/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

‘ವಿನ್ಯಾಸ್‌ ಇನೋವೇಟಿವ್‌ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿ’ ವಿರುದ್ಧ ಕಾರ್ಮಿಕರ ಪ್ರತಿಭಟನೆ

Published

on

ಸುದ್ದಿದಿನ ಡೆಸ್ಕ್ : ಮೈಸೂರಿನ ವಿನ್ಯಾಸ್‌ ಇನೋವೇಟಿವ್‌ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿ ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಮೈಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆಯನ್ನು ಬೆಂಬಲಿಸಿ ವಿವಿಧ ಜನಪರ ಸಂಘಟನೆಗಳ ಮುಖಂಡರು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ಮಾಡಿದರು.

ಇಲ್ಲಿನ ಪ್ರವಾಸಿ ಮಂದಿರ ವೃತ್ತದಲ್ಲಿ ಆಗಮಿಸಿದ ಪಾದಯಾತ್ರೆಯನ್ನು ಸ್ವಾಗತಿಸಿದ ವಿವಿಧ ಜನಪರ ಸಂಘಟನೆಗಳ ಮುಖಂಡರು ಕಂಪನಿ ವಿರುದ್ಧ ಧಿಕ್ಕಾರಗಳನ್ನು ಕೂಗಿದರು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಮುಖಂಡ ರಾಜೇಂದ್ರ ರವರು ಮಾತನಾಡಿ, ಬಂಡವಾಳಶಾಹಿ ಕಂಪನಿಯ ಆಡಳಿತ ಮಂಡಳಿ 18 ಮಹಿಳಾ ಕಾರ್ಮಿಕರು ಸೇರಿ 94 ಮಂದಿಯನ್ನು ಆಂಧ್ರಪ್ರದೇಶಕ್ಕೆ ವರ್ಗ ಮಾಡಿದೆ. ಆದರೆ ಅಲ್ಲಿ ಕಂಪನಿ ಶಾಖೆ ಬಾಗಿಲು ಮುಚ್ಚಿರುವುದರಿಂದ ಎಲ್ಲಾ ಕಾರ್ಮಿಕರು ಕೆಲಸ ಕಳೆದುಕೊಂಡು ಅವರ ಕುಟುಂಬಗಳು ಬೀದಿಗೆ ಬಿದ್ದಿರುವುದು ಅಮಾನವೀಯ. ಈ ಕೂಡಲೇ ಎಲ್ಲಾ ಕಾರ್ಮಿಕರಿಗೆ ನೆಲೆ ಒದಗಿಸಬೇಕು ಎಂದು ಆಗ್ರಹಿಸಿದರು.

ಕಟ್ಟಡ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಕುಮಾರ್‌, ಸನ್ವ ಡೈಮಂಡ್‌ ಕಾರ್ಖಾನೆ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್‌, ಪವರ್‌ ಸೆಲ್‌ ಕಾರ್ಮಿಕರ ಸಂಘದ ಅಧ್ಯಕ್ಷ ರಾಜು, ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಜಿ.ಆರ್‌.ರಾಮು, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಮಂಜುಳಾರಾಜ್‌, ಸದಸ್ಯರಾದ ರೋಹಿಣಿ, ಮೀನಾ, ಶೋಭಾ ಸೇರಿದಂತೆ ವಜಾಗೊಂಡ ಕಾರ್ಮಿಕರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version