ದಿನದ ಸುದ್ದಿ

ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ; ಎಲ್ಲೆಡೆ ಅಗತ್ಯ ಸಿದ್ಧತೆ

Published

on

ಸುದ್ದಿದಿನ, ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳು ಎಲ್ಲೆಡೆ ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200ಮೀಟರ್ ವ್ಯಾಪ್ತಿಯೊಳಗೆ ಕಟ್ಟುನಿಟ್ಟಿನ ನಿಷೇಧಾe ಹೊರಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಯಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ 9ಸಾವಿರದ 79 ಹೊಸ ವಿದ್ಯಾರ್ಥಿಗಳು, 779ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 370ಖಾಸಗಿ ವಿದ್ಯಾರ್ಥಿಗಳು ಸೇರಿ ಒಟ್ಟು 10ಸಾವಿರದ ೨೨೮ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯಿಂದ ಒಟ್ಟು 31 ಸಾವಿರದ 308ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಉತ್ತರಕನ್ನಡ ಜಿಲ್ಲೆಯಲ್ಲೂ ಸಹ 31 ಪರೀಕ್ಷಾ ಕೇಂದ್ರ ತೆರೆಯಲಾಗಿದ್ದು, ಕಲಾ ವಿಭಾಗದ4788, ವಾಣಿಜ್ಯ ವಿಭಾಗದ6502 ಹಾಗೂ ವಿಜ್ಞಾನ ವಿಭಾಗದ 4037ಸೇರಿದಂತೆ ಒಟ್ಟು 15327 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಜಿಲ್ಲೆಯ 13 ಕೇಂದ್ರಗಳಲ್ಲಿ ಒಟ್ಟು 9 ಸಾವಿರದ 912 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಚಿಕ್ಕೋಡಿ ಮತ್ತು ಬೆಳಗಾವಿ ಎರಡು ಶೈಕ್ಷಣಿಕ ಜಿಲ್ಲೆಗಳನ್ನಾಗಿ ಗುರುತಿಸಲಾಗಿದ್ದು, ಚಿಕ್ಕೋಡಿ ವ್ಯಾಪ್ತಿಯ 48ಕೇಂದ್ರಗಳಲ್ಲಿ 27 ಸಾವಿರದ 807ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಗಾವಿ ವ್ಯಾಪ್ತಿಯಲ್ಲಿ ೪೨ ಕೇಂದ್ರಗಳನ್ನು ಗುರುತಿಸಲಾಗಿದ್ದು, 24ಸಾವಿರದ 46ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version