲ್ ಚಂಡಮಾರುತ ಪರಿಣಾಮ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗ್ಗೆಯಿಂದಲೇ ಬೆಂಗಳೂರಿನ ಹಲವೆಡೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ....

Trending