ಸಿನಿ ಸುದ್ದಿ
ಅಂಬಿ ನಿಂಗೆ ವಯಸ್ಸಾಯ್ತ್ಯೋ : ಕಿಚ್ಚನ ನಟನೆಗೆ ಮತ್ತೆ ಮನಸೋತ ಪತ್ನಿ ಪ್ರಿಯಾ..! ಏನಂತ ಟ್ವೀಟ್ ಮಾಡಿದ್ರು ಗೊತ್ತಾ..?

ನಿನ್ನೆ ಗುರುವಾರ ಅಂಬಿ ನಿಂಗೆ ವಯಸ್ಸಾಯ್ತ್ಯೋ ಸಿನೆಮಾ ರಿಲೀಸ್ ಆಗಿದೆ. ಅಭಿಮಾನಿಗಳು ಈ ಸಿನೆಮಾ ನೋಡಿ ಸಖತ್ ಖುಷಿಯಲ್ಲಿದ್ದಾರೆ. ಅಂಬರೀಶ್, ಸುದೀಪ್, ಸುಹಾಸಿನಿ, ಶೃತಿ ಹರಿಹರನ್ ಅಭಿನಕ್ಕೆ ಜೈ ಎಂದಿದ್ದಾನೆ ಪ್ರೇಕ್ಷಕ ಪ್ರಭು.
ಅಂದಹಾಗೆ ಈ ಸಿನೆಮಾ ನೋಡಿದ ಕಿಚ್ಚನ ಮಡದಿ ಪ್ರಿಯಾ ಕ್ಲೀನ್ ಬೋಲ್ಡ್ ಆಗಿದ್ದಾರೆ. ಕಿಚ್ಚನ ಅಭಿನಯಕ್ಕೆ ಮಗದೊಮ್ಮೆ ಮನಸೋತು ಟ್ವೀಟ್ ಮಾಡಿದ್ದಾರೆ ಪ್ರಿಯಾ. ಇಲ್ಲಿದೆ ನೋಡಿ ಟ್ವೀಟ್..
#ANV 2/2 ….seemed to have met him two decades ago 🤔 @KicchaSudeep too cute 💕
Every actor in this movie has made a notable difference.Have thoroughly enjoyed the background score @ArjunJanya2— Priya Radhakrishnan (@iampriya06) September 28, 2018
😁😁😁… well,,, that’s the only way to remind that I’m stil the same . @iampriya06 https://t.co/1l4Q7Q4Rab
— Kichcha Sudeepa (@KicchaSudeep) September 28, 2018
ಸುದ್ದಿದಿನ.ಕಾಂ|,ವಾಟ್ಸಾಪ್|9986715401

ದಿನದ ಸುದ್ದಿ
777 ಚಾರ್ಲಿ ಚಿತ್ರಕ್ಕೆ ‘ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ’

ಸುದ್ದಿದಿನ ಡೆಸ್ಕ್ : 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2021 ಪ್ರಕಟವಾಗಿದ್ದು, ಕನ್ನಡಕ್ಕೆ ನಾಲ್ಕು ಪ್ರಶಸ್ತಿಗಳು ಲಭಿಸಿವೆ.
ನಟ ರಕ್ಷಿತ್ ಶೆಟ್ಟಿ ಅಭಿನಯಿಸಿರುವ ಕಿರಣ್ ರಾಜ್ ನಿರ್ದೇಶನದ 777 ಚಾರ್ಲಿ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಜೇಕಬ್ ವರ್ಗೀಸ್ ನಿರ್ದೇಶನದ ಸಾಕ್ಷ್ಯಚಿತ್ರ ಆಯುಷ್ಮಾನ್ಗೆ ಅತ್ಯುತ್ತಮ ಅನ್ವೇಷಣಾ ಚಿತ್ರ ಪ್ರಶಸ್ತಿ ಲಭಿಸಿದೆ.
ಅನಿರುಧ್ ಜತ್ಕರ್ ನಿರ್ದೇಶನದ ಬಾಳ ಬಂಗಾರ ಸಾಕ್ಷ್ಯಚಿತ್ರ ತೀರ್ಪುಗಾರರ ವಿಶೇಷ ಉಲ್ಲೇಖ ಪಡೆದಿದೆ. ಸಿನಿಮಾ ವಿಮರ್ಶೆ ವಿಭಾಗದಲ್ಲಿ ಹಿರಿಯ ಪತ್ರಕರ್ತ ಬಿ.ಎನ್.ಸುಬ್ರಹ್ಮಣ್ಯ ತೀರ್ಪುಗಾರರ ವಿಶೇಷ ಉಲ್ಲೇಖಕ್ಕೆ ಭಾಜನರಾಗಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶ್ರೀಲಂಕಾದಲ್ಲಿ ಕನ್ನಡ ಚಲನಚಿತ್ರೋತ್ಸವ

ಸುದ್ದಿದಿನ, ಕೊಲೊಂಬೋ : ಶ್ರೀಲಂಕಾದ ರಾಜಧಾನಿ ಕೊಲೊಂಬೋದಲ್ಲಿನ ತರಂಗಿಣಿ ಸಿನಿಮಾ ಹಾಲ್ನಲ್ಲಿ ಏರ್ಪಡಿಸಿದ್ದ ಕನ್ನಡ ಚಲನಚಿತ್ರೋತ್ಸವಕ್ಕೆ ಮಂಗಳವಾರ ಚಾಲನೆ ದೊರೆಯಿತು.
ಶ್ರೀಲಂಕಾದಲ್ಲಿನ ಭಾರತೀಯ ರಾಯಭಾರಿ ಗೋಪಾಲ್ ಬಾಗ್ಳೆ, ಶ್ರೀಲಂಕಾದ ಬಹು ಮಾಧ್ಯಮ ಖಾತೆ ಸಚಿವ ಡಾ. ಬಂದೂಲ ಗುಣವರ್ಧನೆ ಹಾಗೂ ಸಂಸ್ಕೃತಿ ಖಾತೆ ಸಚೆವ ವಿಧುರವಿಕ್ರಮ ನಾಯಕ್ ಮುಂತಾದವರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.
ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ, ಕನ್ನಡ ಚಲನಚಿತ್ರರಂಗದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತರ ಮಾತನಾಡಿದ ಸಚಿವ ಡಾ.ಗುಣವರ್ಧನೆ, ಉಭಯ ದೇಶಗಳ ನಡುವೆ ಸಾಂಸ್ಕೃತಿಕ ವಿನಿಮಯ, ಚಲನಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.
ಮನರಂಜನಾ ಮಾಧ್ಯಮವು ಅತ್ಯಂತ ಜನಪ್ರಿಯ ಮಾಧ್ಯಮವಾಗಿದ್ದು, ಪ್ರಾದೇಶಿಕ ಚಲಚಿನಚಿತ್ರಗಳು, ಅದರಲ್ಲಿಯೂ ಭಾರತದ ಚಲನಚಿತ್ರ ಸಂಸ್ಕೃತಿಯ ಜೊತೆಗೆ ದೇಶದ ಪರಂಪರೆ ಹಾಗೂ ಇತಿಹಾಸವನ್ನು ಪ್ರತಿಬಿಂಬಿಸುತ್ತಿದೆ. ಸಾಮಾಜಿಕ ವಲಯದಲ್ಲಿ ಪ್ರಾದೇಶಿಕ ಬಾಷೆಯಲ್ಲಿ ಬರುವ ಚಿತ್ರಗಳು, ಚಿತ್ರ ಪ್ರೇಮಿಗಳಿಗೆ ಅದರಲ್ಲಿಯೂ ವಿದ್ಯಾರ್ಥಿಗಳಿಗೆ, ಪಠ್ಯಕ್ರಮದ ಭಾಗವಾಗಿ ಹಲವು ಪ್ರದೇಶಗಳಲ್ಲಿ ಅಧ್ಯಯನಕ್ಕೂ ಅನುಕೂಲವಾಗಿದೆ. ಇತ್ತೀಚೆಗೆ ಶ್ರಿಲಂಕಾದ ವಿದ್ಯಾರ್ಥಿಗಳು ಇದರ ಅನುಭವವನ್ನು ಪಡೆದುಕೊಳ್ಳಲು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಮಾರ್ಗದರ್ಶನ ಅನುಕೂಲವಾಗಿದೆ ಎಂದು ಅವರು ಹೇಳಿದರು.
ಶ್ರೀಲಂಕಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 250 ರಿಂದ 300 ಚಲನಚಿತ್ರಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಿದೆ. ಕಳೆದ ವರ್ಷ ನಾಲ್ಕನೇ ಬಹುದೊಡ್ಡ ಕಾರ್ಯಗಾರ ಆಯೋಜಿಸಲಾಗಿತ್ತು ಎಂದು ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶ್ರೀಲಂಕಾ ವಿದ್ಯಾರ್ಥಿಗಳಿಗೆ, ಚಲನಚಿತ್ರರಂಗದ, ತರಬೇತಿ, ವೀಕ್ಷಣೆ ಹಾಗೂ ನಿರ್ಮಾಣದ ಬಗ್ಗೆ ಹಲವು ರೀತಿ ಪ್ರಾತ್ಯಕ್ಷಿಕೆ ಮೂಲಕ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಈ ವರ್ಷ ಅಮೆರಿಕ-ಅಮೆರಿಕ, ಇಷ್ಠಕಾಮ್ಯ, ಮಾತಾಡ್ ಮಾತಾಡ್ ಮಲ್ಲಿಗೆ ಹಾಗೂ ಕೊಟ್ರೇಶಿ ಕನಸು ಚಿತ್ರಗಳನ್ನು ಪ್ರದರ್ಶಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಏನಿದು ವಿಚಿತ್ರ | ನಟಿಯ ಡೈವೋರ್ಸ್ ಫೋಟೋಶೂಟ್..!

ಸುದ್ದಿದಿನ ಡೆಸ್ಕ್ : ನಟಿ ಶಾಲಿನಿ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಜನಮನಗೆದ್ದಿದ್ದಾರೆ. ಮೊದಲ ಮದುವೆಯ ವಿಚ್ಛೇದನದ ನಂತರ ಆಕೆ ಮೊಹಮ್ಮದ್ ಎಂಬುವವರನ್ನು ಮದುವೆಯಾಗಿದ್ದರು. ಆ ದಾಂಪತ್ಯದಲ್ಲಿ ಹಲವು ಸಮಸ್ಯೆಗಳಿಂದ ವಿಚ್ಛೇದನ ಪಡೆದರು. ಅದನ್ನು ಸಂಭ್ರಮಿಸಲು ಫೋಟೋಶೂಟ್ ಮಾಡಿ ಇನ್ಸ್ಟಾಗ್ರಾಂನಲ್ಲಿ ಹಾಕಿದ್ದಾರೆ.
ಮದುವೆಗೂ ಮುನ್ನ ತೆಗೆದಿರುವ ಫೋಟೋಶೂಟ್ಗಳು ಬಹಳಷ್ಟು ಬಂದಿವೆ. ಆದರೆ ವಿಚಿತ್ರ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಕ್ಕಾಗಿಯೇ ನಟಿ ಶಾಲಿನಿಫೋಟೋಗಳು ವೈರಲ್ ಆಗಿವೆ. ಡೈವೋರ್ಸ್ ಆಗಿದ್ದನ್ನೂ ಸಂಭ್ರಮಿಸುವ ಕಾರಣಕ್ಕಾಗಿ ಮಾಡಿದ ಈ ಫೋಟೋಶೂಟ್ ಈಗ ಹಲವರ ಗಮನ ಸೆಳೆದಿದೆ.
ಜೀ ತಮಿಳು ಶೋ ಸೂಪರ್ ಮಾಮ್ ರಿಯಾಲಿಟಿ ಶೋನಲ್ಲಿ ಮಗಳೊಂದಿಗೆ ಶಾಲಿನಿ ಭಾಗವಹಿಸಿದ್ದರು. ಖುಷ್ಬು ಅಭಿನಯದ ಮೀರಾ ತಮಿಳು ಧಾರಾವಾಹಿಯಲ್ಲಿ ಕೂಡ ಆಕೆ ನಟಿಸಿದ್ದಾರೆ. ಈ ಧಾರಾವಾಹಿಯ ಮೂಲಕ ನಟಿ ಖುಷ್ಪು ಹಲವು ವರ್ಷಗಳ ನಂತರ ಕಿರುತೆರೆಯಲ್ಲಿ ನಟಿಸಿದ್ದಾರೆ.
ಮಹಿಳೆಯೊಬ್ಬರು ‘ಡೈವೋರ್ಸ್ಡ್’ ಎಂಬ ಫಲಕ ಹಿಡಿದ, ಪತಿಯೊಂದಿಗೆ ಇದ್ದ ಫೋಟೋದಲ್ಲಿನ ಪತಿಯ ಮುಖದ ಭಾಗವನ್ನು ಹರಿದು ಪ್ರತ್ಯೇಕಿಸಿದ, ಪತಿ-ಪತ್ನಿ ಇಬ್ಬರೂ ಜೊತೆಗಿದ್ದ ಫೋಟೋವನ್ನು ಚಪ್ಪಲಿ ಕಾಲಿನಲ್ಲಿ ತುಳಿದು ಹೊಸಕಿ ಹಾಕಿದಂಥ ಫೋಟೋಗಳು ಈ ಫೋಟೋಶೂಟ್ನ ಪ್ರಮುಖ ಆಕರ್ಷಣೆ ಎನಿಸಿಕೊಂಡಿವೆ. ಅಲ್ಲದೆ, ‘ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!’ ಎಂಬ ಫಲಕವನ್ನು ಹಿಡಿದು ಸಂತಸದಿಂದ ಬೀಗುವಂಥ ಫೋಟೋ ಮೂಲಕ ‘ಪತಿ ಎಂಬ ಒಂದು ಸಮಸ್ಯೆಯನ್ನು ನಿವಾರಿಸಿಕೊಂಡಿದ್ದೇನೆ’ ಎಂಬ ಸಂದೇಶವನ್ನೂ ಈಕೆ ಸಾರಿದ್ದಾರೆ.
ಶಾಲಿನಿ ಇನ್ಸ್ಟಾ ಅಕೌಂಟ್ ಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://instagram.com/shalu2626?igshid=YmMyMTA2M2Y=
ಸುದ್ದಿದಿನ.ಕಾಂ|ವಾಟ್ಸಾಪ್|9980346243
