Connect with us

ದಿನದ ಸುದ್ದಿ

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ 25 ಲಕ್ಷ ಪರಿಹಾರದ ಚೆಕ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published

on

ಸುದ್ದಿದಿನ,ಮಂಗಳೂರು : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಅವರು ಇಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರವೀಣ್ ತಮ್ಮ ಕುಟುಂಬಕ್ಕೆ ಆಧಾರವಾಗಿದ್ದು, ಚಿಕ್ಕ ಅಂಗಡಿಯೇ ಆದಾಯದ ಮೂಲವಾಗಿತ್ತು. ಸರ್ಕಾರದ ವತಿಯಿಂದ ಪರಿಹಾರ ನಿಧಿಯಿಂದ 25 ಲಕ್ಷ ಪರಿಹಾರ ಹಾಗೂ ಭಾರತೀಯ ಜನತಾ ಪಕ್ಷದ ವತಿಯಿಂದ 25 ಲಕ್ಷ ಗಳನ್ನು ಪರಿಹಾರವಾಗಿ ನೀಡಲಾಗಿದೆ. ಪ್ರವೀಣ್ ಕುಟುಂಬದವರಿಗೆ ಪಕ್ಷ ಮತ್ತು ಸರ್ಕಾರದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು.

ಅವರ ಜೀವನದ ಮುಂದಿನ ಭವಿಷ್ಯಕ್ಕೆ ಸಹಕಾರ ನೀಡಲಾಗುವುದು. ಪ್ರವೀಣ್ ಆತ್ಮಕ್ಕೆ ಕೊಲೆಗೈದವರ ಶಿಕ್ಷೆಯಾದಾಗ ಮಾತ್ರ ಶಾಂತಿ ದೊರಕಲಿದೆ. ಪ್ರವೀಣ್ ಕುಟುಂಬದವರು ಇದೇ ಮಾತನ್ನು ಹೇಳಿದ್ದಾರೆ. ಇನ್ನೆಂದೂ ಈ ರೀತಿ ಯಾರಿಗೂ ಆಗಬಾರದು , ಇದರ ಹಿಂದಿರುವ ಸಂಘಟನೆಗಳ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಕಟುಕರಿಗೆ ಶಿಕ್ಷೆ ಆಗುವ ಕೆಲಸವನ್ನು ಕಟ್ಟುನಿಟ್ಟಾಗಿ ಮಾಡಲಾಗುವುದು ಎಂದರು.

ಯೋಜನಾಬದ್ಧವಾದ ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಿದೆ

ಇದೊಂದು ಪೂರ್ವಯೋಜಿತ ಕೃತ್ಯ ಎಂದು ಮೇಲ್ನೋಟಕ್ಕೆ ತಿಳಿಯುತ್ತದೆ. ಮೊನ್ನೆ ನಡೆದ ಪ್ರವೀಣ್ ಹತ್ಯೆ ಪ್ರಕರಣ ಖಂಡನೀಯ. ಕಳೆದ ಹತ್ತು ವರ್ಷಗಳಲ್ಲಿ ಈ ಭಾಗದಲ್ಲಿ ಇಂತಹ ಚಟುವಟಿಕೆಗಳು ನಡೆಯುತ್ತಿದೆ. ಸಮಾಜಘಾತುಕ ಶಕ್ತಿಗಳು ಬೆಂಬಲ ನೀಡಿರುವುದುರಿಂದ ನಿರ್ಭೆಡೆಯಿಂದ ಈ ಘಟನೆಯನ್ನು ನಡೆಸಲಾಗಿದೆ. ಇದನ್ನು ನಾವು ಕೊಲೆ ಪ್ರಕರಣವಾಗಿ ನೋಡುತ್ತಿಲ್ಲ. ದೇಶವನ್ನು ಛಿದ್ರ ಮಾಡುವ ಯೋಜನಾಬದ್ಧವಾದ ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಲಾಗಿದೆ. ತನಿಖೆ ಪ್ರಾರಂಭವಾಗಿದೆ.

ಆರೋಪಿಗಳು ರಾಜ್ಯದ ಗಡಿ ದಾಟಿರಬಹುದು. ಈ ಎಲ್ಲ ಆಯಾಮದಲ್ಲಿ ತನಿಖೆ ಮಾಡಲಾಗುತ್ತಿದೆ, ಕೆಲವರನ್ನು ವಶಕ್ಕೆ ತೆಗೆದುಕೊಂಡು, ಅವರಿಂದ ಪಡೆದ ಮಾಹಿತಿಯಿಂದ ತನಿಖೆ ಮುಂದುವರೆಯಲಿದೆ. ಅತಿ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂಬ ವಿಶ್ವಾಸವಿದೆ. ಎಡಿಜಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಕಳೆದ ಹಲವಾರು ವರ್ಷಗಳಿಂದ ದುಷ್ಕೃತ್ಯಗಳಲ್ಲಿ ತೊಡಗಿಕೊಂಡಿರುವ ಸಮಾಜಘಾತುಕ ಶಕ್ತಿಗಳ ಜಾಡು ಹಿಡಿದು, ಈ ದಿಸೆಯಲ್ಲಿಯೂ ತನಿಖೆ ಕೈಗೊಂಡು ಹಿಂದಿರುವ ಸಂಘಟನೆಗಳನ್ನು ಗಮನಿಸುತ್ತಿದ್ದೇವೆ ಎಂದರು.

ಕರ್ನಾಟಕಕ್ಕೆ ಎನ್ ಐ ಎ ಅಗತ್ಯವಿದೆ

ಕರ್ನಾಟಕ ರಾಜ್ಯಕ್ಕೆ ರಾಷ್ಟ್ರೀಯ ತನಿಖಾ ದಳವನ್ನು ಒದಗಿಸಲು ಕೋರಲಾಗಿದೆ. ವಿಶೇಷವಾಗಿ ಮಂಗಳೂರು ಭಾಗಕ್ಕೆ ಎನ್ ಐ ಎ ಯ ಅವಶ್ಯಕತೆ ಇದೆ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ. ಪ್ರಾಥಮಿಕ ತನಿಖಾ ವರದಿಯ ಆಧಾರವಾಗಿ ಹೆಚ್ಚುವರಿ ತನಿಖೆಯ ಅವಶ್ಯಕತೆ ಇದ್ದಲ್ಲಿ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗುವುದು. ಈ ಘಟನೆಗೆ ಬೆಂಬಲ ನೀಡಿರುವ ಬಗ್ಗೆಯೂ ತನಿಖೆ ನಡೆಸಿ , ಈ ಕುಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲ ಜಾಲವನ್ನು ಭೇಧಿಸಲಾಗುವುದು. ಪಿಎಫ್‍ಐ ಬ್ಯಾನ್ ಮಾಡಲು ಕ್ರಮಗಳು ಪ್ರಾರಂಭವಾಗಿದೆ. ಈ ರೀತಿಯ ದುಷ್ಕøತ್ಯಗಳು ಭಾರತದ ವಿವಿಧ ರಾಜ್ಯಗಳಲ್ಲಿ ನಡೆದಿದ್ದು, ದೇಶದ ಮಟ್ಟದಲ್ಲಿ ಸರಿಯಾದ ಕ್ರಮವನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಮಸೂದ್ ಹತ್ಯೆಗೂ ಹಾಗೂ ಪ್ರವೀಣ್ ಹತ್ಯೆಗೂ ಸಂಬಂಧವಿದೆಯೇ ಎಂಬ ಬಗ್ಗೆ ತನಿಖೆಯಿಂದ ತಿಳಿಯಲಿದೆ. ಪೊಲೀಸ್ ಅಧಿಕಾರಿಗಳ ಕರ್ತವ್ಯ ವೈಫಲ್ಯವಾಗಿದ್ದರೆ ಅದನ್ನೂ ತನಿಖೆಗೆ ಒಳಪಡಿಸಲಾಗುವುದು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending