ದಿನದ ಸುದ್ದಿ

ಉತ್ತರಖಂಡ | ಏಕರೂಪ ನಾಗರಿಕ ಸಂಹಿತೆ ಜಾರಿ ; ಸಿಎಂ ಪುಷ್ಕರ್ ಸಿಂಗ್ ಧಾಮಿ ಗೆ ಪ್ರಶಸ್ತಿ

Published

on

ಸುದ್ದಿದಿನಡೆಸ್ಕ್:ಉತ್ತರಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ್ದಕ್ಕಾಗಿ, ಆ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ನಿನ್ನೆ ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಪ್ರತಿಷ್ಠಿತ ಡಾ. ಶಾಮ್ ಪ್ರಸಾದ್ ಮುಖರ್ಜಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದೇಶದಲ್ಲಿಯೇ ಪ್ರಪ್ರಥಮವಾಗಿ ಉತ್ತರಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಅನುಷ್ಠಾನಗೊಳಿಸಿ, ದಿವಂಗತ ನಾಯಕ ಶಾಮ್‌ಪ್ರಸಾದ್ ಮುಖರ್ಜಿ ಅವರ ಕನಸನ್ನು ನನಸಾಗಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ದೀಪ್‌ಕಮಲ್ ಪ್ರತಿಷ್ಠಾನ ಈ ಪ್ರಶಸ್ತಿ ನೀಡಿ ಗೌರವಿಸಿದೆ. ನಿನ್ನೆ ಬೆಳಿಗ್ಗೆ ಮುಂಬೈನಲ್ಲಿರುವ ಸುಪ್ರಸಿದ್ಧ ಸಿದ್ಧಿವಿನಾಯಕ ದೇಗುಲಕ್ಕೂ ಧಾಮಿ ಭೇಟಿ ನೀಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version